Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 1:3 - ಕನ್ನಡ ಸಮಕಾಲಿಕ ಅನುವಾದ

3 ಯೆಹೂದ ಗೋತ್ರದವರು ತಮ್ಮ ಸಹೋದರರಾದ ಸಿಮೆಯೋನ್ಯರಿಗೆ, “ನೀವು ನಮ್ಮ ಸಂಗಡ ನಮ್ಮ ಪ್ರಾಂತಕ್ಕೆ ಬನ್ನಿರಿ, ಕಾನಾನ್ಯರ ಮೇಲೆ ಯುದ್ಧ ಮಾಡೋಣ. ಹಾಗೆಯೇ ನಾವು ನಿಮ್ಮ ಸಂಗಡ ನಿಮ್ಮ ಪ್ರಾಂತಕ್ಕೆ ಬರುತ್ತೇವೆ,” ಎಂದರು. ಹೀಗೆ ಸಿಮೆಯೋನ್ಯರು ಅವರ ಸಂಗಡ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಗ ಯೆಹೂದ್ಯರು ತಮ್ಮ ಸಹೋದರರಾದ ಸಿಮೆಯೋನ್ಯರಿಗೆ, “ಕಾನಾನ್ಯರೊಡನೆ ಯುದ್ಧಮಾಡುವುದಕ್ಕೋಸ್ಕರ ನೀವು ನಮ್ಮ ಸಂಗಡ ನಮ್ಮ ಸ್ವಾಧೀನದಲ್ಲಿರುವ ಭೂಮಿಗೆ ಬನ್ನಿರಿ; ಅನಂತರ ನಾವೂ ನಿಮ್ಮ ಸಂಗಡ ನಿಮ್ಮ ಸ್ವಾಧೀನದಲ್ಲಿರುವ ಭೂಮಿಗೆ ಬರುವೆವು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆಗ ಯೆಹೂದಕುಲದವರು ತಮ್ಮ ಸೋದರರಾದ ಸಿಮೆಯೋನ್ಯರಿಗೆ, “ಕಾನಾನ್ಯರೊಡನೆ ಯುದ್ಧಮಾಡಲು ನೀವೂ ನಮ್ಮ ಸಂಗಡ ಸ್ವಂತಪ್ರಾಂತ್ಯಕ್ಕೆ ಬನ್ನಿ; ಅನಂತರ ನಾವೂ ನಿಮ್ಮ ಸಂಗಡ ನಿಮ್ಮ ಸ್ವಂತಪ್ರಾಂತ್ಯಕ್ಕೆ ಬರುತ್ತೇವೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆಗ ಯೆಹೂದ್ಯರು ತಮ್ಮ ಸಹೋದರರಾದ ಸಿಮೆಯೋನ್ಯರಿಗೆ - ಕಾನಾನ್ಯರೊಡನೆ ಯುದ್ಧಮಾಡುವದಕ್ಕೋಸ್ಕರ ನೀವು ನಮ್ಮ ಸಂಗಡ ನಮ್ಮ ಸ್ವಾಸ್ತ್ಯಭೂವಿುಗೆ ಬನ್ನಿರಿ; ಅನಂತರ ನಾವೂ ನಿಮ್ಮ ಸಂಗಡ ನಿಮ್ಮ ಸ್ವಾಸ್ತ್ಯ ಭೂವಿುಗೆ ಬರುವೆವು ಎಂದು ಹೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೆಹೂದ್ಯರು ತಮ್ಮ ಸಹೋದರರಾದ ಸಿಮೆಯೋನ್ಯರಿಂದ ಸಹಾಯವನ್ನು ಕೇಳಿದರು; ಯೆಹೂದ್ಯರು, “ಸಹೋದರರೇ, ಯೆಹೋವನು ನಮ್ಮಲ್ಲಿ ಪ್ರತಿಯೊಬ್ಬರಿಗೂ ಸ್ವಲ್ಪಸ್ವಲ್ಪ ಭೂಮಿಯನ್ನು ಕೊಡುವುದಾಗಿ ವಾಗ್ದಾನ ಮಾಡಿದ್ದಾನೆ. ನೀವು ಬಂದು ನಮ್ಮ ಭೂಮಿಗಾಗಿ ಹೋರಾಡುವ ಯುದ್ಧದಲ್ಲಿ ಸಹಾಯ ಮಾಡಿದರೆ, ನಿಮ್ಮ ಭೂಮಿಗಾಗಿ ಹೋರಾಡುವ ಯುದ್ಧದಲ್ಲಿ ನಾವು ನಿಮಗೆ ಸಹಾಯ ಮಾಡುತ್ತೇವೆ” ಎಂದು ಹೇಳಿದರು. ಸಿಮೆಯೋನ್ಯರು ತಮ್ಮ ಸಹೋದರರಾದ ಯೆಹೂದ್ಯರಿಗೆ ಯುದ್ಧದಲ್ಲಿ ಸಹಾಯ ಮಾಡಲು ಒಪ್ಪಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 1:3
7 ತಿಳಿವುಗಳ ಹೋಲಿಕೆ  

ಅವನಿಗೆ ಯೋವಾಬನು, “ಅರಾಮ್ಯರು ನನಗಿಂತ ಬಲವುಳ್ಳವರಾದರೆ, ನೀನು ನನಗೆ ಸಹಾಯಮಾಡಬೇಕು; ಅಮ್ಮೋನಿಯರು ನಿನಗಿಂತ ಬಲವುಳ್ಳವರಾದರೆ, ನಾನು ಬಂದು ನಿನಗೆ ಸಹಾಯ ಮಾಡುವೆನು.


ಯೆಹೂದ ಗೋತ್ರದವರು ತನ್ನ ಸಹೋದರರಾದ ಸಿಮೆಯೋನ್ಯರ ಸಂಗಡ ಹೊರಟು, ಚೆಫೆತ್‌ನಲ್ಲಿ ವಾಸವಾಗಿರುವ ಕಾನಾನ್ಯರ ಮೇಲೆ ದಾಳಿಮಾಡಿ, ಆ ಪಟ್ಟಣವನ್ನು ನಿರ್ಮೂಲ ಮಾಡಿದರು. ಆ ಪಟ್ಟಣವು ಹೊರ್ಮಾ ಎಂದು ಕರೆಯಲಾಗಿತ್ತು.


ಎರಡನೆಯ ಚೀಟು ಬಿದ್ದ ಭಾಗವು ಸಿಮೆಯೋನನ ಗೋತ್ರದವರದಾಗಿತ್ತು. ಸಿಮೆಯೋನನ ಗೋತ್ರದವರಿಗೆ ಅವರ ಕುಟುಂಬಗಳ ಪ್ರಕಾರ ದೊರೆಯಿತು. ಅವರ ಸೊತ್ತು ಯೆಹೂದ ಗೋತ್ರದ ಸೊತ್ತಿನ ಮಧ್ಯದಲ್ಲಿತ್ತು.


ಲೇಯಳು ಮತ್ತೆ ಗರ್ಭಿಣಿಯಾಗಿ ಮಗನನ್ನು ಹೆತ್ತು, “ನಾನು ತಾತ್ಸಾರವಾಗಿದ್ದೆ ಎಂದು ಯೆಹೋವ ದೇವರು ಕೇಳಿ, ಇವನನ್ನು ನನಗೆ ಕೊಟ್ಟಿದ್ದಾರೆ,” ಎಂದು ಹೇಳಿ ಅವನಿಗೆ ಸಿಮೆಯೋನ ಎಂದು ಹೆಸರಿಟ್ಟಳು.


ಅದಕ್ಕೆ ಯೆಹೋವ ದೇವರು, “ಯೆಹೂದ ಗೋತ್ರದವರು ಹೋಗಲಿ; ನಾನು ಆ ದೇಶವನ್ನು ಇವರ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದೇನೆ,” ಎಂದರು.


ಯೆಹೂದ ಗೋತ್ರದವರು ಹೋದಾಗ, ಯೆಹೋವ ದೇವರು ಕಾನಾನ್ಯರನ್ನೂ ಪೆರಿಜೀಯರನ್ನೂ ಅವರ ಕೈಯಲ್ಲಿ ಒಪ್ಪಿಸಿಕೊಟ್ಟರು. ಅವರು ಬೆಜೆಕಿನಲ್ಲಿ ಹತ್ತು ಸಾವಿರ ಜನರನ್ನು ಕೊಂದರು.


ಸಿಮೆಯೋನ್ ಕುಲದಿಂದ 12,000, ಲೇವಿ ಕುಲದಿಂದ 12,000, ಇಸ್ಸಾಕರ್ ಕುಲದಿಂದ 12,000,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು