Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 9:26 - ಕನ್ನಡ ಸಮಕಾಲಿಕ ಅನುವಾದ

26 “ಆದರೂ ಅವರು ನಿಮಗೆ ಅವಿಧೇಯರಾಗಿ ತಿರುಗಿಬಿದ್ದು, ನಿಮ್ಮ ನಿಯಮವನ್ನು ಉಲ್ಲಂಘಿಸಿ, ತಮ್ಮನ್ನು ಎಚ್ಚರಿಸುವುದಕ್ಕೂ, ನಿಮ್ಮ ಕಡೆಗೆ ತಿರುಗಿಸುವುದಕ್ಕೂ ಪ್ರಯತ್ನಿಸುತ್ತಿದ್ದ ನಿಮ್ಮ ಪ್ರವಾದಿಗಳನ್ನೇ ಕೊಂದುಹಾಕಿದರು. ಹೀಗೆ ನಿಮ್ಮನ್ನೇ ಬಹು ದೂಷಿಸಿ ಅಸಡ್ಡೆಮಾಡಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆಗ ಅವರು ನಿನಗೆ ಅವಿಧೇಯರಾಗಿ ತಿರುಗಿ ಬಿದ್ದು ನಿನ್ನ ಧರ್ಮೋಪದೇಶವನ್ನು ಉಲ್ಲಂಘಿಸಿ ತಮ್ಮನ್ನು ಎಚ್ಚರಿಸುವುದಕ್ಕೂ ನಿನ್ನ ಕಡೆಗೆ ತಿರುಗಿಸುವುದಕ್ಕೂ ಪ್ರಯತ್ನಿಸುತ್ತಿದ್ದ ನಿನ್ನ ಪ್ರವಾದಿಗಳನ್ನು ಕೊಂದು ಹಾಕಿ ನಿನ್ನನ್ನು ಅಸಡ್ಡೆಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಬಳಿಕ ಅವಿಧೇಯರಾದರು, ನಿಮಗೆ ವಿರುದ್ಧ ದಂಗೆ ಎದ್ದರು; ನಿಮ್ಮ ಉಪದೇಶವನು ಉಲ್ಲಂಘಿಸಿದರು, ನಿಮ್ಮ ಪ್ರವಾದಿಗಳನು ಕೊಂದರು; ಹೌದು, ನಿಮಗೆ ಅಭಿಮುಖರಾಗಲು ಎಚ್ಚರಿಸಿದವರನೆ ಕೊಂದರು. ಕಡೆಗೆ ನಿಮ್ಮನ್ನೇ ಅಸಡ್ಡೆಮಾಡಿ, ಘೋರ ಅಪರಾಧಿಗಳಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಆಗ ಅವರು ನಿನಗೆ ಅವಿಧೇಯರಾಗಿ ತಿರುಗಿ ಬಿದ್ದು ನಿನ್ನ ಧರ್ಮೋಪದೇಶವನ್ನು ಉಲ್ಲಂಘಿಸಿ ತಮ್ಮನ್ನು ಎಚ್ಚರಿಸುವದಕ್ಕೂ ನಿನ್ನ ಕಡೆಗೆ ತಿರುಗಿಸುವದಕ್ಕೂ ಪ್ರಯತ್ನಿಸುತ್ತಿದ್ದ ನಿನ್ನ ಪ್ರವಾದಿಗಳನ್ನು ಕೊಂದುಹಾಕಿ ನಿನ್ನನ್ನು ಅಸಡ್ಡೆಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಅವರು ನಿನಗೆ ಎದುರುಬಿದ್ದು ನಿನ್ನ ಬೋಧನೆಯನ್ನು ತಾತ್ಸಾರ ಮಾಡಿದರು; ನಿನ್ನ ಪ್ರವಾದಿಗಳನ್ನು ಕೊಂದರು. ಆ ಪ್ರವಾದಿಗಳಾದರೋ ಜನರನ್ನು ಎಚ್ಚರಿಸಿದರು; ನಿನ್ನ ಬಳಿಗೆ ಹಿಂತಿರುಗುವಂತೆ ಜನರನ್ನು ಪ್ರೋತ್ಸಾಹಿಸಿದರು. ಆದರೆ ನಮ್ಮ ಪೂರ್ವಿಕರು ನಿನಗೆ ವಿರೋಧವಾಗಿ ಭಯಂಕರವಾದ ಕೃತ್ಯಗಳನ್ನು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 9:26
35 ತಿಳಿವುಗಳ ಹೋಲಿಕೆ  

ನೀನು ನಿನಗೆ ಮುಂಚೆ ಇದ್ದವರೆಲ್ಲರಿಗಿಂತ ಕೆಟ್ಟದ್ದನ್ನು ಮಾಡಿದೆ. ಏಕೆಂದರೆ, ನೀನು ಹೋಗಿ ನನಗೆ ಕೋಪವನ್ನೆಬ್ಬಿಸುವ ಅನ್ಯದೇವರುಗಳನ್ನೂ, ಎರಕದ ವಿಗ್ರಹಗಳನ್ನೂ ಮಾಡಿಕೊಂಡು, ನನ್ನನ್ನು ತಿರಸ್ಕರಿಸಿದೆ.


ಆದರೆ ಅವರು ತಮಗೋಸ್ಕರ ಒಂದು ಎರಕದ ಕರುವನ್ನು ಮಾಡಿಕೊಂಡರು. ‘ನಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದ ದೇವರು ಇದೇ,’ ಎಂದು ಹೇಳಿ, ನಿಮ್ಮನ್ನೇ ಬಹು ದೂಷಿಸಿ ಅಸಡ್ಡೆಮಾಡಿಬಿಟ್ಟರು.


ನಿಮ್ಮ ಪಿತೃಗಳು ಹಿಂಸೆಪಡಿಸದೆ ಇದ್ದ ಪ್ರವಾದಿ ಒಬ್ಬನಾದರೂ ಇರುವನೇ? ನೀತಿವಂತರಾಗಿರುವ ಒಬ್ಬರು ಬರಲಿದ್ದಾರೆಂದು ಮುಂತಿಳಿಸಿದವರನ್ನು ಸಹ ಅವರು ಕೊಂದುಹಾಕಿದರು. ಈಗ ನೀವೇ ಅವರನ್ನು ಹಿಡಿದುಕೊಟ್ಟು ಕೊಲೆಮಾಡಿದ್ದೀರಿ.


ಅದಕ್ಕೆ ಅವನು, “ಸರ್ವಶಕ್ತ ದೇವರಾದ ಯೆಹೋವ ದೇವರೇ, ಇಸ್ರಾಯೇಲರಿಗೋಸ್ಕರ ನಾನು ಬಹು ರೋಷವುಳ್ಳವನಾಗಿದ್ದೇನೆ. ಏಕೆಂದರೆ ಇಸ್ರಾಯೇಲರು ನಿಮ್ಮ ಒಡಂಬಡಿಕೆಯನ್ನು ಬಿಟ್ಟು, ನಿಮ್ಮ ಬಲಿಪೀಠಗಳನ್ನು ಕೆಡವಿ, ನಿಮ್ಮ ಪ್ರವಾದಿಗಳನ್ನು ಖಡ್ಗದಿಂದ ಕೊಂದುಹಾಕಿದ್ದಾರೆ. ನಾನೊಬ್ಬನೇ ಉಳಿದಿದ್ದೇನೆ. ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಲು ಹುಡುಕುತ್ತಿದ್ದಾರೆ,” ಎಂದನು.


ಈಜೆಬೆಲಳು ಯೆಹೋವ ದೇವರ ಪ್ರವಾದಿಗಳನ್ನು ಕೊಲ್ಲುತ್ತಿದ್ದಾಗ, ಓಬದ್ಯನು ನೂರು ಮಂದಿ ಪ್ರವಾದಿಗಳನ್ನು ತೆಗೆದುಕೊಂಡು, ಐವತ್ತು ಮಂದಿಯಾಗಿ ಅವರನ್ನು ಗವಿಯಲ್ಲಿ ಬಚ್ಚಿಟ್ಟು, ಅವರಿಗೆ ಆಹಾರವನ್ನೂ, ನೀರನ್ನೂ ಕೊಟ್ಟು, ಅವರನ್ನು ಸಂರಕ್ಷಣೆ ಮಾಡುತ್ತಾ ಇದ್ದನು.


“ಆಗ ಗೇಣಿಗೆದಾರರು ಅವನ ಸೇವಕರನ್ನು ಹಿಡಿದು ಒಬ್ಬನನ್ನು ಹೊಡೆದು, ಇನ್ನೊಬ್ಬನನ್ನು ಕೊಂದುಹಾಕಿದರು. ಮತ್ತೊಬ್ಬನ ಮೇಲೆ ಕಲ್ಲೆಸೆದರು.


“ ‘ಆದರೆ ಮಕ್ಕಳು ನನಗೆ ವಿರೋಧವಾಗಿ ತಿರುಗಿಬಿದ್ದರು. ಯಾವವುಗಳನ್ನು ಮನುಷ್ಯನು ಮಾಡಿದರೆ ಬದುಕುವನೋ, ಆ ನನ್ನ ನಿಯಮಗಳಲ್ಲಿ ನಡೆಯಲಿಲ್ಲ ಮತ್ತು ನನ್ನ ನ್ಯಾಯಗಳನ್ನು ಜಾಗರೂಕತೆಯಿಂದ ಪಾಲಿಸಿ ನಡೆಯಲಿಲ್ಲ. ನನ್ನ ಸಬ್ಬತ್ ದಿನಗಳನ್ನು ಅಪವಿತ್ರಪಡಿಸಿದಿರಿ. ಆಗ ಅವರ ಮೇಲೆ ನನ್ನ ರೋಷವನ್ನು ಸುರಿದುಬಿಡುವೆನೆಂದೂ, ನನ್ನ ಕೋಪವನ್ನು ಮರುಭೂಮಿಯಲ್ಲಿ ಅವರ ಮೇಲೆ ತೀರಿಸಿ ಬಿಡುವೆನೆಂದೂ ಹೇಳಿದೆನು.


ನೀನು ನನ್ನ ಶಿಕ್ಷಣವನ್ನು ದ್ವೇಷಿಸಿ, ನನ್ನ ವಾಕ್ಯಗಳನ್ನು ನಿಮ್ಮ ಹಿಂದೆ ಬಿಸಾಡಿಬಿಟ್ಟೀರಲ್ಲಾ.


ನೀವು ಅನೇಕ ವರ್ಷ ಅವರನ್ನು ತಾಳಿಕೊಂಡಿರಿ. ನಿಮ್ಮ ಪ್ರವಾದಿಗಳ ಮುಖಾಂತರ ನಿಮ್ಮ ಆತ್ಮನಿಂದ ಅವರನ್ನು ಎಚ್ಚರಿಸಿದಿರಿ. ಆದರೆ ಅವರು ಕಿವಿಗೊಡದೆ ಇದ್ದುದರಿಂದ ನೀವು ಅವರನ್ನು ಅನ್ಯದೇಶದವರ ಕೈಯಲ್ಲಿ ಒಪ್ಪಿಸಿದಿರಿ.


ಆದರೆ ಯೆಹೋವ ದೇವರ ಕೋಪವು ತಮ್ಮ ಜನರಿಗೆ ವಿರೋಧವಾಗಿ ಏಳುವವರೆಗೂ, ಅಂದರೆ ಪರಿಹಾರವಾಗದಷ್ಟೂ ಅವರು ದೇವರ ಸೇವಕರನ್ನು ಅಪಹಾಸ್ಯಮಾಡಿ, ದೇವರ ವಾಕ್ಯಗಳನ್ನು ತಿರಸ್ಕರಿಸಿ, ದೇವರ ಪ್ರವಾದಿಗಳಿಗೆ ಅಪಹಾಸ್ಯ ಮಾಡಿದರು.


“ಯೆಹೂದದ ಅರಸನಾದ ಮನಸ್ಸೆಯು ತನ್ನ ಮುಂದೆ ಇದ್ದ ಅಮೋರಿಯರು ಮಾಡಿದ ಕೆಟ್ಟವುಗಳಿಗಿಂತಲೂ ಅಸಹ್ಯವಾದವುಗಳನ್ನು ಮಾಡಿದ್ದರಿಂದಲೂ, ಯೆಹೂದವನ್ನು ತನ್ನ ವಿಗ್ರಹಗಳಿಂದ ಪಾಪಕ್ಕೆ ಪ್ರೇರೇಪಿಸಿದ್ದರಿಂದಲೂ,


ಈಜೆಬೆಲಳು ಪ್ರವಾದಿಗಳನ್ನು ಕೊಲ್ಲುತ್ತಿದ್ದ ಸಮಯದಲ್ಲಿ ಯೆಹೋವ ದೇವರ ಪ್ರವಾದಿಗಳನ್ನು ನೂರು ಮಂದಿಯನ್ನು, ಐವತ್ತು ಐವತ್ತು ಮಂದಿಯಾಗಿ ಗವಿಯಲ್ಲಿ ಬಚ್ಚಿಟ್ಟು, ಅವರಿಗೆ ಆಹಾರವನ್ನೂ, ನೀರನ್ನೂ ಕೊಟ್ಟು ಸಂರಕ್ಷಿಸಿದ್ದು ನನ್ನ ಯಜಮಾನನಾದ ನೀನು ಕೇಳಿಸಿಕೊಳ್ಳಲಿಲ್ಲವೇ?


ಇಸ್ರಾಯೇಲರು ಪುನಃ ಯೆಹೋವ ದೇವರ ಮುಂದೆ ಕೆಟ್ಟತನವನ್ನು ಮಾಡಿ, ಬಾಳನನ್ನೂ, ಅಷ್ಟೋರೆತನ್ನೂ, ಅರಾಮ್ ದೇಶದ ದೇವರುಗಳನ್ನೂ, ಸೀದೋನಿನ ದೇವರುಗಳನ್ನೂ, ಮೋವಾಬಿನ ದೇವರುಗಳನ್ನೂ, ಅಮ್ಮೋನಿಯರ ದೇವರುಗಳನ್ನೂ ಫಿಲಿಷ್ಟಿಯರ ದೇವರುಗಳನ್ನೂ ಸೇವಿಸಿದರು.


“ನೀವು ಅವರನ್ನು ನಿಮ್ಮ ನಿಯಮಕ್ಕೆ ಮರಳಿ ಬರುವ ಹಾಗೆ ಅವರನ್ನು ಎಚ್ಚರಿಸಿದಿರಿ. ಆದರೆ ಅವರು ಗರ್ವಪಟ್ಟು, ನಿಮ್ಮ ಆಜ್ಞೆಗಳನ್ನು ಅನುಸರಿಸದೆ ಹೋದರು. ನಿಮ್ಮ ವಾಕ್ಯಗಳನ್ನು ಕೈಗೊಳ್ಳುವುದರಿಂದ ಮನುಷ್ಯರು ಬದುಕುವರು ಎಂಬುದನ್ನು ಅವರು ತಿಳಿದಿದ್ದರೂ, ಆ ನಿಮ್ಮ ವಾಕ್ಯಗಳಿಗೆ ವಿರೋಧವಾಗಿ ಪಾಪಮಾಡಿ, ತಮ್ಮ ಹೃದಯವನ್ನು ಕಠಿಣಪಡಿಸಿಕೊಂಡು ನಿಮ್ಮ ಮಾತನ್ನು ಕೇಳದೆ ಹೋದರು.


“ನಾನು ನಿಮ್ಮ ಜನರನ್ನು ದಂಡಿಸಿದ್ದು ವ್ಯರ್ಥವಾಯಿತು. ಅವರು ಶಿಕ್ಷೆಯನ್ನು ತೆಗೆದುಕೊಳ್ಳಲಿಲ್ಲ. ನಿಮ್ಮ ಸ್ವಂತ ಖಡ್ಗವು ನಾಶಮಾಡುವ ಸಿಂಹದಂತೆ ನಿಮ್ಮ ಪ್ರವಾದಿಗಳನ್ನು ನುಂಗಿಬಿಟ್ಟಿವೆ.


‘ನಿಮ್ಮ ಪಿತೃಗಳು ನನ್ನನ್ನು ಬಿಟ್ಟುಬಿಟ್ಟದ್ದರಿಂದಲೇ,’ ಎಂದು ಯೆಹೋವ ದೇವರು ಹೇಳುತ್ತಾರೆ. ‘ಅವರು ಬೇರೆ ದೇವರುಗಳನ್ನು ಹಿಂಬಾಲಿಸಿ, ಅವುಗಳನ್ನು ಸೇವಿಸಿ, ಅವುಗಳನ್ನು ಆರಾಧಿಸಿ, ನನ್ನನ್ನು ತೊರೆದುಬಿಟ್ಟು, ನನ್ನ ನಿಯಮವನ್ನು ಕೈಗೊಳ್ಳಲಿಲ್ಲ.


ಅವರು ಅದರಲ್ಲಿ ಸೇರಿ ಅದನ್ನು ಸ್ವಾಧೀನಪಡಿಸಿಕೊಂಡರು. ಆದರೆ ಅವರು ನಿಮ್ಮ ಮಾತಿಗೆ ಕಿವಿಗೊಡಲಿಲ್ಲ. ನಿಮ್ಮ ನಿಯಮದಲ್ಲಿ ನಡೆದುಕೊಳ್ಳಲಿಲ್ಲ. ಮಾಡಬೇಕೆಂದು ನೀವು ಅವರಿಗೆ ಆಜ್ಞಾಪಿಸಿದ್ದನ್ನೆಲ್ಲಾ ಮಾಡಲಿಲ್ಲ. ಆದ್ದರಿಂದ ಈ ಕೇಡನ್ನೆಲ್ಲಾ ಅವರಿಗೆ ಸಂಭವಿಸುವಂತೆ ಮಾಡಿದ್ದೀರಿ.


“ಯೆಹೂದದ ಶೇಷವೇ, ಯೆಹೋವ ದೇವರು ನಿಮ್ಮ ವಿಷಯವಾಗಿ ಹೇಳಿದ್ದೇನೆಂದರೆ: ‘ಈಜಿಪ್ಟಿಗೆ ಹೋಗಬೇಡಿರಿ,’ ಇದನ್ನು ಖಚಿತಪಡಿಸಿಕೊಳ್ಳಿ: ನಾನು ಇಂದು ನಿಮಗೆ ಎಚ್ಚರಿಕೆ ನೀಡುತ್ತೇನೆ.


ನಾವು ದ್ರೋಹಮಾಡಿದ್ದೇವೆ ಮತ್ತು ಎದುರು ಬಿದ್ದಿದ್ದೇವೆ, ನೀವು ಮನ್ನಿಸಲಿಲ್ಲ.


ಹಸುಗಳ ಕೆನೆಯನ್ನೂ, ಕುರಿಗಳ ಹಾಲನ್ನೂ, ಕುರಿಮರಿಗಳ ಕೊಬ್ಬಿನ ಸಂಗಡ ಬಾಷಾನಿನ ಟಗರುಗಳನ್ನೂ ಹೋತಗಳನ್ನೂ ಉತ್ತಮವಾದ ಗೋಧಿಯನ್ನು ಕೊಟ್ಟರು. ನೀನು ರಕ್ತಗೆಂಪಾದ ದ್ರಾಕ್ಷಾರಸವನ್ನು ಕುಡಿದೆ.


ಯೆಶುರೂನು ಎಂಬ ಇಸ್ರಾಯೇಲರು ಕೊಬ್ಬಿ ಹೋದರು. ಅವರು ಹೊಟ್ಟೆ ತುಂಬ ಚೆನ್ನಾಗಿ ತಿಂದು ದಪ್ಪವಾದರು. ಅವರು ತಮ್ಮನ್ನು ಸೃಷ್ಟಿಮಾಡಿದ ದೇವರನ್ನು ಬಿಟ್ಟು, ತಮ್ಮ ರಕ್ಷಣೆಯ ಬಂಡೆಯನ್ನು ಅಲಕ್ಷ್ಯ ಮಾಡಿದರು.


ಯೆಹೋವ ದೇವರು ಪ್ರವಾದಿಗಳಾದ ತನ್ನ ಸೇವಕರ ಮುಖಾಂತರ ಹೇಳಿದ್ದೇನೆಂದರೆ,


ನಾನು ನಿಮ್ಮನ್ನು ಸಮೃದ್ಧಿಯಾದ ದೇಶಕ್ಕೆ ಅದರ ಸಾರವನ್ನೂ, ಮೇಲನ್ನೂ ತಿನ್ನುವ ಹಾಗೆ ಕರೆದುಕೊಂಡು ಬಂದೆನು. ಆದರೆ ನೀವು ಬಂದು ನನ್ನ ದೇಶವನ್ನು ಅಶುದ್ಧಮಾಡಿ, ನನ್ನ ಸೊತ್ತನ್ನು ಅಸಹ್ಯ ಮಾಡಿದಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು