Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 8:8 - ಕನ್ನಡ ಸಮಕಾಲಿಕ ಅನುವಾದ

8 ಜನರು ಎದ್ದು ನಿಂತ ನಂತರ, ಅವರು ದೇವರ ನಿಯಮವನ್ನು ಸ್ಪಷ್ಟವಾಗಿ ಓದುತ್ತಾ, ಅದರ ತಾತ್ಪರ್ಯವನ್ನು ವಿವರಿಸಿದರು. ಜನರು ಚೆನ್ನಾಗಿ ಗ್ರಹಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಜನರು ಎದ್ದುನಿಂತ ನಂತರ ಅವರು ದೇವರ ಧರ್ಮನಿಯಮಗಳನ್ನು ಸ್ಪಷ್ಟವಾಗಿ ಓದುತ್ತಾ ಅದರ ತಾತ್ಪರ್ಯವನ್ನು ವಿವರಿಸಿದಾಗ ಜನರು ಅರ್ಥಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಜನರು ಎದ್ದುನಿಂತ ನಂತರ ಅವರು ದೇವರ ಧರ್ಮಶಾಸ್ತ್ರವನ್ನು ಸ್ಪಷ್ಟವಾಗಿ ಓದುತ್ತಾ ಅದರ ತಾತ್ಪರ್ಯವನ್ನು ವಿವರಿಸಿದರು. ಜನರು ಚೆನ್ನಾಗಿ ಗ್ರಹಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಜನರು ಎದ್ದು ನಿಂತನಂತರ ಅವರು ದೇವರ ಧರ್ಮಶಾಸ್ತ್ರವನ್ನು ಸ್ಪಷ್ಟವಾಗಿ ಓದುತ್ತಾ ಅದರ ತಾತ್ಪರ್ಯವನ್ನು ವಿವರಿಸಿಲು ಜನರು ಗ್ರಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಈ ಲೇವಿಯರು ಜನರಿಗೆ ಅರ್ಥವಾಗುವ ರೀತಿಯಲ್ಲಿ ದೇವರ ಧರ್ಮಶಾಸ್ತ್ರವನ್ನು ವಿವರಿಸಿ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 8:8
16 ತಿಳಿವುಗಳ ಹೋಲಿಕೆ  

ಅವರು ಒಂದು ದಿನ ಪೌಲನೊಂದಿಗಿರಲು ಏರ್ಪಡಿಸಿ, ಅವನಿದ್ದ ಸ್ಥಳಕ್ಕೆ ಬಹುಮಂದಿ ಕೂಡಿಬಂದರು. ಬೆಳಿಗ್ಗೆಯಿಂದ ಸಂಜೆಯವರೆಗೆ ಅವನು ದೇವರ ರಾಜ್ಯದ ಬಗ್ಗೆ ಖಚಿತವಾಗಿ ಸಾಕ್ಷಿ ಕೊಡುತ್ತಾ, ಮೋಶೆಯ ನಿಯಮ ಮತ್ತು ಪ್ರವಾದಿಗಳ ಗ್ರಂಥಗಳಿಂದ ಯೇಸುವಿನ ಬಗ್ಗೆ ವಿವರಿಸಿ ಅವರ ಮನವೊಲಿಸಲು ಪ್ರಯತ್ನಿಸಿದನು.


ತರುವಾಯ ಅವರು ಪವಿತ್ರ ವೇದಗಳನ್ನು ಅರ್ಥಮಾಡಿಕೊಳ್ಳುವಂತೆ ಯೇಸು ಅವರ ಬುದ್ಧಿಯನ್ನು ತೆರೆದರು.


ಅವರು ಒಬ್ಬರಿಗೊಬ್ಬರು, “ಅವರು ದಾರಿಯಲ್ಲಿ ನಮ್ಮ ಕೂಡ ಮಾತನಾಡುತ್ತಾ, ಪವಿತ್ರ ವೇದವನ್ನು ನಮಗೆ ವಿವರಿಸಿದಾಗ ನಮ್ಮ ಹೃದಯವು ಬೆಂಕಿಯಂತೆ ದಹಿಸಿತಲ್ಲವೇ?” ಎಂದುಕೊಂಡರು.


ಮೋಶೆಯ ಮತ್ತು ಎಲ್ಲಾ ಪ್ರವಾದಿಗಳಿಂದ ಆರಂಭಿಸಿ, ಪವಿತ್ರ ವೇದಗಳಲ್ಲಿ ತನ್ನ ವಿಷಯವಾಗಿ ಬರೆದವುಗಳನ್ನು ಯೇಸು ಅವರಿಗೆ ವಿವರಿಸಿದರು.


ಆಗ ಯೆಹೋವ ದೇವರು ನನಗೆ ಉತ್ತರಕೊಟ್ಟರು. ಪ್ರಕಟನೆಯನ್ನು ಬರೆ. ಅದನ್ನು ಓದುವವನು ಶೀಘ್ರವಾಗಿ ಓದುವಂತೆ, ಅದನ್ನು ಹಲಗೆಗಳ ಮೇಲೆ ಕೆತ್ತು.


ನೀವು ಕಳುಹಿಸಿದ್ದ ಪತ್ರವನ್ನು ನನ್ನ ಸನ್ನಿಧಿಯಲ್ಲಿ ಸ್ಪಷ್ಟವಾಗಿ ಓದಿ ಅನುವಾದ ಮಾಡಲಾಯಿತು.


ಆಮೇಲೆ ಯೇಷೂವ, ಬಾನೀ, ಶೇರೇಬ್ಯ, ಯಾಮೀನ್, ಅಕ್ಕೂಬ್, ಶಬ್ಬೆತೈ, ಹೋದೀಯ, ಮಾಸೇಯ, ಕೆಲೀಟ, ಅಜರ್ಯ, ಯೋಜಾಬಾದ್, ಹಾನಾನ್, ಪೆಲಾಯ ಎಂಬ ಲೇವಿಯರು ನಿಯಮವನ್ನು ತಿಳಿಯುವಂತೆ ಹೇಳಿದರು. ಜನರು ತಮ್ಮ ತಮ್ಮ ಸ್ಥಳಗಳಲ್ಲಿ ನಿಂತುಕೊಂಡಿದ್ದರು.


ರಾಜಪಾಲನಾದ ನೆಹೆಮೀಯನೂ, ನಿಯಮಶಾಸ್ತ್ರಿಯೂ, ಯಾಜಕನೂ ಆದ ಎಜ್ರನೂ, ಜನರನ್ನು ಬೋಧಿಸುತ್ತಿದ್ದ ಲೇವಿಯರೂ ಜನರೆಲ್ಲರಿಗೆ: “ಈ ದಿನವು ನಿಮ್ಮ ದೇವರಾಗಿರುವ ಯೆಹೋವ ದೇವರಿಗೆ ಪರಿಶುದ್ಧವಾದುದರಿಂದ ದುಃಖಿಸದೆ, ಅಳದೆ ಇರಿ,” ಎಂದರು. ಏಕೆಂದರೆ ಜನರೆಲ್ಲರು ದೇವರ ನಿಯಮದ ಮಾತುಗಳನ್ನು ಕೇಳಿದಾಗ ಅತ್ತರು.


ಆಗ ಜನರೆಲ್ಲರೂ ತಮಗೆ ತಿಳಿಸಿದ ಮಾತುಗಳನ್ನು ಗ್ರಹಿಸಿದ್ದರಿಂದ, ಅವರು ಅನ್ನಪಾನಗಳನ್ನು ತೆಗೆದುಕೊಂಡು, ಏನೂ ಇಲ್ಲದವರಿಗೆ ಆಹಾರ ಪಾಲುಗಳನ್ನು ಕಳುಹಿಸಲೂ ಮತ್ತು ಸಂತೋಷದಿಂದ ಆಚರಿಸಲೂ ಹೊರಟು ಹೋದರು.


ಆಗ ಅರಸನೂ, ಅವನ ಸಂಗಡ ಯೆಹೂದದ ಜನರೂ, ಯೆರೂಸಲೇಮಿನ ನಿವಾಸಿಗಳೂ, ಯಾಜಕರೂ, ಪ್ರವಾದಿಗಳೂ, ಹಿರಿಕಿರಿಯರಾದ ಸಮಸ್ತ ಜನರೂ ಯೆಹೋವ ದೇವರ ಆಲಯಕ್ಕೆ ಹೋದರು. ಅರಸನು ಯೆಹೋವ ದೇವರು ಆಲಯದಲ್ಲಿ ದೊರಕಿದ ಒಡಂಬಡಿಕೆಯ ಗ್ರಂಥದ ಮಾತುಗಳನ್ನೆಲ್ಲಾ ಅವರು ಕೇಳುವಂತೆ ಓದಿದನು.


ಅವರು ತಮ್ಮ ಸ್ಥಳಗಳಲ್ಲಿ ನಿಂತು ಮೂರು ತಾಸುಗಳು ತಮ್ಮ ದೇವರಾಗಿರುವ ಯೆಹೋವ ದೇವರ ನಿಯಮದ ಗ್ರಂಥವನ್ನು ಓದಿದರು. ಮತ್ತೊಂದು ಮೂರು ತಾಸುಗಳು ತಮ್ಮ ಪಾಪಗಳನ್ನು ಅರಿಕೆಮಾಡಿ, ತಮ್ಮ ದೇವರಾಗಿರುವ ಯೆಹೋವ ದೇವರನ್ನು ಆರಾಧಿಸಿದರು.


ರಾಜಕುಮಾರನು ಅವರ ಮಧ್ಯದಲ್ಲೆ ಅವರು ಒಳಗೆ ಹೋಗುವಾಗ ಒಳಗೆ ಹೋಗಬೇಕು, ಹೊರಗೆ ಹೋಗುವಾಗ ಹೊರಗೆ ಬರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು