Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 10:6 - ಕನ್ನಡ ಸಮಕಾಲಿಕ ಅನುವಾದ

6 ಇಸ್ರಾಯೇಲರು ಪುನಃ ಯೆಹೋವ ದೇವರ ಮುಂದೆ ಕೆಟ್ಟತನವನ್ನು ಮಾಡಿ, ಬಾಳನನ್ನೂ, ಅಷ್ಟೋರೆತನ್ನೂ, ಅರಾಮ್ ದೇಶದ ದೇವರುಗಳನ್ನೂ, ಸೀದೋನಿನ ದೇವರುಗಳನ್ನೂ, ಮೋವಾಬಿನ ದೇವರುಗಳನ್ನೂ, ಅಮ್ಮೋನಿಯರ ದೇವರುಗಳನ್ನೂ ಫಿಲಿಷ್ಟಿಯರ ದೇವರುಗಳನ್ನೂ ಸೇವಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಇಸ್ರಾಯೇಲರು ಪುನಃ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದರು. ಅವರು ಆತನನ್ನು ಬಿಟ್ಟು ಬಾಳ್, ಅಷ್ಟೋರೆತ್ ಎಂಬ ದೇವತೆಗಳನ್ನೂ, ಅರಾಮ್ಯರು, ಚೀದೋನ್ಯರು, ಮೋವಾಬ್ಯರು, ಅಮ್ಮೋನಿಯರು, ಫಿಲಿಷ್ಟಿಯರು ಇವರ ದೇವತೆಗಳನ್ನೂ ಪೂಜಿಸತೊಡಗಿದರು. ಯೆಹೋವನನ್ನು ಮರೆತು ಆತನನ್ನು ಆರಾಧಿಸುವುದನ್ನು ಬಿಟ್ಟೇಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಇಸ್ರಯೇಲರು ಇನ್ನೊಮ್ಮೆ ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಗಳಾದರು; ಅವರು ಸರ್ವೇಶ್ವರನನ್ನು ಬಿಟ್ಟು ಬಾಳ್, ಅಷ್ಟೋರೆತ್ ಎಂಬ ದೇವತೆಗಳನ್ನು ಮತ್ತು ಅರಾಮ್ಯರು, ಚೀದೋನ್ಯರು, ಮೋವಾಬ್ಯರು, ಅಮ್ಮೋನಿಯರು, ಫಿಲಿಷ್ಟಿಯರು ಇವರ ದೇವತೆಗಳನ್ನೂ ಪೂಜಿಸತೊಡಗಿದರು. ಸರ್ವೇಶ್ವರನನ್ನಾದರೋ ಬಿಟ್ಟೇಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಇಸ್ರಾಯೇಲ್ಯರು ತಿರಿಗಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದರು; ಅವರು ಆತನನ್ನು ಬಿಟ್ಟು ಬಾಳ್, ಅಷ್ಟೋರೆತ್ ಎಂಬ ದೇವತೆಗಳನ್ನೂ ಅರಾಮ್ಯರು, ಚೀದೋನ್ಯರು, ಮೋವಾಬ್ಯರು, ಅಮ್ಮೋನಿಯರು, ಫಿಲಿಷ್ಟಿಯರು ಇವರ ದೇವತೆಗಳನ್ನೂ ಪೂಜಿಸಹತ್ತಿ ಯೆಹೋವನನ್ನು ಬಿಟ್ಟೇ ಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಇಸ್ರೇಲರು ಮತ್ತೆ ದೇವರಿಗೆ ವಿರೋಧವಾಗಿ ದುಷ್ಕೃತ್ಯಗಳನ್ನು ಮಾಡಿದರು. ಅವರು ಸುಳ್ಳುದೇವರಾದ ಬಾಳನನ್ನೂ ಸುಳ್ಳುದೇವತೆಯಾದ ಅಷ್ಟೋರೆತಳನ್ನೂ ಪೂಜಿಸತೊಡಗಿದರು. ಅವರು ಅರಾಮ್ಯರ, ಚೀದೋನ್ಯರ, ಮೋವಾಬ್ಯರ, ಅಮ್ಮೋನಿಯರ ಮತ್ತು ಫಿಲಿಷ್ಟಿಯರ ದೇವರುಗಳನ್ನು ಸಹ ಪೂಜಿಸಿದರು. ಇಸ್ರೇಲರು ಯೆಹೋವನನ್ನು ಮರೆತುಬಿಟ್ಟು ಆತನ ಸೇವೆಯನ್ನು ನಿಲ್ಲಿಸಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 10:6
32 ತಿಳಿವುಗಳ ಹೋಲಿಕೆ  

ಇದಲ್ಲದೆ ಯೆರೂಸಲೇಮಿನ ಮುಂದೆ ವಿಘ್ನ ಬೆಟ್ಟದ ದಕ್ಷಿಣದಲ್ಲಿದ್ದ ಸೀದೋನ್ಯರ ಅಸಹ್ಯಕರವಾದ ಅಷ್ಟೋರೆತಿಗೂ, ಮೋವಾಬ್ಯರ ಅಸಹ್ಯಕರವಾದ ಕೆಮೋಷನಿಗೂ, ಅಮ್ಮೋನ್ಯರ ಅಸಹ್ಯಕರವಾದ ಮಿಲ್ಕೋಮನಿಗೂ ಇಸ್ರಾಯೇಲಿನ ಅರಸನಾದ ಸೊಲೊಮೋನನು ಕಟ್ಟಿಸಿದ ಉನ್ನತ ಪೂಜಾಸ್ಥಳಗಳನ್ನೂ ಯೋಷೀಯನು ಅಶುದ್ಧ ಮಾಡಿದನು.


ಏಕೆಂದರೆ ಅವನ ತಂದೆಯಾದ ದಾವೀದನ ಹಾಗೆ ನನ್ನ ಕಟ್ಟಳೆಗಳನ್ನೂ, ನನ್ನ ನ್ಯಾಯಗಳನ್ನೂ ಕೈಗೊಳ್ಳುವುದಕ್ಕೂ, ನನ್ನ ದೃಷ್ಟಿಗೆ ಮೆಚ್ಚಿಕೆಯಾದದ್ದನ್ನು ಮಾಡುವುದಕ್ಕೂ, ಸೊಲೊಮೋನನೂ ಅವನ ಮನೆಯವರೂ ನನ್ನ ಮಾರ್ಗಗಳಲ್ಲಿ ನಡೆಯದೆ, ನನ್ನನ್ನು ಬಿಟ್ಟು ಸೀದೋನ್ಯರ ದೇವತೆಯಾದ ಅಷ್ಟೋರೆತಳನ್ನೂ, ಮೋವಾಬ್ಯರ ದೇವರಾದ ಕೆಮೋಷನ್ನೂ, ಅಮ್ಮೋನಿಯರ ದೇವರಾದ ಮಿಲ್ಕೋಮನ್ನೂ ಆರಾಧಿಸಿದ್ದಾರೆ.


ಆಗ ಸೊಲೊಮೋನನು ಮೋವಾಬಿನ ಅಸಹ್ಯಕರವಾದ ಕೆಮೋಷಿಗೋಸ್ಕರವೂ, ಅಮ್ಮೋನ್ಯರ ಅಸಹ್ಯಕರವಾದ ಮೋಲೆಕನಿಗೋಸ್ಕರವೂ ಯೆರೂಸಲೇಮಿನ ಪೂರ್ವದಲ್ಲಿರುವ ಬೆಟ್ಟದಲ್ಲಿ ಎತ್ತರವಾದ ಸ್ಥಳವನ್ನು ಕಟ್ಟಿಸಿದನು.


ಸೊಲೊಮೋನನು ಸೀದೋನ್ಯರ ದೇವತೆಯಾದ ಅಷ್ಟೋರೆತಳನ್ನೂ, ಅಮ್ಮೋನ್ಯರ ಅಸಹ್ಯಕರವಾದ ಮಿಲ್ಕೋಮನ್ನೂ ಹಿಂಬಾಲಿಸಿದನು.


“ನನ್ನ ಜನರು ಎರಡು ದುಷ್ಕೃತ್ಯಗಳನ್ನು ಮಾಡಿದ್ದಾರೆ. ಜೀವವುಳ್ಳ ನೀರಿನ ಬುಗ್ಗೆಯಾಗಿರುವ ನನ್ನನ್ನು ಬಿಟ್ಟು, ತಮಗೆ ನೀರು ಹಿಡಿಯಲಾರದ ಒಡಕ ತೊಟ್ಟಿಗಳನ್ನೂ ಕೆತ್ತಿದ್ದಾರೆ.


ಅವರ ವಿಗ್ರಹಗಳಿಗೆ ಆರಾಧನೆ ಮಾಡಿದರು; ಅವು ಅವರಿಗೆ ಉರುಲಿನಂತಾದವು.


ಇದಲ್ಲದೆ ಅವರು ತಮ್ಮ ದೇವರಾದ ಯೆಹೋವ ದೇವರ ಸಮಸ್ತ ಆಜ್ಞೆಗಳನ್ನು ಬಿಟ್ಟುಬಿಟ್ಟು, ತಮಗೆ ತಾವೇ ಎರಡು ಎರಕದ ಕರುಗಳ ಮೂರ್ತಿಗಳನ್ನು ಮಾಡಿಕೊಂಡರು. ಅವರು ಅಶೇರ ಸ್ತಂಭವನ್ನು ನಿಲ್ಲಿಸಿ, ಆಕಾಶದ ಸೈನ್ಯಕ್ಕೆಲ್ಲಾ ಅಡ್ಡಬಿದ್ದು, ಬಾಳನನ್ನು ಸೇವಿಸಿ ತಮ್ಮ ಪುತ್ರಪುತ್ರಿಯರನ್ನೂ ಬೆಂಕಿಯಲ್ಲಿ ಬಲಿಕೊಟ್ಟರು.


ಫಿಲಿಷ್ಟಿಯರ ಅಧಿಪತಿಗಳು ತಮ್ಮ ದೇವರಾದ ದಾಗೋನನಿಗೆ ದೊಡ್ಡ ಬಲಿಯನ್ನು ಅರ್ಪಿಸುವುದಕ್ಕೂ ಸಂತೋಷಪಡುವುದಕ್ಕೂ ಕೂಡಿಬಂದರು. “ನಮ್ಮ ದೇವರು ನಮ್ಮ ಶತ್ರುವಾದ ಸಂಸೋನನನ್ನು ನಮ್ಮ ಕೈಗೆ ಒಪ್ಪಿಸಿಕೊಟ್ಟನು,” ಎಂದು ಅವರು ಹೇಳಿಕೊಂಡರು.


ಕೊನೆಗೆ ಆಹಾಜನು, “ಅರಾಮಿನ ಅರಸರ ದೇವರುಗಳು ಅವರಿಗೆ ಸಹಾಯ ಕೊಟ್ಟದ್ದರಿಂದ, ಅವು ನನಗೆ ಸಹ ಸಹಾಯ ಕೊಡುವ ಹಾಗೆ ನಾನು ಅವುಗಳಿಗೆ ಬಲಿಯನ್ನು ಅರ್ಪಿಸುತ್ತೇನೆ,” ಎಂದುಕೊಂಡು ತನ್ನನ್ನು ಸೋಲಿಸಿದ ದಮಸ್ಕದವರ ದೇವರುಗಳಿಗೆ ಬಲಿಗಳನ್ನು ಅರ್ಪಿಸಿದನು. ಆದರೆ ಆ ದೇವರುಗಳು ಅವನನ್ನೂ, ಸಮಸ್ತ ಇಸ್ರಾಯೇಲರನ್ನೂ ಬೀಳುವಂತೆ ಮಾಡಿದವು.


ನೆಬಾಟನ ಮಗ ಯಾರೊಬ್ಬಾಮನ ಪಾಪಗಳಲ್ಲಿ ನಡೆಯುವುದು ಅವನಿಗೆ ಅಲ್ಪವಾಗಿತ್ತು. ಅವನು ಸೀದೋನ್ಯರ ಅರಸನಾದ ಎತ್ಬಾಳನ ಮಗಳಾದ ಈಜೆಬೆಲಳನ್ನು ಮದುವೆಯಾಗಿ ಬಾಳನನ್ನು ಸೇವಿಸಿ ಅವನಿಗೆ ಅಡ್ಡಬಿದ್ದನು.


ಫಿಲಿಷ್ಟಿಯರು ದೇವರ ಮಂಜೂಷವನ್ನು ದಾಗೋನನ ಗುಡಿಗೆ ತೆಗೆದುಕೊಂಡುಹೋಗಿ, ದಾಗೋನನ ಪಕ್ಕದಲ್ಲಿಟ್ಟರು.


ಇಸ್ರಾಯೇಲರು ತಿರುಗಿ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದ್ದರಿಂದ, ಯೆಹೋವ ದೇವರು ಅವರನ್ನು ನಾಲ್ವತ್ತು ವರ್ಷದವರೆಗೆ ಫಿಲಿಷ್ಟಿಯರ ಕೈಯಲ್ಲಿ ಒಪ್ಪಿಸಿಕೊಟ್ಟರು.


ಇಸ್ರಾಯೇಲರು ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದರು. ಆದ್ದರಿಂದ ಯೆಹೋವ ದೇವರು ಅವರನ್ನು ಏಳು ವರ್ಷ ಮಿದ್ಯಾನ್ಯರ ಕೈಗೆ ಒಪ್ಪಿಸಿಕೊಟ್ಟರು.


ಏಹೂದನು ಮರಣಹೊಂದಿದನಂತರ ಇಸ್ರಾಯೇಲರು ತಿರುಗಿ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದರು.


ಇಸ್ರಾಯೇಲರು ಯೆಹೋವ ದೇವರ ಮುಂದೆ ಕೆಟ್ಟದ್ದನ್ನು ಮಾಡಿ, ತಮ್ಮ ದೇವರಾದ ಯೆಹೋವ ದೇವರನ್ನು ಮರೆತು, ಬಾಳನನ್ನೂ ಅಶೇರನನ್ನೂ ಸೇವಿಸಿದರು.


ಯೆಶುರೂನು ಎಂಬ ಇಸ್ರಾಯೇಲರು ಕೊಬ್ಬಿ ಹೋದರು. ಅವರು ಹೊಟ್ಟೆ ತುಂಬ ಚೆನ್ನಾಗಿ ತಿಂದು ದಪ್ಪವಾದರು. ಅವರು ತಮ್ಮನ್ನು ಸೃಷ್ಟಿಮಾಡಿದ ದೇವರನ್ನು ಬಿಟ್ಟು, ತಮ್ಮ ರಕ್ಷಣೆಯ ಬಂಡೆಯನ್ನು ಅಲಕ್ಷ್ಯ ಮಾಡಿದರು.


ಆಗ ಯೆಹೋವ ದೇವರು ಮೋಶೆಗೆ, “ನೀನು ಮೃತನಾಗಿ, ನಿನ್ನ ಪಿತೃಗಳ ಸಂಗಡ ಸೇರುವಿ. ಈ ಜನರು ದೇವದ್ರೋಹಿಗಳಾಗಿ, ಅವರು ಪ್ರವೇಶಿಸುವ ದೇಶದ ಅನ್ಯದೇವರುಗಳನ್ನು ಅನುಸರಿಸಿ ಪೂಜೆ ಮಾಡಿ, ನನ್ನನ್ನು ಬಿಟ್ಟು ನಾನು ಅವರ ಸಂಗಡ ಮಾಡಿದ ಒಡಂಬಡಿಕೆಯನ್ನು ಮೀರುವರು.


ಆ ದಿವಸದಲ್ಲಿ ನಾನು ಅವರ ಮೇಲೆ ಕೋಪಗೊಂಡು ಅವರನ್ನು ಬಿಟ್ಟುಬಿಟ್ಟು, ನನ್ನ ಮುಖವನ್ನು ಅವರಿಗೆ ಮರೆಮಾಡುವೆನು. ವಿರೋಧಿಗಳು ಅವರನ್ನು ನುಂಗಿಬಿಡುವರು. ಬಹಳ ಕೇಡುಗಳೂ, ಇಕ್ಕಟ್ಟುಗಳೂ ಅವರಿಗೆ ಸಂಭವಿಸುವುದು. ಆ ದಿವಸದಲ್ಲಿ ಅವರು, ‘ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದ ಕಾರಣ ನಮಗೆ ಕೇಡುಗಳು,’ ಎಂದು ಹೇಳುವರು.


ಗಿಲ್ಯಾದಿನ ಅರ್ಧ ಭಾಗ, ಬಾಷಾನಿನಲ್ಲಿರುವ ಓಗ್ ರಾಜನ ಪಟ್ಟಣಗಳಾದ ಅಷ್ಟಾರೋತ್, ಎದ್ರೈ, ಇವೆಲ್ಲವೂ ಮನಸ್ಸೆಯ ಮಗ ಮಾಕೀರನ ಗೋತ್ರಕ್ಕೆ ಅವರ ಕುಟುಂಬಗಳ ಪ್ರಕಾರ ಮಾಕೀರನ ಮಕ್ಕಳಲ್ಲಿ ಅರ್ಧ ಜನರಿಗೆ ಕೊಟ್ಟನು.


ಯಾಯೀರನು ಮರಣಹೊಂದಿ, ಕಾಮೋನಿನಲ್ಲಿ ಸಮಾಧಿಯಾದನು.


ಆದರೆ ನಿನ್ನ ದೇವರಾದ ಕೆಮೋಷನು ನಿನ್ನ ಮುಂದೆ ಹೊರಡಿಸುವವರ ದೇಶವನ್ನು ನೀನು ಸ್ವಾಧೀನ ಮಾಡಿಕೊಳ್ಳುವುದಿಲ್ಲವೋ? ಹಾಗೆಯೇ ನಮ್ಮ ದೇವರಾದ ಯೆಹೋವ ದೇವರು ನಮ್ಮ ಮುಂದೆ ಹೊರಡಿಸುವವರ ದೇಶವನ್ನೆಲ್ಲಾ ನಾವು ಸ್ವಾಧೀನ ಮಾಡಿಕೊಳ್ಳುವೆವು.


ಸೀದೋನೇ ಮತ್ತು ಸಮುದ್ರದ ಕೋಟೆಯೇ ನಾಚಿಕೆಪಡಿರಿ. ಏಕೆಂದರೆ ಇದೇ ಸಮುದ್ರದ ಘೋಷಣೆಯಾಗಿದೆ: “ನಾವು ಪ್ರಸವವೇದನೆ ಪಡುವುದಿಲ್ಲ, ಹೆರುವುದಿಲ್ಲ, ಇಲ್ಲವೆ ಪುತ್ರಪುತ್ರಿಯರನ್ನು ಸಾಕಿ ಸಲಹುವುದಿಲ್ಲ,”


“ ‘ನಿನ್ನ ಕೈಕೆಲಸದ ವಸ್ತುಗಳು ಅಪಾರವಾಗಿದ್ದುದರಿಂದ ಅರಾಮ್ಯರು ನಿನ್ನವರಾಗಿ ವ್ಯಾಪಾರಮಾಡಿ ಕೆಂಪರಳು, ರಕ್ತಾಂಬರ, ಕಸೂತಿಯ ವಸ್ತ್ರ, ನಾರುಬಟ್ಟೆ, ಹವಳ, ಮಾಣಿಕ್ಯ ಮೊದಲಾದ ಸರಕುಗಳನ್ನು ನಿನಗೆ ತಂದು ಸುರಿದರು.


ನಿನ್ನ ಸಹೋದರನಾಗಲಿ, ಮಗನಾಗಲಿ, ಮಗಳಾಗಲಿ, ಪ್ರೀತಿಯ ಹೆಂಡತಿಯಾಗಲಿ, ಪ್ರಾಣ ಸ್ನೇಹಿತನಾಗಲಿ, “ನೀವೂ, ನಿಮ್ಮ ಪಿತೃಗಳೂ ತಿಳಿಯದ ಬೇರೆ ದೇವರುಗಳನ್ನು


ನೀವು ಅವರಿಗೆ ಸಮ್ಮತಿಸಬಾರದು. ಅವರ ಮಾತನ್ನು ಕೇಳಬಾರದು. ನೀವು ಅವರನ್ನು ಕನಿಕರಿಸಬಾರದು ಇಲ್ಲವೆ ಬಚ್ಚಿಡಬಾರದು.


ಗಿದ್ಯೋನನ ಮರಣದ ತರುವಾಯ, ಇಸ್ರಾಯೇಲರು ದೇವದ್ರೋಹಿಗಳಾಗಿ ಬಾಳನ ಪ್ರತಿಮೆಗಳನ್ನು ಪೂಜೆ ಮಾಡುತ್ತಾ ಬಾಳ್ ಬೆರೀತನ್ನು ತಮಗೆ ದೇವರಾಗಿ ಮಾಡಿಕೊಂಡರು.


“ಪೂರ್ವದಲ್ಲಿ ನಾನು ನಿನ್ನ ನೊಗವನ್ನು ಮುರಿದು, ನಿನ್ನ ಬಂಧನಗಳನ್ನು ಹರಿದುಬಿಟ್ಟೆನು. ಆದರೆ, ‘ನಾನು ಸೇವೆಮಾಡುವುದಿಲ್ಲ!’ ಎಂದು ನೀನು ಹೇಳಿದೆ. ಒಂದೊಂದು ಎತ್ತರವಾದ ಗುಡ್ಡದ ಮೇಲೆಯೂ, ಒಂದೊಂದು ಹಸುರಾದ ಮರದ ಕೆಳಗೂ ನೀನು ವೇಶ್ಯೆಯಾಗಿ ನಡೆದಿದ್ದೀ.


ಅವರು ಅದರಲ್ಲಿ ಸೇರಿ ಅದನ್ನು ಸ್ವಾಧೀನಪಡಿಸಿಕೊಂಡರು. ಆದರೆ ಅವರು ನಿಮ್ಮ ಮಾತಿಗೆ ಕಿವಿಗೊಡಲಿಲ್ಲ. ನಿಮ್ಮ ನಿಯಮದಲ್ಲಿ ನಡೆದುಕೊಳ್ಳಲಿಲ್ಲ. ಮಾಡಬೇಕೆಂದು ನೀವು ಅವರಿಗೆ ಆಜ್ಞಾಪಿಸಿದ್ದನ್ನೆಲ್ಲಾ ಮಾಡಲಿಲ್ಲ. ಆದ್ದರಿಂದ ಈ ಕೇಡನ್ನೆಲ್ಲಾ ಅವರಿಗೆ ಸಂಭವಿಸುವಂತೆ ಮಾಡಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು