Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 11:24 - ಕನ್ನಡ ಸಮಕಾಲಿಕ ಅನುವಾದ

24 ಆದರೆ ನಿನ್ನ ದೇವರಾದ ಕೆಮೋಷನು ನಿನ್ನ ಮುಂದೆ ಹೊರಡಿಸುವವರ ದೇಶವನ್ನು ನೀನು ಸ್ವಾಧೀನ ಮಾಡಿಕೊಳ್ಳುವುದಿಲ್ಲವೋ? ಹಾಗೆಯೇ ನಮ್ಮ ದೇವರಾದ ಯೆಹೋವ ದೇವರು ನಮ್ಮ ಮುಂದೆ ಹೊರಡಿಸುವವರ ದೇಶವನ್ನೆಲ್ಲಾ ನಾವು ಸ್ವಾಧೀನ ಮಾಡಿಕೊಳ್ಳುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ನಿನ್ನ ದೇವನಾದ ಕೆಮೋಷನು ನಿನಗೆ ಕೊಡುವ ದೇಶಗಳನ್ನು ನೀನು ಸ್ವಾಧೀನಪಡಿಸಿಕೊಳ್ಳುವುದಿಲ್ಲವೋ? ಹಾಗೆಯೇ ನಮ್ಮ ದೇವರಾದ ಯೆಹೋವನು ನಮಗೆ ಒಪ್ಪಿಸಿಕೊಡುವುದನ್ನು ನಾವು ಸ್ವಾಧೀನಪಡಿಸಿಕೊಳ್ಳುವುದು ನ್ಯಾಯವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ನಿನ್ನ ದೇವನಾದ ಕೆಮೋಷನು ನಿನಗೆ ಕೊಡುವ ದೇಶಗಳನ್ನು ನೀನು ಸ್ವತಂತ್ರಿಸಿಕೊಳ್ಳುವುದಿಲ್ಲವೇ? ಹಾಗೆಯೇ ನಮ್ಮ ದೇವರಾದ ಸರ್ವೇಶ್ವರ ನಮಗೆ ಒಪ್ಪಿಸಿಕೊಡುವುದನ್ನು ನಾವು ಸ್ವತಂತ್ರಿಸಿಕೊಳ್ಳುವುದು ನ್ಯಾಯವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ನಿನ್ನ ದೇವನಾದ ಕೆಮೋಷನು ನಿನಗೆ ಕೊಡುವ ದೇಶಗಳನ್ನು ನೀನು ಸ್ವತಂತ್ರಿಸಿಕೊಳ್ಳುವದಿಲ್ಲವೋ? ಹಾಗೆಯೇ ನಮ್ಮ ದೇವರಾದ ಯೆಹೋವನು ನಮಗೆ ಒಪ್ಪಿಸಿಕೊಡುವದನ್ನು ನಾವು ಸ್ವತಂತ್ರಿಸಿಕೊಳ್ಳುವದು ನ್ಯಾಯವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ನಿಮ್ಮ ದೇವರಾದ ಕೆಮೋಷನು ನಿಮಗೆ ಕೊಟ್ಟ ಪ್ರದೇಶದಲ್ಲಿ ನೀವು ಖಂಡಿತವಾಗಿ ವಾಸಮಾಡಬಹುದು. ಹಾಗೆಯೇ ಯೆಹೋವನಾದ ನಮ್ಮ ದೇವರು ನಮಗೆ ಕೊಟ್ಟ ಪ್ರದೇಶದಲ್ಲಿ ನಾವೂ ವಾಸಮಾಡುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 11:24
16 ತಿಳಿವುಗಳ ಹೋಲಿಕೆ  

ಮೋವಾಬೇ, ನಿನಗೆ ದಿಕ್ಕಾರ! ಕೆಮೋಷಿನ ಜನವೇ ನಿಮಗೆ ದುರ್ಗತಿ ಉಂಟಾಯಿತಲ್ಲಾ! ಅವನು ತನ್ನ ಪುತ್ರರನ್ನು ದೇಶಭ್ರಷ್ಟರನ್ನಾಗಿಯೂ ತನ್ನ ಪುತ್ರಿಯರನ್ನು ಸೆರೆಯವರನ್ನಾಗಿಯೂ ಅಮೋರಿಯರ ಅರಸನಾದ ಸೀಹೋನನ ಸೆರೆಗೆ ಒಪ್ಪಿಸಿಕೊಟ್ಟನು.


ಎಲ್ಲಾ ಜನಾಂಗಗಳಲ್ಲಿ ಪ್ರತಿಯೊಬ್ಬನು ತನ್ನ ತನ್ನ ದೇವರ ಹೆಸರಿನಲ್ಲಿ ನಡೆಯುವನು. ಆದರೆ ನಾವು ನಮ್ಮ ದೇವರಾದ ಯೆಹೋವ ದೇವರ ಹೆಸರಿನಲ್ಲಿ ಎಂದೆಂದಿಗೂ ನಡೆಯುವೆವು.


ದೇವರು ಜನಾಂಗಗಳನ್ನು ಅವರ ಮುಂದೆ ಹೊರಗೆ ಹಾಕಿ, ಅವರ ಬಾಧ್ಯತೆಯನ್ನು ಹಂಚಿ, ಅವರ ಗುಡಾರಗಳಲ್ಲಿ ಇಸ್ರಾಯೇಲರನ್ನು ವಾಸಿಸುವಂತೆ ಮಾಡಿದರು.


ಆಗ ಸೊಲೊಮೋನನು ಮೋವಾಬಿನ ಅಸಹ್ಯಕರವಾದ ಕೆಮೋಷಿಗೋಸ್ಕರವೂ, ಅಮ್ಮೋನ್ಯರ ಅಸಹ್ಯಕರವಾದ ಮೋಲೆಕನಿಗೋಸ್ಕರವೂ ಯೆರೂಸಲೇಮಿನ ಪೂರ್ವದಲ್ಲಿರುವ ಬೆಟ್ಟದಲ್ಲಿ ಎತ್ತರವಾದ ಸ್ಥಳವನ್ನು ಕಟ್ಟಿಸಿದನು.


ಜೀವವುಳ್ಳ ದೇವರು ನಿಮ್ಮ ಮಧ್ಯದಲ್ಲಿರುವುದನ್ನೂ, ಅವರು ಕಾನಾನ್ಯರನ್ನೂ, ಹಿತ್ತಿಯರನ್ನೂ, ಹಿವ್ವಿಯರನ್ನೂ, ಪೆರಿಜೀಯರನ್ನೂ, ಗಿರ್ಗಾಷಿಯರನ್ನೂ, ಅಮೋರಿಯರನ್ನೂ, ಯೆಬೂಸಿಯರನ್ನೂ ನಿಮ್ಮ ಮುಂದೆ ನಿಶ್ಚಯವಾಗಿ ಓಡಿಸಿಬಿಡುವುದನ್ನೂ ನೀವು ತಿಳಿಯುವಿರಿ.


ಏಕೆಂದರೆ ಇಂಥವುಗಳನ್ನು ಮಾಡುವವರೆಲ್ಲಾ ಯೆಹೋವ ದೇವರಿಗೆ ಅಸಹ್ಯರಾಗಿದ್ದಾರೆ. ಈ ಅಸಹ್ಯಗಳ ನಿಮಿತ್ತವೇ ನಿಮ್ಮ ದೇವರಾದ ಯೆಹೋವ ದೇವರು ಅವರನ್ನು ನಿಮ್ಮ ಮುಂದೆ ಹೊರದೂಡಿಸಿಬಿಡುತ್ತಾರೆ.


ಮೋವಾಬೇ, ನೀನೇ ಅಯ್ಯೋ! ಕೆಮೋಷಿನ ಜನರು ನಾಶವಾದರು; ಏಕೆಂದರೆ ನಿನ್ನ ಗಂಡು ಹೆಣ್ಣುಮಕ್ಕಳು, ಗಡೀಪಾರಾಗಿ ಸೆರೆಯಾದರು.


ಏಕೆಂದರೆ ನಿನ್ನ ಕ್ರಿಯೆಗಳಲ್ಲಿಯೂ, ನಿನ್ನ ದ್ರವ್ಯಗಳಲ್ಲಿಯೂ ನಂಬಿಕೆ ಇಟ್ಟಿದ್ದರಿಂದ, ನೀನು ಸಹ ಸೆರೆಯಾಗುವಿ ಮತ್ತು ಕೆಮೋಷನು, ಅವನ ಯಾಜಕರು, ಅವನ ಪ್ರಧಾನರು ಸಹಿತವಾಗಿ ಸೆರೆಗೆ ಹೋಗುವರು.


ನೀವು ನಿಮ್ಮ ಕೈಯಿಂದ ಜನಾಂಗಗಳನ್ನು ಹೊರಡಿಸಿ, ನಮ್ಮ ಪಿತೃಗಳನ್ನು ನೆಲೆಗೊಳಿಸಿದಿರಿ; ನೀವು ವೈರಿಗಳನ್ನು ತೆಗೆದುಹಾಕಿ, ನಮ್ಮ ಪಿತೃಗಳಿಗೆ ಸಮೃದ್ಧಿಯನ್ನುಂಟು ಮಾಡಿದಿರಿ.


ಇಸ್ರಾಯೇಲರು ಪುನಃ ಯೆಹೋವ ದೇವರ ಮುಂದೆ ಕೆಟ್ಟತನವನ್ನು ಮಾಡಿ, ಬಾಳನನ್ನೂ, ಅಷ್ಟೋರೆತನ್ನೂ, ಅರಾಮ್ ದೇಶದ ದೇವರುಗಳನ್ನೂ, ಸೀದೋನಿನ ದೇವರುಗಳನ್ನೂ, ಮೋವಾಬಿನ ದೇವರುಗಳನ್ನೂ, ಅಮ್ಮೋನಿಯರ ದೇವರುಗಳನ್ನೂ ಫಿಲಿಷ್ಟಿಯರ ದೇವರುಗಳನ್ನೂ ಸೇವಿಸಿದರು.


“ಈಗ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಅಮೋರಿಯರನ್ನು ತಮ್ಮ ಜನರಾದ ಇಸ್ರಾಯೇಲಿನ ಮುಂದೆ ಹೊರಡಿಸಿರುವಾಗ, ನೀನು ಆ ದೇಶವನ್ನು ಸ್ವಾಧೀನ ಮಾಡಿಕೊಳ್ಳುವಿಯೋ?


ಆಗ ನೊವೊಮಿ, “ಇಗೋ, ನಿನ್ನ ಓರಗಿತ್ತಿಯು ತನ್ನ ಜನರ ಬಳಿಗೂ ತನ್ನ ದೇವರುಗಳ ಬಳಿಗೂ ತಿರುಗಿ ಹೋದಳು. ನೀನೂ ನಿನ್ನ ಓರಗಿತ್ತಿಯ ಹಿಂದೆ ಹೋಗು,” ಎಂದಳು.


ಆಗ ಇಸ್ರಾಯೇಲಿನ ಮನೆಯವರು ತಾವು ನಂಬಿಕೊಂಡಿದ್ದ ಬೇತೇಲಿನ ವಿಷಯ ಹೇಗೆ ನಾಚಿಕೆಪಟ್ಟರೋ, ಹಾಗೆಯೇ ಮೋವಾಬು ಕೆಮೋಷನ ವಿಷಯ ನಾಚಿಕೆಪಡುವುದು.


ಈ ರೀತಿಯಾಗಿ ಯೆಹೋವ ದೇವರು ಅವರ ಪಿತೃಗಳಿಗೆ ಕೊಡುವೆನೆಂದು ಆಣೆಯಿಟ್ಟ ದೇಶವನ್ನೆಲ್ಲಾ ಇಸ್ರಾಯೇಲಿಗೆ ಕೊಟ್ಟರು. ಇಸ್ರಾಯೇಲರು ಅದನ್ನು ಸ್ವಾಧೀನಮಾಡಿಕೊಂಡು, ಅದರಲ್ಲಿ ವಾಸವಾಗಿದ್ದರು.


ಯೆಹೋವ ದೇವರ ದೂತನು ಗಿಲ್ಗಾಲಿನಿಂದ ಬೋಕೀಮಿಗೆ ಬಂದು, “ನಾನು ನಿಮ್ಮನ್ನು ಈಜಿಪ್ಟಿನಿಂದ ಬರಮಾಡಿ, ನಿಮ್ಮ ತಂದೆಗಳಿಗೆ ಆಣೆ ಇಟ್ಟ ದೇಶದಲ್ಲಿ ನಿಮ್ಮನ್ನು ಸೇರಿಸಿದೆನು. ನಾನು ನಿಮ್ಮ ಸಂಗಡ ಮಾಡಿದ ನನ್ನ ಒಡಂಬಡಿಕೆಯನ್ನು ಎಂದಿಗೂ ನಿರರ್ಥಕ ಮಾಡೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು