Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 8:12 - ಕನ್ನಡ ಸಮಕಾಲಿಕ ಅನುವಾದ

12 ಆಗ ಜನರೆಲ್ಲರೂ ತಮಗೆ ತಿಳಿಸಿದ ಮಾತುಗಳನ್ನು ಗ್ರಹಿಸಿದ್ದರಿಂದ, ಅವರು ಅನ್ನಪಾನಗಳನ್ನು ತೆಗೆದುಕೊಂಡು, ಏನೂ ಇಲ್ಲದವರಿಗೆ ಆಹಾರ ಪಾಲುಗಳನ್ನು ಕಳುಹಿಸಲೂ ಮತ್ತು ಸಂತೋಷದಿಂದ ಆಚರಿಸಲೂ ಹೊರಟು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ತಮಗೆ ತಿಳಿಯಪಡಿಸಿದ ಮಾತುಗಳನ್ನು ಜನರೆಲ್ಲರೂ ಗ್ರಹಿಸಿದ ಮೇಲೆ ಹೋಗಿ ಅನ್ನಪಾನಗಳನ್ನು ತೆಗೆದುಕೊಂಡು, ಏನೂ ಇಲ್ಲದವರಿಗೆ ಪಾಲನ್ನು ಕಳುಹಿಸಿ ಬಹಳವಾಗಿ ಸಂತೋಷಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ತಮಗೆ ತಿಳಿಯಪಡಿಸಿದ ಮಾತುಗಳನ್ನು ಜನರೆಲ್ಲರೂ ಗಮನಿಸಿ, ಹೋಗಿ ಅನ್ನಪಾನಗಳನ್ನು ತೆಗೆದುಕೊಂಡು ಏನೂ ಇಲ್ಲದವರಿಗೆ ಪಾಲುಗಳನ್ನು ಕಳುಹಿಸಿ, ಬಹಳವಾಗಿ ಸಂತೋಷಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ತಮಗೆ ತಿಳಿಯಪಡಿಸಿದ ಮಾತುಗಳನ್ನು ಜನರೆಲ್ಲರೂ ಗಮನಿಸಿ ಹೋಗಿ ಅನ್ನಪಾನಗಳನ್ನು ತೆಗೆದುಕೊಂಡು ಏನೂ ಇಲ್ಲದವರಿಗೆ ಭಾಗಗಳನ್ನು ಕಳುಹಿಸಿ ಬಹಳವಾಗಿ ಸಂತೋಷಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಅನಂತರ ಎಲ್ಲರೂ ವಿಶೇಷ ಊಟಕ್ಕೆ ಹೋದರು, ಅವರು ತಮ್ಮ ಆಹಾರವನ್ನು ಮತ್ತು ಪಾನೀಯವನ್ನು ಹಂಚಿಕೊಂಡರು. ಅವರೆಲ್ಲರೂ ಸಂತೋಷದಿಂದ ಆ ವಿಶೇಷ ದಿನವನ್ನು ಆಚರಿಸಿದರು, ಧರ್ಮೋಪದೇಶಕರು ಉಪದೇಶಿಸಿದ ಯೆಹೋವನ ಕಟ್ಟಳೆಗಳನ್ನು ಅವರು ಅರ್ಥಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 8:12
25 ತಿಳಿವುಗಳ ಹೋಲಿಕೆ  

ಯೆಹೋವ ದೇವರೇ, ನಾನು ನಿಮ್ಮ ರಕ್ಷಣೆಗಾಗಿ ಬಯಸುತ್ತಿದ್ದೇನೆ, ನಿಮ್ಮ ನಿಯಮವೇ ನನಗೆ ಆನಂದವಾಗಿದೆ.


ಅವರು ಒಬ್ಬರಿಗೊಬ್ಬರು, “ಅವರು ದಾರಿಯಲ್ಲಿ ನಮ್ಮ ಕೂಡ ಮಾತನಾಡುತ್ತಾ, ಪವಿತ್ರ ವೇದವನ್ನು ನಮಗೆ ವಿವರಿಸಿದಾಗ ನಮ್ಮ ಹೃದಯವು ಬೆಂಕಿಯಂತೆ ದಹಿಸಿತಲ್ಲವೇ?” ಎಂದುಕೊಂಡರು.


ನೀವು ನಿಮ್ಮ ತೀರ್ಪುಗಳನ್ನು ನನಗೆ ಬೋಧಿಸಿದಾಗ, ನನ್ನ ತುಟಿಗಳಿಂದ ಸ್ತೋತ್ರವು ಪ್ರವಾಹಿಸಲಿ.


ನಿಮ್ಮ ವಾಕ್ಯಗಳನ್ನು ತೆರೆಯುವಾಗ, ಅದು ಬೆಳಕನ್ನು ಕೊಡುವುದು; ಅದು ಮುಗ್ಧರಿಗೆ ಅರಿವನ್ನು ನೀಡುವುದು.


ಆದ್ದರಿಂದ ನಾನು ನಿಮ್ಮ ಆಜ್ಞೆಗಳನ್ನು ಬಂಗಾರಕ್ಕಿಂತಲೂ ಹೌದು, ಅಪರಂಜಿಗಿಂತಲೂ ಹೆಚ್ಚಾಗಿ ಪ್ರೀತಿಸುತ್ತೇನೆ,


ನಿಮ್ಮ ಶಾಸನಗಳನ್ನು ನಿತ್ಯ ಸೊತ್ತಾಗಿ ತೆಗೆದುಕೊಂಡಿದ್ದೇನೆ; ಏಕೆಂದರೆ ಅವು ನನ್ನ ಹೃದಯಕ್ಕೆ ಉಲ್ಲಾಸಕರವಾಗಿದೆ.


ನಿಮ್ಮ ನಿಯಮವನ್ನು ನಾನು ಎಷ್ಟೋ ಪ್ರೀತಿಮಾಡುತ್ತೇನೆ! ದಿನವೆಲ್ಲಾ ಅದನ್ನೇ ಧ್ಯಾನಿಸುತ್ತೇನೆ.


ಸಾವಿರಾರು ಬೆಳ್ಳಿಬಂಗಾರ ನಾಣ್ಯಗಳಿಗಿಂತಲೂ ನಿಮ್ಮ ಬಾಯಿಯ ನಿಯಮವು ನನಗೆ ಹೆಚ್ಚು ಅಮೂಲ್ಯವಾದದ್ದಾಗಿದೆ.


ನಿಮ್ಮ ತೀರ್ಪುಗಳಲ್ಲಿ ಉಲ್ಲಾಸಗೊಂಡು, ನಿಮ್ಮ ವಾಕ್ಯವನ್ನು ತಿರಸ್ಕರಿಸದಿರುವೆನು.


ಮಹಾ ಸಂಪತ್ತಿನಲ್ಲಿ ಒಬ್ಬ ವ್ಯಕ್ತಿ ಆನಂದಿಸುವ ಹಾಗೆ ನಾನು ನಿಮ್ಮ ಶಾಸನಗಳನ್ನು ಅನುಸರಿಸುವುದರಲ್ಲಿ ಆನಂದಿಸುವೆನು.


ದೇವರ ತುಟಿಗಳ ಆಜ್ಞೆಯಿಂದ ನಾನು ಹಿಂಜರಿಯಲಿಲ್ಲ; ನನ್ನ ದೈನಂದಿನ ಆಹಾರಕ್ಕಿಂತ ದೇವರ ಬಾಯಿಯ ಮಾತುಗಳನ್ನು ನನ್ನೆದೆಯಲ್ಲಿ ನಿಧಿಯನ್ನಾಗಿ ಬಚ್ಚಿಟ್ಟುಕೊಂಡಿದ್ದೇನೆ.


ನನ್ನಲ್ಲಿ, ಅಂದರೆ ನನ್ನ ಶಾರೀರಿಕ ಸ್ವಭಾವದಲ್ಲಿ ಒಳ್ಳೆಯದೇನೂ ವಾಸವಾಗಿಲ್ಲ ಎಂದು ಬಲ್ಲೆನು. ಏಕೆಂದರೆ ಒಳ್ಳೆಯದನ್ನು ಮಾಡಬೇಕೆಂಬ ಮನಸ್ಸೇನೋ ನನ್ನಲ್ಲಿ ಇದೆ, ಆದರೆ ಅದನ್ನು ಮಾಡುವುದಕ್ಕೆ ನನ್ನಿಂದಾಗದು.


ನನಗೆ ದೊರೆತ ನಿನ್ನ ಮಾತುಗಳನ್ನು ಆಹಾರ ಮಾಡಿಕೊಂಡೆನು, ನಿನ್ನ ನುಡಿಗಳು ನನಗೆ ಹರ್ಷವೂ, ಹೃದಯಾನಂದವೂ ಆದವು. ಸೇನಾಧೀಶ್ವರನಾದ ದೇವರೇ, ಯೆಹೋವ ದೇವರೇ, ನಾನು ನಿನ್ನ ಹೆಸರಿನವನಲ್ಲವೇ!


ಈ ಇಬ್ಬರು ಪ್ರವಾದಿಗಳು ಭೂನಿವಾಸಿಗಳನ್ನು ಪೀಡಿಸಿದ್ದರಿಂದ, ಇದರ ವಿಷಯವಾಗಿ ಭೂನಿವಾಸಿಗಳು ಸಂತೋಷಿಸಿ, ಹರ್ಷಗೊಂಡು ಒಬ್ಬರಿಗೊಬ್ಬರು ಉಡುಗೊರೆಗಳನ್ನು ಕಳುಹಿಸುವರು.


ಇದಲ್ಲದೆ ಎಜ್ರನು ಅವರಿಗೆ, “ನೀವು ಹೋಗಿ ಒಳ್ಳೆಯ ಆಹಾರವನ್ನು ತಿಂದು, ಸಿಹಿಯಾದದ್ದನ್ನು ಕುಡಿಯಿರಿ, ತಮಗಾಗಿ ಸಿದ್ಧಮಾಡಿಕೊಳ್ಳದವರಿಗೆ ಒಂದು ಪಾಲನ್ನು ಕಳುಹಿಸಿಕೊಡಿರಿ. ಈ ದಿನವು ನಮ್ಮ ಯೆಹೋವ ದೇವರಿಗೆ ಪರಿಶುದ್ಧವಾಗಿದೆ. ನೀವು ವ್ಯಥೆಪಡಬೇಡಿರಿ. ಯೆಹೋವ ದೇವರ ಆನಂದವೇ ನಿಮ್ಮ ಬಲ,” ಎಂದು ಹೇಳಿದನು.


ಲೇವಿಯರು ಕೂಡ, “ಈ ದಿನವು ಪರಿಶುದ್ಧವಾದುದರಿಂದ ನೀವು ಶಾಂತವಾಗಿದ್ದು, ವ್ಯಥೆಪಡಬೇಡಿರಿ,” ಎಂದು ಹೇಳಿ ಜನರನ್ನು ಸುಮ್ಮನಿರಿಸಿದರು.


ಎರಡನೆಯ ದಿವಸದಲ್ಲಿ ಸಮಸ್ತ ಜನರ ಪಿತೃಗಳಲ್ಲಿರುವ ಮುಖ್ಯವಾದವರೂ ಯಾಜಕರೂ ಲೇವಿಯರೂ ದೇವರ ನಿಯಮದ ಮಾತುಗಳನ್ನು ತಿಳಿದುಕೊಳ್ಳುವ ಹಾಗೆ, ನಿಯಮಶಾಸ್ತ್ರಿಯಾದ ಎಜ್ರನ ಬಳಿಗೆ ಬಂದರು.


ಆ ದಿನಗಳಲ್ಲಿ ಯೆಹೂದ್ಯರು ತಮ್ಮ ಶತ್ರುಗಳ ಕಾಟದಿಂದ ವಿಶ್ರಾಂತಿ ಪಡೆದ ಕಾಲವಾಗಿಯೂ, ಅವರ ದುಃಖ ಸಂತೋಷವೂ, ಗೋಳಾಟ ಉತ್ಸವವೂ ಬದಲಾದ ದಿನವಾಗಿಯೂ ಕೊಂಡಾಡುವಂತೆ ಆ ಪತ್ರದಲ್ಲಿ ಬರೆದಿತ್ತು. ಆದ್ದರಿಂದ ಆ ದಿನ ಸಂಭ್ರಮದ ದಿನವಾಗಿಯೂ, ಒಬ್ಬರಿಗೊಬ್ಬರು ಭೋಜನ ಕೊಡುಗೆಗಳನ್ನು ಕಳುಹಿಸುವ ದಿನವಾಗಿಯೂ, ಬಡವರಿಗೆ ದಾನಗಳನ್ನು ಮಾಡುವ ದಿನವಾಗಿಯೂ ಪಾಲಿಸಬೇಕೆಂದೂ ಆ ಪತ್ರದಲ್ಲಿ ಬರೆದಿತ್ತು.


ಆ ದಿವಸದಲ್ಲಿ ಮಹಾ ಸಂತೋಷದಿಂದ ಯೆಹೋವ ದೇವರ ಮುಂದೆ ತಿಂದು ಕುಡಿದರು. ಎರಡನೆಯ ಸಾರಿ ದಾವೀದನ ಮಗ ಸೊಲೊಮೋನನನ್ನು ಅರಸನನ್ನಾಗಿ ಸ್ವೀಕರಿಸಿದರು. ಯೆಹೋವ ದೇವರ ಮುಂದೆ ಅವನನ್ನು ನಾಯಕನಾಗಿಯೂ ಚಾದೋಕನನ್ನು ಯಾಜಕನಾಗಿಯೂ ಅಭಿಷೇಕಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು