ನೆಹೆಮೀಯ 9:27 - ಕನ್ನಡ ಸಮಕಾಲಿಕ ಅನುವಾದ27 ಆದ್ದರಿಂದ ನೀವು ಬಾಧಿಸುವ ವಿರೋಧಿಗಳ ಕೈಗೆ ಅವರನ್ನು ಒಪ್ಪಿಸಿದಿರಿ. ಆದರೆ ತಮ್ಮ ಇಕ್ಕಟ್ಟಿನ ಕಾಲದಲ್ಲಿ ಅವರು ನಿಮಗೆ ಮೊರೆಯಿಟ್ಟಾಗ, ನೀವು ಪರಲೋಕದಿಂದ ಕೇಳಿ, ನಿಮ್ಮ ಮಹಾ ಕರುಣೆಯ ಪ್ರಕಾರ ಅವರ ವೈರಿಗಳ ಕೈಯಿಂದ ರಕ್ಷಿಸುವುದಕ್ಕೆ ರಕ್ಷಕರನ್ನು ಅವರಿಗೆ ಕಳುಹಿಸಿದಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಆದ್ದರಿಂದ ನೀನು ಅವರನ್ನು ದಂಡಿಸುವ ವಿರೋಧಿಗಳ ಕೈಗೆ ಒಪ್ಪಿಸಿದೆ. ಅವರು ತಮ್ಮ ಕಷ್ಟಕಾಲದಲ್ಲಿ ನಿನಗೆ ಮೊರೆಯಿಡಲು ಪರಲೋಕದಿಂದ ನೀನು ಅವರಿಗೆ ಕಿವಿಗೊಟ್ಟು ನಿನ್ನ ಕರುಣಾತಿಶಯದಿಂದ ರಕ್ಷಕರನ್ನು ಕಳುಹಿಸಿ ವಿರೋಧಿಗಳ ಕೈಯಿಂದ ಅವರನ್ನು ಪಾರುಮಾಡಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಎಂದೇ ನೀವಿತ್ತಿರಿ ಅವರನು ಕ್ರೂರ ಶತ್ರುಗಳ ವಶಕೆ ಆದರೆ ಸಂಕಟದಲಿ ಮೊರೆಯಿಡಲು, ಪರದಿಂದ ಕಿವಿಗೊಟ್ಟಿರವರಿಗೆ! ರಕ್ಷಕರನು ಕಳುಹಿಸಿದಿರಿ ಕರುಣಾತಿಶಯದಿಂದ ಈ ಪರಿ ಬಿಡಿಸಿದಿರಿ ವಿರೋಧಿಗಳ ಕೈಯಿಂದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಆದದರಿಂದ ನೀನು ಅವರನ್ನು ಬಾಧಿಸುವ ವಿರೋಧಿಗಳ ಕೈಗೆ ಒಪ್ಪಿಸಿದಿ. ಅವರು ಆ ಕಷ್ಟಕಾಲದಲ್ಲಿ ನಿನಗೆ ಮೊರೆಯಿಡಲು ಪರಲೋಕದಿಂದ ನೀನು ಅವರಿಗೆ ಕಿವಿಗೊಟ್ಟು ನಿನ್ನ ಕರುಣಾತಿಶಯದಿಂದ ರಕ್ಷಕರನ್ನು ಕಳುಹಿಸಿ ವಿರೋಧಿಗಳ ಕೈಯಿಂದ ಅವರನ್ನು ಬಿಡಿಸಿದಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಆದ್ದರಿಂದ ಅವರ ಶತ್ರುಗಳು ಅವರನ್ನು ಸದೆಬಡಿಯುವಂತೆ ಮಾಡಿದೆ. ವೈರಿಗಳು ಅವರಿಗೆ ತುಂಬಾ ಕಷ್ಟಕೊಟ್ಟರು. ಕಷ್ಟಬಂದಾಗ ನಮ್ಮ ಪೂರ್ವಿಕರು ನಿನಗೆ ಮೊರೆಯಿಟ್ಟರು. ಪರಲೋಕದಿಂದ ನೀನು ಅವರನ್ನು ಆಲೈಸಿದೆ. ನಿನ್ನ ಮಹಾಕರುಣೆಗನುಸಾರವಾಗಿ ನೀನು ಅವರ ಬಳಿಗೆ ಜನರನ್ನು ಕಳುಹಿಸಿ ಅವರನ್ನು ಅವರ ವೈರಿಗಳ ಕೈಗಳಿಂದ ರಕ್ಷಿಸಿದೆ. ಅಧ್ಯಾಯವನ್ನು ನೋಡಿ |