ನ್ಯಾಯಸ್ಥಾಪಕರು 11:19 - ಕನ್ನಡ ಸಮಕಾಲಿಕ ಅನುವಾದ19 “ಇಸ್ರಾಯೇಲರು ಹೆಷ್ಬೋನನ್ನು ಆಳಿದ ಅಮೋರಿಯರ ಅರಸನಾದಂಥ ಸೀಹೋನನ ಬಳಿಗೆ ದೂತರನ್ನು ಕಳುಹಿಸಿ, ‘ನಮ್ಮ ಸ್ಥಳಕ್ಕೆ ನಿನ್ನ ದೇಶವನ್ನು ನಾವು ದಾಟಿಹೋಗುವುದಕ್ಕೆ ಅಪ್ಪಣೆ ಆಗಬೇಕು,’ ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ತರುವಾಯ ಅವರು ಹೆಷ್ಬೋನನ್ನು ರಾಜಧಾನಿ ಮಾಡಿಕೊಂಡಿದ್ದ ಅಮೋರಿಯರ ಅರಸನಾದ ಸೀಹೋನನ ಬಳಿಗೆ ದೂತರನ್ನು ಕಳುಹಿಸಿ, ‘ನಿನ್ನ ದೇಶವನ್ನು ದಾಟಿ ನಮ್ಮ ದೇಶಕ್ಕೆ ಹೋಗುವುದಕ್ಕೆ ಅಪ್ಪಣೆಕೊಡು’ ಎಂದು ಅವನನ್ನು ಬೇಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಬಳಿಕ ಹೆಷ್ಬೋನನ್ನು ರಾಜಧಾನಿ ಮಾಡಿಕೊಂಡಿದ್ದ ಅಮೋರಿಯರ ಅರಸನಾದ ಸೀಹೋನನ ಬಳಿಗೆ ಅವರು ದೂತರನ್ನು ಕಳುಹಿಸಿ, “ನಿನ್ನ ದೇಶವನ್ನು ದಾಟಿ ನಮ್ಮ ಸ್ಥಳಕ್ಕೆ ಹೋಗುವುದಕ್ಕೆ ಅಪ್ಪಣೆಕೊಡು,” ಎಂದು ಅವನನ್ನು ಬೇಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ತರುವಾಯ ಅವರು ಹೆಷ್ಬೋನನ್ನು ರಾಜಧಾನಿಮಾಡಿಕೊಂಡಿದ್ದ ಅಮೋರಿಯರ ಅರಸನಾದ ಸೀಹೋನನ ಬಳಿಗೆ ದೂತರನ್ನು ಕಳುಹಿಸಿ - ನಿನ್ನ ದೇಶವನ್ನು ದಾಟಿ ನಮ್ಮ ಸ್ಥಳಕ್ಕೆ ಹೋಗುವದಕ್ಕೆ ಅಪ್ಪಣೆಕೊಡು ಎಂದು ಅವನನ್ನು ಬೇಡಿಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 “ತರುವಾಯ ಇಸ್ರೇಲರು ಅಮೋರಿಯರ ಅರಸನಾದ ಸೀಹೋನನ ಬಳಿಗೆ ದೂತರನ್ನು ಕಳುಹಿಸಿದರು. ಹೆಷ್ಬೋನ್ ಅಮೋರಿಯರ ದೇಶದ ರಾಜಧಾನಿಯಾಗಿತ್ತು. ಆ ದೂತರು ಸೀಹೋನನಿಗೆ, ‘ಇಸ್ರೇಲರು ನಿಮ್ಮ ಪ್ರದೇಶದಿಂದ ದಾಟಿಹೋಗುವುದಕ್ಕೆ ಅನುಮತಿಯನ್ನು ಕೊಡು, ನಾವು ನಮ್ಮ ದೇಶಕ್ಕೆ ಹೋಗ ಬಯಸುತ್ತೇವೆ’ ಎಂದು ಕೇಳಿದರು. ಅಧ್ಯಾಯವನ್ನು ನೋಡಿ |