ನ್ಯಾಯಸ್ಥಾಪಕರು 11:36 - ಕನ್ನಡ ಸಮಕಾಲಿಕ ಅನುವಾದ36 ಅವಳು ಅವನಿಗೆ, “ಅಪ್ಪಾ, ನೀನು ಯೆಹೋವ ದೇವರಿಗೆ ನಿನ್ನ ಬಾಯಿ ತೆರೆದೆಯಲ್ಲ. ಯೆಹೋವ ದೇವರು ಅಮ್ಮೋನಿಯರಾದ ನಿನ್ನ ಶತ್ರುಗಳಿಗೆ ನಿನ್ನಿಂದ ಮುಯ್ಯಿ ತೀರಿಸಿದ್ದರಿಂದ, ಅವರಿಗೆ ನಿನ್ನ ಬಾಯಿಂದ ಹೊರಟ ಮಾತಿನ ಪ್ರಕಾರವೇ ನನಗೆ ಮಾಡು,” ಎಂದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ಆಕೆಯು ಅವನಿಗೆ, “ನನ್ನ ತಂದೆಯೇ, ನೀನು ಬಾಯ್ದೆರೆದು ಯೆಹೋವನಿಗೆ ಹರಕೆಮಾಡಿದ ಮೇಲೆ ಆತನು ನಿನ್ನ ಶತ್ರುಗಳಾದ ಅಮ್ಮೋನಿಯರಿಗೆ ಮುಯ್ಯಿತೀರಿಸಿದ್ದರಿಂದ ನಿನ್ನ ಬಾಯಿಂದ ಹೊರಟದ್ದನ್ನೇ ನೆರವೇರಿಸು” ಎಂದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 ಆಕೆ ಅವನಿಗೆ, “ಅಪ್ಪಾ, ನೀನು ಬಾಯಾರೆ ಸರ್ವೇಶ್ವರನಿಗೆ ಹರಕೆ ಮಾಡಿದ ಮೇಲೆ ಅವರು ನಿನ್ನ ಶತ್ರುಗಳಾದ ಅಮ್ಮೋನಿಯರಿಗೆ ಮುಯ್ಯಿ ತೀರಿಸಿದ್ದಾರೆ. ಆದ್ದರಿಂದ ನಿನ್ನ ಬಾಯಿಂದ ಬಂದದ್ದನ್ನೇ ನೆರವೇರಿಸು,” ಎಂದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)36 ಆಕೆಯು ಅವನಿಗೆ - ನನ್ನ ತಂದೆಯೇ, ನೀನು ಬಾಯ್ದೆರೆದು ಯೆಹೋವನಿಗೆ ಹರಕೆ ಮಾಡಿದ ಮೇಲೆ ಆತನು ನಿನ್ನ ಶತ್ರುಗಳಾದ ಅಮ್ಮೋನಿಯರಿಗೆ ಮುಯ್ಯಿತೀರಿಸಿದದರಿಂದ ನಿನ್ನ ಬಾಯಿಂದ ಹೊರಟದ್ದನ್ನೇ ನೆರವೇರಿಸು ಅಂದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 ಆಗ ಯೆಫ್ತಾಹನ ಮಗಳು ಅವನಿಗೆ, “ನನ್ನ ತಂದೆಯೇ, ನೀನು ಯೆಹೋವನಿಗೆ ಹರಕೆ ಹೊತ್ತಿರುವೆ. ನಿನ್ನ ಹರಕೆಯನ್ನು ಪೂರ್ಣಗೊಳಿಸು. ಏನು ಮಾಡುವೆನೆಂದು ಹೇಳಿದ್ದಿಯೋ ಅದನ್ನು ಮಾಡು. ನಿನ್ನ ಶತ್ರುಗಳಾದ ಅಮ್ಮೋನಿಯರನ್ನು ಸೋಲಿಸಲು ಯೆಹೋವನು ನಿನಗೆ ಸಹಾಯ ಮಾಡಿದ್ದಾನೆ” ಎಂದಳು. ಅಧ್ಯಾಯವನ್ನು ನೋಡಿ |