Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 8:11 - ಕನ್ನಡ ಸಮಕಾಲಿಕ ಅನುವಾದ

11 ಲೇವಿಯರು ಕೂಡ, “ಈ ದಿನವು ಪರಿಶುದ್ಧವಾದುದರಿಂದ ನೀವು ಶಾಂತವಾಗಿದ್ದು, ವ್ಯಥೆಪಡಬೇಡಿರಿ,” ಎಂದು ಹೇಳಿ ಜನರನ್ನು ಸುಮ್ಮನಿರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಲೇವಿಯರೂ ಜನರಿಗೆ, “ಸುಮ್ಮನಿರಿ, ಇದು ದೇವರ ಪರಿಶುದ್ಧ ದಿನ, ದುಃಖಿಸಬೇಡಿರಿ” ಎಂದು ಹೇಳಿ ಜನರನ್ನು ಸಂತೈಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಲೇವಿಯರು ಕೂಡ, “ಸುಮ್ಮನಿರಿ, ಇದು ದೇವರ ದಿವಸ; ದುಃಖಿಸಬೇಡಿ,” ಎಂದು ಹೇಳಿ ಜನರನ್ನು ಸಂತೈಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಲೇವಿಯರೂ - ಸುಮ್ಮನಿರಿ, ಇದು ದೇವರ ದಿವಸ, ದುಃಖಿಸಬೇಡಿರಿ ಎಂದು ಹೇಳಿ ಜನರನ್ನು ಸಂತೈಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಲೇವಿಯರು ಜನರಿಗೆ, “ದುಃಖಿಸಬೇಡಿರಿ, ಈ ದಿನ ವಿಶೇಷ ದಿನ. ಸಮಾಧಾನ ಮಾಡಿಕೊಳ್ಳಿ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 8:11
3 ತಿಳಿವುಗಳ ಹೋಲಿಕೆ  

ನಂತರ ಕಾಲೇಬನು ಮೋಶೆಯ ಎದುರಿನಲ್ಲಿ ಜನರನ್ನು ಸುಮ್ಮನಿರಿಸಿ, “ನಾವು ತಕ್ಷಣವೇ ಏರಿಹೋಗಿ ಅದನ್ನು ಸ್ವಾಧೀನ ಮಾಡಿಕೊಳ್ಳೋಣ. ಏಕೆಂದರೆ ಅದನ್ನು ಜಯಿಸಲು ನಾವು ನಿಜವಾಗಿಯೂ ಶಕ್ತರಾಗಿದ್ದೇವೆ,” ಎಂದನು.


ಇದಲ್ಲದೆ ಎಜ್ರನು ಅವರಿಗೆ, “ನೀವು ಹೋಗಿ ಒಳ್ಳೆಯ ಆಹಾರವನ್ನು ತಿಂದು, ಸಿಹಿಯಾದದ್ದನ್ನು ಕುಡಿಯಿರಿ, ತಮಗಾಗಿ ಸಿದ್ಧಮಾಡಿಕೊಳ್ಳದವರಿಗೆ ಒಂದು ಪಾಲನ್ನು ಕಳುಹಿಸಿಕೊಡಿರಿ. ಈ ದಿನವು ನಮ್ಮ ಯೆಹೋವ ದೇವರಿಗೆ ಪರಿಶುದ್ಧವಾಗಿದೆ. ನೀವು ವ್ಯಥೆಪಡಬೇಡಿರಿ. ಯೆಹೋವ ದೇವರ ಆನಂದವೇ ನಿಮ್ಮ ಬಲ,” ಎಂದು ಹೇಳಿದನು.


ಆಗ ಜನರೆಲ್ಲರೂ ತಮಗೆ ತಿಳಿಸಿದ ಮಾತುಗಳನ್ನು ಗ್ರಹಿಸಿದ್ದರಿಂದ, ಅವರು ಅನ್ನಪಾನಗಳನ್ನು ತೆಗೆದುಕೊಂಡು, ಏನೂ ಇಲ್ಲದವರಿಗೆ ಆಹಾರ ಪಾಲುಗಳನ್ನು ಕಳುಹಿಸಲೂ ಮತ್ತು ಸಂತೋಷದಿಂದ ಆಚರಿಸಲೂ ಹೊರಟು ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು