Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 1:35 - ಕನ್ನಡ ಸಮಕಾಲಿಕ ಅನುವಾದ

35 ಹೀಗೆ ಅಮೋರಿಯರು ಹರ್‌ಹೆರೆಸ್ ಬೆಟ್ಟದಲ್ಲಿಯೂ ಅಯ್ಯಾಲೋನಿನಲ್ಲಿಯೂ ಶಾಲ್ಬೀಮಿನಲ್ಲಿಯೂ ವಾಸಿಸಬೇಕೆಂದಿದ್ದರು. ಆದರೆ ಯೋಸೇಫನ ಗೋತ್ರದವರ ಕೈ ಬಲ ಹೆಚ್ಚಾದದ್ದರಿಂದ ಅವರಿಗೆ ದಾಸರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಹೀಗೆ ಅಮೋರಿಯರು ಅಯ್ಯಾಲೋನ್, ಶಾಲ್ಬೀಮ್ ಎಂಬ ಊರುಗಳ ಬಳಿ ಇದ್ದ ಹರ್ ಹೆರೆಸ್ ಎಂಬ ಬೆಟ್ಟದ ಹತ್ತಿರ ವಾಸಿಸಲು ನಿರ್ಧಾರಮಾಡಿಕೊಂಡರು. ಆದರೆ ಯೋಸೇಫನ ಕುಲದವರು ಅವರನ್ನು ಸೋಲಿಸಿ ಗುಲಾಮರನ್ನಾಗಿ ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಹೀಗೆ ಅಮೋರಿಯರು ಹರ್ ಹೆರೆಸ್, ಅಯ್ಯಾಲೋನ್, ಶಾಲ್ಬೀಮ್ ಎಂಬ ಊರುಗಳಲ್ಲೇ ವಾಸಿಸಲು ನಿರ್ಧಾರಮಾಡಿದರು. ಆದರೆ ಜೋಸೆಫ್ ಕುಲದವರ ಪ್ರಭಾವ ಹೆಚ್ಚಾದ ಮೇಲೆ ಅವರಿಗೆ ಗುಲಾಮರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಹೀಗೆ ಅಮೋರಿಯರು ಹರ್‍ಹೆರೆಸ್, ಅಯ್ಯಾಲೋನ್, ಶಾಲ್ಬೀಮ್ ಎಂಬ ಊರುಗಳಲ್ಲೇ ವಾಸಿಸ ದೃಢಮಾಡಿದರು. ಆದರೆ ಯೋಸೇಫ್ಯರ ಹಸ್ತವು ಭಾರವಾದ ಮೇಲೆ ಅವರಿಗೆ ದಾಸರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಅಮೋರಿಯರು ಹರ್‌ಹೆರೆಸ್ ಪರ್ವತ, ಅಯ್ಯಾಲೋನ್ ಮತ್ತು ಶಾಲ್ಬೀಮ್‌ಗಳಲ್ಲಿ ವಾಸಿಸಬೇಕೆಂದು ನಿರ್ಧರಿಸಿದರು. ತರುವಾಯ ಯೋಸೇಫ್ಯರು ಪ್ರಬಲರಾದರು. ಆಗ ಅವರು ಅಮೋರಿಯರನ್ನು ತಮ್ಮ ಗುಲಾಮರನ್ನಾಗಿ ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 1:35
8 ತಿಳಿವುಗಳ ಹೋಲಿಕೆ  

ಶಾಲಬ್ಬೀನ್, ಅಯ್ಯಾಲೋನ್, ಇತ್ಲಾ,


ಜೆಬುಲೂನಿನವನಾದ ಏಲೋನನು ಮರಣಹೊಂದಿ, ಜೆಬುಲೂನ್ ದೇಶವಾದ ಅಯ್ಯಾಲೋನಿನಲ್ಲಿ ಅವನ ಶವವನ್ನು ಸಮಾಧಿಮಾಡಿದರು.


ಯೆಹೋವ ದೇವರು ಅಮೋರಿಯರನ್ನು ಇಸ್ರಾಯೇಲರ ಕೈಯಲ್ಲಿ ಒಪ್ಪಿಸಿದ ಆ ದಿನದಲ್ಲಿ ಯೆಹೋಶುವನು ಯೆಹೋವ ದೇವರ ಸಂಗಡ ಮಾತನಾಡಿ ಇಸ್ರಾಯೇಲಿನ ಮುಂದೆ ಹೀಗೆ ಹೇಳಿದನು, “ಸೂರ್ಯನೇ ನೀನು ಗಿಬ್ಯೋನಿನ ಮೇಲೆ ನಿಲ್ಲು; ಚಂದ್ರನೇ, ನೀನು ಅಯ್ಯಾಲೋನ್ ಕಣಿವೆಯಲ್ಲಿ ಸ್ಥಿರವಾಗಿ ನಿಲ್ಲು.”


ಬೆನ್ ಡೆಕೆರ್ ಮಾಕಾಚ್, ಶಾಲ್ಬೀಮ್, ಬೇತ್ ಷೆಮೆಷ್, ಏಲೋನ್ ಹಾಗು ಬೇತ್ ಹಾನಾನ್‌ಗಳಲ್ಲಿ ಅಧಿಕಾರಿ.


ಅಮೋರಿಯರು ದಾನ್ಯರನ್ನು ತಗ್ಗಿನಲ್ಲಿ ಇಳಿಯಗೊಡದೆ, ಬೆಟ್ಟಗಳಿಗೆ ಓಡಿಸಿಬಿಟ್ಟರು


ಹೀಗೆ ಅಮೋರಿಯರ ಮೇರೆಯು ಅಕ್ರಬ್ಬೀಮನ್ನು ಹಿಡಿದು ಸೆಲ ಬಂಡೆಯಿಂದ ಮೇಲಕ್ಕೆ ವಿಸ್ತರಿಸಿಕೊಂಡಿದೆ.


ಇಸ್ರಾಯೇಲರು ಸಂಹರಿಸದೆ ಉಳಿಸಿದ್ದ ಅವರ ಮಕ್ಕಳನ್ನೂ ಸೊಲೊಮೋನನು ಇಂದಿನವರೆಗೂ ದಾಸತ್ವಕ್ಕಾಗಿ ನೇಮಿಸಿದನು.


ಏಲೋನ್, ತಿಮ್ನಾ, ಎಕ್ರೋನ್,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು