Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 11:3 - ಕನ್ನಡ ಸಮಕಾಲಿಕ ಅನುವಾದ

3 ಆಗ ಯೆಫ್ತಾಹನು ತನ್ನ ಸಹೋದರರ ಬಳಿಯಿಂದ ಓಡಿಹೋಗಿ, ಟೋಬ್ ದೇಶದಲ್ಲಿ ವಾಸವಾಗಿದ್ದನು. ಆ ಸ್ಥಳದ ಪುಂಡಪೋಕರಿಗಳು ಯೆಫ್ತಾಹನ ಬಳಿಗೆ ಕೂಡಿಕೊಂಡು ಅವನನ್ನು ಹಿಂಬಾಲಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವನು ತನ್ನ ಸಹೋದರರನ್ನು ಬಿಟ್ಟು ಟೋಬ್ ದೇಶಕ್ಕೆ ಹೋಗಲು ಅಲ್ಲಿನ ಕಾಕಪೋಕರು ಕೂಡಿ ಅವನನ್ನು ಹಿಂಬಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅವನು ತನ್ನ ಸಹೋದರನನ್ನು ಬಿಟ್ಟು ಟೋಬ್ ದೇಶಕ್ಕೆ ಹೋದನು. ಅಲ್ಲಿನ ಪುಂಡಪೋಕರಿಗಳು ಕೂಡಿ ಅವನನ್ನು ಹಿಂಬಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅವನು ತನ್ನ ಸಹೋದರರನ್ನು ಬಿಟ್ಟು ಟೋಬ್ ದೇಶಕ್ಕೆ ಹೋಗಲು ಅಲ್ಲಿನ ಕಾಕಪೋಕರು ಕೂಡಿ ಅವನನ್ನು ಹಿಂಬಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೆಫ್ತಾಹನು ತನ್ನ ಸಹೋದರರ ಬಳಿಯಿಂದ ಓಡಿಹೋಗಿ ಟೋಬ್ ದೇಶದಲ್ಲಿ ವಾಸಮಾಡತೊಡಗಿದನು. ಟೋಬ್ ದೇಶದಲ್ಲಿ ಕೆಲವು ಪುಂಡರು ಯೆಫ್ತಾಹನ ಜೊತೆ ಸೇರಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 11:3
9 ತಿಳಿವುಗಳ ಹೋಲಿಕೆ  

ಅವರು ಬಾಳ್ ಬೆರೀತಿನ ಮನೆಯೊಳಗಿಂದ ಎಪ್ಪತ್ತು ಬೆಳ್ಳಿಯ ನಾಣ್ಯಗಳನ್ನು ತೆಗೆದುಕೊಂಡು ಅವನಿಗೆ ಕೊಟ್ಟರು. ಅವುಗಳಿಂದ ಅಬೀಮೆಲೆಕನು ಪುಂಡಪೋಕರಿಗಳನ್ನು ಸಂಬಳಕ್ಕೆ ಇಟ್ಟುಕೊಂಡನು. ಅವರು ಅವನ ಹಿಂದೆ ಹೋದರು.


ಆಗ ಅಮ್ಮೋನಿಯರು ಹೊರಟು ಪಟ್ಟಣದ ದ್ವಾರದ ಹತ್ತಿರ ವ್ಯೂಹ ಕಟ್ಟಿದರು. ಆದರೆ ಚೋಬಾದಿಂದಲೂ ರೆಹೋಬಿನಿಂದಲೂ ಟೋಬಿನಿಂದಲೂ ಮಾಕಾನಿಂದಲೂ ಬಂದ ಅರಾಮ್ಯರು ಪ್ರತ್ಯೇಕವಾಗಿ ಬೈಲಿನಲ್ಲಿ ಇಳಿದುಕೊಂಡಿದ್ದರು.


ತಾವು ದಾವೀದನಿಗೆ ಅಸಹ್ಯರಾದೆವೆಂದು ಅಮ್ಮೋನಿಯರಿಗೆ ತಿಳಿಯಿತು. ಆದ್ದರಿಂದ ಅವರು ದೂತರನ್ನು ಕಳುಹಿಸಿ ಬೇತ್‌ರೆಹೋಬ್, ಚೋಬಾ ಎಂಬ ಪಟ್ಟಣಗಳಿಂದ ಇರುವ ಇಪ್ಪತ್ತು ಸಾವಿರ ಕಾಲಾಳುಗಳಾದ ಅರಾಮ್ಯರನ್ನೂ, ಟೋಬ್ ದೇಶದಿಂದ ಹನ್ನೆರಡು ಸಾವಿರ ಜನರನ್ನೂ, ಮಾಕದ ಅರಸನನ್ನೂ ಅವನ ಸಾವಿರ ಜನರನ್ನೂ ಕೂಲಿಗೆ ತೆಗೆದುಕೊಂಡರು.


ಇದಲ್ಲದೆ ಶ್ರಮಪಟ್ಟವರೂ, ಸಾಲಗಾರರೂ, ಅಸಂತುಷ್ಟರೂ ಅವನ ಸಂಗಡ ಕೂಡಿಕೊಂಡರು. ಆಗ ದಾವೀದನು ಅವರಿಗೆ ಅಧಿಪತಿಯಾದನು. ಹೆಚ್ಚು ಕಡಿಮೆ ನಾನೂರು ಜನರು ಅವನ ಬಳಿಯಲ್ಲಿ ಇದ್ದರು.


ಆದರೆ ಯೆಹೂದ್ಯರು ಮತ್ಸರದಿಂದ ಕೂಡಿ, ಬೀದಿಗಳಲ್ಲಿ ತಿರುಗಾಡುವ ಕೆಲವು ದುಷ್ಟವ್ಯಕ್ತಿಗಳನ್ನು ಕೂಡಿಸಿ ಪಟ್ಟಣದಲ್ಲಿ ಗಲಭೆ ಎಬ್ಬಿಸಿದರು. ಜನಸಮೂಹದ ಮುಂದೆ ಪೌಲ, ಸೀಲರನ್ನು ಎಳೆದು ತರುವಂತೆ ಅವರನ್ನು ಹುಡುಕುತ್ತಾ ಯಾಸೋನ ಎಂಬುವನ ಮನೆಯನ್ನು ಮುತ್ತಿದರು.


ಆದ್ದರಿಂದ ದಾವೀದನು ಎದ್ದು ತನ್ನ ಸಂಗಡವಿದ್ದ ಆರುನೂರು ಜನರೊಡನೆ ಗತ್ ಊರಿನ ಅರಸನಾಗಿರುವ ಮಾವೋಕನ ಮಗ ಆಕೀಷನ ಬಳಿಗೆ ಹೋದನು.


ಇದಲ್ಲದೆ ಗಿಲ್ಯಾದನ ಹೆಂಡತಿ ಅವನಿಗೆ ಪುತ್ರರನ್ನು ಪಡೆದಳು. ಅವನ ಹೆಂಡತಿಯ ಮಕ್ಕಳು ದೊಡ್ಡವರಾದಾಗ ಅವರು ಯೆಫ್ತಾಹನಿಗೆ, “ನೀನು ನಮ್ಮ ತಂದೆಯ ಮನೆಯ ಬಾಧ್ಯಸ್ಥನಲ್ಲ. ಏಕೆಂದರೆ ನೀನು ಪರಸ್ತ್ರೀಯ ಮಗನು,” ಎಂದು ಹೇಳಿ ಅವನನ್ನು ಹೊರಗೆ ಹಾಕಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು