ನ್ಯಾಯಸ್ಥಾಪಕರು 11:13 - ಕನ್ನಡ ಸಮಕಾಲಿಕ ಅನುವಾದ13 ಅಮ್ಮೋನಿಯ ಅರಸನು ಯೆಫ್ತಾಹನ ದೂತರಿಗೆ, “ಇಸ್ರಾಯೇಲರು ಈಜಿಪ್ಟಿನಿಂದ ಬರುವಾಗ, ಅರ್ನೋನಿನಿಂದ ಯಬ್ಬೋಕಿನವರೆಗೂ ಮತ್ತು ಯೊರ್ದನಿನವರೆಗೂ ಇರುವ ನನ್ನ ದೇಶವನ್ನು ತೆಗೆದುಕೊಂಡರು. ಆದ್ದರಿಂದ ಈಗ ಅದನ್ನು ನನಗೆ ಸಮಾಧಾನವಾಗಿ ತಿರುಗಿಕೊಡು,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆ ಅರಸನು ದೂತರಿಗೆ, “ಇಸ್ರಾಯೇಲರು ಐಗುಪ್ತದಿಂದ ಬಂದಾಗ ಅರ್ನೋನಿನಿಂದ ಯಬ್ಬೋಕ್ ಮತ್ತು ಯೊರ್ದನ್ ಹೊಳೆಗಳವರೆಗೂ ಇದ್ದ ನನ್ನ ದೇಶವನ್ನು ವಶಪಡಿಸಿಕೊಂಡರಲ್ಲಾ; ನೀನು ಈಗ ಅದನ್ನು ಸಮಾಧಾನದಿಂದ ಹಿಂದಕ್ಕೆ ಕೊಡು” ಎಂದು ಹೇಳಿ ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಆ ಅರಸನು ದೂತರಿಗೆ, “ಇಸ್ರಯೇಲರು ಈಜಿಪ್ಟಿನಿಂದ ಬಂದಾಗ ಅರ್ನೋನಿನಿಂದ ಯಬ್ಬೋಕ್, ಜೋರ್ಡನ್ ನದಿಗಳವರೆಗೂ ಇದ್ದು ನನ್ನ ದೇಶವನ್ನು ಕಸಿದುಕೊಂಡರಲ್ಲವೆ? ನೀನು ಈಗ ಅದನ್ನು ಸಮಾಧಾನದಿಂದ ಹಿಂದಕ್ಕೆ ಕೊಡು,” ಎಂದು ಹೇಳಿ ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಆ ಅರಸನು ದೂತರಿಗೆ - ಇಸ್ರಾಯೇಲ್ಯರು ಐಗುಪ್ತದಿಂದ ಬಂದಾಗ ಅರ್ನೋನಿನಿಂದ ಯಬ್ಬೋಕ್, ಯೊರ್ದನ್ ಹೊಳೆಗಳವರೆಗೂ ಇದ್ದ ನನ್ನ ದೇಶವನ್ನು ಕಸಕೊಂಡರಲ್ಲಾ; ನೀನು ಈಗ ಅದನ್ನು ಸಮಾಧಾನದಿಂದ ಹಿಂದಕ್ಕೆ ಕೊಡು ಎಂದು ಹೇಳಿ ಕಳುಹಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಅಮ್ಮೋನಿಯರ ಅರಸನು ಯೆಫ್ತಾಹನ ದೂತರಿಗೆ, “ಇಸ್ರೇಲರು ಈಜಿಪ್ಟಿನಿಂದ ಬಂದಾಗ ನಮ್ಮ ಪ್ರದೇಶವನ್ನು ತೆಗೆದುಕೊಂಡರು; ಆದ್ದರಿಂದ ಈಗ ನಾವು ಇಸ್ರೇಲರೊಂದಿಗೆ ಯುದ್ಧ ಮಾಡುತ್ತಿದ್ದೇವೆ. ಅವರು ಅರ್ನೋನ್ ನದಿಯಿಂದ ಯಬ್ಬೋಕ್ ನದಿಯವರೆಗೂ ಜೋರ್ಡನ್ ನದಿಯವರೆಗಿನ ಭೂಮಿಯನ್ನೂ ತೆಗೆದುಕೊಂಡಿದ್ದಾರೆ. ಈಗ ನಮ್ಮ ಭೂಮಿಯನ್ನು ನಮಗೆ ಶಾಂತಿಯಿಂದ ಹಿಂದಿರುಗಿಸಬೇಕು” ಎಂದನು. ಅಧ್ಯಾಯವನ್ನು ನೋಡಿ |