Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 8:16 - ಕನ್ನಡ ಸಮಕಾಲಿಕ ಅನುವಾದ

16 ಹಾಗೆಯೇ ಜನರು ಹೊರಟುಹೋಗಿ ಕೊಂಬೆಗಳನ್ನು ತೆಗೆದುಕೊಂಡು ಬಂದು ಅವರವರು ತಮ್ಮ ಮನೆಗಳ ಮೇಲೆಯೂ, ತಮ್ಮ ಅಂಗಳಗಳಲ್ಲಿಯೂ, ದೇವರ ಮನೆಯ ಅಂಗಳಗಳಲ್ಲಿಯೂ, ನೀರು ಬಾಗಿಲ ಬೀದಿಗಳಲ್ಲಿಯೂ, ಎಫ್ರಾಯೀಮನ ಬಾಗಿಲ ಬೀದಿಗಳಲ್ಲಿಯೂ ತಮಗೆ ಪರ್ಣಶಾಲೆಗಳನ್ನು ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಈ ಆಜ್ಞಾನುಸಾರವಾಗಿ ಜನರು ಹೋಗಿ ಕೊಂಬೆಗಳನ್ನು ತೆಗೆದುಕೊಂಡು ಬಂದು, ತಮ್ಮ ತಮ್ಮ ಅಂಗಳ, ಮಾಳಿಗೆಗಳಲ್ಲಿಯೂ, ದೇವಾಲಯದ ಪ್ರಾಕಾರಗಳಲ್ಲಿಯೂ ನೀರು ಬಾಗಿಲು, ಎಫ್ರಾಯೀಮ್ ಬಾಗಿಲು ಇವುಗಳ ಮುಂದಣ ಬಯಲುಗಳಲ್ಲಿಯೂ ಪರ್ಣಶಾಲೆಗಳನ್ನು ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಈ ಆಜ್ಞಾನುಸಾರ ಜನರು ಹೋಗಿ ಕೊಂಬೆಗಳನ್ನು ತೆಗೆದುಕೊಂಡು ಬಂದು, ತಮ್ಮ ತಮ್ಮ ಅಂಗಳಮಾಳಿಗೆಗಳಲ್ಲಿಯೂ, ದೇವಾಲಯದ ಪ್ರಾಕಾರಗಳಲ್ಲಿಯೂ, ನೀರುಬಾಗಿಲು, ಹಾಗು ಎಫ್ರಯಿಮ್ ಬಾಗಿಲು ಇವುಗಳ ಮುಂದಣ ಬಯಲುಗಳಲ್ಲಿಯೂ ಪರ್ಣಕುಟೀರಗಳನ್ನು ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಈ ಆಜ್ಞಾನುಸಾರವಾಗಿ ಜನರು ಹೋಗಿ ಕೊಂಬೆಗಳನ್ನು ತೆಗೆದುಕೊಂಡು ಬಂದು ತಮ್ಮ ತಮ್ಮ ಅಂಗಳಮಾಳಿಗೆಗಳಲ್ಲಿಯೂ ದೇವಾಲಯದ ಪ್ರಾಕಾರಗಳಲ್ಲಿಯೂ ನೀರು ಬಾಗಲು, ಎಫ್ರಾಯೀಮ್ ಬಾಗಲು ಇವುಗಳ ಮುಂದಣ ಬೈಲುಗಳಲ್ಲಿಯೂ ಪರ್ಣಶಾಲೆಗಳನ್ನು ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಜನರು ಹೋಗಿ ರೆಂಬೆಗಳನ್ನು ತಂದು ತಮಗಾಗಿ ತಾತ್ಕಾಲಿಕ ಬಿಡಾರಗಳನ್ನು ಮಾಡಿಕೊಂಡರು. ಅವರು ಈ ಬಿಡಾರಗಳನ್ನು ತಮ್ಮ ಮನೆಯ ಮೇಲ್ಛಾವಣಿಗೆಯಲ್ಲೂ ಮನೆಯ ಅಂಗಳಗಳಲ್ಲಿಯೂ, ದೇವಾಲಯದ ಅಂಗಳದಲ್ಲಿಯೂ “ಬುಗ್ಗೆ” ಮತ್ತು “ಎಫ್ರಾಯೀಮ್” ಎಂಬ ದ್ವಾರಗಳ ಸಮೀಪದಲ್ಲಿದ್ದ ಬಯಲುಗಳಲ್ಲಿಯೂ ಹಾಕಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 8:16
12 ತಿಳಿವುಗಳ ಹೋಲಿಕೆ  

ಎಫ್ರಾಯೀಮ್ ಬಾಗಿಲ ಮೇಲೆಯೂ, ಯೆಷಾನಾ ಬಾಗಿಲ ಮೇಲೆಯೂ, ಮೀನು ಬಾಗಿಲ ಮೇಲೆಯೂ ಹಾದು, ಹನನೇಲ್ ಗೋಪುರವನ್ನೂ, ಶತ ಗೋಪುರವನ್ನೂ ದಾಟಿ, ಕುರಿ ಬಾಗಿಲವರೆಗೆ ಬಂದು ಸೆರೆಮನೆಯ ಬಾಗಿಲ ಬಳಿಯಲ್ಲಿ ನಿಂತರು.


ಆಗ ಇಸ್ರಾಯೇಲಿನ ಅರಸನಾದ ಯೋವಾಷನು ಅಹಜ್ಯನ ಮೊಮ್ಮಗನೂ ಯೆಹೋವಾಷನ ಮಗನೂ ಯೆಹೂದದ ಅರಸನೂ ಆದ ಅಮಚ್ಯನನ್ನು ಬೇತ್ ಷೆಮೆಷ್ ಬಳಿಯಲ್ಲಿ ವಶಪಡಿಸಿಕೊಂಡನು. ಅನಂತರ ಅವನನ್ನು ಯೆರೂಸಲೇಮಿಗೆ ತೆಗೆದುಕೊಂಡು, ಎಫ್ರಾಯೀಮಿನ ಬಾಗಿಲು ಮೊದಲುಗೊಂಡು ಮೂಲೆಯ ಬಾಗಿಲವರೆಗೂ, ಆರುನೂರು ಅಡಿ ಉದ್ದದ ಯೆರೂಸಲೇಮಿನ ಗೋಡೆಯನ್ನು ಕೆಡವಿಬಿಟ್ಟನು.


ತಮಗೆ ಎದುರಾದ ಬುಗ್ಗೆಯ ಬಾಗಿಲಿಗೆ ಬಂದಾಗ ಗೋಡೆಯಲ್ಲಿ ಎತ್ತರವಾದ ದಾವೀದನ ಪಟ್ಟಣದ ಮೆಟ್ಟಿಲುಗಳಿಂದ ದಾವೀದನ ಅರಮನೆಯ ಮೇಲೆ ಪೂರ್ವದ ಕಡೆಗಿರುವ ನೀರಿನ ಬಾಗಿಲಿಗೆ ಹೋದರು.


ಆ ಮೂಲೆ ಬುರುಜಿನ ಮತ್ತು ನೀರು ಬಾಗಿಲಿನ ಪೂರ್ವದಿಕ್ಕಿಗಿರುವ ಓಫೇಲ್ ಗುಡ್ಡವು ದೇವಾಲಯದ ಸೇವಕರ ನಿವಾಸ ಸ್ಥಾನವು.


ಈ ಪಟ್ಟಣಕ್ಕೆ ವಿರೋಧವಾಗಿ ಯುದ್ಧಮಾಡುವ ಬಾಬಿಲೋನಿಯರು ಬಂದು, ಈ ಪಟ್ಟಣಕ್ಕೆ ಬೆಂಕಿ ಹಚ್ಚಿ; ಅದನ್ನೂ ಮತ್ತು ಯಾವ ಮನೆಗಳ ಮಾಳಿಗೆಗಳ ಮೇಲೆ ಬಾಳನಿಗೆ ಧೂಪವನ್ನರ್ಪಿಸಿ, ನನಗೆ ಕೋಪೋದ್ರೇಕ ಎಬ್ಬಿಸುವ ಹಾಗೆ, ಬೇರೆ ದೇವರುಗಳಿಗೆ ಪಾನದ ಅರ್ಪಣೆಗಳನ್ನು ಹೊಯ್ದಿದ್ದಾರೋ ಅವುಗಳನ್ನೂ ಸುಟ್ಟುಬಿಡುವರು.


ಅನಂತರ ಎಜ್ರನು ನೀರಿನ ಬಾಗಿಲ ಮುಂಭಾಗದಲ್ಲಿರುವ ಬೀದಿಯಲ್ಲಿ ಸ್ತ್ರೀಪುರುಷರ ಮುಂದೆಯೂ ಗ್ರಹಿಕೆಯುಳ್ಳ ಎಲ್ಲರ ಮುಂದೆಯೂ ಬೆಳಗಿನಿಂದ ಮಧ್ಯಾಹ್ನದವರೆಗೆ ಓದಿದನು. ಜನರೆಲ್ಲರು ನಿಯಮದ ಗ್ರಂಥಕ್ಕೆ ಕಿವಿಗೊಟ್ಟರು.


ಯಾವ ಮನೆಗಳ ಮಾಳಿಗೆಗಳ ಮೇಲೆ ಆಕಾಶದ ಸೈನ್ಯಕ್ಕೆಲ್ಲಾ ಧೂಪ ಸುಟ್ಟು, ಬೇರೆ ದೇವರುಗಳಿಗೆ ಪಾನದ ಅರ್ಪಣೆಗಳನ್ನು ಹೊಯ್ದಿದ್ದಾರೋ, ಆ ಎಲ್ಲಾ ಮನೆಗಳ ನಿಮಿತ್ತವಾಗಿ ಯೆರೂಸಲೇಮಿನ ಮನೆಗಳೂ, ಯೆಹೂದದ ಅರಸರ ಮನೆಗಳೂ ತೋಫೆತಿನ ಸ್ಥಳದ ಹಾಗೆ ಅಶುದ್ಧವಾಗುವುವು, ಎಂಬುದೇ.’ ”


ಯೆಹೋವ ದೇವರ ಆಲಯದ ಎರಡು ಅಂಗಳಗಳಲ್ಲಿ ಆಕಾಶದ ಸಮಸ್ತ ನಕ್ಷತ್ರಮಂಡಲಕ್ಕಾಗಿ ಬಲಿಪೀಠಗಳನ್ನು ಕಟ್ಟಿಸಿದನು.


ಆಗ ಯೆಹೋಷಾಫಾಟನು ಹೊಸ ಅಂಗಳದ ಮುಂದೆ ಯೆಹೋವ ದೇವರ ಮಂದಿರದಲ್ಲಿರುವ ಯೆಹೂದದ ಯೆರೂಸಲೇಮಿನ ಜನಸಮೂಹದ ಮಧ್ಯದಲ್ಲಿ ನಿಂತು:


ದಾವೀದನು ಒಂದು ದಿನ ಸಾಯಂಕಾಲದಲ್ಲಿ ತನ್ನ ಹಾಸಿಗೆಯಿಂದ ಎದ್ದು, ಅರಮನೆಯ ಉಪ್ಪರಿಗೆಯ ಮೇಲೆ ತಿರುಗಾಡುತ್ತಾ ಇದ್ದು, ಸ್ನಾನ ಮಾಡುತ್ತಿರುವ ಒಬ್ಬ ಸ್ತ್ರೀಯನ್ನು ಕಂಡನು.


ನೀನು ಹೊಸ ಮನೆಯನ್ನು ಕಟ್ಟಿದಾಗ, ಯಾರೂ ಅದರ ಮೇಲಿನಿಂದ ಬಿದ್ದು ನಿನ್ನ ಮನೆಗೆ ರಕ್ತಾಪರಾಧ ಹೊರಿಸದ ಹಾಗೆ ನಿನ್ನ ಮಾಳಿಗೆಯ ಮೇಲೆ ಸುತ್ತಲೂ ಸಣ್ಣ ಕೈಗೋಡೆಯನ್ನು ಕಟ್ಟಬೇಕು.


ಜನರೆಲ್ಲರು ಏಕವಾಗಿ ನೀರು ಬಾಗಿಲಿಗೆ ಎದುರಾಗಿರುವ ಬೀದಿಯಲ್ಲಿ ಕೂಡಿಕೊಂಡು ಬಂದರು. ಯೆಹೋವ ದೇವರು ಇಸ್ರಾಯೇಲರಿಗೆ ಆಜ್ಞಾಪಿಸಿದ ಮೋಶೆಯ ನಿಯಮದ ಗ್ರಂಥವನ್ನು ತೆಗೆದುಕೊಂಡು ಬರಲು ಜನರು ನಿಯಮಶಾಸ್ತ್ರಿಯಾದ ಎಜ್ರನಿಗೆ ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು