Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 11:1 - ಕನ್ನಡ ಸಮಕಾಲಿಕ ಅನುವಾದ

1 ಗಿಲ್ಯಾದ್ಯನಾದ ಯೆಫ್ತಾಹನು ಬಲಿಷ್ಠನಾದ ಪರಾಕ್ರಮಶಾಲಿಯಾಗಿದ್ದನು. ಅವನು ಒಬ್ಬ ವೇಶ್ಯೆಯಲ್ಲಿ ಹುಟ್ಟಿದ ಗಿಲ್ಯಾದನ ಮಗನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಗಿಲ್ಯಾದ್ಯನಾದ ಯೆಪ್ತಾಹನು ಮಹಾಪರಾಕ್ರಮಿಯಾಗಿದ್ದನು. ಅವನು ಗಿಲ್ಯಾದನಿಂದ ಒಬ್ಬ ವೇಶ್ಯೆಗೆ ಹುಟ್ಟಿದವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಗಿಲ್ಯಾದ್ಯನಾದ ಯೆಪ್ತಾಹನು ಒಬ್ಬ ಮಹಾಪರಾಕ್ರಮಿ. ಈತ ಗಿಲ್ಯಾದನಿಗೆ ಒಬ್ಬ ಉಪಪತ್ನಿಯಲ್ಲಿ ಹುಟ್ಟಿದವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಗಿಲ್ಯಾದ್ಯನಾದ ಯೆಪ್ತಾಹನು ಮಹಾಪರಾಕ್ರವಿುಯಾಗಿದ್ದನು. ಅವನು ಗಿಲ್ಯಾದನಿಗೆ ಒಬ್ಬ ಸೂಳೆಯಲ್ಲಿ ಹುಟ್ಟಿದವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಫ್ತಾಹನು ಗಿಲ್ಯಾದ್ ಕುಲದವನಾಗಿದ್ದನು. ಅವನು ಪರಾಕ್ರಮಶಾಲಿಯಾಗಿದ್ದನು. ಆದರೆ ಯೆಫ್ತಾಹನು ಒಬ್ಬ ವೇಶ್ಯೆಯ ಮಗನಾಗಿದ್ದನು. ಅವನ ತಂದೆಯ ಹೆಸರು ಗಿಲ್ಯಾದ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 11:1
6 ತಿಳಿವುಗಳ ಹೋಲಿಕೆ  

ಇನ್ನೂ ಏನು ಹೇಳಬೇಕು? ಗಿಡಿಯೋನ್, ಬಾರಾಕ್, ಸಂಸೋನ್, ಎಪ್ತಾಹ, ದಾವೀದ, ಸಮುಯೇಲ ಮತ್ತು ಪ್ರವಾದಿಗಳ ವಿಷಯವಾಗಿ ಹೇಳುವುದಕ್ಕೆ ನನಗೆ ಸಮಯ ಸಾಲದು.


ಅರಾಮಿನ ಅರಸನ ಸೈನ್ಯಾಧಿಪತಿ ನಾಮಾನನು ತನ್ನ ಯಜಮಾನನ ಮುಂದೆ ಮಹಾಪುರುಷನಾಗಿಯೂ, ಘನವುಳ್ಳವನಾಗಿಯೂ ಇದ್ದನು. ಏಕೆಂದರೆ ಅವನಿಂದ ಯೆಹೋವ ದೇವರು ಅರಾಮ್ಯರಿಗೆ ಬಿಡುಗಡೆಯನ್ನು ಉಂಟುಮಾಡಿದ್ದರು. ಇದಲ್ಲದೆ ಅವನು ಪರಾಕ್ರಮಶಾಲಿಯಾಗಿದ್ದನು. ಆದರೆ ಅವನು ಕುಷ್ಠರೋಗಿಯಾಗಿದ್ದನು.


ಆಗ ಯೆಹೋವ ದೇವರ ದೂತನು ಗಿದ್ಯೋನನಿಗೆ ಪ್ರತ್ಯಕ್ಷವಾಗಿ ಅವನಿಗೆ, “ಬಲಿಷ್ಠನಾದ ಪರಾಕ್ರಮಶಾಲಿಯೇ, ಯೆಹೋವ ದೇವರು ನಿನ್ನ ಸಂಗಡ ಇದ್ದಾರೆ,” ಎಂದನು.


ಆಗ ಗಿಲ್ಯಾದಿನ ಜನರೂ, ಪ್ರಧಾನರೂ ಒಬ್ಬರಿಗೊಬ್ಬರು, “ಯಾವನು ಅಮ್ಮೋನಿಯರ ಮೇಲೆ ಯುದ್ಧಮಾಡಲಾರಂಭಿಸುವನೋ, ಅವನು ಗಿಲ್ಯಾದಿನ ನಿವಾಸಿಗಳಿಗೆಲ್ಲಾ ತಲೆಯಾಗಿರುವನು,” ಎಂದು ಮಾತನಾಡಿಕೊಂಡರು.


ಇದಲ್ಲದೆ ಗಿಲ್ಯಾದನ ಹೆಂಡತಿ ಅವನಿಗೆ ಪುತ್ರರನ್ನು ಪಡೆದಳು. ಅವನ ಹೆಂಡತಿಯ ಮಕ್ಕಳು ದೊಡ್ಡವರಾದಾಗ ಅವರು ಯೆಫ್ತಾಹನಿಗೆ, “ನೀನು ನಮ್ಮ ತಂದೆಯ ಮನೆಯ ಬಾಧ್ಯಸ್ಥನಲ್ಲ. ಏಕೆಂದರೆ ನೀನು ಪರಸ್ತ್ರೀಯ ಮಗನು,” ಎಂದು ಹೇಳಿ ಅವನನ್ನು ಹೊರಗೆ ಹಾಕಿದರು.


ಆಗ ಯೆಹೋವ ದೇವರು ಯೆರುಬ್ಬಾಳನನ್ನೂ, ಬಾರಾಕನನ್ನೂ, ಯೆಫ್ತಾಹನನ್ನೂ, ಸಮುಯೇಲನನ್ನೂ ಕಳುಹಿಸಿ, ನಿಮ್ಮ ಸಮಸ್ತ ದಿಕ್ಕಿನಲ್ಲಿರುವ ನಿಮ್ಮ ಶತ್ರುಗಳ ಕೈಯಿಂದ ಬಿಡಿಸಿ, ನೀವು ಸುರಕ್ಷಿತವಾಗಿ ವಾಸಿಸುವಂತೆ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು