Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 11:4 - ಕನ್ನಡ ಸಮಕಾಲಿಕ ಅನುವಾದ

4 ಕೆಲವು ದಿವಸಗಳಾದ ಮೇಲೆ ಅಮ್ಮೋನಿಯರು ಇಸ್ರಾಯೇಲಿನ ಮೇಲೆ ಯುದ್ಧಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಸ್ವಲ್ಪಕಾಲದ ನಂತರ ಇಸ್ರಾಯೇಲರಿಗೆ ವಿರೋಧವಾಗಿ ಬಂದ ಅಮ್ಮೋನಿಯರು ಅವರ ಮೇಲೆ ಯುದ್ಧವನ್ನು ಪ್ರಾರಂಭಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಇಸ್ರಯೇಲರಿಗೆ ವಿರೋಧವಾಗಿ ಬಂದ ಅಮ್ಮೋನಿಯರು ಸ್ವಲ್ಪ ದಿನಗಳಾದ ಮೇಲೆ ಯುದ್ಧವನ್ನು ಪ್ರಾರಂಭಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಇಸ್ರಾಯೇಲ್ಯರಿಗೆ ವಿರೋಧವಾಗಿ ಬಂದ ಅಮ್ಮೋನಿಯರು ಸ್ವಲ್ಪದಿನಗಳಾದ ಮೇಲೆ ಯುದ್ಧವನ್ನು ಪ್ರಾರಂಭಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಸ್ವಲ್ಪಕಾಲದ ತರುವಾಯ ಅಮ್ಮೋನಿಯರು ಇಸ್ರೇಲರ ವಿರುದ್ಧ ಯುದ್ಧ ಪ್ರಾರಂಭಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 11:4
5 ತಿಳಿವುಗಳ ಹೋಲಿಕೆ  

ಇದಲ್ಲದೆ ಅಮ್ಮೋನನ ಮಕ್ಕಳು ಯೆಹೂದ ಹಾಗೂ ಬೆನ್ಯಾಮೀನರಿಗೆ ವಿರೋಧವಾಗಿಯೂ, ಎಫ್ರಾಯೀಮರ ಮನೆಗೆ ವಿರೋಧವಾಗಿಯೂ ಯುದ್ಧಮಾಡುವುದಕ್ಕೆ ಯೊರ್ದನನ್ನು ದಾಟಿ ಬಂದರು. ಹೀಗೆ ಇಸ್ರಾಯೇಲಿಗೆ ಬಹು ಸಂಕಟವಾಯಿತು.


ಅಮ್ಮೋನಿಯರು ಏಕವಾಗಿ ಕೂಡಿಕೊಂಡು, ಗಿಲ್ಯಾದಿನಲ್ಲಿ ಪಾಳೆಯಮಾಡಿಕೊಂಡರು. ಆದರೆ ಇಸ್ರಾಯೇಲರು ಏಕವಾಗಿ ಕೂಡಿ, ಮಿಚ್ಪೆಯಲ್ಲಿ ಪಾಳೆಯಮಾಡಿಕೊಂಡರು.


ಆದರೆ ಅಮ್ಮೋನಿಯರು ಇಸ್ರಾಯೇಲಿನ ಮೇಲೆ ಯುದ್ಧಮಾಡುವಾಗ, ಗಿಲ್ಯಾದಿನ ಹಿರಿಯರು ಯೆಫ್ತಾಹನನ್ನು ಟೋಬ್ ದೇಶದಿಂದ ಕರೆದುಕೊಂಡು ಬರಲು ಹೋಗಿ,


ಆಗ ಗಿಲ್ಯಾದಿನ ಜನರೂ, ಪ್ರಧಾನರೂ ಒಬ್ಬರಿಗೊಬ್ಬರು, “ಯಾವನು ಅಮ್ಮೋನಿಯರ ಮೇಲೆ ಯುದ್ಧಮಾಡಲಾರಂಭಿಸುವನೋ, ಅವನು ಗಿಲ್ಯಾದಿನ ನಿವಾಸಿಗಳಿಗೆಲ್ಲಾ ತಲೆಯಾಗಿರುವನು,” ಎಂದು ಮಾತನಾಡಿಕೊಂಡರು.


ಅಮ್ಮೋನಿಯನಾದ ನಾಹಾಷನು ದಂಡೆತ್ತಿ ಬಂದು ಗಿಲ್ಯಾದಿನಲ್ಲಿರುವ ಯಾಬೇಷಿಗೆ ಮುತ್ತಿಗೆಹಾಕಿದನು. ಆಗ ಯಾಬೇಷಿನ ಜನರೆಲ್ಲರು ನಾಹಾಷನಿಗೆ, “ನೀನು ನಮ್ಮ ಸಂಗಡ ಒಡಂಬಡಿಕೆ ಮಾಡಿದರೆ, ನಾವು ನಿನಗೆ ಅಧೀನರಾಗಿರುವೆವು,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು