Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 9:13 - ಕನ್ನಡ ಸಮಕಾಲಿಕ ಅನುವಾದ

13 “ನೀವು ಸೀನಾಯಿ ಪರ್ವತದ ಮೇಲಕ್ಕೆ ಇಳಿದುಬಂದು, ಆಕಾಶದಿಂದ ಅವರ ಸಂಗಡ ಮಾತನಾಡಿದಿರಿ. ಸರಿಯಾದ ನ್ಯಾಯಗಳನ್ನೂ, ಸತ್ಯವಾದ ನಿಯಮಗಳನ್ನೂ, ಉತ್ತಮವಾದ ಕಟ್ಟಳೆಗಳನ್ನೂ, ಆಜ್ಞೆಗಳನ್ನೂ ಅವರಿಗೆ ಕೊಟ್ಟಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಸೀನಾಯಿ ಬೆಟ್ಟದ ಮೇಲೆ ಇಳಿದು ಬಂದು ಆಕಾಶದ ಕಡೆಯಿಂದ ಅವರೊಡನೆ ಮಾತನಾಡಿ, ಅವರಿಗೆ ನೀತಿನಿಯಮಗಳನ್ನೂ, ಯಥಾರ್ಥ ಧರ್ಮೋಪದೇಶವನ್ನೂ, ಶ್ರೇಷ್ಠವಾದ ಆಜ್ಞಾವಿಧಿಗಳನ್ನೂ ಅನುಗ್ರಹಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಸೀನಾಯಿ ಬೆಟ್ಟದ ಮೇಲೆ ಇಳಿದುಬಂದು ಆಕಾಶದ ಕಡೆಯಿಂದ ಅವರೊಡನೆ ಮಾತಾಡಬಂದು ಅವರಿಗನುಗ್ರಹಿಸಿದಿರಿ ನೀತಿನಿಯಮಗಳನು ಸತ್ಯಧರ್ಮೋಪದೇಶವನು, ಶ್ರೇಷ್ಠ ಆಜ್ಞಾವಿಧಿಗಳನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಸೀನಾಯಿ ಬೆಟ್ಟದ ಮೇಲೆ ಇಳಿದು ಬಂದು ಆಕಾಶದ ಕಡೆಯಿಂದ ಅವರೊಡನೆ ಮಾತಾಡಿ ಅವರಿಗೆ ನೀತಿನಿಯಮಗಳನ್ನೂ ಯಥಾರ್ಥ ಧರ್ಮೋಪದೇಶವನ್ನೂ ಶ್ರೇಷ್ಠವಾದ ಆಜ್ಞಾವಿಧಿಗಳನ್ನೂ ಅನುಗ್ರಹಿಸಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆಮೇಲೆ ಸೀನಾಯ ಬೆಟ್ಟಕ್ಕೆ ಇಳಿದುಬಂದೆ. ಪರಲೋಕದಿಂದ ಅವರೊಂದಿಗೆ ಮಾತನಾಡಿದೆ. ಅವರಿಗೆ ಒಳ್ಳೆಯ ಕಟ್ಟಳೆಗಳನ್ನು ದಯಪಾಲಿಸಿದೆ; ಸತ್ಯಬೋಧನೆಯನ್ನು ನೀಡಿದೆ, ವಿಧಿನಿಯಮಗಳನ್ನು ಕಲಿಸಿದೆ. ಅವುಗಳೆಲ್ಲಾ ಉತ್ತಮವಾದವುಗಳೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 9:13
27 ತಿಳಿವುಗಳ ಹೋಲಿಕೆ  

ನಿಮ್ಮ ಮಾತುಗಳೆಲ್ಲಾ ಸತ್ಯವಾದವುಗಳೇ; ನಿಮ್ಮ ನೀತಿ ನಿಯಮಗಳೆಲ್ಲಾ ನಿತ್ಯವಾದವುಗಳೇ.


ದೇವರು ಈ ಎಲ್ಲಾ ವಾಕ್ಯಗಳನ್ನು ಹೇಳಿದರು:


ಮೂರನೆಯ ದಿನದಲ್ಲಿ ಅವರು ಸಿದ್ಧವಾಗಿರಲಿ. ಏಕೆಂದರೆ ಮೂರನೆಯ ದಿನದಲ್ಲಿ ಯೆಹೋವ ದೇವರು ಸಮಸ್ತ ಜನರ ಕಣ್ಣೆದುರಿನಲ್ಲಿ ಸೀನಾಯಿ ಪರ್ವತಕ್ಕೆ ಇಳಿದು ಬರುವರು.


ನಾನು ಮಾಡಲು ಬಯಸದಿರುವುದನ್ನು ಮಾಡುವುದಾದರೆ, ನಿಯಮವು ಒಳ್ಳೆಯದೆಂದು ಒಪ್ಪುತ್ತೇನೆ.


ದೇವರು, ತೇಮಾನಿನಿಂದಲೂ; ಪರಿಶುದ್ಧರು, ಪಾರಾನ್ ಪರ್ವತದಿಂದಲೂ ಬಂದರು. ಅವರ ಮಹಿಮೆ ಆಕಾಶಗಳನ್ನು ಮುಚ್ಚಿತು. ಅವರ ಸ್ತೋತ್ರವು ಭೂಮಿಯನ್ನು ತುಂಬಿಸಿತು.


ನಾವು ಎದುರು ನೋಡದೆ ಇದ್ದ ಭಯಂಕರವಾದವುಗಳನ್ನು ನೀನು ಮಾಡಿದಾಗ ಇಳಿದು ಬಂದೆ, ಬೆಟ್ಟಗಳು ನಿನ್ನ ಸಮ್ಮುಖಕ್ಕೆ ಕರಗಿ ಹೋದವು.


ಆಹಾ, ಆಕಾಶಗಳನ್ನು ಹರಿದುಬಿಟ್ಟು ಇಳಿದು ಬಾ! ನಿಮ್ಮ ದರ್ಶನವನ್ನು ಕಂಡು ಪರ್ವತಗಳು ಗಡಗಡನೆ ನಡುಗುವಂತೆಯೂ,


ಯೆಹೋವ ದೇವರೇ, ನೀವು ನೀತಿವಂತರು, ನಿಮ್ಮ ನಿಯಮಗಳು ಸರಿಯಾದವುಗಳೇ.


“ಯೆಹೋವ ದೇವರು ಸೀನಾಯಿ ಬೆಟ್ಟದಿಂದ ಬಂದು, ಸೇಯೀರಿನಿಂದ ಅವರ ಮೇಲೆ ಉದಯಿಸಿದರು. ಪಾರಾನ್ ಬೆಟ್ಟದಿಂದ ಪ್ರಕಾಶಿಸಿದರು. ದೇವರು ದಕ್ಷಿಣದ ತಮ್ಮ ಪರ್ವತ ಶ್ರೇಣಿಯಿಂದ ಲಕ್ಷಾಂತರ ಪರಿಶುದ್ಧರ ಸಂಗಡ ಬಂದರು.


ಮುಖಾಮುಖಿಯಾಗಿ ಯೆಹೋವ ದೇವರು ನಿಮ್ಮ ಸಂಗಡ ಬೆಟ್ಟದಲ್ಲಿ ಬೆಂಕಿಯೊಳಗಿಂದ ಮಾತನಾಡಿದರು.


ನೀವು ಕೇಳಿದಂತೆ ಬೆಂಕಿಯೊಳಗಿಂದ ಮಾತನಾಡುವ ದೇವರ ಶಬ್ದವನ್ನು ಕೇಳಿ ಬದುಕಿದ ಜನರು ಇದ್ದಾರೋ?


ಇದಲ್ಲದೆ ನಾನು ಈ ಹೊತ್ತು ನಿಮ್ಮ ಮುಂದೆ ಇಡುವ ಈ ಎಲ್ಲಾ ನಿಯಮದ ಪ್ರಕಾರ ನೀತಿ ಮತ್ತು ನ್ಯಾಯನಿಯಮಗಳುಳ್ಳ ದೊಡ್ಡ ಜನಾಂಗ ಯಾವುದು?


ಯೆಹೋವ ದೇವರು ಮೋಶೆಗೆ, “ನೀನು ಇಸ್ರಾಯೇಲರಿಗೆ ಹೀಗೆ ಹೇಳಬೇಕು, ‘ನಾನು ಆಕಾಶದಿಂದ ನಿಮ್ಮ ಸಂಗಡ ಮಾತನಾಡಿದ್ದನ್ನು ನೀವು ನೋಡಿದ್ದೀರಿ.


ಅದಕ್ಕೆ ಮೋಶೆ, “ಯೆಹೋವ ದೇವರು ಆಜ್ಞಾಪಿಸಿದ ಮಾತು ಇದೇ: ‘ನಾಳೆ ಯೆಹೋವ ದೇವರಿಗೆ ಪರಿಶುದ್ಧ ಸಬ್ಬತ್ ದಿನವಾಗಿದೆ. ಇಂದೇ ಸುಡಬೇಕಾದದ್ದನ್ನು ಸುಟ್ಟು, ಬೇಯಿಸಬೇಕಾದದ್ದನ್ನು ಬೇಯಿಸಿರಿ. ಇದರಲ್ಲಿ ಮಿಕ್ಕಾದದ್ದನ್ನೆಲ್ಲಾ ಬೆಳಗಿನವರೆಗೆ ಇಟ್ಟುಕೊಳ್ಳಿರಿ,’ ” ಎಂದನು.


ದೇವರು ನಿಮ್ಮ ಶಿಕ್ಷಣಕ್ಕಾಗಿ ಆಕಾಶದೊಳಗಿಂದ ತಮ್ಮ ಸ್ವರವನ್ನು ನಿಮಗೆ ಕೇಳಮಾಡಿದರು, ಭೂಮಿಯ ಮೇಲೆ ತಮ್ಮ ದೊಡ್ಡ ಬೆಂಕಿಯನ್ನು ನಿಮಗೆ ತೋರಿಸಿದರು. ನೀವು ಬೆಂಕಿಯೊಳಗಿಂದ ಅವರ ಮಾತುಗಳನ್ನು ಕೇಳಿದಿರಿ.


ದೇವರೇ, ನಿಮ್ಮ ಸೂತ್ರಗಳನ್ನು ಪೂರ್ಣವಾಗಿ ಕೈಗೊಳ್ಳಬೇಕೆಂದು ನೀವು ಆಜ್ಞಾಪಿಸಿದ್ದೀರಿ.


ಇದಲ್ಲದೆ ದೇವರು ನಿಮಗೆ ಬರೆದುಕೊಟ್ಟ ಕಟ್ಟಳೆಗಳನ್ನೂ, ನೀತಿಗಳನ್ನೂ, ನಿಯಮವನ್ನೂ, ಆಜ್ಞೆಯನ್ನೂ ನೀವು ನಿರಂತರವಾಗಿ ಕೈಗೊಳ್ಳಲು ಎಚ್ಚರಿಕೆಯಾಗಿರಬೇಕು. ಇತರ ದೇವರುಗಳಿಗೆ ಭಯಪಡಬೇಡಿರಿ.


ಈ ಎಜ್ರನು ಬಾಬಿಲೋನಿನಿಂದ ಬಂದನು, ಅವನು ಇಸ್ರಾಯೇಲ್ ದೇವರಾಗಿರುವ ಯೆಹೋವ ದೇವರು ಕೊಟ್ಟ ಮೋಶೆಯ ನಿಯಮದಲ್ಲಿ ಪಾಂಡಿತ್ಯ ಪಡೆದ ನಿಯಮಶಾಸ್ತ್ರಿ ಆಗಿದ್ದನು. ಅವನ ಮೇಲೆ ಅವನ ದೇವರಾಗಿರುವ ಯೆಹೋವ ದೇವರ ಕೈ ಇದ್ದುದರಿಂದ, ಅವನು ಕೇಳಿದ್ದನ್ನೆಲ್ಲಾ ಅರಸನು ಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು