Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 9:10 - ಕನ್ನಡ ಸಮಕಾಲಿಕ ಅನುವಾದ

10 ಈಜಿಪ್ಟಿನವರು ಗರ್ವಿಗಳಾಗಿ ಇಸ್ರಾಯೇಲರನ್ನು ಕುಗ್ಗಿಸಿದಾಗ, ನೀವು ಫರೋಹನ ಮೇಲೆಯೂ, ಅವನ ಸಮಸ್ತ ಅಧಿಕಾರಿಗಳ ಮೇಲೆಯೂ, ಅವನ ಸಮಸ್ತ ದೇಶದ ಜನರ ಮೇಲೆಯೂ ಸೂಚಕಕಾರ್ಯಗಳನ್ನೂ, ಅದ್ಭುತಗಳನ್ನೂ ನಡೆಸಿದಿರಿ. ಈ ಪ್ರಕಾರವೇ ನೀವು ಇಂದಿನವರೆಗೂ ನಿಮ್ಮ ಹೆಸರಿನ ಕೀರ್ತಿಯನ್ನು ಸ್ಥಾಪಿಸಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಐಗುಪ್ತ್ಯರು ಗರ್ವಿಗಳಾಗಿ ನಮ್ಮ ಪೂರ್ವಿಕರನ್ನು ಕುಗ್ಗಿಸಿದಾಗ, ನೀನು ಫರೋಹನಲ್ಲಿಯೂ, ಅವನ ಸೇವಕರಲ್ಲಿಯು, ಅವನ ದೇಶದ ಜನರಲ್ಲಿಯೂ ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯಗಳನ್ನು ನಡೆಸಿ ಈಗ ನಿನಗಿರುವ ಕೀರ್ತಿಯನ್ನು ಸ್ಥಾಪಿಸಿಕೊಂಡಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಈಜಿಪ್ಟಿನವರು ಅವರನು ದರ್ಪದಿಂದ ದಮನಮಾಡುವಲ್ಲಿ ಎಸಗಿದಿರಿ ಅದ್ಭುತಕಾರ್ಯಗಳನು ಸೂಚಕಕಾರ್ಯಗಳನು ಫರೋಹನಲಿ, ಅವನ ಸೇವಕರಲಿ, ಆ ನಾಡಿನ ಜನರಲಿ. ಉಳಿಸಿಕೊಂಡಿರಿ ಇಂದಿಗೂ ಅಂದು ಸಾಧಿಸಿದ ಕೀರ್ತಿಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಐಗುಪ್ತ್ಯರು ಗರ್ವಿಗಳಾಗಿ ಅವರನ್ನು ಕುಗ್ಗಿಸಿದಾಗ ನೀನು ಫರೋಹನಲ್ಲಿಯೂ ಅವನ ಸೇವಕರಲ್ಲಿಯೂ ಅವನ ದೇಶದ ಜನರಲ್ಲಿಯೂ ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯಗಳನ್ನೂ ನಡಿಸಿ ಈಗ ನಿನಗಿರುವ ಕೀರ್ತಿಯನ್ನು ಸ್ಥಾಪಿಸಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಫರೋಹನಿಗೂ ಅವನ ಅಧಿಕಾರಿಗಳಿಗೂ ಅವನ ಜನರಿಗೂ ವಿರೋಧವಾಗಿ ನೀನು ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯಗಳನ್ನೂ ಮಾಡಿದೆ. ಈಜಿಪ್ಟಿನವರು ತಮ್ಮನ್ನು ನಮ್ಮ ಪೂರ್ವಿಕರಿಗಿಂತ ಉತ್ತಮರೆಂದು ಭಾವಿಸಿಕೊಂಡದ್ದು ನಿನಗೆ ಗೊತ್ತಿತ್ತು. ಆದರೆ ನೀನು ಎಂಥಾ ಮಹಾ ವ್ಯಕ್ತಿಯೆಂದು ಅವರಿಗೆ ರುಜುವಾತುಪಡಿಸಿದೆ! ಅದನ್ನು ಈಗಲೂ ಅವರು ನೆನಪು ಮಾಡುತ್ತಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 9:10
32 ತಿಳಿವುಗಳ ಹೋಲಿಕೆ  

“ಈಗ ನಮ್ಮ ಕರ್ತದೇವರೇ, ನಿಮ್ಮ ಭುಜಬಲವನ್ನು ತೋರಿಸಿ, ನಿಮ್ಮ ಜನರನ್ನು ಈಜಿಪ್ಟ್ ದೇಶದೊಳಗಿಂದ ಪಾರುಮಾಡಿ, ಈವರೆಗೂ ಪ್ರಸಿದ್ಧವಾದ ಹೆಸರು ಪಡೆದುಕೊಂಡವರೇ, ನಾವು ಪಾಪಮಾಡಿದ್ದೇವೆ, ನಾವು ಕೆಟ್ಟವರಾಗಿ ನಡೆದುಕೊಂಡಿದ್ದೇವೆ.


ನೀವು ಈ ದಿನದವರೆಗೂ ಈಜಿಪ್ಟ್ ದೇಶದಲ್ಲಿಯೂ ಇಸ್ರಾಯೇಲಿನಲ್ಲಿಯೂ ಜನಾಂಗಗಳೊಳಗೂ ಗುರುತುಗಳನ್ನೂ, ಲಕ್ಷಣಗಳನ್ನೂ ಇಟ್ಟಿದ್ದೀರಿ. ಇಂದಿನವರೆಗೂ ನಿಮಗೆ ಹೆಸರನ್ನು ಸ್ಥಿರಪಡಿಸಿಕೊಂಡಿದ್ದೀರಿ.


ಪಶುವು ತಗ್ಗಿಗೆ ಇಳಿಯುವ ಪ್ರಕಾರ, ಯೆಹೋವ ದೇವರ ಆತ್ಮರು ಅವರಿಗೆ ವಿಶ್ರಾಂತಿಯನ್ನು ಕೊಟ್ಟರು. ಈ ಪ್ರಕಾರ ನೀವು ನಿಮಗೆ ಮಹಿಮೆಯುಳ್ಳ ಹೆಸರನ್ನು ಉಂಟುಮಾಡುವುದಕ್ಕಾಗಿ, ನಿಮ್ಮ ಜನರನ್ನು ನಡಿಸಿದಿರಿ.


ಮೋಶೆಯ ಬಲಗೈಯ ಮುಖಾಂತರ ತನ್ನ ಬಲವಾದ ಮಹಿಮೆಯುಳ್ಳ ತೋಳಿನಿಂದ ಅವರನ್ನು ನಡೆಸಿದವನೂ, ತನಗೆ ನಿತ್ಯವಾದ ಹೆಸರನ್ನು ಉಂಟುಮಾಡುವ ಹಾಗೆ ಅವರ ಮುಂದೆ ಜನರಾಶಿಯನ್ನೂ ಇಬ್ಬಾಗಿಸಿದವನು ಎಲ್ಲಿ?


ನಿಮ್ಮ ದೇವರಾದ ಯೆಹೋವ ದೇವರು ಈಜಿಪ್ಟಿನಲ್ಲಿ ನಿಮ್ಮ ಕಣ್ಣ ಮುಂದೆಯೇ ನಿಮಗೆ ಮಾಡಿದ್ದೆಲ್ಲದರ ಹಾಗೆ ಯಾವ ದೇವರು ಒಂದು ಜನಾಂಗವನ್ನು ಮತ್ತೊಂದು ಜನಾಂಗದಿಂದ ತಮಗಾಗಿ ಆಯ್ದು ತೆಗೆದುಕೊಳ್ಳುವುದಕ್ಕೆ ಪರೀಕ್ಷೆಗಳು, ಗುರುತುಗಳು, ಅದ್ಭುತಗಳು ಇವುಗಳ ಮೂಲಕವಾಗಿಯೂ, ಯುದ್ಧದಿಂದಲೂ, ಭುಜಬಲದಿಂದಲೂ, ಚಾಚಿದ ತೋಳಿನಿಂದಲೂ, ದೊಡ್ಡ ಭಯಗಳಿಂದಲೂ ಪ್ರಯತ್ನ ಮಾಡಿದರೋ?


ಎಲ್ಲಾ ದೇವರುಗಳಿಗಿಂತ ಯೆಹೋವ ದೇವರೇ ದೊಡ್ಡವರೆಂದು ಈಗ ನಾನು ತಿಳಿದುಕೊಂಡಿದ್ದೇನೆ. ಏಕೆಂದರೆ ಈಜಿಪ್ಟಿನವರು ಗರ್ವಪಟ್ಟಿದ್ದರಿಂದ ಯೆಹೋವ ದೇವರು ಅವರನ್ನು ತಗ್ಗಿಸಿದರು,” ಎಂದನು.


ಆಗ ಫರೋಹನು, “ನಾನು ಆತನ ಮಾತಿಗೆ ವಿಧೇಯನಾಗಿ ಇಸ್ರಾಯೇಲರನ್ನು ಕಳುಹಿಸಿಬಿಡುವಂತೆ ಆ ಯೆಹೋವ ಯಾರು? ಆ ಯೆಹೋವ ದೇವರನ್ನು ನಾನರಿಯೆನು. ಇಸ್ರಾಯೇಲರನ್ನೂ ಕಳುಹಿಸುವುದಿಲ್ಲ,” ಎಂದನು.


ಅದೇ ರೀತಿಯಾಗಿ ಯೌವನಸ್ಥರೇ, ಹಿರಿಯರಿಗೆ ಅಧೀನರಾಗಿರಿ. ನೀವೆಲ್ಲರೂ ದೀನತೆಯೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಅಧೀನರಾಗಿರಿ. ಏಕೆಂದರೆ, “ದೇವರು ಅಹಂಕಾರಿಗಳನ್ನು ಎದುರಿಸುತ್ತಾರೆ, ದೀನರಿಗಾದರೋ ಕೃಪೆಯನ್ನು ಕೊಡುತ್ತಾರೆ!”


ಏಕೆಂದರೆ, “ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ತೋರಿಸಿ ನನ್ನ ಹೆಸರನ್ನು ಭೂಮಿಯ ಮೇಲೆಲ್ಲಾ ಪ್ರಸಿದ್ಧಪಡಿಸಬೇಕೆಂಬ ಉದ್ದೇಶದಿಂದಲೇ ನಿನ್ನನ್ನು ಉನ್ನತಸ್ಥಾನಕ್ಕೆ ಏರಿಸಿದೆನು,” ಎಂದು ಪವಿತ್ರ ವೇದದಲ್ಲಿ ದೇವರು ಫರೋಹನಿಗೆ ಹೇಳುತ್ತಾರೆ.


ಈ ಮೋಶೆಯೇ ಇಸ್ರಾಯೇಲರನ್ನು ಈಜಿಪ್ಟಿನಿಂದ ಹೊರಗೆ ನಡೆಸಿಕೊಂಡು ಬಂದನು. ಈಜಿಪ್ಟಿನಲ್ಲಿ, ಕೆಂಪುಸಮುದ್ರದ ಬಳಿಯಲ್ಲಿ, ಅರಣ್ಯದಲ್ಲಿ ಅದ್ಭುತಗಳನ್ನು ಮತ್ತು ಸೂಚಕಕಾರ್ಯಗಳನ್ನು ಮಾಡುತ್ತಾ ನಲವತ್ತು ವರ್ಷಗಳ ಕಾಲ ನಡೆಸಿದನು.


ಪರಲೋಕದ ಒಡೆಯನಿಗೆ ವಿರೋಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ. ಅವರ ಆಲಯದ ಪಾತ್ರೆಗಳನ್ನು ನಿನ್ನ ಸನ್ನಿಧಿಗೆ ತಂದರು. ಆಗ ನೀನು ನಿನ್ನ ಪ್ರಧಾನರು ಮತ್ತು ಪತ್ನಿಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು, ಬುದ್ಧಿ, ಕಣ್ಣು ಕಿವಿಗಳಿಲ್ಲದ ಬೆಳ್ಳಿಬಂಗಾರ ಕಂಚು ಕಬ್ಬಿಣ ಮರ ಕಲ್ಲುಗಳ ದೇವರುಗಳನ್ನು ಸ್ತುತಿಸಿದಿರಿ. ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ ನಿನ್ನ ಸ್ಥಿತಿಗತಿಗಳು ಯಾರ ಅಧೀನದಲ್ಲಿವೆಯೋ, ಆ ದೇವರನ್ನು ಘನಪಡಿಸಲೇ ಇಲ್ಲ.


ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕದ ಅರಸರನ್ನು ಸ್ತುತಿಸಿ, ಹೆಚ್ಚಿಸಿ ಘನಪಡಿಸುತ್ತೇನೆ. ಅವರ ಕ್ರಿಯೆಗಳೆಲ್ಲಾ ಸತ್ಯವೇ. ಅವರ ಮಾರ್ಗಗಳು ನ್ಯಾಯವೇ. ಗರ್ವದಲ್ಲಿ ನಡೆಯುವವರನ್ನು ಅವರೇ ತಗ್ಗಿಸಬಲ್ಲರು.


ಆದರೆ ಅವರು ಯಾರ ಮಧ್ಯದಲ್ಲಿದ್ದರೋ, ನಾನು ಯಾರ ಮುಂದೆ ಅವರನ್ನು ಈಜಿಪ್ಟ್ ದೇಶದಿಂದ ಹೊರಗೆ ತಂದು ನನ್ನನ್ನು ತಿಳಿಯಪಡಿಸಿದೆನೋ ಆ ಜನಾಂಗಗಳ ಕಣ್ಣುಗಳ ಮುಂದೆ ನನ್ನ ಹೆಸರು ಅಪವಿತ್ರವಾಗದ ಹಾಗೆ ನನ್ನ ಹೆಸರಿಗೋಸ್ಕರವೇ ಈ ಕೆಲಸವನ್ನು ಮಾಡಿದೆನು.


ಯೆಹೋವ ದೇವರು ಎಂಬ ಹೆಸರುಳ್ಳ ನೀವು ಮಾತ್ರವೇ ಸಮಸ್ತ ಭೂಮಿಯ ಮೇಲೆ ಮಹೋನ್ನತರಾಗಿದ್ದೀರಿ ಎಂದು ಅವರು ತಿಳಿದುಕೊಳ್ಳಲಿ.


ಆಗ ಯೆಹೋವ ದೇವರು ಮೋಶೆಗೆ, “ಇಗೋ, ನಿನ್ನನ್ನು ಫರೋಹನಿಗೆ ದೇವರಂತೆ ಮಾಡಿದ್ದೇನೆ. ನಿನ್ನ ಸಹೋದರನಾದ ಆರೋನನು ನಿನ್ನ ಪ್ರವಾದಿಯಾಗಿರುವನು.


ಹೀಗಿರುವುದರಿಂದ ನನ್ನ ಕೈಯನ್ನು ಚಾಚಿ ಈಜಿಪ್ಟ್ ದೇಶದಲ್ಲಿ ಅದ್ಭುತಕಾರ್ಯಗಳನ್ನು ಮಾಡಿ, ನಾನು ಅದನ್ನು ನಾನಾ ವಿಧವಾಗಿ ಬಾಧಿಸುವೆನು. ತರುವಾಯ ಅವನು ನಿಮ್ಮನ್ನು ಕಳುಹಿಸಿಬಿಡುವನು.


ಆದರೆ ನಿಶ್ಚಯವಾಗಿ ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ತೋರಿಸಿ, ನನ್ನ ಹೆಸರನ್ನು ಭೂಮಿಯ ಮೇಲೆಲ್ಲಾ ಪ್ರಸಿದ್ಧಪಡಿಸಬೇಕೆಂಬ ಉದ್ದೇಶದಿಂದಲೇ ನಿನ್ನನ್ನು ಸಾಯಿಸದೆ ಉಳಿಸಿದ್ದೇನೆ.


“ಆದರೆ ನಮ್ಮ ಪಿತೃಗಳು ಗರ್ವಪಟ್ಟು ನಡೆದು, ಹಟಮಾರಿಗಳೂ, ಕಠಿಣರೂ ಆಗಿ ನಿಮ್ಮ ಆಜ್ಞೆಗಳಿಗೆ ಅವಿಧೇಯರಾದರು.


“ನೀವು ಅವರನ್ನು ನಿಮ್ಮ ನಿಯಮಕ್ಕೆ ಮರಳಿ ಬರುವ ಹಾಗೆ ಅವರನ್ನು ಎಚ್ಚರಿಸಿದಿರಿ. ಆದರೆ ಅವರು ಗರ್ವಪಟ್ಟು, ನಿಮ್ಮ ಆಜ್ಞೆಗಳನ್ನು ಅನುಸರಿಸದೆ ಹೋದರು. ನಿಮ್ಮ ವಾಕ್ಯಗಳನ್ನು ಕೈಗೊಳ್ಳುವುದರಿಂದ ಮನುಷ್ಯರು ಬದುಕುವರು ಎಂಬುದನ್ನು ಅವರು ತಿಳಿದಿದ್ದರೂ, ಆ ನಿಮ್ಮ ವಾಕ್ಯಗಳಿಗೆ ವಿರೋಧವಾಗಿ ಪಾಪಮಾಡಿ, ತಮ್ಮ ಹೃದಯವನ್ನು ಕಠಿಣಪಡಿಸಿಕೊಂಡು ನಿಮ್ಮ ಮಾತನ್ನು ಕೇಳದೆ ಹೋದರು.


ಕಣ್ಣಾರೆ ನೋಡಿದ ದೊಡ್ಡ ಉಪದ್ರವಗಳನ್ನೂ, ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಹೊರಗೆ ಬರಮಾಡಿದಾಗ ಉಂಟಾದ ಗುರುತುಗಳನ್ನೂ, ಅದ್ಭುತಗಳನ್ನೂ, ದೇವರ ಬಲವಾದ ಹಸ್ತವನ್ನೂ, ಚಾಚಿದ ತೋಳನ್ನೂ ನೀವು ಚೆನ್ನಾಗಿ ಜ್ಞಾಪಕಮಾಡಿಕೊಳ್ಳಬೇಕು. ನೀವು ಯಾವ ಜನರಿಗೆ ಭಯಪಡುತ್ತೀರೋ, ಆ ಜನರಿಗೆಲ್ಲಾ ನಿಮ್ಮ ದೇವರಾದ ಯೆಹೋವ ದೇವರು ಹಾಗೆಯೇ ಮಾಡುವರು.


ನೀನು ಅನೇಕ ಸಂಗತಿಗಳನ್ನು ಕಂಡಿದ್ದರೂ, ನಿನಗೆ ಗಮನವಿಲ್ಲ. ಅವನ ಕಿವಿಗಳು ತೆರೆದಿದ್ದರೂ, ಕೇಳನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು