Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 1:33 - ಕನ್ನಡ ಸಮಕಾಲಿಕ ಅನುವಾದ

33 ನಫ್ತಾಲಿ ಗೋತ್ರದವರು ಬೇತ್ ಷೆಮೆಷ್ ವಾಸಿಗಳನ್ನೂ ಹೊರಡಿಸಿಬಿಡದೆ, ಆ ದೇಶವಾಸಿಗಳಾದ ಕಾನಾನ್ಯರ ಮಧ್ಯದಲ್ಲಿ ವಾಸಿಸಿದ್ದರು. ಆದರೆ ಬೇತ್ ಷೆಮೆಷ್, ಬೇತ್ ಅನಾತ್ ಪಟ್ಟಣ ವಾಸಿಗಳು ಅವರಿಗೆ ದಾಸರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ನಫ್ತಾಲಿ ಕುಲದವರು ಬೇತ್ ಷೆಮೆಷ್, ಬೇತನಾತ್ ಎಂಬ ಊರುಗಳಲ್ಲಿ ಸ್ವಾಧೀನ ಮಾಡಿಕೊಳ್ಳದೆ ಅಲ್ಲಿಯ ನಿವಾಸಿಗಳಾದ ಕಾನಾನ್ಯರ ಮಧ್ಯದಲ್ಲೇ ವಾಸಮಾಡಿದರು ಮತ್ತು ಬೇತ್ ಷೆಮೆಷ್, ಬೇತನಾತ್ ಊರುಗಳ ಜನರು ಅವರಿಗೆ ಗುಲಾಮರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ನಫ್ತಾಲಿ ಕುಲದವರು ಬೇತ್ ಷೆಮೆಷ್, ಬೇತನಾತ್ ಎಂಬ ಊರುಗಳನ್ನು ಸ್ವತಂತ್ರಿಸಿಕೊಳ್ಳದೆ ಅಲ್ಲಿಯ ನಿವಾಸಿಗಳಾದ ಕಾನಾನ್ಯರ ಮಧ್ಯದಲ್ಲೇ ವಾಸಮಾಡಿದರು. ಮತ್ತು ಆ ಬೇತ್ ಷೆಮೆಷ್, ಬೇತನಾತ್ ಊರುಗಳ ಜನರು ಅವರಿಗೆ ಗುಲಾಮರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ನಫ್ತಾಲ್ಯರು ಬೇತ್‍ಷೆಮೆಷ್, ಬೇತನಾತ್ ಎಂಬ ಊರುಗಳನ್ನು ಸ್ವತಂತ್ರಿಸಿಕೊಳ್ಳದೆ ಅಲ್ಲಿಯ ನಿವಾಸಿಗಳಾದ ಕಾನಾನ್ಯರ ಮಧ್ಯದಲ್ಲೇ ವಾಸಮಾಡಿದರು. ಮತ್ತು ಆ ಬೇತ್‍ಷೆಮೆಷ್ ಬೇತನಾತ್ ಊರುಗಳ ಜನರು ಅವರಿಗೆ ದಾಸರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ನಫ್ತಾಲ್ಯರಿಗೂ ಹೀಗೆಯೇ ಆಯಿತು. ನಫ್ತಾಲ್ಯರು ಅಲ್ಲಿಯ ಜನರನ್ನು ಬೇತ್‌ಷೆಮೆಷ್, ಬೇತನಾತ್ ನಗರಗಳಿಂದ ಹೊರದೂಡಲಿಲ್ಲ. ಹೀಗಾಗಿ ನಫ್ತಾಲ್ಯರು ಆ ನಗರಗಳ ಜನರೊಡನೆ ವಾಸಮಾಡ ತೊಡಗಿದರು. ಆ ಕಾನಾನ್ಯರು ನಫ್ತಾಲ್ಯರ ಗುಲಾಮರಾಗಿ ಕೆಲಸ ಮಾಡಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 1:33
7 ತಿಳಿವುಗಳ ಹೋಲಿಕೆ  

ಆದ್ದರಿಂದ ಯೆಹೋವ ದೇವರು ನನ್ನ ನೀತಿಯ ಪ್ರಕಾರವೂ ಅವರ ದೃಷ್ಟಿಯಲ್ಲಿ ನನ್ನ ಕೈಗಳ ಶುದ್ಧತ್ವದ ಪ್ರಕಾರವೂ ನನಗೆ ಪ್ರತಿಫಲಕೊಟ್ಟರು.


ಹೀಗೆ ಅಮೋರಿಯರು ಹರ್‌ಹೆರೆಸ್ ಬೆಟ್ಟದಲ್ಲಿಯೂ ಅಯ್ಯಾಲೋನಿನಲ್ಲಿಯೂ ಶಾಲ್ಬೀಮಿನಲ್ಲಿಯೂ ವಾಸಿಸಬೇಕೆಂದಿದ್ದರು. ಆದರೆ ಯೋಸೇಫನ ಗೋತ್ರದವರ ಕೈ ಬಲ ಹೆಚ್ಚಾದದ್ದರಿಂದ ಅವರಿಗೆ ದಾಸರಾದರು.


ಜೆಬುಲೂನ್ಯರು ಕಿಟ್ರೋನಿನ ವಾಸಿಗಳನ್ನೂ ನಹಲೋಲಿನ ವಾಸಿಗಳನ್ನೂ ಹೊರಡಿಸಿಬಿಡಲಿಲ್ಲ. ಕಾನಾನ್ಯರಾದ ಇವರು ಅವರಲ್ಲಿ ದಾಸರಾಗಿ ವಾಸಮಾಡುವವರಾದರು.


ಬಾಲಾದಿಂದ ಪಶ್ಚಿಮಕ್ಕಿರುವ ಸೇಯೀರ್ ಬೆಟ್ಟವನ್ನು ಸುತ್ತಿ, ಅಲ್ಲಿಂದ ಕೆಸಾಲೋನಿನ ಯಾರೀಮ್ ಬೆಟ್ಟದ ಉತ್ತರಕ್ಕೂ ಅಲ್ಲಿಂದ ಬೇತ್ ಷೆಮೆಷ್ ಕಡೆಗೆ ಇಳಿದು ತಿಮ್ನಾಗೆ ಹೋಯಿತು.


ಆದರೆ ಆಶೇರ್ಯರು ಅವರನ್ನು ಹೊರಡಿಸಿಬಿಡದೆ, ಆ ದೇಶದ ವಾಸಿಗಳಾದ ಕಾನಾನ್ಯರ ಮಧ್ಯದಲ್ಲಿ ವಾಸವಾಗಿದ್ದರು.


ಅಮೋರಿಯರು ದಾನ್ಯರನ್ನು ತಗ್ಗಿನಲ್ಲಿ ಇಳಿಯಗೊಡದೆ, ಬೆಟ್ಟಗಳಿಗೆ ಓಡಿಸಿಬಿಟ್ಟರು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು