Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 1:10 - ಕನ್ನಡ ಸಮಕಾಲಿಕ ಅನುವಾದ

10 ಯೆಹೂದ ಗೋತ್ರದವರು ಪೂರ್ವದಲ್ಲಿ ಕಿರ್ಯತ್ ಅರ್ಬ ಎಂಬ ಹೆಸರಿದ್ದ ಹೆಬ್ರೋನಿನಲ್ಲಿ ವಾಸವಾಗಿದ್ದ ಕಾನಾನ್ಯರ ಮೇಲೆ ಹೋಗಿ ಶೇಷೈ, ಅಹೀಮನ್, ತಲ್ಮೈರನ್ನು ಸೋಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅವರು ಮೊದಲು ಕಿರ್ಯತರ್ಬ ಎಂಬ ಹೆಸರಿದ್ದ ಹೆಬ್ರೋನಿಗೆ ಹೋಗಿ ಅಲ್ಲಿದ್ದ ಕಾನಾನ್ಯರ ಮೇಲೆ ಬಿದ್ದು, ಅವರಲ್ಲಿ ಶೇಷೈ, ಅಹೀಮನ್, ತಲ್ಮೈ ಎಂಬುವರನ್ನು ಸೋಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ‘ಕಿರ್ಯತರ್ಬ’ ಎಂದು ಈ ಮುಂದೆ ಹೆಸರುಗೊಂಡಿದ್ದ ಹೆಬ್ರೋನಿಗೆ ಹೋಗಿ ಅಲ್ಲಿದ್ದ ಕಾನಾನ್ಯರ ಮೇಲೆ ದಾಳಿಮಾಡಿ ಅವರಲ್ಲಿ ಶೇಷೈ, ಅಹೀಮನ್, ತಲ್ಮೈ ಎಂಬವರನ್ನು ಸೋಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅವರು ಮುಂಚೆ ಕಿರ್ಯತರ್ಬ ಎಂಬ ಹೆಸರಿದ್ದ ಹೆಬ್ರೋನಿಗೆ ಹೋಗಿ ಅಲ್ಲಿದ್ದ ಕಾನಾನ್ಯರ ಮೇಲೆ ಬಿದ್ದು ಅವರಲ್ಲಿ ಶೇಷೈ, ಅಹೀಮನ್, ತಲ್ಮೈ ಎಂಬವರನ್ನು ಹೊಡೆದು ಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ತರುವಾಯ ಯೆಹೂದ್ಯರು ಕಿರ್ಯತರ್ಬವೆಂಬ ಹೆಬ್ರೋನ್ ನಗರದಲ್ಲಿದ್ದ ಕಾನಾನ್ಯರೊಂದಿಗೆ ಯುದ್ಧಮಾಡಲು ಹೋದರು. ಯೆಹೂದ್ಯರು ಶೇಷೈ, ಅಹೀಮನ್ ಮತ್ತು ತಲ್ಮೈ ಎಂಬವರನ್ನು ಸೋಲಿಸಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 1:10
12 ತಿಳಿವುಗಳ ಹೋಲಿಕೆ  

ಹೆಬ್ರೋನಿನ ಮೊದಲಿನ ಹೆಸರು ಕಿರ್ಯತ್ ಅರ್ಬ. “ಅರ್ಬ” ಎಂಬುವವನು ಅನಾಕ್ಯರಲ್ಲಿ ಪ್ರಮುಖನಾಗಿದ್ದನು. ದೇಶವು ಯುದ್ಧವಿಲ್ಲದೆ ಶಾಂತವಾಗಿತ್ತು.


ಅವರು ನೆಗೆವನ್ನು ದಾಟಿ ಹೆಬ್ರೋನಿನವರೆಗೆ ಬಂದರು. ಅಲ್ಲಿ ಅನಾಕನ ಮಕ್ಕಳಾದ ಅಹೀಮನ್, ಶೇಷೈ, ತಲ್ಮೈ ಎಂಬ ಉನ್ನತರಾದ ಪುರುಷರು ಇದ್ದರು. ಹೆಬ್ರೋನ್ ಪಟ್ಟಣವು ಈಜಿಪ್ಟ್ ದೇಶದ ಚೋವನ್ ಪಟ್ಟಣಕ್ಕಿಂತ ಏಳು ವರ್ಷಗಳು ಮೊದಲು ನಿರ್ಮಿಸಲಾಗಿತ್ತು.


ಯೆಹೋವ ದೇವರು ಹೀಗೆ ಹೇಳುತ್ತಾರೆ: “ಜ್ಞಾನಿಯು ತನ್ನ ಜ್ಞಾನದಲ್ಲಿ ಹೆಚ್ಚಳ ಪಡದಿರಲಿ. ಬಲಿಷ್ಠನು ತನ್ನ ಬಲದಲ್ಲಿ ಹೆಚ್ಚಳ ಪಡದಿರಲಿ. ಐಶ್ವರ್ಯವಂತನು ತನ್ನ ಐಶ್ವರ್ಯದಲ್ಲಿ ಹೆಚ್ಚಳ ಪಡದಿರಲಿ.


ನಾನು ಮತ್ತೆ ಸೂರ್ಯನ ಕೆಳಗೆ ನೋಡಿದ್ದೇನೆಂದರೆ, ವೇಗಿಗಳಿಗೆ ಓಟವೂ ಪರಾಕ್ರಮಶಾಲಿಗಳಿಗೆ ಯುದ್ಧವೂ ಜ್ಞಾನಿಗಳಿಗೆ ಆಹಾರವೂ ವಿವೇಕಿಗಳಿಗೆ ಐಶ್ವರ್ಯವೂ ಪ್ರವೀಣರಿಗೆ ದಯೆಯೂ ಸಿಗುವುದು ಎಂಬ ನಿಶ್ಚಯ ಇಲ್ಲ. ಏಕೆಂದರೆ ಕಾಲವೂ ಅವಕಾಶವೂ ಅವರೆಲ್ಲರಿಗೆ ಒಳಪಟ್ಟಿರುತ್ತವೆ.


ಮೋಶೆಯು ಹೇಳಿದ ಪ್ರಕಾರ, ಅವರು ಹೆಬ್ರೋನನ್ನು ಕಾಲೇಬನಿಗೆ ಕೊಟ್ಟರು. ಅವರು ಅನಾಕನ ಮೂವರು ಮಕ್ಕಳನ್ನು ಅಲ್ಲಿಂದ ಹೊರಡಿಸಿಬಿಟ್ಟರು.


ಅಲ್ಲಿ ನೆಫೀಲಿಯರನ್ನು ಅಂದರೆ ನೆಫೀಲಿಯ ವಂಶದವರಾದ ಮಹಾಶರೀರವುಳ್ಳ ಪುರುಷರನ್ನು ನೋಡಿದೆವು. ನಾವು ಅವರ ಮುಂದೆ ಮಿಡತೆಗಳ ಹಾಗೆ ಇದ್ದೆವು. ಅವರ ದೃಷ್ಟಿಗೂ ನಾವು ಹಾಗೆಯೇ ಕಾಣಿಸಿದೆವು,” ಎಂದರು.


ಅವಳು ಕಾನಾನ್ ದೇಶದಲ್ಲಿರುವ ಹೆಬ್ರೋನಿನಲ್ಲಿ ಅಂದರೆ ಕಿರ್ಯತ್ ಅರ್ಬದಲ್ಲಿ ಮರಣಹೊಂದಿದಳು. ಅಬ್ರಹಾಮನು ಸಾರಳಿಗೋಸ್ಕರ ಗೋಳಾಡಿದನು.


ಯಾಕೋಬನು ಅವನಿಗೆ, “ಹೋಗಿ ನಿನ್ನ ಸಹೋದರರ ಕ್ಷೇಮಸಮಾಚಾರವನ್ನೂ, ಮಂದೆಗಳ ಕ್ಷೇಮಸಮಾಚಾರವನ್ನೂ ತಿಳಿದುಕೊಂಡು ಬಂದು ನನಗೆ ತಿಳಿಸು,” ಎಂದು ಹೇಳಿ ಹೆಬ್ರೋನ್ ಕಣಿವೆಯಿಂದ ಕಳುಹಿಸಿದನು. ಯೋಸೇಫನು ಶೆಕೆಮಿಗೆ ಬಂದಾಗ,


ಅನಂತರ ಯೆಹೋಶುವನು ಸಮಸ್ತ ಇಸ್ರಾಯೇಲರ ಸಂಗಡ ಎಗ್ಲೋನಿನಿಂದ ಹೆಬ್ರೋನಿಗೆ ಹೊರಟುಹೋಗಿ, ಅದರ ಮೇಲೆ ಯುದ್ಧಮಾಡಿದನು.


ತರುವಾಯ ಯೆಹೂದ ಗೋತ್ರದವರು ಬೆಟ್ಟದಲ್ಲಿಯೂ ದಕ್ಷಿಣದಲ್ಲಿಯೂ ತಗ್ಗಿನಲ್ಲಿಯೂ ವಾಸಿಸಿದ ಕಾನಾನ್ಯರಿಗೆ ವಿರೋಧವಾಗಿ ಯುದ್ಧಮಾಡುವುದಕ್ಕೆ ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು