Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 8:9 - ಕನ್ನಡ ಸಮಕಾಲಿಕ ಅನುವಾದ

9 ರಾಜಪಾಲನಾದ ನೆಹೆಮೀಯನೂ, ನಿಯಮಶಾಸ್ತ್ರಿಯೂ, ಯಾಜಕನೂ ಆದ ಎಜ್ರನೂ, ಜನರನ್ನು ಬೋಧಿಸುತ್ತಿದ್ದ ಲೇವಿಯರೂ ಜನರೆಲ್ಲರಿಗೆ: “ಈ ದಿನವು ನಿಮ್ಮ ದೇವರಾಗಿರುವ ಯೆಹೋವ ದೇವರಿಗೆ ಪರಿಶುದ್ಧವಾದುದರಿಂದ ದುಃಖಿಸದೆ, ಅಳದೆ ಇರಿ,” ಎಂದರು. ಏಕೆಂದರೆ ಜನರೆಲ್ಲರು ದೇವರ ನಿಯಮದ ಮಾತುಗಳನ್ನು ಕೇಳಿದಾಗ ಅತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಜನರೆಲ್ಲರೂ ಧರ್ಮೋಪದೇಶ ವಾಕ್ಯಗಳನ್ನು ಕೇಳುತ್ತಾ ಅಳುತ್ತಿದ್ದುದರಿಂದ ದೇಶಾಧಿಪತಿಯಾದ ನೆಹೆಮೀಯನೂ, ಧರ್ಮೋಪದೇಶಕನಾದ ಎಜ್ರನೂ, ಜನರಿಗೆ ಬೋಧಿಸುತ್ತಿದ್ದ ಲೇವಿಯರೂ, “ಯೆಹೋವನಿಗೆ ಈ ದಿನವು ಪರಿಶುದ್ಧವಾಗಿರುವುದರಿಂದ ನೀವು ದುಃಖಿಸುತ್ತಾ ಅಳುತ್ತಾ ಇರಬೇಡಿರಿ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಜನರೆಲ್ಲರು ಧರ್ಮೋಪದೇಶದ ವಾಕ್ಯಗಳನ್ನು ಕೇಳುತ್ತಾ ಕಣ್ಣೀರಿಡುತ್ತಿದ್ದರು. ರಾಜ್ಯಪಾಲ ನೆಹೆಮೀಯನು, ಧರ್ಮೋಪದೇಶ ಮಾಡುವ ಯಾಜಕ ಎಜ್ರನು ಹಾಗು ಜನರನ್ನು ಸಂಬೋಧಿಸುತ್ತಿದ್ದ ಲೇವಿಯರು ಜನರಿಗೆ, “ಈ ದಿನ ನಿಮ್ಮ ದೇವರಾದ ಸರ್ವೇಶ್ವರನಿಗೆ ಪರಿಶುದ್ಧ ದಿನ! ಆದುದರಿಂದ ನೀವು ದುಃಖಿಸುತ್ತಾ ಅಳುತ್ತಾ ಇರಬೇಡಿ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಜನರೆಲ್ಲರೂ ಧರ್ಮೋಪದೇಶವಾಕ್ಯಗಳನ್ನು ಕೇಳುತ್ತಾ ಅಳುತ್ತಿದ್ದದರಿಂದ ದೇಶಾಧಿಪತಿಯಾದ ನೆಹೆಮೀಯನೂ ಧರ್ಮೋಪದೇಶಮಾಡುವ ಯಾಜಕನಾದ ಎಜ್ರನೂ ಜನರನ್ನು ಬೋಧಿಸುತ್ತಿದ್ದ ಲೇವಿಯರೂ ಅವರಿಗೆ - ಈ ದಿನವು ನಿಮ್ಮ ದೇವರಾದ ಯೆಹೋವನಿಗೆ ಪರಿಶುದ್ಧದಿನವಾಗಿರುವದರಿಂದ ನೀವು ದುಃಖಿಸುತ್ತಾ ಅಳುತ್ತಾ ಇರಬೇಡಿರಿ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆಗ ಜನರೆಲ್ಲಾ ಅಳಲು ಪ್ರಾರಂಭಿಸಿದರು. ಆಗ ರಾಜ್ಯಪಾಲನಾದ ನೆಹೆಮೀಯನೂ ಯಾಜಕನೂ ಮತ್ತು ಉಪದೇಶಕನೂ ಆಗಿದ್ದ ಎಜ್ರನೂ ಲೇವಿಯರೂ ಎದ್ದುನಿಂತು ಜನರಿಗೆ, “ಈ ದಿನವು ನಿಮ್ಮ ದೇವರಾದ ಯೆಹೋವನಿಗೆ ವಿಶೇಷ ದಿನವಾಗಿದೆ. ಆದ್ದರಿಂದ ದುಃಖಿಸಬೇಡಿ ಮತ್ತು ಅಳಬೇಡಿರಿ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 8:9
30 ತಿಳಿವುಗಳ ಹೋಲಿಕೆ  

ಕುಟುಂಬಗಳ ಕೆಲವು ಮುಖ್ಯಸ್ಥರು ಕೆಲಸಕ್ಕೆ ಕಾಣಿಕೆಗಳನ್ನು ಕೊಟ್ಟರು. ರಾಜ್ಯಪಾಲನು ಬೊಕ್ಕಸಕ್ಕೆ 8.4 ಕಿಲೋಗ್ರಾಂ ಬಂಗಾರದ ನಾಣ್ಯಗಳನ್ನೂ, 50 ಪಾತ್ರೆಗಳನ್ನೂ, 530 ಯಾಜಕರ ಅಂಗಿಗಳನ್ನೂ ಕೊಟ್ಟನು.


ಆದ್ದರಿಂದ ಊರೀಮ್, ತುಮ್ಮೀಮ್ ಮುಖಾಂತರ ದೈವನಿರ್ಣಯವನ್ನು ತಿಳಿಸಬಲ್ಲ ಯಾಜಕನು ದೊರೆಯುವ ತನಕ, ಇವರು ಮಹಾಪರಿಶುದ್ಧವಾದ ಪದಾರ್ಥಗಳನ್ನು ತಿನ್ನಬಾರದೆಂದು ರಾಜ್ಯಪಾಲನು ಆದೇಶಿಸಿದನು.


ನೀವೂ, ನಿಮ್ಮ ಗಂಡು ಹೆಣ್ಣು ಮಕ್ಕಳೂ, ದಾಸದಾಸಿಯರೂ ನಿಮ್ಮೊಡನೆ ಸ್ವಾಸ್ತ್ಯವನ್ನು ಹೊಂದದೆ ಇರುವ ನಿಮ್ಮ ಊರಿನ ಲೇವಿಯರೂ, ನಿಮ್ಮ ದೇವರಾದ ಯೆಹೋವ ದೇವರ ಸನ್ನಿಧಿಯಲ್ಲಿ ಸಂತೋಷವಾಗಿರಬೇಕು.


ಹೀಗೆಯೇ ಏಳನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ಸ್ತ್ರೀಪುರುಷರ ಮುಂದೆಯೂ ಗ್ರಹಿಕೆಯಿಂದ ಕೇಳುವವರೆಲ್ಲರ ಮುಂದೆಯೂ ಯಾಜಕನಾದ ಎಜ್ರನು ದೇವರ ನಿಯಮವನ್ನು ತೆಗೆದುಕೊಂಡು ಬಂದನು.


ಮತ್ತು ಅವರು ತಮ್ಮ ನಾಮಸ್ಥಾಪನೆಗಾಗಿ ಆರಿಸಿಕೊಳ್ಳುವ ಸ್ಥಳದಲ್ಲಿ ನೀವು, ನಿಮ್ಮ ಗಂಡು ಹೆಣ್ಣುಮಕ್ಕಳು, ದಾಸದಾಸಿಯರು, ನಿಮ್ಮ ಊರಲ್ಲಿರುವ ಲೇವಿಯರು, ಪರದೇಶದವರು, ತಂದೆತಾಯಿ ಇಲ್ಲದವರು ಹಾಗೂ ವಿಧವೆಯರು ನಿಮ್ಮ ದೇವರಾದ ಯೆಹೋವ ದೇವರ ಸನ್ನಿಧಿಯಲ್ಲಿ ಸಂಭ್ರಮದಿಂದಿರಬೇಕು.


ಚೀಯೋನಿನಲ್ಲಿ ದುಃಖಿಸುವವರಿಗೆ ಬೂದಿಗೆ ಬದಲಾಗಿ ಸೌಂದರ್ಯದ ಕಿರೀಟವನ್ನೂ, ದುಃಖಕ್ಕೆ ಬದಲಾಗಿ ಆನಂದ ತೈಲವನ್ನೂ, ಕುಂದಿದ ಆತ್ಮಕ್ಕೆ ಬದಲಾಗಿ ಸ್ತೋತ್ರ ಎಂಬ ಮೇಲಂಗಿಯನ್ನು ಕೊಡುವುದಕ್ಕೂ ನನ್ನನ್ನು ನೇಮಿಸಿದ್ದಾರೆ. ಆಗ ಅವರಿಗೆ ನೀತಿವೃಕ್ಷಗಳೆಂದೂ, ಯೆಹೋವ ದೇವರು ತಾನು ಮಹಿಮೆ ಹೊಂದುವುದಕ್ಕೋಸ್ಕರ ನೆಟ್ಟ ಗಿಡಗಳೆಂದೂ ಹೆಸರಾಗುವುದು.


ಅಳುವುದಕ್ಕೆ ಒಂದು ಸಮಯ, ನಗುವುದಕ್ಕೆ ಒಂದು ಸಮಯ. ಗೋಳಾಡುವುದಕ್ಕೆ ಒಂದು ಸಮಯ, ಕುಣಿದಾಡುವುದಕ್ಕೆ ಒಂದು ಸಮಯ.


ಆದ್ದರಿಂದ ಊರೀಮ್, ತುಮ್ಮೀಮ್ ಮುಖಾಂತರ ದೈವನಿರ್ಣಯವನ್ನು ತಿಳಿಸಬಲ್ಲ ಯಾಜಕನು ದೊರೆಯುವ ತನಕ, ಇವರು ಮಹಾಪರಿಶುದ್ಧವಾದ ಪದಾರ್ಥಗಳನ್ನು ತಿನ್ನಬಾರದೆಂದು ರಾಜ್ಯಪಾಲನು ಆದೇಶಿಸಿದನು.


ಅಲ್ಲಿ ನೀವು ನಿಮ್ಮ ದೇವರಾದ ಯೆಹೋವ ದೇವರ ಮುಂದೆ ಉಂಡು, ನಿಮ್ಮ ಕುಟುಂಬಗಳ ಸಂಗಡ ಯೆಹೋವ ದೇವರು ನಿಮ್ಮನ್ನು ಆಶೀರ್ವದಿಸಿದ್ದರಿಂದ, ನೀವು ಸಾಧಿಸಿದ ಎಲ್ಲಾ ಕಾರ್ಯಗಳ ಬಗ್ಗೆ ಸಂತೋಷ ಪಡಬೇಕು.


“ಇಸ್ರಾಯೇಲರೊಂದಿಗೆ ಮಾತನಾಡಿ: ‘ಏಳನೆಯ ತಿಂಗಳಿನಲ್ಲಿ ಮೊದಲನೆಯ ದಿನದಲ್ಲಿ ನಿಮಗೆ ತುತೂರಿಗಳನ್ನು ಊದುವ ಜ್ಞಾಪಕಾರ್ಥವಾದ ಸಬ್ಬತ್ ದಿನವಾಗಿರಬೇಕು. ಆ ದಿನ ಪರಿಶುದ್ಧ ಸಭೆಯ ಕೂಟವೂ ಇರಬೇಕು.


ಒಮ್ಮೆ ನಾನು ನಿಯಮವಿಲ್ಲದೆ ಜೀವಿಸುತ್ತಿದ್ದೆನು. ಆದರೆ ಯಾವಾಗ ಆಜ್ಞೆಯು ಬಂದಿತೋ ಆಗ ಪಾಪವು ಜೀವಂತವಾಯಿತು, ನಾನು ಸತ್ತವನಾದೆನು.


ಆದ್ದರಿಂದ ಯಾರೂ ದೇವರ ದೃಷ್ಟಿಯಲ್ಲಿ ನಿಯಮದ ಕೃತ್ಯಗಳಿಂದ ನೀತಿವಂತರೆಂದು ನಿರ್ಣಯಿಸಲಾಗುವುದಿಲ್ಲ. ನಿಯಮದಿಂದ ಪಾಪದ ಪ್ರಜ್ಞೆ ಉಂಟಾಗುತ್ತದಷ್ಟೆ.


ನೀವು ಇನ್ನೊಂದನ್ನು ಮಾಡಿದ್ದೀರಿ. ಯೆಹೋವ ದೇವರ ಬಲಿಪೀಠಗಳನ್ನು ಕಣ್ಣೀರಿನಿಂದ ತುಂಬಿಸಿದ್ದೀರಿ. ಆದ್ದರಿಂದ ಆತನು ಕಾಣಿಕೆಯನ್ನು ಇನ್ನು ಮೇಲೆ ಲಕ್ಷಿಸದೆ, ಅದನ್ನು ನಿಮ್ಮ ಕೈಯಿಂದ ಮೆಚ್ಚಿಕೆಯಾಗಿ ಅಂಗೀಕರಿಸುವುದಿಲ್ಲವಾದ್ದರಿಂದ ನೀವು ಅಳುತ್ತೀರಿ, ಗೋಳಾಡುತ್ತೀರಿ.


ನನ್ನ ಜನರು ಜ್ಞಾನಹೀನರಾಗಿ ಅಳಿದು ಹೋಗುತ್ತಿದ್ದಾರೆ. “ಏಕೆಂದರೆ ನೀವು ದೈವಜ್ಞಾನವನ್ನು ತಿರಸ್ಕರಿಸಿದ್ದೀರಿ. ನಾನು ಸಹ ಯಾಜಕ ವರ್ಗದಿಂದ ನಿಮ್ಮನ್ನು ವರ್ಜಿಸಿ ಬಿಡುತ್ತೇನೆ. ಏಕೆಂದರೆ ನೀವು ದೇವರ ನಿಯಮವನ್ನು ಮರೆತುಬಿಟ್ಟಿದ್ದೀರಿ, ನಾನು ನಿಮ್ಮ ಮಕ್ಕಳನ್ನು ಮರೆತುಬಿಡುತ್ತೇನೆ.


ಯೋಚಾದಾಕನ ಮಗ ಯೇಷೂವನ ಮಗ ಯೋಯಾಕೀಮನ ದಿವಸಗಳಲ್ಲಿಯೂ; ರಾಜ್ಯಪಾಲನಾದ ನೆಹೆಮೀಯನ ದಿವಸಗಳಲ್ಲಿಯೂ; ನಿಯಮಶಾಸ್ತ್ರಿಯೂ, ಯಾಜಕನೂ ಆದ ಎಜ್ರನ ದಿವಸಗಳಲ್ಲಿಯೂ ಇವರು ಇದ್ದರು.


ಮುದ್ರೆ ಹಾಕಿದವರು ಯಾರೆಂದರೆ: ಅಧಿಪತಿಯಾದ ಹಕಲ್ಯನ ಮಗ ನೆಹೆಮೀಯನು. ಚಿದ್ಕೀಯ,


ಯಾಜಕನು, ನಿಯಮಶಾಸ್ತ್ರಿಯು ಹಾಗೂ ಇಸ್ರಾಯೇಲರಿಗೆ ಕೊಡಲಾದ ಯೆಹೋವ ದೇವರ ಆಜ್ಞಾಸೂತ್ರಗಳಲ್ಲಿ ವಿದ್ವಾಂಸನೂ ಆದ ಎಜ್ರನಿಗೆ ಅರಸನಾದ ಅರ್ತಷಸ್ತನು ಕೊಟ್ಟ ಪತ್ರದ ನಕಲು ಇದು:


“ಸಮಸ್ತ ಇಸ್ರಾಯೇಲರಿಗೆ ಬೋಧಿಸಿದ ಮತ್ತು ಯೆಹೋವ ದೇವರಿಗೆ ಪ್ರತಿಷ್ಠಿತರಾದ ಲೇವಿಯರಿಗೆ ಪರಿಶುದ್ಧವಾದ ಮಂಜೂಷವು ನಿಮ್ಮ ಭುಜಗಳ ಮೇಲೆ ಭಾರವೆಂದೆಣಿಸದೇ, ನೀವು ಅದನ್ನು ಇಸ್ರಾಯೇಲಿನ ಅರಸನಾಗಿರುವ ದಾವೀದನ ಮಗ ಸೊಲೊಮೋನನು ಕಟ್ಟಿಸಿದ ಆಲಯದಲ್ಲಿ ಇರಿಸಿ, ನಿಮ್ಮ ದೇವರಾದ ಯೆಹೋವ ದೇವರನ್ನೂ, ದೇವಜನರಾದ ಇಸ್ರಾಯೇಲರನ್ನೂ ಸೇವಿಸಿರಿ.


“ನೀವು ಹೋಗಿ ಸಿಕ್ಕಿದ ಈ ಗ್ರಂಥದ ವಾಕ್ಯಗಳ ಕುರಿತು ನನಗೋಸ್ಕರವೂ, ಇಸ್ರಾಯೇಲ್ ಮತ್ತು ಯೆಹೂದದಲ್ಲಿ ಉಳಿದವರಿಗೋಸ್ಕರವೂ ಯೆಹೋವ ದೇವರ ಬಳಿಯಲ್ಲಿ ವಿಚಾರಿಸಿರಿ. ಏಕೆಂದರೆ ನಮ್ಮನ್ನು ಕುರಿತು ಬರೆದಿರುವ ಎಲ್ಲವನ್ನೂ ಕೈಗೊಂಡು ನಡೆಯಲು ನಮ್ಮ ಪಿತೃಗಳು ಈ ಗ್ರಂಥದ ಮಾತುಗಳನ್ನು ಕೇಳದೆ ಹೋದುದರಿಂದ, ನಮ್ಮ ಮೇಲೆ ಸುರಿದ ಯೆಹೋವ ದೇವರ ಕೋಪವು ದೊಡ್ಡದಾಗಿದೆ,” ಎಂದು ಹೇಳಿದನು.


ಅರಸನು ದೇವರ ನಿಯಮದ ವಾಕ್ಯಗಳನ್ನು ಕೇಳಿದಾಗ, ತನ್ನ ವಸ್ತ್ರಗಳನ್ನು ಹರಿದುಕೊಂಡನು.


ಹಿಜ್ಕೀಯನು ಯೆಹೋವ ದೇವರ ಕಾರ್ಯಗಳಲ್ಲಿ ಒಳ್ಳೆಯ ತಿಳುವಳಿಕೆಯನ್ನು ಹೊಂದಿದ್ದ ಸಮಸ್ತ ಲೇವಿಯರೊಡನೆ ಉತ್ತೇಜನದ ಮಾತುಗಳಿಂದ ಮಾತನಾಡಿದನು. ಅವರು ಹಬ್ಬವನ್ನು ಏಳು ದಿನಗಳವರೆಗೂ ಸಮಾಧಾನದ ಬಲಿಗಳನ್ನು ಅರ್ಪಿಸುತ್ತಾ, ತಮ್ಮ ಪಿತೃಗಳ ದೇವರಾದ ಯೆಹೋವ ದೇವರನ್ನು ಸ್ತುತಿಸುತ್ತಾ, ಔತಣಮಾಡಿ ಆಚರಿಸಿದರು.


ಬಹುಕಾಲ ಇಸ್ರಾಯೇಲರು ನಿಜವಾದ ದೇವರಿಲ್ಲದೆ ಬೋಧಿಸುವ ಯಾಜಕನಿಲ್ಲದೆ, ನಿಯಮವಿಲ್ಲದೆ ಇದ್ದರು.


ಈ ಸ್ಥಳವೂ ಅದರ ನಿವಾಸಿಗಳೂ ನಾಶಕ್ಕೂ ಶಾಪಕ್ಕೂ ಗುರಿಯಾಗುವರೆಂದು ನಾನು ಹೇಳಿದ್ದನ್ನು ನೀನು ಕೇಳಿದಾಗ, ನಿನ್ನ ಹೃದಯವು ಮೃದುವಾಗಿ ನೀನು ನಿನ್ನನ್ನು ಯೆಹೋವ ದೇವರ ಮುಂದೆ ತಗ್ಗಿಸಿಕೊಂಡೆ. ನಿನ್ನ ವಸ್ತ್ರಗಳನ್ನು ಹರಿದುಕೊಂಡು ನನ್ನ ಸಮ್ಮುಖದಲ್ಲಿ ಕಣ್ಣೀರು ಸುರಿಸಿದ್ದರಿಂದ ನಾನು ನಿನ್ನ ಮೊರೆಯನ್ನು ಕೇಳಿದೆನು.


ಅರಸನು ಮೋಶೆಯ ನಿಯಮದ ಪುಸ್ತಕದ ಮಾತುಗಳನ್ನು ಕೇಳಿದಾಗ, ತನ್ನ ವಸ್ತ್ರಗಳನ್ನು ಹರಿದುಕೊಂಡನು.


ದುಃಖದ ಸಮಯದಲ್ಲಿ ಪರಿಶುದ್ಧವಾದದ್ದರಲ್ಲಿ ಏನೂ ತಿನ್ನಲಿಲ್ಲ. ಅಶುದ್ಧರಾಗಿ ಅದರಿಂದ ತೆಗೆದುಕೊಂಡು ಉಪಯೋಗಿಸಲಿಲ್ಲ. ಸತ್ತವರಿಗಾಗಿ ಅದರಲ್ಲಿ ಏನೂ ಕೊಡಲಿಲ್ಲ. ನಮ್ಮ ದೇವರಾದ ಯೆಹೋವ ದೇವರ ಮಾತನ್ನು ಕೇಳಿದ್ದೇವೆ. ನಮಗೆ ಆಜ್ಞಾಪಿಸಿದ್ದೆಲ್ಲಾ ಮಾಡಿದ್ದೇವೆ.


ದುಃಖಿಸಿರಿ, ಗೋಳಾಡಿರಿ, ಕಣ್ಣೀರಿಡಿರಿ, ನಿಮ್ಮ ನಗೆಯು ದುಃಖಕ್ಕೂ ನಿಮ್ಮ ಸಂತೋಷವು ವ್ಯಥೆಗೂ ತಿರುಗಿಕೊಳ್ಳಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು