ನೆಹೆಮೀಯ 7:73 - ಕನ್ನಡ ಸಮಕಾಲಿಕ ಅನುವಾದ73 ಹೀಗೆಯೇ ಯಾಜಕರೂ, ಲೇವಿಯರೂ, ದ್ವಾರಪಾಲಕರೂ, ಹಾಡುಗಾರರೂ, ಸಾಮಾನ್ಯ ಜನರೂ, ದೇವಾಲಯದ ಸೇವಕರೂ, ಸಮಸ್ತ ಇಸ್ರಾಯೇಲರೂ ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸಿಸುತ್ತಿದ್ದರು. ಏಳನೆಯ ತಿಂಗಳು ಬಂದಾಗ ಇಸ್ರಾಯೇಲರು ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸಿಸುತ್ತಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201973 ಹೀಗೆ ಯಾಜಕರು, ಲೇವಿಯರು, ದ್ವಾರಪಾಲಕರು, ಗಾಯಕರು, ಸಾಧಾರಣ ಜನರು ಸೇರಿದವರು, ದೇವಾಲಯದ ಸೇವಕರು ಅಂತೂ ಇಸ್ರಾಯೇಲರೆಲ್ಲರೂ ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸ ಮಾಡತೊಡಗಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)73 ಯಾಜಕರು, ಲೇವಿಯರು, ದ್ವಾರಪಾಲಕರು, ಗಾಯಕರು, ಜನಸಾಮಾನ್ಯರು, ದೇವಸ್ಥಾನದ ಪರಿಚಾರಕರು ಅಂತೂ ಇಸ್ರಯೇಲರೆಲ್ಲರು ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸಿಸುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)73 ಯಾಜಕರು, ಲೇವಿಯರು, ದ್ವಾರಪಾಲಕರು, ಗಾಯಕರು, ಸಾಧಾರಣಜನರಿಗೆ ಸೇರಿದವರು, ದೇವಸ್ಥಾನದಾಸರು ಅಂತೂ ಇಸ್ರಾಯೇಲ್ಯರೆಲ್ಲರೂ ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸಿಸುತ್ತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್73 ಯಾಜಕರು, ಲೇವಿಯರು, ದ್ವಾರಪಾಲಕರು, ಗಾಯಕರು ಮತ್ತು ದೇವಾಲಯದ ಸೇವಕರು ತಮ್ಮ ತಮ್ಮ ಊರುಗಳಿಗೆ ಹೋಗಿ ನೆಲೆಸಿದರು. ಇತರ ಎಲ್ಲಾ ಇಸ್ರೇಲರು ತಮ್ಮ ಪಟ್ಟಣಗಳಲ್ಲಿ ನೆಲೆಸಿದರು. ಆ ವರ್ಷದ ಏಳನೆಯ ತಿಂಗಳಲ್ಲಿ ಎಲ್ಲಾ ಇಸ್ರೇಲರು ತಮ್ಮತಮ್ಮ ಪಟ್ಟಣಗಳಲ್ಲಿ ನೆಲೆಸಿದರು. ಅಧ್ಯಾಯವನ್ನು ನೋಡಿ |