31 ನಾನು ಅಮ್ಮೋನಿಯರನ್ನು ಜಯಿಸಿ ಹಿಂತಿರುಗಿ ಬರುವಾಗ, ನನ್ನ ಮನೆಯ ಬಾಗಿಲಿನಿಂದ ನನ್ನನ್ನು ಎದುರುಗೊಳ್ಳಲು ಮೊದಲು ಬರುವಂಥದ್ದು ಯೆಹೋವ ದೇವರದಾಗಿರುವುದು. ಅದನ್ನು ದಹನಬಲಿಯಾಗಿ ಅರ್ಪಿಸುವೆನು,” ಎಂದನು.
31 ನಾನು ಸುರಕ್ಷಿತವಾಗಿ ಮನೆಗೆ ಸೇರುವಾಗ ನನ್ನನ್ನು ಎದುರುಗೊಳ್ಳುವುದಕ್ಕಾಗಿ ನನ್ನ ಮನೆಯ ಬಾಗಿಲಿನಿಂದ ಮೊದಲು ಬರುವಂಥ ಪ್ರಾಣಿಯು ನಿನ್ನದೇ ಎಂದು ಅದನ್ನು ನಿನಗೋಸ್ಕರ ಯಜ್ಞವಾಗಿ ಅರ್ಪಿಸುವೆನು” ಎಂದು ಹರಕೆಮಾಡಿದನು.
31 ನಾನು ಸುರಕ್ಷಿತವಾಗಿ ಹಿಂದಿರುಗುವಾಗ ನನ್ನ ಮನೆಯ ಬಾಗಿಲಿನಿಂದ ನನ್ನನ್ನು ಎದುರುಗೊಳ್ಳಲು ಮೊದಲು ಬರುವಂಥ ಪ್ರಾಣಿ ತಮಗೆ ಮೀಸಲು ಎಂದೂ ಅದನ್ನು ತಮಗೆ ದಹನಬಲಿದಾನ ಮಾಡುವೆನು” ಎಂದೂ ಹರಕೆಮಾಡಿದನು.
31 ನಾನು ಸುರಕ್ಷಿತನಾಗಿ ಮನೆಗೆ ಮುಟ್ಟಿದಾಗ ನನ್ನನ್ನು ಎದುರುಗೊಳ್ಳುವದಕ್ಕಾಗಿ ನನ್ನ ಮನೆಯ ಬಾಗಲಿನಿಂದ ಮೊದಲು ಬರುವಂಥ ಪ್ರಾಣಿಯು ನಿನ್ನದೇ ಎಂದು ಅದನ್ನು ನಿನಗೋಸ್ಕರ ಹೋಮಮಾಡುವೆನು ಎಂದು ಹರಕೆಮಾಡಿದನು.
31 ನಾನು ಜಯಶಾಲಿಯಾಗಿ ಬರುವಾಗ ನನ್ನ ಮನೆಯಿಂದ ಹೊರ ಬರುವ ಮೊದಲನೆಯ ಜೀವಿಯನ್ನು ನಿನಗೆ ಕೊಡುತ್ತೇನೆ. ನಾನು ಅದನ್ನು ಯೆಹೋವನ ಸರ್ವಾಂಗಹೋಮಕ್ಕೆ ಆಹುತಿಯಾಗಿ ಕೊಡುವೆನು” ಎಂದು ಹರಕೆ ಮಾಡಿಕೊಂಡನು.
ಎತ್ತನ್ನು ಕೊಂದುಹಾಕುವವನು ಮನುಷ್ಯನನ್ನು ಹತ್ಯೆ ಮಾಡುವವನ ಹಾಗಿದ್ದಾನೆ. ಕುರಿಮರಿಯನ್ನು ಬಲಿ ಕೊಡುವವನು, ನಾಯಿಯ ಕುತ್ತಿಗೆಯನ್ನು ಕಡಿಯುವವನ ಹಾಗಿದ್ದಾನೆ. ಕಾಣಿಕೆಯನ್ನು ಅರ್ಪಿಸುವವನು, ಹಂದಿಯ ರಕ್ತವನ್ನು ಅರ್ಪಿಸುವವನ ಹಾಗಿದ್ದಾನೆ. ಧೂಪವನ್ನು ಹಾಕುವವನು, ವಿಗ್ರಹವನ್ನು ಪೂಜಿಸುವವನ ಹಾಗಿದ್ದಾನೆ. ಹೀಗೆ, ಅವರು ಸ್ವಂತ ಮಾರ್ಗಗಳನ್ನು ಆಯ್ದುಕೊಂಡಿದ್ದಾರೆ. ಅವರ ಪ್ರಾಣವು ಅವರ ಅಸಹ್ಯಗಳಲ್ಲಿ ಹರ್ಷಿಸುತ್ತವೆ.
ಇಸ್ರಾಯೇಲರು ಆ ದಿವಸ ಬಹಳ ಬಳಲಿ ಹೋದರು. ಏಕೆಂದರೆ ಸೌಲನು, “ನಾನು ನನ್ನ ಶತ್ರುಗಳಿಗೆ ಮುಯ್ಯಿ ತೀರಿಸುವ ಹಾಗೆ ಸಾಯಂಕಾಲದವರೆಗೆ ಯಾವನು ಆಹಾರ ತಿನ್ನುತ್ತಾನೋ, ಅವನು ಶಾಪಗ್ರಸ್ತನಾಗಲಿ,” ಎಂದು ಆಣೆ ಇಟ್ಟದ್ದರಿಂದ, ಜನರೆಲ್ಲರು ಆಹಾರದ ರುಚಿ ನೋಡದೆ ಇದ್ದರು.
ಆದ್ದರಿಂದ ನಾನು ಅವನನ್ನು ಯೆಹೋವ ದೇವರಿಗೆ ಒಪ್ಪಿಸಿದ್ದೇನೆ. ಅವನು ಜೀವಿಸಿರುವವರೆಗೆ ಯೆಹೋವ ದೇವರಿಗೆ ಸಮರ್ಪಿತನಾಗಿರುವನು,” ಎಂದಳು. ಆಮೇಲೆ ಅವರೆಲ್ಲರೂ ಅಲ್ಲಿ ಯೆಹೋವ ದೇವರನ್ನು ಆರಾಧಿಸಿದರು.
ಹರಕೆಮಾಡಿ, “ಸೇನಾಧೀಶ್ವರ ಯೆಹೋವ ದೇವರೇ, ನೀವು ನಿಶ್ಚಯವಾಗಿ ನಿಮ್ಮ ದಾಸಿಯ ದೀನತೆಯನ್ನು ಕಂಡು, ನಿಮ್ಮ ದಾಸಿಯನ್ನು ಮರೆಯದೆ, ನನ್ನನ್ನು ನೆನಸಿ, ನಿಮ್ಮ ದಾಸಿಗೆ ಗಂಡು ಮಗುವನ್ನು ಕೊಟ್ಟರೆ, ಅವನು ಬದುಕುವ ಸಕಲ ದಿವಸಗಳಲ್ಲಿ ಅವನನ್ನು ಯೆಹೋವ ದೇವರಿಗೆ ಒಪ್ಪಿಸಿಕೊಡುವೆನು. ಅವನ ತಲೆಯ ಮೇಲೆ ಕ್ಷೌರಿಕನ ಕತ್ತಿ ಬೀಳುವುದಿಲ್ಲ,” ಎಂದಳು.
ಇಸ್ರಾಯೇಲರ ಪುರುಷ ಅಥವಾ ಸ್ತ್ರೀಯು ಸೂಳೆಗಾರಿಕೆಯಿಂದ ಸಂಪಾದಿಸಿದ ಹಣವನ್ನು ಹರಕೆಯಾಗಿ ದೇವ ಮಂದಿರದೊಳಗೆ ತರಬಾರದು. ಏಕೆಂದರೆ ಅವೆರಡನ್ನು ನಿನ್ನ ದೇವರಾದ ಯೆಹೋವ ದೇವರು ದ್ವೇಷಿಸುತ್ತಾರೆ.