Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 8:10 - ಕನ್ನಡ ಸಮಕಾಲಿಕ ಅನುವಾದ

10 ಇದಲ್ಲದೆ ಎಜ್ರನು ಅವರಿಗೆ, “ನೀವು ಹೋಗಿ ಒಳ್ಳೆಯ ಆಹಾರವನ್ನು ತಿಂದು, ಸಿಹಿಯಾದದ್ದನ್ನು ಕುಡಿಯಿರಿ, ತಮಗಾಗಿ ಸಿದ್ಧಮಾಡಿಕೊಳ್ಳದವರಿಗೆ ಒಂದು ಪಾಲನ್ನು ಕಳುಹಿಸಿಕೊಡಿರಿ. ಈ ದಿನವು ನಮ್ಮ ಯೆಹೋವ ದೇವರಿಗೆ ಪರಿಶುದ್ಧವಾಗಿದೆ. ನೀವು ವ್ಯಥೆಪಡಬೇಡಿರಿ. ಯೆಹೋವ ದೇವರ ಆನಂದವೇ ನಿಮ್ಮ ಬಲ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಇದಲ್ಲದೆ ನೆಹೆಮೀಯನು ಅವರಿಗೆ, “ಹೋಗಿ, ಮೃಷ್ಟಾನ್ನವನ್ನೂ, ಮಧುರಪಾನವನ್ನೂ ತೆಗೆದುಕೊಳ್ಳಿರಿ, ತಮಗೋಸ್ಕರ ಏನೂ ಸಿದ್ಧಮಾಡದವರಿಗೆ ಪಾಲನ್ನು ಕಳುಹಿಸಿರಿ. ಈ ದಿನ ನಮ್ಮ ಕರ್ತನಿಗೆ ಪರಿಶುದ್ಧ ದಿನವಾಗಿರುವುದರಿಂದ ದುಃಖಪಡಬೇಡಿರಿ; ಯೆಹೋವನ ಆನಂದವೇ ನಿಮ್ಮ ಬಲವಾಗಿದೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಇದಲ್ಲದೆ, ಎಜ್ರನು ಅವರಿಗೆ, “ಹೋಗಿ ಮೃಷ್ಟಾನ್ನವನ್ನೂ ಮಧುರಪಾನವನ್ನೂ ತೆಗೆದುಕೊಳ್ಳಿ; ತಮಗಾಗಿ ಏನೂ ಸಿದ್ಧಮಾಡದವರಿಗೆ ಒಂದು ಪಾಲನ್ನು ಕಳುಹಿಸಿರಿ. ಈ ದಿನ ನಮ್ಮ ಸರ್ವೇಶ್ವರನಿಗೆ ಪ್ರತಿಷ್ಠಿತ ದಿನ! ವ್ಯಸನಪಡಬೇಡಿ; ಸರ್ವೇಶ್ವರನ ಆನಂದವೇ ನಿಮ್ಮ ಆಶ್ರಯವಾಗಿದೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಇದಲ್ಲದೆ ಎಜ್ರನು ಅವರಿಗೆ - ಹೋಗಿ ಮೃಷ್ಟಾನ್ನವನ್ನೂ ಮಧುರಪಾನವನ್ನೂ ತೆಗೆದುಕೊಳ್ಳಿರಿ; ತಮಗೋಸ್ಕರ ಏನೂ ಸಿದ್ಧಮಾಡದವರಿಗೆ ಭಾಗಗಳನ್ನು ಕಳುಹಿಸಿರಿ. ಈ ದಿನವು ನಮ್ಮ ಕರ್ತನಿಗೆ ಪ್ರತಿಷ್ಠಿತ ದಿನವಾಗಿರುವದರಿಂದ ವ್ಯಸನಪಡಬೇಡಿರಿ; ಯೆಹೋವನ ಆನಂದವೇ ನಿಮ್ಮ ಆಶ್ರಯವಾಗಿದೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 “ಹೋಗಿ ಮೃಷ್ಟಾನ್ನ ಭೋಜನ ಮಾಡಿ ಸಿಹಿ ಪಾನೀಯಗಳನ್ನು ಕುಡಿಯಿರಿ. ಅಡಿಗೆ ಮಾಡದೆ ಇದ್ದವರಿಗೂ ಅವುಗಳನ್ನು ಕೊಡಿರಿ. ಈ ದಿನ ಯೆಹೋವನಿಗೆ ವಿಶೇಷ ದಿನವಾಗಿದೆ. ದುಃಖಿಸಬೇಡಿರಿ. ಯಾಕೆಂದರೆ ಯೆಹೋವನ ಸಂತೋಷವು ನಮ್ಮನ್ನು ಬಲಗೊಳಿಸುತ್ತದೆ” ಎಂದು ನೆಹೆಮೀಯನು ಜನರಿಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 8:10
32 ತಿಳಿವುಗಳ ಹೋಲಿಕೆ  

ಹರ್ಷಹೃದಯವು ಒಳ್ಳೆಯ ಔಷಧ; ಆದರೆ ಕುಗ್ಗಿದ ಮನಸ್ಸು ಎಲುಬುಗಳನ್ನು ಒಣಗಿಸುತ್ತದೆ.


ನೀನು ಹೋಗಿ ನಿನ್ನ ಆಹಾರವನ್ನು ಸಂತೋಷದಿಂದ ತಿಂದು ಹರ್ಷ ಹೃದಯದಿಂದ ನಿನ್ನ ದ್ರಾಕ್ಷಾರಸವನ್ನು ಕುಡಿ. ಏಕೆಂದರೆ ನಿನ್ನ ಕೆಲಸಗಳನ್ನು ದೇವರು ಈಗಾಗಲೇ ಮೆಚ್ಚಿಕೊಂಡಿದ್ದಾರೆ.


ಇಸ್ರಾಯೇಲು ತನ್ನನ್ನು ಉಂಟುಮಾಡಿದ ದೇವರಲ್ಲಿ ಸಂತೋಷಿಸಲಿ; ಚೀಯೋನಿನ ಜನರು ತಮ್ಮ ಅರಸರಲ್ಲಿ ಉಲ್ಲಾಸಿಸಲಿ.


ನಾನು ಯೆಹೋವ ದೇವರಲ್ಲಿ ಬಹಳವಾಗಿ ಸಂತೋಷಿಸುವೆನು. ನನ್ನ ಪ್ರಾಣವು ನನ್ನ ದೇವರಲ್ಲಿ ಉಲ್ಲಾಸಪಡುವುದು. ವರನು ಸೌಂದರ್ಯವಾಗಿ ತನ್ನನ್ನು ಶೃಂಗರಿಸುವ ಹಾಗೆಯೂ, ವಧುವು ಆಭರಣಗಳಿಂದ ತನ್ನನ್ನು ಅಲಂಕರಿಸುವ ಹಾಗೆಯೂ, ಅವನು ರಕ್ಷಣೆಯ ವಸ್ತ್ರಗಳನ್ನು ನನಗೆ ತೊಡಿಸಿದ್ದಾನೆ. ನೀತಿಯ ನಿಲುವಂಗಿಯನ್ನು ನನಗೆ ಧರಿಸುವಂತೆ ಮಾಡಿದ್ದಾನೆ.


ಆದಕಾರಣ ಗ್ರಾಮಗಳಲ್ಲಿಯೂ ಬಯಲು ಪ್ರಾಂತಗಳ ಪಟ್ಟಣಗಳಲ್ಲಿಯೂ ವಾಸವಾಗಿರುವ ಯೆಹೂದ್ಯರು ಆದಾರ್ ಮಾಸದ ಹದಿನಾಲ್ಕನೆಯ ದಿನವನ್ನು ಶುಭದಿನವಾಗಿಯೂ, ಸಂಭ್ರಮದ ದಿನವಾಗಿಯೂ, ಒಬ್ಬರಿಗೊಬ್ಬರು ಭೋಜನ ಕೊಡುಗೆಗಳನ್ನು ಕಳುಹಿಸುವ ದಿನವಾಗಿಯೂ ಆಚರಿಸಿದರು.


ಅವರು ಘೋರ ಹಿಂಸೆಯ ನಡುವೆಯಿದ್ದರೂ ಕಡುಬಡತನದಲ್ಲಿ ಬಳಲುತ್ತಿದ್ದರೂ ಅವರು ಬಹಳ ಸಂತೋಷದಿಂದ, ಉದಾರಮನಸ್ಸಿನಿಂದ ಕೊಡುವವರಾಗಿದ್ದಾರೆ.


ಆ ದಿನಗಳಲ್ಲಿ ಯೆಹೂದ್ಯರು ತಮ್ಮ ಶತ್ರುಗಳ ಕಾಟದಿಂದ ವಿಶ್ರಾಂತಿ ಪಡೆದ ಕಾಲವಾಗಿಯೂ, ಅವರ ದುಃಖ ಸಂತೋಷವೂ, ಗೋಳಾಟ ಉತ್ಸವವೂ ಬದಲಾದ ದಿನವಾಗಿಯೂ ಕೊಂಡಾಡುವಂತೆ ಆ ಪತ್ರದಲ್ಲಿ ಬರೆದಿತ್ತು. ಆದ್ದರಿಂದ ಆ ದಿನ ಸಂಭ್ರಮದ ದಿನವಾಗಿಯೂ, ಒಬ್ಬರಿಗೊಬ್ಬರು ಭೋಜನ ಕೊಡುಗೆಗಳನ್ನು ಕಳುಹಿಸುವ ದಿನವಾಗಿಯೂ, ಬಡವರಿಗೆ ದಾನಗಳನ್ನು ಮಾಡುವ ದಿನವಾಗಿಯೂ ಪಾಲಿಸಬೇಕೆಂದೂ ಆ ಪತ್ರದಲ್ಲಿ ಬರೆದಿತ್ತು.


ಇದಲ್ಲದೆ ಪ್ರತಿಯೊಬ್ಬನು ಅನ್ನಪಾನಗಳನ್ನು ಸೇವಿಸಿ, ತನ್ನ ಎಲ್ಲಾ ಪ್ರಯಾಸಗಳಲ್ಲಿ ಸುಖವನ್ನು ಅನುಭವಿಸುವುದು ದೇವರ ದಾನದಿಂದಲೇ.


ಒಬ್ಬ ವ್ಯಕ್ತಿ ತನ್ನ ಪ್ರಯಾಸದಲ್ಲಿ ತೃಪ್ತಿಹೊಂದುವಂತೆ ತಿಂದು ಕುಡಿಯುವುದಕ್ಕಿಂತ ಶ್ರೇಷ್ಠವಾದದ್ದು ಮನುಷ್ಯನಿಗೆ ಯಾವುದೂ ಇಲ್ಲ. ಇದೂ ಕೂಡ ದೇವರ ಕೈಯಿಂದಲೇ ಆಗುತ್ತದೆ ಎಂದು ನಾನು ಕಂಡೆನು.


ನಿನ್ನ ಹಣವನ್ನು ಏಳೆಂಟು ಮಂದಿಗೆ ವೆಚ್ಚಮಾಡು. ಏಕೆಂದರೆ ಭೂಮಿಯ ಮೇಲೆ ಮುಂದೆ ಯಾವ ವಿಪತ್ತು ಬರುವುದೋ ನಿನಗೆ ತಿಳಿಯದು.


ಮಾಂಸದಲ್ಲಿ ಭರವಸೆ ಇಡಲು ನನಗೆ ಸಾಕಷ್ಟು ಕಾರಣಗಳಿವೆ. ಬೇರೆ ಯಾವನಾದರೂ ಮಾನವೀಯ ಪ್ರಯತ್ನಗಳಲ್ಲಿ ಭರವಸೆ ಇಡಬಹುದೆಂದು ಭಾವಿಸುವುದಾದರೆ, ನಾನು ಅದಕ್ಕಿಂತಲೂ ಹೆಚ್ಚಾಗಿ ಹೇಳಬಹುದು:


ನೀವು ನಿಮ್ಮೊಳಗೆ ಅಂಟಿಕೊಂಡಿರುವವುಗಳನ್ನು ಬಡವರಿಗೆ ದಾನ ಮಾಡಿಬಿಡಿರಿ, ಆಗ ನಿಮಗೆ ಎಲ್ಲವೂ ಶುದ್ಧವಾಗಿರುವುವು.


ನನ್ನ ಪ್ರಿಯಳೇ, ನನ್ನ ವಧುವೇ, ನಾನು ನನ್ನ ತೋಟಕ್ಕೆ ಬಂದಿರುವೆ. ನನ್ನ ರಕ್ತಬೋಳ ಸುಗಂಧಗಳನ್ನೂ ಕೂಡಿಸಿರುವೆ. ನನ್ನ ಜೇನುಗೂಡನ್ನೂ ಜೇನುತುಪ್ಪವನ್ನೂ ತಿಂದಿರುವೆ. ನನ್ನ ದ್ರಾಕ್ಷಾರಸವನ್ನೂ ಹಾಲನ್ನೂ ಕುಡಿದಿದ್ದೇನೆ. ಸ್ನೇಹಿತರೇ, ಊಟಮಾಡಿರಿ, ಕುಡಿಯಿರಿ. ಹೌದು ಪ್ರಿಯರೇ, ಸಮೃದ್ಧಿಯಾಗಿ ಪಾನಮಾಡಿರಿ.


ದೇವರು ಮನುಷ್ಯನಿಗೆ ಕೊಟ್ಟದ್ದನ್ನು ಸೂರ್ಯನ ಕೆಳಗೆ ಅವನು ಕೈಗೊಂಡ ಪ್ರಯಾಸದ ಸುಖವನ್ನು ಅನುಭವಿಸಿ, ತಿಂದು, ಕುಡಿಯುವುದು ತೃಪ್ತಿಕರವಾದದ್ದೂ ಆಗಿದೆ, ಎಂದು ಒಂದು ಒಳ್ಳೆಯದನ್ನು ಕಂಡುಕೊಂಡೆನು. ಏಕೆಂದರೆ ಇದು ಮನುಷ್ಯನ ಪಾಲು.


ಚೀಯೋನಿನ ಜನರೇ, ನಿಮ್ಮ ದೇವರಾದ ಯೆಹೋವ ದೇವರಲ್ಲಿ ಉಲ್ಲಾಸಿಸಿರಿ, ಸಂತೋಷವಾಗಿರಿ. ಏಕೆಂದರೆ ನಿಮಗೆ ಮುಂಗಾರು ಮಳೆಯನ್ನು ಸಾಕಷ್ಟು ಕೊಡುವರು. ಮುಂಗಾರು, ಹಿಂಗಾರು ಮಳೆಗಳನ್ನು ಮೊದಲಿನ ಹಾಗೆ ನಿಮಗೆ ಸುರಿಸುವರು.


ಈ ಇಬ್ಬರು ಪ್ರವಾದಿಗಳು ಭೂನಿವಾಸಿಗಳನ್ನು ಪೀಡಿಸಿದ್ದರಿಂದ, ಇದರ ವಿಷಯವಾಗಿ ಭೂನಿವಾಸಿಗಳು ಸಂತೋಷಿಸಿ, ಹರ್ಷಗೊಂಡು ಒಬ್ಬರಿಗೊಬ್ಬರು ಉಡುಗೊರೆಗಳನ್ನು ಕಳುಹಿಸುವರು.


ನಿನ್ನ ಸೇವಕರನ್ನು ಕೇಳು. ಅವರು ನಿನಗೆ ಹೇಳುವರು. ಆದ್ದರಿಂದ ಈಗ ಈ ಯುವಕರಿಗೆ ನಿನ್ನ ದೃಷ್ಟಿಯಲ್ಲಿ ದಯೆ ದೊರಕಲಿ. ಏಕೆಂದರೆ ಒಳ್ಳೆಯ ದಿವಸದಲ್ಲಿ ಬಂದೆವು. ನಿನ್ನ ಕೈಯಲ್ಲಿ ದೊರಕುವುದನ್ನು ನಿನ್ನ ಸೇವಕರಿಗೂ, ನಿನ್ನ ಪುತ್ರನಾದ ದಾವೀದನಿಗೂ ದಯಪಾಲಿಸು ಎಂದು ಅವನಿಗೆ ಹೇಳಿರಿ,’ ” ಎಂದು ಅವರನ್ನು ಕಳುಹಿಸಿದನು.


ಲೇವಿಯರು ಕೂಡ, “ಈ ದಿನವು ಪರಿಶುದ್ಧವಾದುದರಿಂದ ನೀವು ಶಾಂತವಾಗಿದ್ದು, ವ್ಯಥೆಪಡಬೇಡಿರಿ,” ಎಂದು ಹೇಳಿ ಜನರನ್ನು ಸುಮ್ಮನಿರಿಸಿದರು.


ಆಗ ಜನರೆಲ್ಲರೂ ತಮಗೆ ತಿಳಿಸಿದ ಮಾತುಗಳನ್ನು ಗ್ರಹಿಸಿದ್ದರಿಂದ, ಅವರು ಅನ್ನಪಾನಗಳನ್ನು ತೆಗೆದುಕೊಂಡು, ಏನೂ ಇಲ್ಲದವರಿಗೆ ಆಹಾರ ಪಾಲುಗಳನ್ನು ಕಳುಹಿಸಲೂ ಮತ್ತು ಸಂತೋಷದಿಂದ ಆಚರಿಸಲೂ ಹೊರಟು ಹೋದರು.


ಯೆರೂಸಲೇಮಿನಲ್ಲಿಯೂ, ಯೆಹೂದದಲ್ಲಿಯೂ ಇರುವ ಪ್ರತಿಯೊಂದು ಪಾತ್ರೆಯು ಸೇನಾಧೀಶ್ವರ ಯೆಹೋವ ದೇವರಿಗೆ ಪರಿಶುದ್ಧವಾಗಿರುವುವು. ಯಜ್ಞಗಳನ್ನು ಅರ್ಪಿಸುವವರೆಲ್ಲರು ಬಂದು ಅವುಗಳನ್ನು ತೆಗೆದುಕೊಂಡು ಅವುಗಳಲ್ಲಿ ಬೇಯಿಸುವರು. ಆ ದಿವಸದಲ್ಲಿ, ಕಾನಾನ್ಯನು ಸೇನಾಧೀಶ್ವರ ಯೆಹೋವ ದೇವರ ಆಲಯದಲ್ಲಿ ಇನ್ನು ಮೇಲೆ ಇರುವುದೇ ಇಲ್ಲ.


ಎಂಟನೆಯ ದಿನದಲ್ಲಿ ಅವನು ಜನರಿಗೆ ಹೋಗುವುದಕ್ಕೆ ಅಪ್ಪಣೆಕೊಡಲು, ಆಗ ಅವರು ಅರಸನನ್ನು ಆಶೀರ್ವದಿಸಿ ಯೆಹೋವ ದೇವರು ತಮ್ಮ ಸೇವಕನಾದ ದಾವೀದನಿಗೂ, ತನ್ನ ಜನರಾದ ಇಸ್ರಾಯೇಲರಿಗೂ ಮಾಡಿದ ಸಮಸ್ತ ಉಪಕಾರದ ನಿಮಿತ್ತ ಅವರು ಹೃದಯದಲ್ಲಿ ಆನಂದಭರಿತರಾಗಿ ಸಂತೋಷಪಡುತ್ತಾ ಅವರವರ ಡೇರೆಗಳಿಗೆ ಹೋದರು.


ಅವರ ಸನ್ನಿಧಿಯಲ್ಲಿ ಘನತೆಯೂ ಪ್ರಭೆಯೂ; ಅವರ ಪರಿಶುದ್ಧ ಸ್ಥಳದಲ್ಲಿ ಬಲವೂ ಸಂತೋಷವೂ ಇವೆ.


ಏಕೆಂದರೆ ಅವರ ಬಲವೂ ಮಹಿಮೆಯೂ ನೀವೇ. ನಿಮ್ಮ ಮೆಚ್ಚುಗೆಯಿಂದ ನಮ್ಮ ಬಲವೆಂಬ ಕೊಂಬು ಉನ್ನತವಾಗುವುದು.


ಈಗ ಯೆಹೋವ ದೇವರು ಹೀಗೆ ಹೇಳುತ್ತಾರೆ, ಯಾಕೋಬ್ಯರನ್ನು ತನ್ನ ಬಳಿಗೆ ಕರೆತರುವಂತೆಯೂ, ಇಸ್ರಾಯೇಲರನ್ನು ತನ್ನೊಂದಿಗೆ ಸೇರಿಸಿಕೊಳ್ಳುವಂತೆಯೂ ದೇವರು ಗರ್ಭದಲ್ಲಿಯೇ ನನ್ನನ್ನು ತನ್ನ ಸೇವಕನನ್ನಾಗಿ ರೂಪಿಸಿದನು. ಆದರೂ ನಾನು ಯೆಹೋವ ದೇವರ ದೃಷ್ಟಿಯಲ್ಲಿ ಮಾನ್ಯನಾಗಿರುವೆನು. ನನ್ನ ದೇವರೇ ನನಗೆ ಬಲವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು