ನ್ಯಾಯಸ್ಥಾಪಕರು 11:34 - ಕನ್ನಡ ಸಮಕಾಲಿಕ ಅನುವಾದ34 ಯೆಫ್ತಾಹನು ಮಿಚ್ಪೆಯಲ್ಲಿರುವ ತನ್ನ ಮನೆಗೆ ಹಿಂದಿರುಗಿ ಬರುವಾಗ, ಅವನ ಮಗಳು ದಮ್ಮಡಿಗಳಿಂದಲೂ, ನಾಟ್ಯದಿಂದಲೂ ಅವನನ್ನು ಎದುರುಗೊಳ್ಳಲು ಹೊರಟಳು. ಅವನಿಗೆ ಅವಳು ಒಬ್ಬಳೇ ಮಗಳು. ಅವಳ ಹೊರತಾಗಿ ಅವನಿಗೆ ಮಗನಾಗಲಿ, ಮಗಳಾಗಲಿ ಇರಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಯೆಪ್ತಾಹನು ಮಿಚ್ಪೆಯಲ್ಲಿದ್ದ ತನ್ನ ಮನೆಯನ್ನು ಸಮೀಪಿಸಿದಾಗ ಅವನ ಮಗಳು ದಮ್ಮಡಿಬಡಿಯುತ್ತಾ, ನೃತ್ಯಮಾಡುತ್ತಾ ಅವನನ್ನು ಎದುರುಗೊಳ್ಳುವುದಕ್ಕಾಗಿ ಬಂದಳು. ಆಕೆಯು ಅವನಿಗೆ ಒಬ್ಬಳೇ ಮಗಳಾಗಿದ್ದಳು. ಆಕೆಯ ಹೊರತು ಅವನಿಗೆ ಬೇರೆ ಗಂಡು ಹೆಣ್ಣು ಮಕ್ಕಳೇ ಇರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ಯೆಪ್ತಾಹನು ಮಿಚ್ಫೆಯಲ್ಲಿದ್ದ ತನ್ನ ಮನೆಯನ್ನು ಸಮೀಪಿಸಿದಾಗ ಅವನ ಮಗಳು ದಮ್ಮಡಿ ಬಡಿಯುತ್ತಾ ನಾಟ್ಯವಾಡುತ್ತಾ ಅವನನ್ನು ಎದುರುಗೊಳ್ಳುವುದಕ್ಕಾಗಿ ಬಂದಳು. ಆಕೆ ಅವನ ಒಬ್ಬಳೇ ಮಗಳು. ಆಕೆಯ ಹೊರತು ಅವನಿಗೆ ಬೇರೆ ಗಂಡುಹೆಣ್ಣು ಮಕ್ಕಳೇ ಇರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ಯೆಪ್ತಾಹನು ವಿುಚ್ಪೆಯಲ್ಲಿದ್ದ ತನ್ನ ಮನೆಯನ್ನು ಸಮೀಪಿಸಿದಾಗ ಅವನ ಮಗಳು ದಮ್ಮಡಿಬಡಿಯುತ್ತಾ ನಾಟ್ಯವಾಡುತ್ತಾ ಅವನನ್ನು ಎದುರುಗೊಳ್ಳುವದಕ್ಕಾಗಿ ಬಂದಳು. ಆಕೆಯು ಅವನ ಒಬ್ಬಳೇ ಮಗಳು. ಆಕೆಯ ಹೊರತು ಅವನಿಗೆ ಬೇರೆ ಗಂಡು ಹೆಣ್ಣು ಮಕ್ಕಳೇ ಇರಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ಯೆಫ್ತಾಹನು ಮಿಚ್ಛೆಗೆ ಹಿಂದಿರುಗಿದನು. ಯೆಫ್ತಾಹನು ತನ್ನ ಮನೆಗೆ ಹೋಗುತ್ತಿರಲು ಅವನನ್ನು ಎದುರುಗೊಳ್ಳಲು ಅವನ ಮಗಳು ಮನೆಯಿಂದ ಹೊರಗೆ ಬಂದಳು. ಅವಳು ದಮ್ಮಡಿ ಬಡಿಯುತ್ತ ನಾಟ್ಯವಾಡುತ್ತಿದ್ದಳು. ಅವಳು ಅವನ ಒಬ್ಬಳೇ ಮಗಳಾಗಿದ್ದಳು. ಯೆಫ್ತಾಹನಿಗೆ ಬೇರೆ ಗಂಡುಮಕ್ಕಳಾಗಲಿ ಹೆಣ್ಣುಮಕ್ಕಳಾಗಲಿ ಇರಲಿಲ್ಲ. ಯೆಫ್ತಾಹನು ಅವಳನ್ನು ತುಂಬ ಪ್ರೀತಿಸುತ್ತಿದ್ದನು. ಅಧ್ಯಾಯವನ್ನು ನೋಡಿ |