Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 1:17 - ಕನ್ನಡ ಸಮಕಾಲಿಕ ಅನುವಾದ

17 ಯೆಹೂದ ಗೋತ್ರದವರು ತನ್ನ ಸಹೋದರರಾದ ಸಿಮೆಯೋನ್ಯರ ಸಂಗಡ ಹೊರಟು, ಚೆಫೆತ್‌ನಲ್ಲಿ ವಾಸವಾಗಿರುವ ಕಾನಾನ್ಯರ ಮೇಲೆ ದಾಳಿಮಾಡಿ, ಆ ಪಟ್ಟಣವನ್ನು ನಿರ್ಮೂಲ ಮಾಡಿದರು. ಆ ಪಟ್ಟಣವು ಹೊರ್ಮಾ ಎಂದು ಕರೆಯಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ತರುವಾಯ ಯೆಹೂದ್ಯರು ತಮ್ಮ ಬಂಧುಗಳಾದ ಸಿಮೆಯೋನ್ಯರ ಸಂಗಡ ಹೋಗಿ ಚೆಫತ್ ಎಂಬ ಪಟ್ಟಣದಲ್ಲಿದ್ದ ಕಾನಾನ್ಯರನ್ನು ಸೋಲಿಸಿ, ಆ ಪಟ್ಟಣವನ್ನು ಹಾಳುಮಾಡಿ ಅದನ್ನು ಹೊರ್ಮಾ ಎಂದು ಕರೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ತರುವಾಯ ಯೆಹೂದಕುಲದವರು ತಮ್ಮ ಬಂಧುಗಳಾದ ಸಿಮೆಯೋನ್ ಕುಲದವರ ಸಂಗಡ ಹೋಗಿ ‘ಚೆಫತ್’ ಎಂಬ ಪಟ್ಟಣದಲ್ಲಿದ್ದ ಕಾನಾನ್ಯರನ್ನು ಸೋಲಿಸಿ ಆ ಪಟ್ಟಣವನ್ನು ಹಾಳುಮಾಡಿ ಅದನ್ನು ‘ಹೋರ್ಮಾ’ ಎಂದು ಕರೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ತರುವಾಯ ಯೆಹೂದ್ಯರು ತಮ್ಮ ಬಂಧುಗಳಾದ ಸಿಮೆಯೋನ್ಯರ ಸಂಗಡ ಹೋಗಿ ಚೆಫತ್ ಎಂಬ ಪಟ್ಟಣದಲ್ಲಿದ್ದ ಕಾನಾನ್ಯರನ್ನು ಸೋಲಿಸಿ ಆ ಪಟ್ಟಣವನ್ನು ಹಾಳುಮಾಡಿ ಅದನ್ನು ಹೊರ್ಮಾ ಎಂದು ಕರೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಕಾನಾನ್ಯರಾಗಿದ್ದ ಕೆಲವರು ಚೆಫತ್ ಎಂಬ ನಗರದಲ್ಲಿ ವಾಸ ಮಾಡಿಕೊಂಡಿದ್ದರು. ಯೆಹೂದ್ಯರು ಮತ್ತು ಸಿಮೆಯೋನ್ಯರು ಆ ಕಾನಾನ್ಯರ ಮೇಲೆ ಧಾಳಿಮಾಡಿ ಆ ನಗರವನ್ನು ಸಂಪೂರ್ಣವಾಗಿ ನಾಶಮಾಡಿದರು; ಅಲ್ಲದೆ ಆ ನಗರಕ್ಕೆ ಹೊರ್ಮಾ ಎಂದು ಹೆಸರಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 1:17
6 ತಿಳಿವುಗಳ ಹೋಲಿಕೆ  

ಆಗ ಯೆಹೋವ ದೇವರು ಇಸ್ರಾಯೇಲರ ಧ್ವನಿಯನ್ನು ಕೇಳಿ ಕಾನಾನ್ಯರನ್ನು ಒಪ್ಪಿಸಿಕೊಟ್ಟನು. ಇಸ್ರಾಯೇಲರು ಅವರನ್ನೂ ಅವರ ಪಟ್ಟಣಗಳನ್ನೂ ಸಂಪೂರ್ಣವಾಗಿ ನಾಶಮಾಡಿದರು. ಆ ಸ್ಥಳಕ್ಕೆ ಹೊರ್ಮಾ ಎಂದು ಹೆಸರಿಟ್ಟರು.


ಆಸನು ಅವನಿಗೆದುರಾಗಿ ಹೊರಟುಹೋದನು. ಮಾರೇಷಾದ ಬಳಿಯಲ್ಲಿ ಚೆಫಾತಾದ ತಗ್ಗಿನಲ್ಲಿ ವ್ಯೂಹ ಕಟ್ಟಿದರು.


ಯೆಹೂದ ಗೋತ್ರದವರು ತಮ್ಮ ಸಹೋದರರಾದ ಸಿಮೆಯೋನ್ಯರಿಗೆ, “ನೀವು ನಮ್ಮ ಸಂಗಡ ನಮ್ಮ ಪ್ರಾಂತಕ್ಕೆ ಬನ್ನಿರಿ, ಕಾನಾನ್ಯರ ಮೇಲೆ ಯುದ್ಧ ಮಾಡೋಣ. ಹಾಗೆಯೇ ನಾವು ನಿಮ್ಮ ಸಂಗಡ ನಿಮ್ಮ ಪ್ರಾಂತಕ್ಕೆ ಬರುತ್ತೇವೆ,” ಎಂದರು. ಹೀಗೆ ಸಿಮೆಯೋನ್ಯರು ಅವರ ಸಂಗಡ ಹೋದರು.


ಎಲ್ತೋಲದ್, ಬೆತೂಲ್, ಹೊರ್ಮಾ,


ಆಗ ಆ ಬೆಟ್ಟದಲ್ಲಿ ವಾಸವಾಗಿದ್ದ ಅಮಾಲೇಕ್ಯರೂ, ಕಾನಾನ್ಯರೂ ಇಳಿದು, ಅವರನ್ನು ಹೊಡೆದು, ಹೊರ್ಮಾದವರೆಗೆ ಅಟ್ಟಿಬಿಟ್ಟರು.


ಹೊರ್ಮಾದವರು, ಬೋರಾಷಾನಿನವರು, ಅತಾಕಿನವರು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು