Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 1:26 - ಕನ್ನಡ ಸಮಕಾಲಿಕ ಅನುವಾದ

26 ಆ ಮನುಷ್ಯನು ಹಿತ್ತಿಯರ ದೇಶಕ್ಕೆ ಹೋಗಿ, ಅಲ್ಲಿ ಒಂದು ಪಟ್ಟಣವನ್ನು ಕಟ್ಟಿ, ಅದಕ್ಕೆ ಲೂಜ್ ಎಂದು ಹೆಸರಿಟ್ಟನು. ಈವರೆಗೂ ಅದಕ್ಕೆ ಅದೇ ಹೆಸರಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅವನು ಹಿತ್ತಿಯರ ದೇಶಕ್ಕೆ ಹೋಗಿ ಒಂದು ಪಟ್ಟಣವನ್ನು ಕಟ್ಟಿಕೊಂಡು ಅದಕ್ಕೆ ಲೂಜ್ ಎಂದು ಹೆಸರಿಟ್ಟನು; ಅದಕ್ಕೆ ಇಂದಿನವರೆಗೂ ಅದೇ ಹೆಸರಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಅವನು ಹಿತ್ತಿಯರ ದೇಶಕ್ಕೆ ಹೋಗಿ ಒಂದು ಪಟ್ಟಣವನ್ನು ಕಟ್ಟಿಕೊಂಡು ಅದಕ್ಕೆ ‘ಲೂಜ್’ ಎಂದು ಹೆಸರಿಟ್ಟನು. ಅದಕ್ಕೆ ಇಂದಿನವರೆಗೂ ಅದೇ ಹೆಸರು ಉಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಅವನು ಹಿತ್ತಿಯರ ದೇಶಕ್ಕೆ ಹೋಗಿ ಒಂದು ಪಟ್ಟಣವನ್ನು ಕಟ್ಟಿಕೊಂಡು ಅದಕ್ಕೆ ಲೂಜೆಂದು ಹೆಸರಿಟ್ಟನು; ಅದಕ್ಕೆ ಇಂದಿನವರೆಗೂ ಅದೇ ಹೆಸರಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಆ ಮನುಷ್ಯನು ಹಿತ್ತಿಯರ ದೇಶಕ್ಕೆ ಹೋಗಿ ಅಲ್ಲೊಂದು ನಗರವನ್ನು ಕಟ್ಟಿದನು. ಅದಕ್ಕೆ ಲೂಜ್ ಎಂದು ಹೆಸರಿಟ್ಟನು. ಇಂದಿಗೂ ಆ ಪಟ್ಟಣದ ಹೆಸರು ಲೂಜ್ ಎಂದೇ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 1:26
4 ತಿಳಿವುಗಳ ಹೋಲಿಕೆ  

ಹಾಗೆಯೇ ಈಜಿಪ್ಟಿನಿಂದ ಆರುನೂರು ಬೆಳ್ಳಿ ನಾಣ್ಯಗಳ ಕ್ರಯಕ್ಕೆ ಒಂದು ರಥವನ್ನೂ ನೂರ ಐವತ್ತು ಬೆಳ್ಳಿ ನಾಣ್ಯಗಳ ಕ್ರಯಕ್ಕೆ ಒಂದು ಕುದುರೆಯನ್ನೂ ತರಿಸುತ್ತಿದ್ದರು. ಈ ಪ್ರಕಾರ ಹಿತ್ತಿಯರ ಮತ್ತು ಅರಾಮಿನ ಅರಸುಗಳೆಲ್ಲರು ಇವರ ಮುಖಾಂತರವಾಗಿಯೇ ತರಿಸುತ್ತಿದ್ದರು.


ಏಕೆಂದರೆ ಯೆಹೋವ ದೇವರು ಪಾಳೆಯದಲ್ಲಿರುವ ಅರಾಮ್ಯರಿಗೆ ರಥಗಳ, ಕುದುರೆಗಳ ಮತ್ತು ಮಹಾ ಸೈನ್ಯದ ಶಬ್ದವೂ ಕೇಳಿಸುವಂತೆ ಮಾಡಿದ್ದರಿಂದ ಅವರು ಒಬ್ಬರಿಗೊಬ್ಬರು, “ಇಸ್ರಾಯೇಲಿನ ಅರಸನು ಹಿತ್ತಿಯರ ಅರಸರನ್ನೂ, ಈಜಿಪ್ಟಿನ ಅರಸರನ್ನೂ ನಮ್ಮ ಮೇಲೆ ದಾಳಿಮಾಡಲು ಅವರನ್ನು ಕೂಲಿಗೆ ಕರೆದಿದ್ದಾನೆ,” ಎಂದುಕೊಂಡರು.


ಅವನು ಪಟ್ಟಣದಲ್ಲಿ ಪ್ರವೇಶಿಸುವ ಮಾರ್ಗವನ್ನು ಅವರಿಗೆ ತೋರಿಸಿದಾಗ, ಅವರು ಬಂದು ಪಟ್ಟಣವನ್ನು ಖಡ್ಗದಿಂದ ಹೊಡೆದು, ಆ ಮನುಷ್ಯನನ್ನೂ ಅವನ ಸಮಸ್ತ ಕುಟುಂಬವನ್ನೂ ಕಳುಹಿಸಿಬಿಟ್ಟರು.


ಮನಸ್ಸೆಯ ಗೋತ್ರದವರು ಬೇತ್ ಷೆಯಾನರನ್ನೂ, ಅವರ ಊರುಗಳವರನ್ನೂ; ತಾನಕದವರನ್ನೂ, ಅವರ ಊರುಗಳವರನ್ನೂ; ದೋರಿನವರನ್ನೂ, ಅವರ ಊರುಗಳವರನ್ನೂ; ಇಬ್ಲೆಯಾಮಿನವರನ್ನೂ, ಅವರ ಊರುಗಳವರನ್ನೂ, ಮೆಗಿದ್ದೋನಿನವರನ್ನೂ, ಅವರ ಊರುಗಳವರನ್ನೂ ಹೊರಡಿಸಿಬಿಡಲಿಲ್ಲ. ಕಾನಾನ್ಯರಾದ ಇವರು ಆ ದೇಶದಲ್ಲಿ ವಾಸಿಸಬೇಕೆಂದಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು