ನ್ಯಾಯಸ್ಥಾಪಕರು 1:24 - ಕನ್ನಡ ಸಮಕಾಲಿಕ ಅನುವಾದ24 ಗೂಢಚಾರರು ಪಟ್ಟಣದೊಳಗಿಂದ ಬರುವ ಒಬ್ಬ ಮನುಷ್ಯನನ್ನು ಕಂಡು ಅವನಿಗೆ, “ದಯಮಾಡಿ ಪಟ್ಟಣದಲ್ಲಿ ಪ್ರವೇಶಿಸುವ ಮಾರ್ಗವನ್ನು ನಮಗೆ ತೋರಿಸು. ನಾವು ನಿನಗೆ ಕರುಣೆ ತೋರಿಸುವೆವು,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಅವರು ಆ ಊರೊಳಗಿನಿಂದ ಬರುವ ಒಬ್ಬ ಮನುಷ್ಯನನ್ನು ಕಂಡು ಅವನಿಗೆ, “ದಯವಿಟ್ಟು ಪಟ್ಟಣದೊಳಗೆ ನುಗ್ಗಬಹುದಾದ ದಾರಿಯನ್ನು ನಮಗೆ ತೋರಿಸು; ನಾವೂ ನಿನಗೆ ದಯೆತೋರಿಸುವೆವು” ಎಂದು ಹೇಳಲು ಅವನು ಅವರಿಗೆ ಆ ದಾರಿಯನ್ನು ತೋರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಇವರು ಆ ಊರೊಳಗಿಂದ ಬರುತ್ತಿದ್ದ ಒಬ್ಬ ವ್ಯಕ್ತಿಯನ್ನು ಕಂಡು, “ದಯಮಾಡಿ, ಪಟ್ಟಣದೊಳಗೆ ನುಗ್ಗಬಹುದಾದ ದಾರಿಯನ್ನು ನಮಗೆ ತೋರಿಸಿಕೊಡು; ನಾವು ನಿನಗೆ ಒಳ್ಳೆಯದನ್ನೇ ಮಾಡುತ್ತೇವೆ,” ಎಂದರು. ಅವನು ಅವರಿಗೆ ಆ ದಾರಿಯನ್ನು ತೋರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಅವರು ಆ ಊರೊಳಗಿಂದ ಬರುವ ಒಬ್ಬ ಮನುಷ್ಯನನ್ನು ಕಂಡು ಅವನಿಗೆ - ದಯವಿಟ್ಟು ಪಟ್ಟಣದೊಳಗೆ ನುಗ್ಗಬಹುದಾದ ದಾರಿಯನ್ನು ನಮಗೆ ತೋರಿಸು; ನಾವೂ ನಿನಗೆ ದಯೆ ತೋರಿಸುವೆವು ಎಂದು ಹೇಳಲು ಅವನು ಅಂಥ ದಾರಿಯನ್ನು ತೋರಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಆ ಗೂಢಚಾರರು ಬೇತೇಲ್ ನಗರದಲ್ಲಿ ಸಂಚರಿಸುತ್ತಿದ್ದಾಗ ಒಬ್ಬನು ನಗರದಿಂದ ಹೊರಬರುವುದನ್ನು ನೋಡಿದರು. ಗೂಢಚಾರರು ಅವನಿಗೆ, “ನಮಗೆ ಈ ನಗರದೊಳಗೆ ಹೋಗಲು ಮಾಡಿರುವ ಗುಪ್ತಮಾರ್ಗವನ್ನು ತೋರಿಸು. ನಾವು ಈ ಪಟ್ಟಣದ ಮೇಲೆ ಧಾಳಿ ಮಾಡಬೇಕೆಂದಿದ್ದೇವೆ. ನೀನು ನಮಗೆ ಸಹಾಯ ಮಾಡಿದರೆ ನಿನಗೆ ದಯೆತೋರುವೆವು” ಎಂದರು. ಅಧ್ಯಾಯವನ್ನು ನೋಡಿ |