ನ್ಯಾಯಸ್ಥಾಪಕರು 12:4 - ಕನ್ನಡ ಸಮಕಾಲಿಕ ಅನುವಾದ4 ಆಗ ಯೆಫ್ತಾಹನು ಗಿಲ್ಯಾದ್ ಜನರೆಲ್ಲರನ್ನು ಕೂಡಿಸಿ, ಎಫ್ರಾಯೀಮ್ಯರ ಸಂಗಡ ಯುದ್ಧಮಾಡಿದನು. ಏಕೆಂದರೆ, “ಎಫ್ರಾಯೀಮ್ಯರನ್ನು ಮನಸ್ಸೆಯವರ ಮಧ್ಯದಲ್ಲಿದ್ದ ಗಿಲ್ಯಾದ್ಯರಾದ ನೀವು ಸ್ವಕುಲವನ್ನು ಬಿಟ್ಟು ತಪ್ಪಿಸಿಕೊಂಡವರಾಗಿದ್ದೀರಿ,” ಎಂದು ಎಫ್ರಾಯೀಮ್ಯರು ಹೇಳಿದ್ದರಿಂದ ಗಿಲ್ಯಾದ್ಯರು ಎಫ್ರಾಯೀಮ್ಯರನ್ನು ಹೊಡೆದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಗಿಲ್ಯಾದಿನವರೆಲ್ಲರನ್ನೂ ಸೇರಿಸಿಕೊಂಡು ಎಫ್ರಾಯೀಮ್ಯರಿಗೆ ವಿರೋಧವಾಗಿ ಯುದ್ಧಕ್ಕೆ ನಿಂತನು. ಆಗ ಎಫ್ರಾಯೀಮ್ಯರು “ಗಿಲ್ಯಾದ್ಯರಾದ ನೀವು, ನಮ್ಮ ಮತ್ತು ಮನಸ್ಸೆಯವರ ಮಧ್ಯದಲ್ಲಿದ್ದು ಸ್ವಕುಲವನ್ನು ಬಿಟ್ಟು ಇಲ್ಲಿಗೆ ಓಡಿ ಬಂದಿದ್ದೀರಿ” ಎಂದು ಎಫ್ರಾಯೀಮ್ಯರು ಹೇಳಿದ್ದರಿಂದ ಗಿಲ್ಯಾದ್ಯರು ಕೋಪಗೊಂಡು ಅವರನ್ನು ಪೂರ್ಣವಾಗಿ ಸೋಲಿಸಿಬಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಬಳಿಕ ಗಿಲ್ಯಾದಿನವರೆಲ್ಲರನ್ನು ಕೂಡಿಸಿ, ಎಫ್ರಯಿಮರಿಗೆ ವಿರುದ್ಧ ಯುದ್ಧಕ್ಕೆ ನಿಂತನು. “ಗಿಲ್ಯಾದ್ಯರಾದ ನೀವು ನಮ್ಮ ಮತ್ತು ಮನಸ್ಸೆ ಯವರ ಮಧ್ಯದಲ್ಲಿದ್ದು ಸ್ವಕುಲವನ್ನು ಬಿಟ್ಟು ಇಲ್ಲಿಗೆ ಓಡಿಬಂದಿರಿ” ಎಂದು ಎಫ್ರಯಿಮ್ಯರು ಹೇಳಿದ್ದರಿಂದ ಗಿಲ್ಯಾದ್ಯರು ಕೋಪಗೊಂಡು ಅವರನ್ನು ಪೂರ್ಣವಾಗಿ ಸೋಲಿಸಿಬಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಗಿಲ್ಯಾದಿನವರೆಲ್ಲರನ್ನೂ ಕೂಡಿಸಿ ಎಫ್ರಾಯೀಮ್ಯರಿಗೆ ವಿರೋಧವಾಗಿ ಯುದ್ಧಕ್ಕೆ ನಿಂತನು. ಗಿಲ್ಯಾದ್ಯರಾದ ನೀವು ನಮ್ಮ ಮತ್ತು ಮನಸ್ಸೆಯವರ ಮಧ್ಯದಲ್ಲಿದ್ದು ಸ್ವಕುಲವನ್ನು ಬಿಟ್ಟು ಇಲ್ಲಿಗೆ ಓಡಿ ಬಂದಿರಿ ಎಂದು ಎಫ್ರಾಯೀಮ್ಯರು ಅಂದದರಿಂದ ಗಿಲ್ಯಾದ್ಯರು [ಕೋಪಗೊಂಡು] ಅವರನ್ನು ಪೂರ್ಣವಾಗಿ ಸೋಲಿಸಿಬಿಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಆಗ ಯೆಫ್ತಾಹನು ಗಿಲ್ಯಾದಿನ ಜನರನ್ನು ಒಂದೆಡೆ ಸೇರಿಸಿದನು. ಅವರು ಎಫ್ರಾಯೀಮ್ಯರ ವಿರುದ್ಧ ಯುದ್ಧ ಮಾಡಿದರು. ಏಕೆಂದರೆ ಎಫ್ರಾಯೀಮ್ಯರು ಗಿಲ್ಯಾದ್ಯರನ್ನು ಅವಮಾನ ಮಾಡಿದ್ದರು. ಅವರು, “ಗಿಲ್ಯಾದಿನವರಾದ ನೀವು ಎಫ್ರಾಯೀಮ್ಯರಲ್ಲಿ ಬದುಕಿ ಉಳಿದವರೇ ಹೊರತು ಬೇರೆಯವರಲ್ಲ. ನಿಮಗೆ ನಿಮ್ಮ ಸ್ವಂತ ಪ್ರದೇಶವೂ ಇಲ್ಲ. ನಿಮ್ಮ ಒಂದು ಭಾಗವು ಎಫ್ರಾಯೀಮ್ ಕುಲಕ್ಕೆ ಸೇರಿದೆ; ಇನ್ನೊಂದು ಭಾಗವು ಮನಸ್ಸೆ ಕುಲಕ್ಕೆ ಸೇರಿದೆ” ಎಂದಿದ್ದರು. ಅವರು ಹೀಗೆ ಅಂದದ್ದರಿಂದ ಗಿಲ್ಯಾದಿನ ಜನರು ಎಫ್ರಾಯೀಮ್ ಜನರನ್ನು ಸೋಲಿಸಿದರು. ಅಧ್ಯಾಯವನ್ನು ನೋಡಿ |