ನ್ಯಾಯಸ್ಥಾಪಕರು 1:21 - ಕನ್ನಡ ಸಮಕಾಲಿಕ ಅನುವಾದ21 ಬೆನ್ಯಾಮೀನ್ಯರಿಗೆ ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಹೊರಡಿಸಲು ಸಾಧ್ಯವಾಗಲಿಲ್ಲ. ಆದುದರಿಂದ ಯೆಬೂಸಿಯರು ಈ ದಿನದವರೆಗೂ ಬೆನ್ಯಾಮೀನರ ಸಂಗಡ ವಾಸವಾಗಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಯೆರೂಸಲೇಮಿನಲ್ಲಿದ್ದ ಯೆಬೂಸಿಯರನ್ನು ಬೆನ್ಯಾಮೀನ್ಯರು ಹೊರಡಿಸಿಬಿಡಲಿಲ್ಲ. ಅವರು ಇಂದಿನವರೆಗೂ ಬೆನ್ಯಾಮೀನ್ಯರ ಸಂಗಡ ಯೆರೂಸಲೇಮಿನಲ್ಲಿಯೇ ವಾಸವಾಗಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಜೆರುಸಲೇಮಿನಲ್ಲಿದ್ದ ಯೆಬೂಸಿಯರನ್ನು ಹೊರಡಿಸಲು ಬೆನ್ಯಾಮೀನ್ಯರಿಂದ ಆಗದೆಹೋಯಿತು. ಅವರು ಇಂದಿನವರೆಗೂ, ಬೆನ್ಯಾಮೀನ್ಯರ ಸಂಗಡ ಜೆರುಸಲೇಮಿನಲ್ಲೇ ವಾಸವಾಗಿ ಇದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಯೆರೂಸಲೇವಿುನಲ್ಲಿದ್ದ ಯೆಬೂಸಿಯರನ್ನು ಹೊರಡಿಸುವದು ಬೆನ್ಯಾಮೀನ್ಯರಿಂದ ಆಗದೆ ಹೋಯಿತು. ಅವರು ಇಂದಿನವರೆಗೂ ಬೆನ್ಯಾಮೀನ್ಯರ ಸಂಗಡ ಯೆರೂಸಲೇವಿುನಲ್ಲಿಯೇ ವಾಸವಾಗಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಬೆನ್ಯಾಮೀನನ ಕುಲದವರಿಗೆ ಯೆಬೂಸಿಯರನ್ನು ಜೆರುಸಲೇಮಿನಿಂದ ಹೊರದೂಡುವುದು ಸಾಧ್ಯವಾಗಲಿಲ್ಲ. ಅದಕ್ಕಾಗಿ ಇಂದಿನವರೆಗೂ ಅವರು ಬೆನ್ಯಾಮೀನರೊಡನೆ ಜೆರುಸಲೇಮಿನಲ್ಲಿಯೇ ವಾಸವಾಗಿದ್ದಾರೆ. ಅಧ್ಯಾಯವನ್ನು ನೋಡಿ |