Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 1:6 - ಕನ್ನಡ ಸಮಕಾಲಿಕ ಅನುವಾದ

6 ಆದರೆ ಅದೋನೀಬೆಜೆಕನು ಓಡಿ ಹೋದದ್ದರಿಂದ, ಅವನನ್ನು ಹಿಂದಟ್ಟಿ ಹಿಡಿದು, ಅವನ ಕೈಕಾಲುಗಳ ಹೆಬ್ಬೆರಳುಗಳನ್ನು ಕತ್ತರಿಸಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅದೋನೀಬೆಜೆಕನು ಓಡಿಹೋಗಲು ಅವನನ್ನು ಹಿಂದಟ್ಟಿ ಹಿಡಿದು ಅವನ ಕೈಕಾಲುಗಳ ಹೆಬ್ಬೆರಳುಗಳನ್ನು ಕತ್ತರಿಸಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅದೋನೀಬೆಜೆಕನು ಅಲ್ಲಿಂದ ಓಡಿಹೋಗುತ್ತಿರುವಾಗ ಅವನನ್ನು ಹಿಂದಟ್ಟಿ ಹಿಡಿದು ಅವನ ಕೈಕಾಲುಗಳ ಹೆಬ್ಬೆರಳುಗಳನ್ನು ಕತ್ತರಿಸಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅದೋನೀಬೆಜೆಕನು ಓಡಿಹೋಗಲು ಅವನನ್ನು ಹಿಂದಟ್ಟಿ ಹಿಡಿದು ಅವನ ಕೈಕಾಲುಗಳ ಹೆಬ್ಬೆರಳುಗಳನ್ನು ಕತ್ತರಿಸಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಬೆಜೆಕ್‌ನ ಅರಸನು ತಪ್ಪಿಸಿಕೊಳ್ಳಲು ಪ್ರಯತ್ನ ಮಾಡಿದನು. ಆದರೆ ಯೆಹೂದ್ಯರು ಅವನನ್ನು ಬೆನ್ನಟ್ಟಿ ಹಿಡಿದು ಅವನ ಕೈಕಾಲುಗಳ ಹೆಬ್ಬೆರಳುಗಳನ್ನು ಕತ್ತರಿಸಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 1:6
12 ತಿಳಿವುಗಳ ಹೋಲಿಕೆ  

ತರುವಾಯ ನೀನು ಅದನ್ನು ವಧಿಸಿ, ಅದರ ರಕ್ತವನ್ನು ಆರೋನನ ಮತ್ತು ಅವನ ಪುತ್ರರ ಬಲಗಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆಟ್ಟಿಗೂ ಹಚ್ಚಿ, ಆ ರಕ್ತವನ್ನು ಬಲಿಪೀಠದ ಸುತ್ತಲೂ ಚಿಮುಕಿಸಬೇಕು.


ಅವರು ಬೆಜೆಕಿನಲ್ಲಿ ಅರಸನಾದ ಅದೋನೀಬೆಜೆಕನನ್ನು ಸಂಧಿಸಿ, ಅವನ ವಿರೋಧವಾಗಿ ಯುದ್ಧಮಾಡಿ, ಕಾನಾನ್ಯರನ್ನೂ ಪೆರಿಜೀಯರನ್ನೂ ಕೊಂದುಹಾಕಿದರು.


ಆಗ ಅದೋನೀಬೆಜೆಕನು, “ನಾನು ಕೈಕಾಲುಗಳ ಹೆಬ್ಬೆರಳುಗಳನ್ನು ಕತ್ತರಿಸಿಬಿಟ್ಟ ಎಪ್ಪತ್ತು ಮಂದಿ ಅರಸರು, ನನ್ನ ಮೇಜಿನ ಕೆಳಗೆ ಬೀಳುವ ಚೂರುಗಳನ್ನು ಕೂಡಿಸಿಕೊಂಡು ತಿನ್ನುತ್ತಿದ್ದರು. ನಾನು ಅವರಿಗೆ ಮಾಡಿದಂತೆಯೇ, ದೇವರು ನನಗೆ ಮಾಡಿದ್ದಾರೆ,” ಎಂದನು. ಅವರು ಅವನನ್ನು ಯೆರೂಸಲೇಮಿಗೆ ತೆಗೆದುಕೊಂಡು ಬಂದರು. ಅಲ್ಲಿ ಅವನು ಮರಣಹೊಂದಿದನು.


ಆಗ ಯೆಹೋವ ದೇವರು ಮೋಶೆಗೆ, “ಈಜಿಪ್ಟಿನವರನ್ನೂ ಅವರ ರಥಗಳ ಕುದುರೆಯ ಸವಾರರನ್ನೂ ಸಮುದ್ರವು ಮುಳುಗಿಸುವಂತೆ ಸಮುದ್ರದ ಮೇಲೆ ಕೈಚಾಚು,” ಎಂದರು.


ಹಲ್ಲಿಗೆ ಹಲ್ಲು, ಕೈಗೆ ಕೈಯನ್ನು, ಕಾಲಿಗೆ ಕಾಲನ್ನು,


ಅಲ್ಲಿ ಕಾಲೇಬನು, “ಕಿರ್ಯತ್ ಸೇಫೆರನ್ನು ದಾಳಿಮಾಡಿ ತೆಗೆದುಕೊಳ್ಳುವವನಿಗೆ ನನ್ನ ಮಗಳಾದ ಅಕ್ಸಾ ಎಂಬಾಕೆಯನ್ನು ಮದುವೆ ಮಾಡಿಕೊಡುತ್ತೇನೆ,” ಎಂದು ಹೇಳಿದ್ದನು.


ಅರಸನಾದ ಅಹಷ್ವೇರೋಷನ ಸಮಸ್ತ ಪ್ರಾಂತಗಳ ಆಯಾ ಪಟ್ಟಣಗಳಲ್ಲಿರುವ ಎಲ್ಲಾ ಯೆಹೂದ್ಯರು ಇದನ್ನು ಮಾಡಲು ನೇಮಿಸಿದ ದಿನವು, ಹನ್ನೆರಡನೆಯ ತಿಂಗಳಾದ ಆದಾರ್ ಮಾಸದ ಹದಿಮೂರನೆಯ ದಿನವಾಗಿತ್ತು.


ನಮ್ಮ ಗುರಾಣಿಯಾಗಿರುವ ಯೆಹೋವ ದೇವರೇ, ನನ್ನ ಜನರು ಮರೆಯದ ಹಾಗೆ ಅವರು ಉಳಿದಿರಲಿ. ನಿಮ್ಮ ಪರಾಕ್ರಮದಿಂದ ಅವರನ್ನು ದಂಡಿಸಿರಿ.


ದೇವರು ಅಧಿಪತಿಗಳಿಗೆ ಶಿಸ್ತನ್ನು ನೀಡಿ, ಅವರನ್ನು ದಾರಿಯಿಲ್ಲದ ಕಾಡಿನಲ್ಲಿ ಅಲೆಯುವಂತೆ ಮಾಡಿದರು.


ಅಪರಾಧದ ಅರಸರನ್ನು ಸಂಕೋಲೆಗಳಿಂದಲೂ, ಪ್ರಮುಖರನ್ನು ಕಬ್ಬಿಣದ ಬೇಡಿಗಳಿಂದಲೂ ಬಂಧಿಸಲಿ.


“ಆದ್ದರಿಂದ ಯೆಹೋವ ದೇವರು ಹೀಗೆ ಹೇಳುತ್ತಾರೆ: ಪ್ರತಿಯೊಬ್ಬನು ತನ್ನ ಸಹೋದರನಿಗೂ, ಪ್ರತಿ ಮನುಷ್ಯನು ತನ್ನ ನೆರೆಯವನಿಗೂ ಬಿಡುಗಡೆಯನ್ನು ಸಾರುವುದರಲ್ಲಿ ನೀವು ನನಗೆ ಕಿವಿಗೊಡಲಿಲ್ಲ. ಇಗೋ, ನಾನು ಖಡ್ಗ, ಬರ, ವ್ಯಾಧಿ ಇವುಗಳಿಗಾಗಿಯೇ ನಿಮಗೆ ಬಿಡುಗಡೆಯನ್ನು ಸಾರುತ್ತೇನೆ ಎಂದು ಯೆಹೋವ ದೇವರು ಹೇಳುತ್ತಾರೆ ಮತ್ತು ಭೂಮಿಯ ಎಲ್ಲಾ ರಾಜ್ಯಗಳಿಗೆ ನಿಮ್ಮನ್ನೂ ತಿರಸ್ಕಾರ ಹೊಂದುವಂತೆ ಮಾಡುವೆನು.


ಸುತ್ತಲೂ ಅದಕ್ಕೆ ವಿರೋಧವಾಗಿ ಆರ್ಭಟಿಸಿರಿ; ಅದರ ಬುರುಜುಗಳು ಬಿದ್ದು ಹೋದವು; ಅದರ ಪೌಳಿಗೋಡೆಯನ್ನು ಕೆಡವಲಾಯಿತು. ಅದು ಯೆಹೋವ ದೇವರ ಪ್ರತಿದಂಡನೆ; ಆದ್ದರಿಂದ ನೀವೂ ಅದಕ್ಕೆ ಮುಯ್ಯಿತೀರಿಸಿರಿ. ಅದು ಇತರರಿಗೆ ಮಾಡಿದ ಹಾಗೆಯೇ ಅದಕ್ಕೆ ಮಾಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು