Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 11:29 - ಕನ್ನಡ ಸಮಕಾಲಿಕ ಅನುವಾದ

29 ಆಗ ಯೆಹೋವ ದೇವರ ಆತ್ಮ ಯೆಫ್ತಾಹನ ಮೇಲೆ ಬಂತು. ಅವನು ಗಿಲ್ಯಾದ್, ಮನಸ್ಸೆಯ ಸೀಮೆಗಳನ್ನು ದಾಟಿ ಹೋಗಿ, ಗಿಲ್ಯಾದಿನಲ್ಲಿರುವ ಮಿಚ್ಪೆಗೆ ಬಂದು, ಅಲ್ಲಿಂದ ಅಮ್ಮೋನಿಯರೆದುರಿಗೆ ಹಾದುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಆಗ ಯೆಹೋವನ ಆತ್ಮವು ಯೆಪ್ತಾಹನ ಮೇಲೆ ಬಂದಿತು. ಅವನು ಗಿಲ್ಯಾದ್ ಪ್ರಾಂತ್ಯ, ಮನಸ್ಸೆಯ ದೇಶ ಇವುಗಳಲ್ಲಿ ಸಂಚರಿಸಿ ತಿರುಗಿ ಗಿಲ್ಯಾದಿನ ಮಿಚ್ಪೆಗೆ ಬಂದು, ಅಲ್ಲಿಂದ ಅಮ್ಮೋನಿಯರ ಮೇಲೆ ಯುದ್ಧಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಆಗ ಸರ್ವೇಶ್ವರನ ಆತ್ಮ ಯೆಪ್ತಾಹನ ಮೇಲೆ ಬಂದಿತು. ಅವನು ಗಿಲ್ಯಾದ್ ಪ್ರಾಂತ್ಯ, ಮನಸ್ಸೆಯ ನಾಡು, ಇವುಗಳಲ್ಲಿ ಸಂಚರಿಸಿ ಮತ್ತೆ ಗಿಲ್ಯಾದಿನ ಮಿಚ್ಫೆಗೆ ಬಂದು ಅಲ್ಲಿಂದ ಅಮ್ಮೋನಿಯರ ಮೇಲೆ ಯುದ್ಧಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಆಗ ಯೆಹೋವನ ಆತ್ಮವು ಯೆಪ್ತಾಹನ ಮೇಲೆ ಬಂದಿತು. ಅವನು ಗಿಲ್ಯಾದ್ ಪ್ರಾಂತ, ಮನಸ್ಸೆಯ ದೇಶ ಇವುಗಳಲ್ಲಿ ಸಂಚರಿಸಿ ತಿರಿಗಿ ಗಿಲ್ಯಾದಿನ ವಿುಚ್ಪೆಗೆ ಬಂದು ಅಲ್ಲಿಂದ ಅಮ್ಮೋನಿಯರ ಮೇಲೆ ಯುದ್ಧಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಆಗ ಯೆಹೋವನ ಆತ್ಮವು ಯೆಫ್ತಾಹನ ಮೇಲೆ ಬಂತು. ಯೆಫ್ತಾಹನು ಗಿಲ್ಯಾದನ ಮತ್ತು ಮನಸ್ಸೆಯ ಪ್ರದೇಶಗಳಲ್ಲಿ ಸಂಚರಿಸಿದನು. ಅವನು ಗಿಲ್ಯಾದಿನ ಮಿಚ್ಛೆಗೆ ಬಂದನು. ಗಿಲ್ಯಾದಿನ ಮಿಚ್ಛೆಯ ನಗರದಿಂದ ಅವನು ಅಮ್ಮೋನಿಯರ ಪ್ರದೇಶಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 11:29
14 ತಿಳಿವುಗಳ ಹೋಲಿಕೆ  

ಯೆಹೋವ ದೇವರು ಮೇಘದೊಳಗಿಂದ ಇಳಿದು, ಅವನ ಸಂಗಡ ಮಾತನಾಡಿ, ಅವನ ಮೇಲಿರುವ ಆತ್ಮಶಕ್ತಿಯಲ್ಲಿ ಕಿಂಚಿತ್ತನ್ನು ತೆಗೆದು, ಹಿರಿಯರಾದ ಎಪ್ಪತ್ತು ಮಂದಿಯ ಮೇಲೆ ಇಟ್ಟರು. ಆದ್ದರಿಂದ ಆತ್ಮವು ಅವರ ಮೇಲೆ ನೆಲೆಯಾಗಿದ್ದಾಗ ಅವರು ಪ್ರವಾದಿಸಿದರು. ಆಮೇಲೆ ಅವರು ಪ್ರವಾದಿಸಲಿಲ್ಲ.


ಅವನ ಮೇಲೆ ಯೆಹೋವ ದೇವರ ಆತ್ಮವು ಬಂದದ್ದರಿಂದ, ಅವನು ಇಸ್ರಾಯೇಲರಿಗೆ ನ್ಯಾಯತೀರಿಸಿದನು. ಯುದ್ಧಮಾಡುವುದಕ್ಕೆ ಹೊರಟಾಗ, ಯೆಹೋವ ದೇವರು ಅವನ ಕೈಗೆ ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ರಾಜ್ಯದ ಅರಸನಾದ ಕೂಷನ್ ರಿಷಾತಯಿಮನನ್ನು ಒಪ್ಪಿಸಿಕೊಟ್ಟರು. ಅವನು ಕೂಷನ್ ರಿಷಾತಯಿಮನ ಮೇಲೆ ಜಯಹೊಂದಿದನು.


ಆಗ ಆತ್ಮವು ಮೂವತ್ತು ಮಂದಿ ಅಧಿಪತಿಗಳ ಮುಖ್ಯಸ್ಥನಾದ ಅಮಾಸೈಯ ಮೇಲೆ ಬಂತು. ಅವನು ಹೀಗೆ ಹೇಳಿದನು, “ದಾವೀದನೇ, ನಾವು ನಿನ್ನವರು. ಇಷಯನ ಮಗನೇ, ನಾವು ನಿನ್ನ ಜೊತೆಯಿದ್ದೇವೆ; ಜಯವು ನಿನ್ನದೇ, ನಿನಗೆ ಸಹಾಯ ಮಾಡುವವರಿಗೆ ಜಯವು; ಏಕೆಂದರೆ ನಿನ್ನ ದೇವರು ನಿನಗೆ ಸಹಾಯ ಮಾಡುತ್ತಾರೆ.” ಆಗ ದಾವೀದನು ಅವರನ್ನು ಅಂಗೀಕರಿಸಿ, ಅವರನ್ನು ದಂಡಿನ ಅಧಿಪತಿಗಳಾಗಿ ಮಾಡಿದನು.


ಅವನು ಗಿಬೆಯದ ಗುಡ್ಡಕ್ಕೆ ಬಂದಾಗ, ಪ್ರವಾದಿಗಳ ಗುಂಪು ಅವನೆದುರಿಗೆ ಬಂತು. ಆಗ ದೇವರ ಆತ್ಮವು ಅವನ ಮೇಲೆ ಬಂದದ್ದರಿಂದ, ಅವರಲ್ಲಿದ್ದು ಪ್ರವಾದಿಸಿದನು.


ಇದಲ್ಲದೆ ಚೊರ್ಗಕ್ಕೂ ಎಷ್ಟಾವೋಲಿಗೂ ಮಧ್ಯದಲ್ಲಿ ದಾನನ ದಂಡಿನಲ್ಲಿ ಅವನನ್ನು ಯೆಹೋವ ದೇವರ ಆತ್ಮರು ಆಗಾಗ್ಗೆ ಪ್ರೇರೇಪಿಸುವುದಕ್ಕೆ ಪ್ರಾರಂಭಿಸಿದರು.


ಅಮ್ಮೋನಿಯರು ಏಕವಾಗಿ ಕೂಡಿಕೊಂಡು, ಗಿಲ್ಯಾದಿನಲ್ಲಿ ಪಾಳೆಯಮಾಡಿಕೊಂಡರು. ಆದರೆ ಇಸ್ರಾಯೇಲರು ಏಕವಾಗಿ ಕೂಡಿ, ಮಿಚ್ಪೆಯಲ್ಲಿ ಪಾಳೆಯಮಾಡಿಕೊಂಡರು.


ಆದರೆ ಯೆಹೋವ ದೇವರ ಆತ್ಮರು ಗಿದ್ಯೋನನ ಮೇಲೆ ಬಂದರು. ಅವನು ತುತೂರಿಯನ್ನು ಊದಿದಾಗ, ಅಬೀಯೆಜೆರಿನವರು ಅವನ ಹಿಂದೆ ಕೂಡಿಬಂದರು.


ಮಿಚ್ಪಾ ಎಂದೂ ಹೆಸರಾಯಿತು. ಏಕೆಂದರೆ, “ನನಗೂ ನಿನಗೂ ಮಧ್ಯದಲ್ಲಿ ನಾವು ಒಬ್ಬರಿಗೊಬ್ಬರು ಅಗಲಿರುವಾಗ ಯೆಹೋವ ದೇವರು ನಮ್ಮನ್ನು ನೋಡಿಕೊಳ್ಳುತ್ತಾ ಇರಲಿ.


ಹಾಗೆಯೇ ಯೆಫ್ತಾಹನು ಗಿಲ್ಯಾದಿನ ಹಿರಿಯರ ಸಂಗಡ ಹೋದನು. ಆಗ ಜನರು ಅವನನ್ನು ತಮ್ಮ ಮೇಲೆ ನಾಯಕನನ್ನಾಗಿಯೂ, ಸೈನ್ಯಾಧಿಪತಿಯಾಗಿಯೂ ಇಟ್ಟುಕೊಂಡರು. ಯೆಫ್ತಾಹನು ತನ್ನ ಮಾತುಗಳನ್ನೆಲ್ಲಾ ಮಿಚ್ಪೆಯಲ್ಲಿ ಯೆಹೋವ ದೇವರ ಮುಂದೆ ಹೇಳಿದನು.


ಹೇಗಿದ್ದರೂ ಅಮ್ಮೋನಿಯರ ಅರಸನು ಯೆಫ್ತಾಹನು ತನಗೆ ಹೇಳಿ ಕಳುಹಿಸಿದ ಮಾತನ್ನು ಕೇಳದೆ ಹೋದನು.


ಯೆಫ್ತಾಹನು ಯೆಹೋವ ದೇವರಿಗೆ ಒಂದು ಪ್ರಮಾಣವನ್ನು ಮಾಡಿ, “ನೀನು ಅಮ್ಮೋನಿಯರನ್ನು ನನ್ನ ಕೈಯಲ್ಲಿ ತಪ್ಪದೆ ಒಪ್ಪಿಸಿಕೊಟ್ಟರೆ,


ಸೌಲನು ಈ ಮಾತುಗಳನ್ನು ಕೇಳಿದಾಗ, ದೇವರ ಆತ್ಮವು ಬಹಳ ಸಾಮರ್ಥ್ಯದಿಂದ ಅವನ ಮೇಲೆ ಬಂದು, ಅವನು ಬಹು ಕೋಪೋದ್ರೇಕಗೊಂಡನು. ಅನಂತರ ಅವನು ಒಂದು ಜೋಡಿ ಎತ್ತುಗಳನ್ನು ತೆಗೆದುಕೊಂಡು,


ಆಗ ಯೆಹೋವ ದೇವರು ಯೆರುಬ್ಬಾಳನನ್ನೂ, ಬಾರಾಕನನ್ನೂ, ಯೆಫ್ತಾಹನನ್ನೂ, ಸಮುಯೇಲನನ್ನೂ ಕಳುಹಿಸಿ, ನಿಮ್ಮ ಸಮಸ್ತ ದಿಕ್ಕಿನಲ್ಲಿರುವ ನಿಮ್ಮ ಶತ್ರುಗಳ ಕೈಯಿಂದ ಬಿಡಿಸಿ, ನೀವು ಸುರಕ್ಷಿತವಾಗಿ ವಾಸಿಸುವಂತೆ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು