ನ್ಯಾಯಸ್ಥಾಪಕರು 11:21 - ಕನ್ನಡ ಸಮಕಾಲಿಕ ಅನುವಾದ21 “ಆಗ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಸೀಹೋನನನ್ನೂ, ಅವನ ಸಕಲ ಜನರನ್ನೂ ಇಸ್ರಾಯೇಲರ ಕೈಗೆ ಒಪ್ಪಿಸಿಕೊಟ್ಟರು. ಇಸ್ರಾಯೇಲರು ಸೀಹೋನನನ್ನೂ, ಅವನ ಸಕಲ ಜನರನ್ನೂ ಹೊಡೆದುಬಿಟ್ಟರು. ಹಾಗೆಯೇ ಇಸ್ರಾಯೇಲರು ಆ ದೇಶದಲ್ಲಿ ವಾಸಿಸಿದ್ದ ಅಮೋರಿಯರ ದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಇಸ್ರಾಯೇಲರ ದೇವರಾದ ಯೆಹೋವನು ಸೀಹೋನನನ್ನೂ, ಅವನ ಜನರೆಲ್ಲರನ್ನೂ ಇಸ್ರಾಯೇಲರ ಕೈಗೆ ಒಪ್ಪಿಸಿದ್ದರಿಂದ ಅವರು ಈ ದೇಶದ ನಿವಾಸಿಗಳಾದ ಅಮೋರಿಯರನ್ನು ಹೊಡೆದು, ಅವರ ದೇಶವನ್ನೆಲ್ಲಾ ಸ್ವಾಧೀನಪಡಿಸಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಇಸ್ರಯೇಲರ ದೇವರಾದ ಸರ್ವೇಶ್ವರ ಸೀಹೋನನನ್ನೂ ಅವನ ಜನರೆಲ್ಲರನ್ನೂ ಇಸ್ರಯೇಲರ ಕೈಗೆ ಒಪ್ಪಿಸಿದ್ದರಿಂದ ಅವರು ಈ ದೇಶದ ನಿವಾಸಿಗಳಾದ ಅಮೋರಿಯರನ್ನು ಹೊಡೆದು ಅವರ ದೇಶವನ್ನೆಲ್ಲಾ ಸ್ವಾಧೀನಪಡಿಸಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಇಸ್ರಾಯೇಲ್ಯರ ದೇವರಾದ ಯೆಹೋವನು ಸೀಹೋನನನ್ನೂ ಅವನ ಜನರೆಲ್ಲರನ್ನೂ ಇಸ್ರಾಯೇಲ್ಯರ ಕೈಗೆ ಒಪ್ಪಿಸಿದ್ದರಿಂದ ಅವರು ಈ ದೇಶದ ನಿವಾಸಿಗಳಾದ ಅಮೋರಿಯರನ್ನು ಹೊಡೆದು ಅವರ ದೇಶವನ್ನೆಲ್ಲಾ ಸ್ವತಂತ್ರಿಸಿಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಆದರೆ ಇಸ್ರೇಲರ ದೇವರಾದ ಯೆಹೋವನು ಇಸ್ರೇಲರಿಗೆ ಸೀಹೋನ ಮತ್ತು ಅವನ ಜನರನ್ನು ಸೋಲಿಸಲು ಸಹಾಯ ಮಾಡಿದನು. ಆದ್ದರಿಂದ ಅಮೋರಿಯರ ಪ್ರದೇಶವು ಇಸ್ರೇಲರ ಸ್ವತ್ತಾಯಿತು. ಅಧ್ಯಾಯವನ್ನು ನೋಡಿ |