ನೆಹೆಮೀಯ 9:19 - ಕನ್ನಡ ಸಮಕಾಲಿಕ ಅನುವಾದ19 “ಆದರೆ ನೀವು ನಿಮ್ಮ ಬಹು ಕರುಣೆಯಿಂದ ಮರುಭೂಮಿಯಲ್ಲಿ ಅವರನ್ನು ಕೈಬಿಡಲಿಲ್ಲ. ಹಗಲಿನಲ್ಲಿ ಅವರಿಗೆ ಮೇಘಸ್ತಂಭವು ದಾರಿ ತೋರಿಸದೆ ಇರಲಿಲ್ಲ. ರಾತ್ರಿಯಲ್ಲಿ ಅವರಿಗೆ ಬೆಳಕನ್ನೂ, ಅವರು ನಡೆಯತಕ್ಕ ಮಾರ್ಗವನ್ನೂ ತೋರಿಸುವ ಅಗ್ನಿ ಸ್ತಂಭವು ಅವರನ್ನು ಬಿಟ್ಟುಹೋಗಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಕರುಣಾನಿಧಿಯಾದ ನೀನು ಅವರನ್ನು ಅರಣ್ಯದಲ್ಲಿ ಕೈಬಿಡಲಿಲ್ಲ, ಹಗಲಿನಲ್ಲಿ ಅವರಿಗೆ ದಾರಿ ತೋರಿಸುತ್ತಿದ್ದ ಮೇಘಸ್ತಂಭವೂ, ರಾತ್ರಿವೇಳೆಯಲ್ಲಿ ಅವರು ನಡೆಯತಕ್ಕ ದಾರಿಯಲ್ಲಿ ಬೆಳಕುಕೊಡುತ್ತಿದ್ದ ಅಗ್ನಿಸ್ತಂಭವೂ, ಅವರನ್ನು ಬಿಟ್ಟುಹೋಗದಂತೆ ಮಾಡಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಹೀಗಿದ್ದರು ನೀವಾದಿರಿ ಅವರಿಗೆ ಕರುಣಾನಿಧಿ ತೊರೆದುಬಿಡಲಿಲ್ಲ ನೀವವರನು ಮರುಭೂಮಿಯಲಿ. ಬಿಟ್ಟುಹೋಗಲಿಲ್ಲ ದಾರಿತೋರಿದಾ ಮೇಘಸ್ತಂಭ ಹಗಲಲಿ ಮುನ್ನಡೆಯಿತು ಬೆಳಕನೀಯುತಾ ಅಗ್ನಿಸ್ತಂಭ ಇರುಳಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಕರುಣಾನಿಧಿಯಾದ ನೀನು ಅವರನ್ನು ಅರಣ್ಯದಲ್ಲಿ ಕೈಬಿಡಲಿಲ್ಲ, ಹಗಲಿನಲ್ಲಿ ಅವರಿಗೆ ದಾರಿ ತೋರಿಸುತ್ತಿದ್ದ ಮೇಘ ಸ್ತಂಭವೂ ರಾತ್ರಿವೇಳೆಯಲ್ಲಿ ಅವರು ನಡೆಯತಕ್ಕ ದಾರಿಯಲ್ಲಿ ಬೆಳಕು ಕೊಡುತ್ತಿದ್ದ ಅಗ್ನಿಸ್ತಂಭವೂ ಅವರನ್ನು ಬಿಟ್ಟುಹೋಗಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ನೀನು ತುಂಬಾ ಕನಿಕರವುಳ್ಳ ದೇವರು. ಆದ್ದರಿಂದ ಅವರನ್ನು ಮರುಭೂಮಿಯಲ್ಲಿಯೇ ಬಿಡಲಿಲ್ಲ. ಹಗಲಿನಲ್ಲಿ ಅವರಿಂದ ಎತ್ತರವಾದ ಮೋಡವನ್ನು ತೆಗೆದುಬಿಡಲಿಲ್ಲ. ನೀನು ಅವರನ್ನು ಮುನ್ನಡೆಸಿಕೊಂಡೇ ಹೋದೆ. ರಾತ್ರಿಯಲ್ಲಿ ಅವರಿಂದ ಅಗ್ನಿಸ್ತಂಭವನ್ನು ತೆಗೆದುಬಿಡಲಿಲ್ಲ. ಅವರ ದಾರಿಗೆ ಬೆಳಕನ್ನು ನೀಡುತ್ತಾ ಅವರು ಹೋಗತಕ್ಕ ದಾರಿಯಲ್ಲಿ ಮುನ್ನಡೆಸಿದೆ. ಅಧ್ಯಾಯವನ್ನು ನೋಡಿ |