Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 13:13 - ಕನ್ನಡ ಸಮಕಾಲಿಕ ಅನುವಾದ

13 ಯೆಹೋವ ದೇವರ ದೂತನು ಮಾನೋಹನಿಗೆ, “ನಾನು ಈ ಸ್ತ್ರೀಗೆ ಹೇಳಿದ್ದೆಲ್ಲದರಲ್ಲಿ ಅವಳು ಎಚ್ಚರಿಕೆಯಾಗಿದ್ದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಯೆಹೋವನ ದೂತನು ಮಾನೋಹನಿಗೆ, “ನಾನು ಹೇಳಿದ್ದನ್ನೆಲ್ಲಾ ಈಕೆಯು ಜಾಗರೂಕತೆಯಿಂದ ಕೈಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಸರ್ವೇಶ್ವರನ ದೂತನು ಮಾನೋಹನಿಗೆ, “ನಾನು ಹೇಳಿದ್ದನ್ನೆಲ್ಲಾ ಈಕೆ ಜಾಗರೂಕತೆಯಿಂದ ಕೈಗೊಳ್ಳಲಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಯೆಹೋವನ ದೂತನು ಮಾನೋಹನಿಗೆ - ನಾನು ಹೇಳಿದ್ದನ್ನೆಲ್ಲಾ ಈಕೆಯು ಜಾಗರೂಕತೆಯಿಂದ ಕೈಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಯೆಹೋವನ ದೂತನು ಮಾನೋಹನಿಗೆ, “ನಿನ್ನ ಹೆಂಡತಿಯು ನಾನು ಹೇಳಿದ್ದೆಲ್ಲವನ್ನು ಮಾಡಬೇಕು. ಅವಳು ದ್ರಾಕ್ಷಾಫಲಗಳನ್ನು ತಿನ್ನಬಾರದು; ದ್ರಾಕ್ಷಾರಸವನ್ನಾಗಲಿ ಬೇರೆ ಯಾವ ಮದ್ಯವನ್ನಾಗಲಿ ಕುಡಿಯಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 13:13
4 ತಿಳಿವುಗಳ ಹೋಲಿಕೆ  

ಆಗ ಯೆಹೋವ ದೇವರ ದೂತನು ಪೊದೆಯೊಳಗೆ ಉರಿಯುವ ಬೆಂಕಿಯಲ್ಲಿ ಅವನಿಗೆ ಕಾಣಿಸಿಕೊಂಡನು. ಮೋಶೆಯು ನೋಡಿದಾಗ, ಪೊದೆಯು ಬೆಂಕಿಯಿಂದ ಉರಿಯುತ್ತಿತ್ತು ಆದಾಗ್ಯೂ ಪೊದೆಯು ಸುಟ್ಟು ಹೋಗಲಿಲ್ಲ.


ಆದ್ದರಿಂದ ನೀನು ದ್ರಾಕ್ಷಾರಸವನ್ನೂ ಮದ್ಯಪಾನವನ್ನೂ ಕುಡಿಯದೆ, ಅಶುಚಿಯಾದ ಒಂದನ್ನಾದರೂ ತಿನ್ನದೆ, ಎಚ್ಚರಿಕೆಯಾಗಿರಬೇಕು.


ಆಗ ಮಾನೋಹನು ಎದ್ದು ತನ್ನ ಹೆಂಡತಿಯೊಡನೆ ಹೋಗಿ, ಅವನ ಬಳಿಗೆ ಬಂದು, ಅವನಿಗೆ, “ಈ ಸ್ತ್ರೀಯ ಸಂಗಡ ಮಾತನಾಡಿದವನು ನೀನೋ?” ಎಂದನು. ಅವನು, “ನಾನೇ,” ಎಂದನು.


ಮಾನೋಹನು, “ನೀನು ಹೇಳಿದ ಮಾತುಗಳು ನೆರವೇರುವಾಗ, ನಾವು ಆ ಕೂಸಿಗೋಸ್ಕರ ಮಾಡತಕ್ಕದ್ದೇನು? ಅವನನ್ನು ಹೇಗೆ ನಡಿಸತಕ್ಕದ್ದು?” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು