Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 1:28 - ಕನ್ನಡ ಸಮಕಾಲಿಕ ಅನುವಾದ

28 ಇಸ್ರಾಯೇಲರು ಬಲಗೊಂಡಾಗ, ಅವರನ್ನು ಪೂರ್ಣವಾಗಿ ಹೊರಡಿಸಿಬಿಡದೆ, ಅವರನ್ನು ದಾಸತ್ವಕ್ಕೆ ಕಾನಾನ್ಯರಿಗೆ ನೇಮಕ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಇಸ್ರಾಯೇಲ್ಯರು ಬಲಗೊಂಡ ಮೇಲೆ ಅವರನ್ನು ದಾಸತ್ವದಲ್ಲಿ ಇಟ್ಟುಕೊಂಡರೇ ಹೊರತು ಅಲ್ಲಿಂದ ಓಡಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಇಸ್ರಯೇಲರು ಬಲಗೊಂಡ ಮೇಲೆ ಅವರನ್ನು ದಾಸತ್ವದಲ್ಲಿ ಇಟ್ಟುಕೊಂಡರೇ ಹೊರತು ಅಲ್ಲಿಂದ ಅಟ್ಟಿಬಿಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಇಸ್ರಾಯೇಲ್ಯರು ಬಲಗೊಂಡ ಮೇಲೆ ಅವರನ್ನು ದಾಸತ್ವಕ್ಕೆ ಹಚ್ಚಿದರೇ ಹೊರತು ಅಲ್ಲಿಂದ ಅಟ್ಟಿಬಿಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಅನಂತರ ಇಸ್ರೇಲರು ಪ್ರಬಲರಾಗಿ ಬಲವಂತದಿಂದ ಕಾನಾನ್ಯರನ್ನು ತಮ್ಮ ಗುಲಾಮರನ್ನಾಗಿ ಮಾಡಿಕೊಂಡರು. ಆದರೆ ಎಲ್ಲಾ ಕಾನಾನ್ಯರನ್ನೂ ಅವರ ಮನೆಗಳಿಂದ ಹೊರಗಟ್ಟಲು ಇಸ್ರೇಲರಿಗೆ ಸಾಧ್ಯವಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 1:28
9 ತಿಳಿವುಗಳ ಹೋಲಿಕೆ  

ಮನಸ್ಸೆಯ ಗೋತ್ರದವರು ಬೇತ್ ಷೆಯಾನರನ್ನೂ, ಅವರ ಊರುಗಳವರನ್ನೂ; ತಾನಕದವರನ್ನೂ, ಅವರ ಊರುಗಳವರನ್ನೂ; ದೋರಿನವರನ್ನೂ, ಅವರ ಊರುಗಳವರನ್ನೂ; ಇಬ್ಲೆಯಾಮಿನವರನ್ನೂ, ಅವರ ಊರುಗಳವರನ್ನೂ, ಮೆಗಿದ್ದೋನಿನವರನ್ನೂ, ಅವರ ಊರುಗಳವರನ್ನೂ ಹೊರಡಿಸಿಬಿಡಲಿಲ್ಲ. ಕಾನಾನ್ಯರಾದ ಇವರು ಆ ದೇಶದಲ್ಲಿ ವಾಸಿಸಬೇಕೆಂದಿದ್ದರು.


ಇದಲ್ಲದೆ ಎಫ್ರಾಯೀಮ್ಯರು ಗೆಜೆರಿನಲ್ಲಿ ವಾಸವಾಗಿದ್ದ ಕಾನಾನ್ಯರನ್ನು ಹೊರಡಿಸಿಬಿಡಲಿಲ್ಲ. ಕಾನಾನ್ಯರು ಗೆಜೆರಿನಲ್ಲಿ ಅವರ ಸಂಗಡ ವಾಸಿಸಿದ್ದರು.


ಇಸ್ರಾಯೇಲರು ಸಂಹರಿಸದೆ ಉಳಿಸಿದ್ದ ಅವರ ಮಕ್ಕಳನ್ನೂ ಸೊಲೊಮೋನನು ಇಂದಿನವರೆಗೂ ದಾಸತ್ವಕ್ಕಾಗಿ ನೇಮಿಸಿದನು.


ಚುರುಕು ಕೈಯುಳ್ಳವನು ಆಳುವನು; ಸೋಮಾರಿಗಳು ಗುಲಾಮರಾಗುವರು.


ನಂತರ ಅವನು ಹೀಗೆಂದನು, “ಕಾನಾನನು ಶಾಪಗ್ರಸ್ತನಾಗಲಿ, ಅವನು ತನ್ನ ಸಹೋದರರಿಗೆ ದಾಸಾನುದಾಸನಾಗಿರಲಿ.”


ನೋಹನು ಮತ್ತೆ ಹೇಳಿದ್ದು, “ಶೇಮನ ದೇವರಾದ ಯೆಹೋವ ಸ್ತುತಿಹೊಂದಲಿ. ಕಾನಾನನು ಶೇಮನಿಗೆ ದಾಸನಾಗಿರಲಿ.


ಆ ಪಟ್ಟಣವು ನಿಮಗೆ ಸಮಾಧಾನದ ಉತ್ತರಕೊಟ್ಟು ಬಾಗಿಲನ್ನು ತೆರೆದರೆ, ಅದರಲ್ಲಿರುವ ಜನರೆಲ್ಲರೂ ನಿಮಗೆ ಕಪ್ಪಕೊಟ್ಟು, ನಿಮಗಾಗಿ ಕೆಲಸ ಮಾಡಬೇಕು.


ಆದರೆ ಇಸ್ರಾಯೇಲರು ಬಲಗೊಂಡಾಗ, ಕಾನಾನ್ಯರನ್ನು ಹೊರಡಿಸದೆ ಅವರನ್ನು ಜೀತದಾಳುಗಳನ್ನಾಗಿ ಮಾಡಿಕೊಂಡರು.


ಇಸ್ರಾಯೇಲರು ಆ ದಿವಸ ಬಹಳ ಬಳಲಿ ಹೋದರು. ಏಕೆಂದರೆ ಸೌಲನು, “ನಾನು ನನ್ನ ಶತ್ರುಗಳಿಗೆ ಮುಯ್ಯಿ ತೀರಿಸುವ ಹಾಗೆ ಸಾಯಂಕಾಲದವರೆಗೆ ಯಾವನು ಆಹಾರ ತಿನ್ನುತ್ತಾನೋ, ಅವನು ಶಾಪಗ್ರಸ್ತನಾಗಲಿ,” ಎಂದು ಆಣೆ ಇಟ್ಟದ್ದರಿಂದ, ಜನರೆಲ್ಲರು ಆಹಾರದ ರುಚಿ ನೋಡದೆ ಇದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು