ನೆಹೆಮೀಯ 9:11 - ಕನ್ನಡ ಸಮಕಾಲಿಕ ಅನುವಾದ11 ನೀವು ಜನರ ಮುಂದೆ ಸಮುದ್ರವನ್ನು ವಿಭಾಗಿಸಿದ್ದರಿಂದ, ಅವರು ಸಮುದ್ರದ ನಡುವೆ ಒಣಭೂಮಿಯಲ್ಲಿ ಹಾದುಹೋದರು. ಆದರೆ ಅವರನ್ನು ಹಿಂದಟ್ಟಿದವರನ್ನು ಅಗಾಧಗಳಲ್ಲಿ ಕಲ್ಲಿನಂತೆ ಮಹಾ ಜಲರಾಶಿಗಳಲ್ಲಿ ಮುಳುಗಿಸಿಬಿಟ್ಟಿರಿ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ನಮ್ಮ ಪೂರ್ವಿಕರು ಸಮುದ್ರದ ಮಧ್ಯದಲ್ಲಿ ಒಣನೆಲದಲ್ಲೇ ಹಾದುಹೋಗುವಂತೆ ಅವರ ಮುಂದೆ ಸಮುದ್ರವನ್ನು ಭೇದಿಸಿದ್ದೀ. ಅವರನ್ನು ಹಿಂದಟ್ಟಿದವರನ್ನು ಕಲ್ಲಿನಂತೆ ಮಹಾಜಲರಾಶಿಯ ತಳದಲ್ಲಿ ಮುಳುಗಿಸಿಬಿಟ್ಟೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಕಡಲನು ಸೀಳಿ, ಆ ಪಿತೃಗಳ ನಡೆಸಿದಿರಿ ಒಣನೆಲದಲೋ ಎಂಬಂತೆ ಅವರ ಬೆನ್ನಟ್ಟಿ ಬಂದವರನು ಜಲರಾಶಿಯ ತಳಮುಟ್ಟಿಸಿದಿರಿ ಕಲ್ಲಂತೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ನಮ್ಮ ಪಿತೃಗಳು ಸಮುದ್ರ ಮಧ್ಯದಲ್ಲಿ ಒಣನೆಲದಲ್ಲೇ ಹಾದುಹೋಗುವಂತೆ ಅವರ ಮುಂದೆ ಸಮುದ್ರವನ್ನು ಭೇದಿಸಿದಿ. ಅವರನ್ನು ಹಿಂದಟ್ಟುವವರನ್ನು ಕಲ್ಲಿನಂತೆ ಮಹಾಜಲರಾಶಿಯ ತಳದಲ್ಲಿ ಮುಳುಗಿಸಿ ಬಿಟ್ಟಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಕೆಂಪುಸಮುದ್ರವನ್ನು ಅವರ ಕಣ್ಣು ಮುಂದೆಯೇ ಇಬ್ಬಾಗ ಮಾಡಿದೆ. ಅವರು ಆ ಒಣನೆಲದಲ್ಲಿ ನಡೆದರು. ಈಜಿಪ್ಟಿನ ವೈರಿಗಳು ಅವರನ್ನು ಹಿಂಬಾಲಿಸುತ್ತಿದ್ದರು. ಆದರೆ ಆ ವೈರಿಗಳನ್ನು ನೀನು ಸಮುದ್ರದೊಳಗೆ ಬಿಸಾಡಿದೆ; ಅವರು ಗುಂಡುಕಲ್ಲಿನಂತೆ ಸಮುದ್ರದಲ್ಲಿ ಮುಳುಗಿದರು. ಅಧ್ಯಾಯವನ್ನು ನೋಡಿ |