Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 9:22 - ಕನ್ನಡ ಸಮಕಾಲಿಕ ಅನುವಾದ

22 “ನೀವು ಅವರಿಗೆ ರಾಜ್ಯಗಳನ್ನೂ, ಜನಾಂಗಗಳನ್ನೂ ವಶಪಡಿಸಿದಿರಿ. ಅವರಿಗೆ ಮೇರೆಗಳನ್ನು ವಿಭಾಗಿಸಿ ಕೊಟ್ಟಿರಿ. ಆಗ ಅವರು, ಹೆಷ್ಬೋನಿನ ಅರಸನಾದ ಸೀಹೋನನ ದೇಶವನ್ನೂ, ಬಾಷಾನಿನ ಅರಸನಾದ ಓಗನ ದೇಶವನ್ನೂ ಸ್ವಾಧೀನಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ರಾಜ್ಯಗಳನ್ನೂ, ಜನಾಂಗಗಳನ್ನು ಅವರಿಗೆ ವಶಪಡಿಸಿ, ಆ ರಾಜ್ಯಗಳನ್ನು ಅವರಿಗೆ ಸ್ವತ್ತಾಗಿ ಹಂಚಿಕೊಟ್ಟೆ. ಹೀಗೆ ಅವರು ಹೆಷ್ಬೋನಿನ ಅರಸನಾದ ಸೀಹೋನ್, ಬಾಷಾನಿನ ಅರಸನಾದ ಓಗ್ ಇವರ ಪ್ರಾಂತ್ಯಗಳನ್ನು ಸ್ವಾಧೀನಪಡಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ರಾಜ್ಯಗಳನು, ಜನಾಂಗಗಳನು ವಶಪಡಿಸಿದಿರಿ ಅವರಿಗೆ ಹಂಚಿಕೊಟ್ಟಿರಿ ಆ ರಾಷ್ಟ್ರಗಳ ಸೊತ್ತುಗಳನೆ ಹೆಷ್ಬೋನಿನ ಅರಸ ಸೀಹೋನನಿಗೆ, ಬಾಷಾನಿನ ಅರಸ ಓಗನಿಗೆ, ಸೇರಿದ ಪ್ರಾಂತ್ಯಗಳಿಗೆ ಸ್ವಾಧೀನಪಡಿಸಿಕೊಂಡರಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ರಾಜ್ಯಜನಾಂಗಗಳನ್ನು ಅವರಿಗೆ ವಶಪಡಿಸಿ ಆ ರಾಜ್ಯಗಳನ್ನು ಅವರಿಗೆ ಸ್ವಾಸ್ತ್ಯವನ್ನಾಗಿ ಹಂಚಿಕೊಟ್ಟಿ. ಹೀಗೆ ಅವರು ಹೆಷ್ಬೋನಿನ ಅರಸನಾದ ಸೀಹೋನ್, ಬಾಷಾನಿನ ಅರಸನಾದ ಓಗ್ ಇವರ ಪ್ರಾಂತಗಳನ್ನು ಸ್ವಾಧೀನಪಡಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಯೆಹೋವನೇ, ನೀನು ಅವರಿಗೆ ರಾಜ್ಯಗಳನ್ನೂ ಜನಾಂಗಗಳನ್ನೂ ಕೊಟ್ಟೆ. ಕೆಲವೇ ಜನರು ವಾಸವಾಗಿದ್ದ ಬಹುದೂರದ ಸ್ಥಳಗಳನ್ನು ಕೊಟ್ಟೆ. ಹೆಷ್ಬೋನಿನ ರಾಜನಾದ ಸೀಹೋನನ ನಾಡನ್ನು ಮತ್ತು ಬಾಷಾನಿನ ರಾಜನಾದ ಓಗನ ನಾಡನ್ನು ಅವರು ಪಡೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 9:22
16 ತಿಳಿವುಗಳ ಹೋಲಿಕೆ  

ದೇವರು ಜನಾಂಗಗಳ ದೇಶಗಳನ್ನು ಅವರಿಗೆ ಕೊಟ್ಟರು. ಇಸ್ರಾಯೇಲರು ಇತರರ ಕಷ್ಟಾರ್ಜಿತವನ್ನು ತಮಗಾಗಿ ಸ್ವಾಧೀನಮಾಡಿಕೊಂಡರು.


ಆಗ ಯೆಹೋವ ದೇವರು ಪ್ರತಿಕ್ರಿಯೆಯನ್ನು ಪ್ರಕಟಿಸಿದರು. ದ್ರಾಕ್ಷಾರಸದಿಂದ ಆರ್ಭಟಿಸುವ ಪರಾಕ್ರಮಶಾಲಿಯ ಹಾಗೆ ಸಂರಕ್ಷಿಸಲಾದರು.


ಹೀಗೆ ಯೆಹೋಶುವನು ದೇಶವನ್ನೆಲ್ಲಾ ಯೆಹೋವ ದೇವರು ಮೋಶೆಗೆ ಹೇಳಿದ ಪ್ರಕಾರವೇ ಸ್ವಾಧೀನಮಾಡಿಕೊಂಡನು. ಅದನ್ನು ಇಸ್ರಾಯೇಲರಿಗೆ ಅವರ ಗೋತ್ರಗಳ ಭಾಗಗಳಿಗನುಸಾರ ಬಾಧ್ಯತೆಯಾಗಿ ಕೊಟ್ಟನು. ಆಗ ದೇಶವು ಯುದ್ಧವಿಲ್ಲದೆ ವಿಶ್ರಮಿಸಿಕೊಂಡಿತು.


ಅವರು ಬೇತ್ ಹೋರೋನಿನಿಂದ ಇಳಿದು ಅಜೇಕದವರೆಗೆ ಇಸ್ರಾಯೇಲಿನ ಮುಂದೆ ಓಡಿ ಹೋಗುವಾಗ, ಅವರ ಮೇಲೆ ಯೆಹೋವ ದೇವರು ಆಕಾಶದಿಂದ ದೊಡ್ಡ ಕಲ್ಮಳೆಯನ್ನು ಸುರಿಸಿದರು. ಇಸ್ರಾಯೇಲರ ಖಡ್ಗದ ದಾಳಿಗಿಂತ ಕಲ್ಮಳೆಯಿಂದ ನಾಶವಾದವರೇ ಹೆಚ್ಚು ಮಂದಿಯಾಗಿದ್ದರು.


ನಾನು ಅವರನ್ನು ಚದರಿಸಿಬಿಡುವೆನು. ಅವರ ನೆನಪೇ ಮನುಷ್ಯರಲ್ಲಿ ಇರದ ಹಾಗೆ ಮಾಡುತ್ತಿದ್ದೆನು.


ಅವನು ಹೆಷ್ಬೋನಿನಲ್ಲಿ ವಾಸಮಾಡಿದ ಅಮೋರಿಯರ ಅರಸನಾದ ಸೀಹೋನನನ್ನು ಸೋಲಿಸಿದ ಮೇಲೆಯೂ, ಅಷ್ಟಾರೋತ್‌ನಲ್ಲಿ, ವಾಸಮಾಡಿದ ಬಾಷಾನಿನ ಅರಸನಾದ ಓಗನನ್ನೂ ಎದ್ರೈಯಲ್ಲಿ ಸೋಲಿಸಿದ ಮೇಲೆಯೂ ಮೋಶೆ ಇಸ್ರಾಯೇಲರಿಗೆ ಈ ಮಾತುಗಳನ್ನು ತಿಳಿಸಿದನು.


ನಾನು ಪ್ರಮಾಣಪೂರ್ವಕವಾಗಿ ಅವರಿಗೆ ವಾಗ್ದಾನಮಾಡಿದ ದೇಶದಲ್ಲಿ ನಾನು ಅವರನ್ನು ಬರಮಾಡಿದ ಮೇಲೆ ಅವರು ಎತ್ತರವಾದ ಎಲ್ಲಾ ಗುಡ್ಡಗಳನ್ನೂ, ಸೊಂಪಾಗಿ ಬೆಳೆದಿರುವ ಮರಗಳನ್ನೂ ನೋಡಿ, ಅಲ್ಲಿ ತಮ್ಮ ಬಲಿಗಳನ್ನರ್ಪಿಸಿ ಸುವಾಸನೆಗಳನ್ನಿಟ್ಟು ಪಾನದ್ರವ್ಯವನ್ನು ಸುರಿದರು.


ಯೊರ್ದನ್ ನದಿಯ ಆಚೆಯಲ್ಲಿ ಬೇತ್ ಪೆಗೋರಿಗೆ ಎದುರಾಗಿರುವ ತಗ್ಗಿನಲ್ಲಿ ಹೆಷ್ಬೋನಿನಲ್ಲಿ ವಾಸಮಾಡಿದ ಅಮೋರಿಯರ ಅರಸನಾದ ಸೀಹೋನನ ದೇಶದಲ್ಲಿ ಅವನನ್ನು ಮೋಶೆಯೂ, ಇಸ್ರಾಯೇಲರೂ ಈಜಿಪ್ಟಿನೊಳಗಿಂದ ಹೊರಟ ಮೇಲೆ ಸೋಲಿಸಿದರು.


ಸೀಹೋನನ ದೇಶವನ್ನೂ, ಬಾಷಾನಿನ ಅರಸನಾದ ಓಗನ ದೇಶವನ್ನೂ ಯೊರ್ದನಿನ ಆಚೆಯಲ್ಲಿ ಪೂರ್ವದಿಕ್ಕಿನಲ್ಲಿದ್ದ ಅಮೋರಿಯರ ಇಬ್ಬರು ಅರಸರ ದೇಶಗಳನ್ನೂ ಗೆದ್ದುಕೊಂಡರು.


ನಾನೇ ಭೂಮಿಯನ್ನೂ, ಭೂಮಿಯ ಮೇಲಿರುವ ಮನುಷ್ಯರನ್ನೂ, ಮೃಗಗಳನ್ನೂ ನನ್ನ ಮಹಾ ಬಲದಿಂದಲೂ, ನನ್ನ ಚಾಚಿದ ಕೈಯಿಂದಲೂ ಉಂಟುಮಾಡಿ, ನನಗೆ ಸರಿ ತೋಚಿದವರಿಗೆ ಅದನ್ನು ಕೊಟ್ಟಿದ್ದೇನೆ.


ಅವರು ಅದರಲ್ಲಿ ಸೇರಿ ಅದನ್ನು ಸ್ವಾಧೀನಪಡಿಸಿಕೊಂಡರು. ಆದರೆ ಅವರು ನಿಮ್ಮ ಮಾತಿಗೆ ಕಿವಿಗೊಡಲಿಲ್ಲ. ನಿಮ್ಮ ನಿಯಮದಲ್ಲಿ ನಡೆದುಕೊಳ್ಳಲಿಲ್ಲ. ಮಾಡಬೇಕೆಂದು ನೀವು ಅವರಿಗೆ ಆಜ್ಞಾಪಿಸಿದ್ದನ್ನೆಲ್ಲಾ ಮಾಡಲಿಲ್ಲ. ಆದ್ದರಿಂದ ಈ ಕೇಡನ್ನೆಲ್ಲಾ ಅವರಿಗೆ ಸಂಭವಿಸುವಂತೆ ಮಾಡಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು