Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 10:18 - ಕನ್ನಡ ಸಮಕಾಲಿಕ ಅನುವಾದ

18 ಆಗ ಗಿಲ್ಯಾದಿನ ಜನರೂ, ಪ್ರಧಾನರೂ ಒಬ್ಬರಿಗೊಬ್ಬರು, “ಯಾವನು ಅಮ್ಮೋನಿಯರ ಮೇಲೆ ಯುದ್ಧಮಾಡಲಾರಂಭಿಸುವನೋ, ಅವನು ಗಿಲ್ಯಾದಿನ ನಿವಾಸಿಗಳಿಗೆಲ್ಲಾ ತಲೆಯಾಗಿರುವನು,” ಎಂದು ಮಾತನಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಗಿಲ್ಯಾದಿನ ಜನರೂ ಅಧಿಪತಿಗಳೂ, “ನಮ್ಮಲ್ಲಿ ಅಮ್ಮೋನಿಯರೊಡನೆ ಯುದ್ಧಕ್ಕೆ ಕೈಹಾಕುವವನು ಯಾರು? ಅಂಥವನನ್ನು ಗಿಲ್ಯಾದಿನವರೆಲ್ಲರ ಮೇಲೆ ನಾಯಕನನ್ನಾಗಿ ಮಾಡುವೆವು” ಎಂದು ತಮ್ಮ ತಮ್ಮೊಳಗೆ ಮಾತನಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಗಿಲ್ಯಾದಿನ ಜನರು ಹಾಗು ಅಧಿಪತಿಗಳು, “ನಮ್ಮಲ್ಲಿ ಅಮ್ಮೋನಿಯರೊಡನೆ ಯುದ್ಧಕ್ಕೆ ಕೈಹಾಕಬಲ್ಲವನಾರು? ಅಂಥವನನ್ನು ಗಿಲ್ಯಾದಿನವರೆಲ್ಲರ ಮೇಲೆ ನಾಯಕನನ್ನಾಗಿ ಮಾಡಬಹುದಲ್ಲಾ,” ಎಂದು ತಮ್ಮ ತಮ್ಮೊಳಗೆ ಮಾತಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಗಿಲ್ಯಾದಿನ ಜನರೂ ಅಧಿಪತಿಗಳೂ - ನಮ್ಮಲ್ಲಿ ಅಮ್ಮೋನಿಯರೊಡನೆ ಯುದ್ಧಕ್ಕೆ ಕೈಹಾಕುವವನಾವನು? ಅಂಥವನನ್ನು ಗಿಲ್ಯಾದಿನವರೆಲ್ಲರ ಮೇಲೆ ನಾಯಕನನ್ನಾಗಿ ಮಾಡೇವಲ್ಲಾ ಎಂದು ತಮ್ಮ ತಮ್ಮೊಳಗೆ ಮಾತಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಗಿಲ್ಯಾದ್ ಕ್ಷೇತ್ರದಲ್ಲಿ ವಾಸಮಾಡುತ್ತಿದ್ದ ಜನನಾಯಕರು, “ಅಮ್ಮೋನಿಯರ ಮೇಲೆ ಧಾಳಿಮಾಡಲು ಯಾರು ನಮ್ಮ ಮುಂದಾಳಾಗುತ್ತಾರೋ ಆ ವ್ಯಕ್ತಿಯೇ ಗಿಲ್ಯಾದ್ ಕ್ಷೇತ್ರದಲ್ಲಿ ವಾಸಮಾಡುವ ಜನರೆಲ್ಲರಿಗೂ ನಾಯಕನಾಗುತ್ತಾನೆ” ಎಂದು ಸಾರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 10:18
10 ತಿಳಿವುಗಳ ಹೋಲಿಕೆ  

ಹಾಗೆಯೇ ಯೆಫ್ತಾಹನು ಗಿಲ್ಯಾದಿನ ಹಿರಿಯರ ಸಂಗಡ ಹೋದನು. ಆಗ ಜನರು ಅವನನ್ನು ತಮ್ಮ ಮೇಲೆ ನಾಯಕನನ್ನಾಗಿಯೂ, ಸೈನ್ಯಾಧಿಪತಿಯಾಗಿಯೂ ಇಟ್ಟುಕೊಂಡರು. ಯೆಫ್ತಾಹನು ತನ್ನ ಮಾತುಗಳನ್ನೆಲ್ಲಾ ಮಿಚ್ಪೆಯಲ್ಲಿ ಯೆಹೋವ ದೇವರ ಮುಂದೆ ಹೇಳಿದನು.


ಅವರ ರಾಜ್ಯಕ್ಕೆ ಪ್ರಮುಖರನ್ನು ಕರೆಯುವರು. ಆದರೆ ಅಲ್ಲಿ ಯಾರೂ ಇರುವುದಿಲ್ಲ. ಅವಳ ಪ್ರಭುಗಳು ಇಲ್ಲದಂತಾಗುವರು.


ಇಸ್ರಾಯೇಲರು, “ಏರಿ ಬಂದ ಈ ಮನುಷ್ಯನನ್ನು ಕಂಡಿರೋ? ಇಸ್ರಾಯೇಲನ್ನು ಪ್ರತಿಭಟಿಸಿ ಏರಿ ಬಂದಿದ್ದಾನಲ್ಲ. ಯಾವನು ಇವನನ್ನು ಕೊಂದು ಬಿಡುವನೋ, ಅವನನ್ನು ಅರಸನು ಬಹಳ ಐಶ್ವರ್ಯವಂತನನ್ನಾಗಿ ಮಾಡಿ, ಅವನಿಗೆ ತನ್ನ ಮಗಳನ್ನು ಕೊಟ್ಟು ಮದುವೆ ಮಾಡಿಸುವನು ಮತ್ತು ಅವನ ತಂದೆಯ ಮನೆಯನ್ನು ಇಸ್ರಾಯೇಲರಲ್ಲಿ ತೆರಿಗೆಯಿಂದ ವಿಮೋಚಿಸುವನು,” ಎಂದರು.


ಯೆಫ್ತಾಹನು ಇಸ್ರಾಯೇಲರಿಗೆ ಆರು ವರ್ಷ ನ್ಯಾಯತೀರಿಸಿದನು. ಅನಂತರ ಗಿಲ್ಯಾದ್ಯನಾದ ಯೆಫ್ತಾಹನು ಮರಣಹೊಂದಿದನು. ಅವನ ಶವವನ್ನು ಗಿಲ್ಯಾದ್ ಪಟ್ಟಣಗಳ ಒಂದರಲ್ಲಿ ಸಮಾಧಿಮಾಡಿದರು.


ಯೆಹೋಶುವನು ಮರಣ ಹೊಂದಿದ ಬಳಿಕ ಇಸ್ರಾಯೇಲರು, “ಕಾನಾನ್ಯರೊಡನೆ ಯುದ್ಧಕ್ಕೆ ನಮ್ಮಲ್ಲಿ ಮೊದಲು ಯಾರು ಹೋಗಬೇಕು?” ಎಂದು ಯೆಹೋವ ದೇವರನ್ನು ಕೇಳಿದರು.


ಅಮ್ಮೋನಿಯರು ಏಕವಾಗಿ ಕೂಡಿಕೊಂಡು, ಗಿಲ್ಯಾದಿನಲ್ಲಿ ಪಾಳೆಯಮಾಡಿಕೊಂಡರು. ಆದರೆ ಇಸ್ರಾಯೇಲರು ಏಕವಾಗಿ ಕೂಡಿ, ಮಿಚ್ಪೆಯಲ್ಲಿ ಪಾಳೆಯಮಾಡಿಕೊಂಡರು.


ಗಿಲ್ಯಾದ್ಯನಾದ ಯೆಫ್ತಾಹನು ಬಲಿಷ್ಠನಾದ ಪರಾಕ್ರಮಶಾಲಿಯಾಗಿದ್ದನು. ಅವನು ಒಬ್ಬ ವೇಶ್ಯೆಯಲ್ಲಿ ಹುಟ್ಟಿದ ಗಿಲ್ಯಾದನ ಮಗನು.


ಕೆಲವು ದಿವಸಗಳಾದ ಮೇಲೆ ಅಮ್ಮೋನಿಯರು ಇಸ್ರಾಯೇಲಿನ ಮೇಲೆ ಯುದ್ಧಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು