Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 1:9 - ಕನ್ನಡ ಸಮಕಾಲಿಕ ಅನುವಾದ

9 ತರುವಾಯ ಯೆಹೂದ ಗೋತ್ರದವರು ಬೆಟ್ಟದಲ್ಲಿಯೂ ದಕ್ಷಿಣದಲ್ಲಿಯೂ ತಗ್ಗಿನಲ್ಲಿಯೂ ವಾಸಿಸಿದ ಕಾನಾನ್ಯರಿಗೆ ವಿರೋಧವಾಗಿ ಯುದ್ಧಮಾಡುವುದಕ್ಕೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ತರುವಾಯ ಯೆಹೂದ್ಯರು ಹೋಗಿ ಪರ್ವತಪ್ರದೇಶ, ದಕ್ಷಿಣಸೀಮೆ ಹಾಗೂ ಕಣಿವೆ ಪ್ರದೇಶಗಳಲ್ಲಿದ್ದ ಕಾನಾನ್ಯರೊಡನೆ ಯುದ್ಧಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅನಂತರ ಅವರು ಪರ್ವತಪ್ರದೇಶ, ದಕ್ಷಿಣಸೀಮೆ ಮತ್ತು ತಗ್ಗುಪ್ರದೇಶ ಇವುಗಳಿಗೆ ಹೋಗಿ ಅಲ್ಲಿದ್ದ ಕಾನಾನ್ಯರೊಡನೆ ಯುದ್ಧಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ತರುವಾಯ ಅವರು ಹೋಗಿ ಪರ್ವತಪ್ರದೇಶ, ದಕ್ಷಿಣ ಸೀಮೆ, ಇಳಕಲಿನ ಪ್ರದೇಶ ಇವುಗಳಲ್ಲಿದ್ದ ಕಾನಾನ್ಯರೊಡನೆ ಯುದ್ಧಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ತರುವಾಯ ಯೆಹೂದ್ಯರು ಉಳಿದಿರುವ ಕಾನಾನ್ಯರೊಂದಿಗೆ ಯುದ್ಧಮಾಡಲು ಹೋದರು. ಆ ಕಾನಾನ್ಯರು ಬೆಟ್ಟಪ್ರದೇಶ, ನೆಗೆವ್ ಮತ್ತು ಪಶ್ಚಿಮದ ಇಳಕಲಿನ ಪ್ರದೇಶದಲ್ಲಿ ವಾಸ ಮಾಡಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 1:9
7 ತಿಳಿವುಗಳ ಹೋಲಿಕೆ  

ಆ ಕಾಲದಲ್ಲಿ ಯೆಹೋಶುವನು ಬಂದು ಬೆಟ್ಟದ ದೇಶವಾದ ಹೆಬ್ರೋನಿನಲ್ಲಿಯೂ, ದೆಬೀರಿನಲ್ಲಿಯೂ, ಅನಾಬಿನಲ್ಲಿಯೂ, ಯೆಹೂದದ ಸಕಲ ಬೆಟ್ಟಗಳಲ್ಲಿಯೂ ಇಸ್ರಾಯೇಲ್ ಪ್ರಾಂತದ ಬೆಟ್ಟಗಳಲ್ಲಿಯೂ ಇದ್ದ ಅನಾಕ್ಯರನ್ನು ಕಡಿದುಬಿಟ್ಟು, ಅವರನ್ನೂ, ಅವರ ಪಟ್ಟಣಗಳನ್ನೂ ಪೂರ್ಣವಾಗಿ ನಾಶಮಾಡಿದನು.


ಅನಂತರ ಯೆಹೋಶುವನು ಸಮಸ್ತ ಇಸ್ರಾಯೇಲರ ಸಂಗಡ ಎಗ್ಲೋನಿನಿಂದ ಹೆಬ್ರೋನಿಗೆ ಹೊರಟುಹೋಗಿ, ಅದರ ಮೇಲೆ ಯುದ್ಧಮಾಡಿದನು.


ಅಬ್ರಾಮನು ಪ್ರಯಾಣಮಾಡಿ, ನೆಗೆವ ಕಡೆಗೆ ಹೊರಟನು.


ಯೆಹೂದ ಗೋತ್ರದವರು ಯೆರೂಸಲೇಮಿನವರ ಮೇಲೆ ಯುದ್ಧಮಾಡಿ, ಅಲ್ಲಿದ್ದವರನ್ನು ಖಡ್ಗದಿಂದ ಸಂಹರಿಸಿ, ಪಟ್ಟಣವನ್ನು ಬೆಂಕಿಯಿಂದ ಸುಟ್ಟುಬಿಟ್ಟರು.


ಯೆಹೂದ ಗೋತ್ರದವರು ಪೂರ್ವದಲ್ಲಿ ಕಿರ್ಯತ್ ಅರ್ಬ ಎಂಬ ಹೆಸರಿದ್ದ ಹೆಬ್ರೋನಿನಲ್ಲಿ ವಾಸವಾಗಿದ್ದ ಕಾನಾನ್ಯರ ಮೇಲೆ ಹೋಗಿ ಶೇಷೈ, ಅಹೀಮನ್, ತಲ್ಮೈರನ್ನು ಸೋಲಿಸಿದರು.


ಇಳಿಜಾರಿನ ಪ್ರದೇಶ, ಬೆಟ್ಟದ ಪ್ರದೇಶ, ತಪ್ಪಲು ಪ್ರದೇಶ, ಮರುಭೂಮಿ ಹಾಗೂ ದಕ್ಷಿಣ ಪ್ರಾಂತ್ಯ ಇವುಗಳನ್ನು ಆಳುತ್ತಿದ್ದ ಹಿತ್ತಿಯ, ಅಮೋರಿಯ, ಕಾನಾನ್, ಪೆರಿಜೀಯ, ಹಿವ್ವಿಯ ಹಾಗೂ ಯೆಬೂಸಿಯ ಅರಸರನ್ನೂ ಸೋಲಿಸಿ, ಅವರ ನಾಡುಗಳನ್ನು ಇಸ್ರಾಯೇಲ್ ಕುಲಗಳಿಗೆ ಶಾಶ್ವತ ಸೊತ್ತಾಗಿ ಕೊಟ್ಟನು. ಆ ಅರಸರ ಪಟ್ಟಿ ಹೀಗಿದೆ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು