ನ್ಯಾಯಸ್ಥಾಪಕರು 11:2 - ಕನ್ನಡ ಸಮಕಾಲಿಕ ಅನುವಾದ2 ಇದಲ್ಲದೆ ಗಿಲ್ಯಾದನ ಹೆಂಡತಿ ಅವನಿಗೆ ಪುತ್ರರನ್ನು ಪಡೆದಳು. ಅವನ ಹೆಂಡತಿಯ ಮಕ್ಕಳು ದೊಡ್ಡವರಾದಾಗ ಅವರು ಯೆಫ್ತಾಹನಿಗೆ, “ನೀನು ನಮ್ಮ ತಂದೆಯ ಮನೆಯ ಬಾಧ್ಯಸ್ಥನಲ್ಲ. ಏಕೆಂದರೆ ನೀನು ಪರಸ್ತ್ರೀಯ ಮಗನು,” ಎಂದು ಹೇಳಿ ಅವನನ್ನು ಹೊರಗೆ ಹಾಕಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಗಿಲ್ಯಾದನಿಗೆ ಹೆಂಡತಿಗೂ ಮಕ್ಕಳು ಹುಟ್ಟಿದ್ದರು. ಇವರು ದೊಡ್ಡವರಾದ ಮೇಲೆ ಯೆಪ್ತಾಹನಿಗೆ, “ನೀನು ಪರಸ್ತ್ರೀಯಿಂದ ಹುಟ್ಟಿದವನು; ಆದುದರಿಂದ ನಿನಗೆ ನಮ್ಮ ತಂದೆಯ ಮನೆಯಲ್ಲಿ ಬಾಧ್ಯತೆ ಸಿಕ್ಕಲಾರದು” ಎಂದು ಹೇಳಿ ಅವನನ್ನು ಹೊರಗೆ ಹಾಕಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಗಿಲ್ಯಾದನಿಗೆ ಹೆಂಡತಿಯಲ್ಲೂ ಮಕ್ಕಳು ಹುಟ್ಟಿದರು. ಇವರು ದೊಡ್ಡವರಾದ ಮೇಲೆ ಯೆಪ್ತಾಹನಿಗೆ, “ನೀನು ಪರಸ್ತ್ರೀಯಿಂದ ಹುಟ್ಟಿದವನು; ಆದುದರಿಂದ ನಿನಗೆ ನಮ್ಮ ತಂದೆಯ ಮನೆಯಲ್ಲಿ ಬಾಧ್ಯತೆ ಸಿಕ್ಕಲಾರದು,” ಎಂದು ಹೇಳಿ ಅವನನ್ನು ಹೊರಗೆ ಹಾಕಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಗಿಲ್ಯಾದನಿಗೆ ಹೆಂಡತಿಯಲ್ಲಿಯೂ ಮಕ್ಕಳು ಹುಟ್ಟಿದರು. ಇವರು ದೊಡ್ಡವರಾದ ಮೇಲೆ ಯೆಪ್ತಾಹನಿಗೆ - ನೀನು ಪರಸ್ತ್ರೀಯಿಂದ ಹುಟ್ಟಿದವನು; ಆದದರಿಂದ ನಿನಗೆ ನಮ್ಮ ತಂದೆಯ ಮನೆಯಲ್ಲಿ ಬಾಧ್ಯತೆ ಸಿಕ್ಕಲಾರದು ಎಂದು ಹೇಳಿ ಅವನನ್ನು ಹೊರಗೆ ಹಾಕಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಗಿಲ್ಯಾದನ ಹೆಂಡತಿಗೆ ಅನೇಕ ಜನ ಮಕ್ಕಳಿದ್ದರು. ಆ ಮಕ್ಕಳು ದೊಡ್ಡವರಾದ ಮೇಲೆ ಯೆಫ್ತಾಹನನ್ನು ಇಷ್ಟಪಡಲಿಲ್ಲ. ಯೆಫ್ತಾಹನು ತನ್ನ ಹುಟ್ಟೂರನ್ನು ಬಿಡುವಂತೆ ಆ ಮಕ್ಕಳು ಒತ್ತಾಯಮಾಡಿದರು. ಅವರು ಅವನಿಗೆ, “ನೀನು ನಮ್ಮ ತಂದೆಯ ಆಸ್ತಿಯಲ್ಲಿ ಯಾವ ಭಾಗವನ್ನೂ ಪಡೆಯಲಾರೆ. ನೀನು ವೇಶ್ಯೆಯ ಮಗ” ಎಂದು ಹೇಳಿದರು. ಅಧ್ಯಾಯವನ್ನು ನೋಡಿ |