Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 10:4 - ಕನ್ನಡ ಸಮಕಾಲಿಕ ಅನುವಾದ

4 ಅವನಿಗೆ ಮೂವತ್ತು ಕತ್ತೆಗಳ ಮೇಲೆ ಸವಾರಿ ಮಾಡುವ ಮೂವತ್ತು ಮಂದಿ ಪುತ್ರರು ಇದ್ದರು. ಗಿಲ್ಯಾದ್ ದೇಶದಲ್ಲಿ ಮೂವತ್ತು ಪಟ್ಟಣಗಳು ಅವರ ಅಧಿಕಾರದಲ್ಲಿದ್ದವು. ಅವುಗಳಿಗೆ ಈ ದಿನದವರೆಗೂ ಹವೋತ್ ಯಾಯೀರ್ ಎಂಬ ಹೆಸರಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಇವನಿಗೆ ಮೂವತ್ತು ಮಂದಿ ಮಕ್ಕಳಿದ್ದರು. ಇವರಿಗೆ ಮೂವತ್ತು ಸವಾರಿ ಕತ್ತೆಗಳೂ, ಗಿಲ್ಯಾದ್ ದೇಶದಲ್ಲಿ ಮೂವತ್ತು ಊರುಗಳೂ ಇದ್ದವು. ಅವುಗಳಿಗೆ ಇಂದಿನ ವರೆಗೂ ಯಾಯೀರನ ಗ್ರಾಮಗಳೆಂದು ಹೆಸರಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಇವನಿಗೆ ಮೂವತ್ತು ಮಂದಿ ಮಕ್ಕಳಿದ್ದರು. ಇವರಿಗೆ ಮೂವತ್ತು ಸವಾರಿ ಕತ್ತೆಗಳೂ ಗಿಲ್ಯಾದ್ ದೇಶದಲ್ಲಿ ಮೂವತ್ತು ಊರುಗಳೂ ಇದ್ದವು. ಅವುಗಳಿಗೆ ಇಂದಿನವರೆಗೂ ಯಾಯೀರನ ಗ್ರಾಮಗಳೆಂದು ಹೆಸರಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಇವನಿಗೆ ಮೂವತ್ತು ಮಂದಿ ಮಕ್ಕಳಿದ್ದರು. ಇವರಿಗೆ ಮೂವತ್ತು ಸವಾರೀ ಕತ್ತೆಗಳೂ ಗಿಲ್ಯಾದ್ ದೇಶದಲ್ಲಿ ಮೂವತ್ತು ಊರುಗಳೂ ಇದ್ದವು. ಅವುಗಳಿಗೆ ಇಂದಿನವರೆಗೂ ಯಾಯೀರಿನ ಗ್ರಾಮಗಳೆಂದು ಹೆಸರಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯಾಯೀರನಿಗೆ ಮೂವತ್ತು ಗಂಡುಮಕ್ಕಳಿದ್ದರು. ಅವರು ಮೂವತ್ತು ಕತ್ತೆಗಳ ಮೇಲೆ ಸವಾರಿ ಮಾಡುತ್ತಿದ್ದರು. ಆ ಮೂವತ್ತು ಮಂದಿ ಗಂಡುಮಕ್ಕಳು ಗಿಲ್ಯಾದ್ ಪ್ರದೇಶದಲ್ಲಿ ಮೂವತ್ತು ಪಟ್ಟಣಗಳನ್ನು ತಮ್ಮ ಅಧೀನದಲ್ಲಿಟ್ಟುಕೊಂಡಿದ್ದರು. ಅವುಗಳಿಗೆ ಇಂದಿನವರೆಗೂ ಯಾಯೀರನ ಪಟ್ಟಣಗಳೆಂದು ಹೆಸರಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 10:4
8 ತಿಳಿವುಗಳ ಹೋಲಿಕೆ  

ಆದರೆ ಮನಸ್ಸೆಯ ಮಗ ಯಾಯೀರನು ಹೋಗಿ, ಅವರ ನಗರಗಳನ್ನು ತೆಗೆದುಕೊಂಡು, ಅವುಗಳಿಗೆ ಯಾಯೀರನ ಹಳ್ಳಿಗಳೆಂದು ಹೆಸರಿಟ್ಟನು.


ಅವನಿಗೆ ಎಪ್ಪತ್ತು ಕತ್ತೆಗಳ ಮೇಲೆ ಏರುವ ನಾಲ್ವತ್ತು ಮಂದಿ ಮಕ್ಕಳೂ, ಮೂವತ್ತು ಮಂದಿ ಮೊಮ್ಮಕ್ಕಳೂ ಇದ್ದರು. ಅವನು ಇಸ್ರಾಯೇಲಿಗೆ ಎಂಟು ವರ್ಷ ನ್ಯಾಯತೀರಿಸಿದನು.


“ಬಿಳಿ ಕತ್ತೆಗಳ ಮೇಲೆ ಸವಾರಿ ಮಾಡುವವರೇ, ರತ್ನಗಂಬಳಿಗಳ ಮೇಲೆ ಕುಳಿತಿರುವವರೇ, ಮಾರ್ಗದಲ್ಲಿ ನಡೆಯುವವರೇ, ಗಾನಮಾಡಿರಿ.


ಮನಸ್ಸೆಯ ಮಗ ಯಾಯೀರನು ಅರ್ಗೋಬಿನ ದೇಶವನ್ನೆಲ್ಲಾ ಗೆಷೂರ್ಯರ, ಮಾಕಾತ್ಯರ ಮೇರೆಯವರೆಗೆ ಸ್ವಾಧೀನಮಾಡಿಕೊಂಡು, ಆ ಬಾಷಾನಿಗೆ ತನ್ನ ಹೆಸರಿನ ಪ್ರಕಾರ ಇಂದಿನವರೆಗೆ ಹವ್ವೋತ್ ಯಾಯೀರೆಂದು ಹೆಸರಿಟ್ಟನು.


ಅವನ ತರುವಾಯ ಗಿಲ್ಯಾದ್ಯನಾದ ಯಾಯೀರನು ಎದ್ದು ಇಸ್ರಾಯೇಲರನ್ನು ಇಪ್ಪತ್ತೆರಡು ವರುಷ ನ್ಯಾಯತೀರಿಸಿದನು.


ಯಾಯೀರನು ಮರಣಹೊಂದಿ, ಕಾಮೋನಿನಲ್ಲಿ ಸಮಾಧಿಯಾದನು.


ಅರಸನು ಚೀಬನಿಗೆ, “ಇವು ಏಕೆ,” ಎಂದನು. ಅದಕ್ಕೆ ಚೀಬನು, “ಕತ್ತೆಗಳನ್ನು ಅರಸನ ಮನೆಯವರು ಸವಾರಿಮಾಡುವುದಕ್ಕೆ, ಆ ರೊಟ್ಟಿಗಳೂ, ಬೇಸಿಗೆ ಕಾಲದ ಫಲಗಳೂ ಜನರಿಗೆ ತಿನ್ನುವುದಕ್ಕೆ, ದ್ರಾಕ್ಷಾರಸವು ಮರುಭೂಮಿಯಲ್ಲಿ ದಣಿದವರು ಕುಡಿಯುವುದಕ್ಕೆ,” ಎಂದನು.


ಚೀಯೋನ್ ಪುತ್ರಿಯೇ, ಮಹಾ ಉಲ್ಲಾಸಪಡು. ಯೆರೂಸಲೇಮಿನ ಪುತ್ರಿಯೇ ಆರ್ಭಟಿಸು, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ. ಆತನು ನೀತಿವಂತನಾಗಿಯೂ ಜಯಹೊಂದಿದವನಾಗಿಯೂ, ದೀನನಾಗಿಯೂ ಕತ್ತೆಯ ಮೇಲೆ ಹೌದು, ಕತ್ತೆಮರಿಯ ಮೇಲೆ ಕೂತುಕೊಂಡು ಬರುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು