Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 8:7 - ಕನ್ನಡ ಸಮಕಾಲಿಕ ಅನುವಾದ

7 ಆಮೇಲೆ ಯೇಷೂವ, ಬಾನೀ, ಶೇರೇಬ್ಯ, ಯಾಮೀನ್, ಅಕ್ಕೂಬ್, ಶಬ್ಬೆತೈ, ಹೋದೀಯ, ಮಾಸೇಯ, ಕೆಲೀಟ, ಅಜರ್ಯ, ಯೋಜಾಬಾದ್, ಹಾನಾನ್, ಪೆಲಾಯ ಎಂಬ ಲೇವಿಯರು ನಿಯಮವನ್ನು ತಿಳಿಯುವಂತೆ ಹೇಳಿದರು. ಜನರು ತಮ್ಮ ತಮ್ಮ ಸ್ಥಳಗಳಲ್ಲಿ ನಿಂತುಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆ ಮೇಲೆ ಯೇಷೂವ, ಬಾನೀ, ಶೇರೇಬ್ಯ, ಯಾಮಿನ್, ಅಕ್ಕೂಬ್, ಶಬ್ಬೆತೈ, ಹೋದೀಯ, ಮಾಸೇಯ, ಕೆಲೀಟ, ಅಜರ್ಯ, ಯೋಜಾಬಾದ್, ಹಾನಾನ್, ಪೆಲಾಯ ಎಂಬ ಲೇವಿಯರು ಧರ್ಮನಿಯಮದ ಸಾರವನ್ನು ಜನರು ಗ್ರಹಿಸುವಂತೆ ವಿವರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆಮೇಲೆ ಯೇಷೂವ, ಬಾನೀ, ಶೇರೇಬ್ಯ, ಯಾಮೀನ್, ಅಕ್ಕೂಬ್, ಶಬ್ಬೆತೈ, ಹೋದೀಯ, ಮಾಸೇಯ, ಕೆಲೀಟ, ಅಜರ್ಯ, ಯೋಜಾಬಾದ್, ಹಾನಾನ್, ಪೆಲಾಯ ಎಂಬ ಲೇವಿಯರು ಧರ್ಮಶಾಸ್ತ್ರವನ್ನು ಜನರು ಗ್ರಹಿಸುವಂತೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆಮೇಲೆ ಯೇಷೂವ, ಬಾನೀ, ಶೇರೇಬ್ಯ, ಯಾಮೀನ್, ಅಕ್ಕೂಬ್, ಶಬ್ಬೆತೈ, ಹೋದೀಯ, ಮಾಸೇಯ, ಕೆಲೀಟ, ಅಜರ್ಯ, ಯೋಜಾಬಾದ್, ಹಾನಾನ್, ಪೆಲಾಯ ಎಂಬ ಲೇವಿಯರು ಧರ್ಮಶಾಸ್ತ್ರವನ್ನು ಜನರು ಗ್ರಹಿಸುವಂತೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಅವರೆಲ್ಲಾ ನಿಂತಿರುವಾಗ ಲೇವಿಯರು ಧರ್ಮಶಾಸ್ತ್ರವನ್ನು ಅವರಿಗೆ ಓದಿತಿಳಿಸಿದರು. ಅವರು ಯಾರೆಂದರೆ: ಯೇಷೂವ, ಬಾನೀ, ಶೇರಬ್ಯ, ಯಾಮೀನ್, ಅಕ್ಕೂಬ್, ಶಬ್ಬೆತೈ, ಹೋದೀಯ, ಮಾಸೇಯ, ಕೆಲೀಟ, ಅಜರ್ಯ, ಯೋಜಾಬಾದ್, ಹಾನಾನ್ ಮತ್ತು ಪೆಲಾಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 8:7
27 ತಿಳಿವುಗಳ ಹೋಲಿಕೆ  

ಆಗ ಮೆಟ್ಟಿಲುಗಳ ಮೇಲೆ ಲೇವಿಯರಲ್ಲಿ ಯೇಷೂವ, ಬಾನೀ, ಕದ್ಮಿಯೇಲ್, ಶೆಬನ್ಯ, ಬುನ್ನಿ, ಶೇರೇಬ್ಯ, ಬಾನೀ, ಕೆನಾನಿ ಎಂಬವರು ನಿಂತು ಮಹಾಶಬ್ದದಿಂದ ತಮ್ಮ ದೇವರಾಗಿರುವ ಯೆಹೋವ ದೇವರಿಗೆ ಮೊರೆಯಿಟ್ಟರು.


ನೀವು ಇಸ್ರಾಯೇಲರಿಗೆ ಯೆಹೋವ ದೇವರು ಮೋಶೆಯ ಕೈಗೆ ಒಪ್ಪಿಸಿ ಹೇಳಿದ ಹಾಗೆ, ಎಲ್ಲಾ ಕಟ್ಟಳೆಗಳನ್ನು ಬೋಧಿಸುವುದಕ್ಕಾಗಿಯೂ ಇರುವುದು,” ಎಂದರು.


ಇವರ ಆಚೆ, ಬೆನ್ಯಾಮೀನ್ ಹಷ್ಷೂಬರು, ಇವರು ತಮ್ಮ ತಮ್ಮ ಮನೆಗಳಿಗೆ ಎದುರಾಗಿರುವ ಗೋಡೆಯನ್ನು ಜೀರ್ಣೋದ್ಧಾರ ಮಾಡಿದರು. ಇವರ ತರುವಾಯ ಅನನ್ಯನ ಮೊಮ್ಮಗನೂ, ಮಾಸೇಯನ ಮಗನೂ ಆದ ಅಜರ್ಯ, ಇವನು ತನ್ನ ಮನೆಯ ಹತ್ತಿರದಲ್ಲಿರುವ ಗೋಡೆಯನ್ನು ಜೀರ್ಣೋದ್ಧಾರ ಮಾಡಿದನು.


“ಯಾಜಕನ ತುಟಿಗಳು ತಿಳುವಳಿಕೆಯನ್ನು ಕಾಪಾಡ ತಕ್ಕದ್ದು. ದೈವ ಬೋಧನೆಯನ್ನು ಅವನ ಬಾಯಲ್ಲಿ ಹುಡುಕತಕ್ಕದ್ದು, ಏಕೆಂದರೆ ಅವನು ಸೇನಾಧೀಶ್ವರ ಯೆಹೋವ ದೇವರ ದೂತನು.


ಅಜರ್ಯನೂ, ಎಜ್ರನೂ, ಮೆಷುಲ್ಲಾಮನೂ,


ದ್ವಾರಪಾಲಕರು: ಅಕ್ಕೂಬನೂ, ಟಲ್ಮೋನನೂ ಬಾಗಿಲುಗಳನ್ನು ಕಾಯುವವರಾದ ಅವರ ಸಂಗಡಿಗರೂ 172 ಮಂದಿಯಾಗಿದ್ದರು.


ಲೇವಿಯರ ಮುಖ್ಯಸ್ಥರಲ್ಲಿ ಶಬ್ಬೆತೈನೂ, ಯೋಜಾಬಾದನೂ ದೇವರ ಆಲಯದ ಹೊರಗಿನ ಕೆಲಸವನ್ನು ವಿಚಾರಿಸುವವರಾಗಿದ್ದರು.


ಸೆರಾಯ, ಅಜರ್ಯ, ಯೆರೆಮೀಯ,


ಆಗ ನಿಯಮಶಾಸ್ತ್ರಿಯಾದ ಎಜ್ರನು ಅದಕ್ಕೋಸ್ಕರ ಮಾಡಲಾಗಿದ್ದ ಒಂದು ಮರದ ಪೀಠದ ಮೇಲೆ ನಿಂತನು. ಅವನ ಬಳಿಯಲ್ಲಿ ಅವನ ಬಲಗಡೆಯಲ್ಲಿ ಮತ್ತಿತ್ಯ. ಶೆಮ, ಅನಾಯ, ಊರೀಯ, ಹಿಲ್ಕೀಯ, ಮಾಸೇಯ, ಅವನಿಗೆ ಎಡಗಡೆಯಲ್ಲಿ ಪೆದಾಯ್, ಮೀಷಾಯೇಲ್, ಮಲ್ಕೀಯ, ಹಾಷುಮ್, ಹಷ್ಬದ್ದಾನ, ಜೆಕರ್ಯ, ಮೆಷುಲ್ಲಾಮ್ ನಿಂತಿದ್ದರು.


ಇವನ ಸಮೀಪದಲ್ಲಿ ಗೋಡೆಯ ಮೂಲೆಯಲ್ಲಿರುವ ಆಯುಧ ಶಾಲೆಗೆ ಹೋಗುವ ಮೆಟ್ಟಿಲು ಎದುರಿಗಿರುವ ಭಾಗವನ್ನು ಮಿಚ್ಪದ ಅಧಿಕಾರಿಯೂ, ಯೇಷೂವನ ಮಗನೂ ಆದ ಏಜೆರನು ಜೀರ್ಣೋದ್ಧಾರ ಮಾಡಿದನು.


ಇವನ ನಂತರ ಜೀರ್ಣೋದ್ಧಾರ ಮಾಡಿದವರು ಲೇವಿಯರು. ಅವರಲ್ಲಿ ಮೊದಲು ಬಾನೀಯ ಮಗನಾದ ರೆಹೂಮ್, ಇವನ ಸಮೀಪದಲ್ಲಿ ತನ್ನ ನಾಡಿನವರೊಡನೆ ಕಟ್ಟುತ್ತಿದ್ದ ಕೆಯೀಲದ ಅರೆನಾಡೊಡೆಯನಾದ ಹಷಬ್ಯ ಇವರು.


ನಮ್ಮ ದೇವರ ಕೃಪಾಹಸ್ತವು ನಮ್ಮ ಮೇಲೆ ಇದ್ದುದರಿಂದ, ಅವರು ಇಸ್ರಾಯೇಲಿನ ಮಗನಾಗಿರುವ ಲೇವಿಯ ಮಗ ಮಹ್ಲೀಯ ಪುತ್ರರಲ್ಲಿ ಬುದ್ಧಿವಂತನಾದ ಶೇರೇಬ್ಯನೂ, ಅವನ ಪುತ್ರರೂ, ಸಹೋದರರೂ ಆದ ಹದಿನೆಂಟು ಮಂದಿಯನ್ನೂ,


ಹಿಜ್ಕೀಯನು ಯೆಹೋವ ದೇವರ ಕಾರ್ಯಗಳಲ್ಲಿ ಒಳ್ಳೆಯ ತಿಳುವಳಿಕೆಯನ್ನು ಹೊಂದಿದ್ದ ಸಮಸ್ತ ಲೇವಿಯರೊಡನೆ ಉತ್ತೇಜನದ ಮಾತುಗಳಿಂದ ಮಾತನಾಡಿದನು. ಅವರು ಹಬ್ಬವನ್ನು ಏಳು ದಿನಗಳವರೆಗೂ ಸಮಾಧಾನದ ಬಲಿಗಳನ್ನು ಅರ್ಪಿಸುತ್ತಾ, ತಮ್ಮ ಪಿತೃಗಳ ದೇವರಾದ ಯೆಹೋವ ದೇವರನ್ನು ಸ್ತುತಿಸುತ್ತಾ, ಔತಣಮಾಡಿ ಆಚರಿಸಿದರು.


ಅವನು ಯಾಕೋಬನಿಗೆ ನಿಮ್ಮ ಸೂತ್ರಗಳನ್ನೂ, ಇಸ್ರಾಯೇಲರಿಗೆ ನಿಮ್ಮ ನಿಯಮವನ್ನೂ ಬೋಧಿಸುವನು. ನಿಮ್ಮ ಮುಂದೆ ಧೂಪವನ್ನೂ ನಿಮ್ಮ ಬಲಿಪೀಠದ ಮೇಲೆ ಸರ್ವಾಂಗ ದಹನಬಲಿಯನ್ನೂ ಸಮರ್ಪಿಸುವನು.


“ಸಮಸ್ತ ಇಸ್ರಾಯೇಲರಿಗೆ ಬೋಧಿಸಿದ ಮತ್ತು ಯೆಹೋವ ದೇವರಿಗೆ ಪ್ರತಿಷ್ಠಿತರಾದ ಲೇವಿಯರಿಗೆ ಪರಿಶುದ್ಧವಾದ ಮಂಜೂಷವು ನಿಮ್ಮ ಭುಜಗಳ ಮೇಲೆ ಭಾರವೆಂದೆಣಿಸದೇ, ನೀವು ಅದನ್ನು ಇಸ್ರಾಯೇಲಿನ ಅರಸನಾಗಿರುವ ದಾವೀದನ ಮಗ ಸೊಲೊಮೋನನು ಕಟ್ಟಿಸಿದ ಆಲಯದಲ್ಲಿ ಇರಿಸಿ, ನಿಮ್ಮ ದೇವರಾದ ಯೆಹೋವ ದೇವರನ್ನೂ, ದೇವಜನರಾದ ಇಸ್ರಾಯೇಲರನ್ನೂ ಸೇವಿಸಿರಿ.


ಆಗ ಎಜ್ರನು ಮಹಾ ದೇವರಾಗಿರುವ ಯೆಹೋವ ದೇವರನ್ನು ಸ್ತುತಿಸಿದನು. ಅದಕ್ಕೆ ಜನರೆಲ್ಲರು ತಮ್ಮ ಕೈಗಳನ್ನೆತ್ತಿ ಉತ್ತರವಾಗಿ, “ಆಮೆನ್, ಆಮೆನ್,” ಎಂದು ಹೇಳಿ ನೆಲದವರೆಗೂ ತಮ್ಮ ತಲೆಗಳನ್ನು ಬಗ್ಗಿಸಿ ಯೆಹೋವ ದೇವರನ್ನು ಆರಾಧಿಸಿದರು.


ಜನರು ಎದ್ದು ನಿಂತ ನಂತರ, ಅವರು ದೇವರ ನಿಯಮವನ್ನು ಸ್ಪಷ್ಟವಾಗಿ ಓದುತ್ತಾ, ಅದರ ತಾತ್ಪರ್ಯವನ್ನು ವಿವರಿಸಿದರು. ಜನರು ಚೆನ್ನಾಗಿ ಗ್ರಹಿಸಿಕೊಂಡರು.


ಆಗ ಜನರೆಲ್ಲರೂ ತಮಗೆ ತಿಳಿಸಿದ ಮಾತುಗಳನ್ನು ಗ್ರಹಿಸಿದ್ದರಿಂದ, ಅವರು ಅನ್ನಪಾನಗಳನ್ನು ತೆಗೆದುಕೊಂಡು, ಏನೂ ಇಲ್ಲದವರಿಗೆ ಆಹಾರ ಪಾಲುಗಳನ್ನು ಕಳುಹಿಸಲೂ ಮತ್ತು ಸಂತೋಷದಿಂದ ಆಚರಿಸಲೂ ಹೊರಟು ಹೋದರು.


ಅರಸನು ಜನರ ಕಡೆ ತಿರುಗಿಕೊಂಡು, ಎದ್ದುನಿಂತಿದ್ದ ಇಸ್ರಾಯೇಲ್ ಜನರನ್ನೆಲ್ಲಾ ಆಶೀರ್ವದಿಸಿದನು.


ಅವರು ತಮ್ಮ ಸ್ಥಳಗಳಲ್ಲಿ ನಿಂತು ಮೂರು ತಾಸುಗಳು ತಮ್ಮ ದೇವರಾಗಿರುವ ಯೆಹೋವ ದೇವರ ನಿಯಮದ ಗ್ರಂಥವನ್ನು ಓದಿದರು. ಮತ್ತೊಂದು ಮೂರು ತಾಸುಗಳು ತಮ್ಮ ಪಾಪಗಳನ್ನು ಅರಿಕೆಮಾಡಿ, ತಮ್ಮ ದೇವರಾಗಿರುವ ಯೆಹೋವ ದೇವರನ್ನು ಆರಾಧಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು