Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 10:8 - ಕನ್ನಡ ಸಮಕಾಲಿಕ ಅನುವಾದ

8 ಇವರು ಆ ವರ್ಷ ಮೊದಲುಗೊಂಡು ಹದಿನೆಂಟು ವರ್ಷ ಯೊರ್ದನಿಗೆ ಆಚೆ ಗಿಲ್ಯಾದಿನಲ್ಲಿ ಅಮೋರಿಯರ ದೇಶದಲ್ಲಿರುವ ಇಸ್ರಾಯೇಲರನ್ನೆಲ್ಲಾ ಬಾಧಿಸಿ ಕುಂದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಇವರು ಅಂದಿನಿಂದ ಹದಿನೆಂಟು ವರ್ಷಗಳ ವರೆಗೆ ಯೊರ್ದನಿನ ಆಚೆ ಗಿಲ್ಯಾದಿನಲ್ಲಿದ್ದ ಇಸ್ರಾಯೇಲರನ್ನು ಬಹಳವಾಗಿ ಪೀಡಿಸುತ್ತಾ, ಕುಗ್ಗಿಸುತ್ತಾ ಇದ್ದರು. ಈ ದೇಶವು ಮೊದಲು ಅಮೋರಿಯರದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಇವರು ಆ ವರ್ಷದಿಂದ ಹದಿನೆಂಟು ವರ್ಷಗಳವರೆಗೆ ಜೋರ್ಡನಿನ ಆಚೆ ಗಿಲ್ಯಾದಿನಲ್ಲಿದ್ದ ಇಸ್ರಯೇಲರನ್ನು ಬಹಳವಾಗಿ ಪೀಡಿಸುತ್ತಾ ಅವರ ಮೇಲೆ ದಬ್ಬಾಳಿಕೆ ನಡೆಸಿದರು. ಈ ನಾಡು ಮೊದಲು ಅಮೋರಿಯರದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಇವರು ಆ ವರುಷದಿಂದ ಹದಿನೆಂಟು ವರುಷಗಳವರೆಗೆ ಯೊರ್ದನಿನ ಆಚೆ ಗಿಲ್ಯಾದಿನಲ್ಲಿದ್ದ ಇಸ್ರಾಯೇಲ್ಯರನ್ನು ಬಹಳವಾಗಿ ಪೀಡಿಸುತ್ತಾ ಕುಗ್ಗಿಸುತ್ತಾ ಇದ್ದರು. ಈ ದೇಶವು ಮೊದಲು ಅಮೋರಿಯರದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅದೇ ವರ್ಷ ಅವರು ಜೋರ್ಡನ್ ನದಿಯ ಪೂರ್ವಕ್ಕಿರುವ ಗಿಲ್ಯಾದಿನಲ್ಲಿದ್ದ ಇಸ್ರೇಲರನ್ನು ನಾಶಮಾಡಿದರು. ಅದು ಮೊದಲು ಅಮೋರಿಯರ ಪ್ರದೇಶವಾಗಿತ್ತು. ಇಸ್ರೇಲರು ಹದಿನೆಂಟು ವರ್ಷಗಳವರೆಗೆ ಕಷ್ಟವನ್ನು ಅನುಭವಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 10:8
7 ತಿಳಿವುಗಳ ಹೋಲಿಕೆ  

ಆದರೆ, “ಸಮಾಧಾನ, ಸುರಕ್ಷಿತ,” ಎಂದು ಜನರು ಹೇಳುತ್ತಿರುವಾಗಲೇ, ಅವರ ಮೇಲೆ ವಿನಾಶವು ಗರ್ಭಿಣಿಗೆ ಪ್ರಸವವೇದನೆ ಬರುವಂತೆ ಫಕ್ಕನೆ ಬರುವುದು. ಅವರು ಹೇಗೂ ತಪ್ಪಿಸಿಕೊಳ್ಳಲಾರರು.


ಎತ್ತರವಾದ ಗೋಡೆಯ ಒಂದು ಭಾಗವು ಉಬ್ಬಿಕೊಂಡು ತಟ್ಟನೆ ಕ್ಷಣಮಾತ್ರದಲ್ಲಿ ಕಳಚಿ ಬೀಳುವ ಹಾಗೆ ನಿಮ್ಮ ಅಪರಾಧವು ನಿಮಗೆ ಅಪಾಯಕರವಾಗಿರುವುದು.


ಯಾಯೀರನು ಮರಣಹೊಂದಿ, ಕಾಮೋನಿನಲ್ಲಿ ಸಮಾಧಿಯಾದನು.


ಅವರು ಯೆಹೋವ ದೇವರನ್ನು ಬಿಟ್ಟುಬಿಟ್ಟದ್ದರಿಂದ, ಯೆಹೋವ ದೇವರು ಇಸ್ರಾಯೇಲ್ಯರ ಮೇಲೆ ಕೋಪವುಳ್ಳವರಾಗಿ ಅವರನ್ನು ಫಿಲಿಷ್ಟಿಯರ ಮತ್ತು ಅಮ್ಮೋನಿಯರ ಕೈಗೆ ಮಾರಿಬಿಟ್ಟರು.


ಇದಲ್ಲದೆ ಅಮ್ಮೋನನ ಮಕ್ಕಳು ಯೆಹೂದ ಹಾಗೂ ಬೆನ್ಯಾಮೀನರಿಗೆ ವಿರೋಧವಾಗಿಯೂ, ಎಫ್ರಾಯೀಮರ ಮನೆಗೆ ವಿರೋಧವಾಗಿಯೂ ಯುದ್ಧಮಾಡುವುದಕ್ಕೆ ಯೊರ್ದನನ್ನು ದಾಟಿ ಬಂದರು. ಹೀಗೆ ಇಸ್ರಾಯೇಲಿಗೆ ಬಹು ಸಂಕಟವಾಯಿತು.


ಮನಸ್ಸೆಯ ಮಗ ಮಾಕೀರನ ಮಕ್ಕಳು ಗಿಲ್ಯಾದ್ ದೇಶಕ್ಕೆ ಹೋಗಿ, ಅದನ್ನು ತೆಗೆದುಕೊಂಡು, ಅದರಲ್ಲಿದ್ದ ಅಮೋರಿಯರನ್ನು ಹೊರಡಿಸಿದರು.


ಮಿದ್ಯಾನ್ಯರ ಕೈ ಇಸ್ರಾಯೇಲಿಗೆ ವಿರೋಧವಾಗಿ ಬಲವಾದ್ದರಿಂದ ಇಸ್ರಾಯೇಲರು ಮಿದ್ಯಾನ್ಯರ ನಿಮಿತ್ತ ತಮಗೆ ಪರ್ವತಗಳಲ್ಲಿ ಇರುವ ಬಂಡೆಯ ಬಿರುಕುಗಳನ್ನೂ, ಗವಿಗಳನ್ನೂ, ಬಲವಾದ ಸ್ಥಾನಗಳನ್ನೂ ಮಾಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು