Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 13:20 - ಕನ್ನಡ ಸಮಕಾಲಿಕ ಅನುವಾದ

20 ಅಗ್ನಿ ಜ್ವಾಲೆಯು ಬಲಿಪೀಠದಿಂದ ಆಕಾಶಕ್ಕೆ ಸರಿಯಾಗಿ ಏಳುವಾಗ, ಯೆಹೋವ ದೇವರ ದೂತನು ಬಲಿಪೀಠದ ಜ್ವಾಲೆಯಲ್ಲಿ ಮೇಲಕ್ಕೆ ಹೋದನು. ಅದನ್ನು ಮಾನೋಹನೂ, ಅವನ ಹೆಂಡತಿಯೂ ಕಂಡು, ನೆಲದ ಮೇಲೆ ಬೋರಲು ಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಏನೆಂದರೆ ಅವನು ಯಜ್ಞವೇದಿಯಿಂದ ಆಕಾಶಕ್ಕೆ ಹೋಗುತ್ತಿರುವ ಅಗ್ನಿಜ್ವಾಲೆಯೊಳಗೆ ಮೇಲಕ್ಕೇರಿ ಹೋದನು. ಅವರು ಇದನ್ನು ನೋಡುತ್ತಲೆ ನೆಲದ ಮೇಲೆ ಬೋರಲುಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಅದೇನೆಂದರೆ ಬಲಿಪೀಠದಿಂದ ಆಕಾಶಕ್ಕೆ ಹೋಗುತ್ತಿದ್ದ ಅಗ್ನಿಜ್ವಾಲೆಯೊಳಗೆ ಅವನು ಮೇಲಕ್ಕೇರಿಹೋದನು. ಅವರು ಇದನ್ನು ನೋಡುತ್ತಲೆ ನೆಲದ ಮೇಲೆ ಬೋರಲಾಗಿ ಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಏನಂದರೆ ಅವನು ಯಜ್ಞವೇದಿಯಿಂದ ಆಕಾಶಕ್ಕೆ ಹೋಗುತ್ತಿರುವ ಅಗ್ನಿ ಜ್ವಾಲೆಯೊಳಗೆ ಮೇಲಕ್ಕೇರಿ ಹೋದನು. ಅವರು ಇದನ್ನು ನೋಡುತ್ತಲೆ ನೆಲದ ಮೇಲೆ ಬೋರಲ ಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಮಾನೋಹ ಮತ್ತು ಅವನ ಹೆಂಡತಿಯ ಕಣ್ಣೆದುರಿನಲ್ಲಿಯೇ ಯಜ್ಞವೇದಿಕೆಯಿಂದ ಆಕಾಶಕ್ಕೆ ಹೋಗುತ್ತಿರುವ ಅಗ್ನಿಜ್ವಾಲೆಯಲ್ಲಿ ಆ ಯೆಹೋವನ ದೂತನು ಆಕಾಶಕ್ಕೆ ಏರಿ ಹೋದನು. ಮಾನೋಹ ಮತ್ತು ಅವನ ಹೆಂಡತಿ ಅದನ್ನು ಕಂಡು ನೆಲದ ಮೇಲೆ ಅಡ್ಡಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 13:20
14 ತಿಳಿವುಗಳ ಹೋಲಿಕೆ  

ಆಗ ಅಲ್ಲಿ ಬೆಂಕಿಯು ಯೆಹೋವ ದೇವರ ಸನ್ನಿಧಿಯಿಂದ ಬಂದು, ಬಲಿಪೀಠದ ಮೇಲಿದ್ದ ದಹನಬಲಿಯನ್ನು ಮತ್ತು ಕೊಬ್ಬನ್ನು ದಹಿಸಿಬಿಟ್ಟಿತು. ಇದನ್ನು ಜನರೆಲ್ಲರೂ ಕಂಡಾಗ, ಅವರು ಆನಂದದಿಂದ ಜಯಘೋಷ ಮಾಡಿ ಅಡ್ಡಬಿದ್ದರು.


ಆಗ ದಾವೀದನು ತನ್ನ ಕಣ್ಣೆತ್ತಿ ಭೂಮಿಗೂ, ಆಕಾಶಕ್ಕೂ ಮಧ್ಯದಲ್ಲಿ ನಿಂತಿರುವ ಯೆಹೋವ ದೇವರ ದೂತನನ್ನು ಕಂಡನು. ಅವನ ಕೈಯಲ್ಲಿ ಯೆರೂಸಲೇಮಿನ ಮೇಲೆ ಚಾಚಿದ್ದ ಹಿರಿದ ಖಡ್ಗ ಇತ್ತು. ಆಗ ದಾವೀದನೂ, ಇಸ್ರಾಯೇಲಿನ ಹಿರಿಯರೂ ಗೋಣಿತಟ್ಟುಗಳನ್ನು ಹೊದ್ದುಕೊಂಡು ಬೋರಲಾಗಿ ಬಿದ್ದರು.


ಅವರು ನಡೆಯುತ್ತಾ ಬಂದು ಮಾತನಾಡಿಕೊಂಡಿರುವಾಗ, ಬೆಂಕಿಯ ರಥವೂ ಬೆಂಕಿಯ ಕುದುರೆಗಳೂ ಅವರಿಬ್ಬರನ್ನೂ ಬೇರೆಯಾಗಿ ಮಾಡಿದವು. ಎಲೀಯನು ಬಿರುಗಾಳಿಯಲ್ಲಿ ಆಕಾಶಕ್ಕೆ ಏರಿಹೋದನು.


ಮಳೆ ಬೀಳುವ ದಿನದಲ್ಲಿ ಮೇಘದಲ್ಲಿ ಮಳೆಬಿಲ್ಲು ಹೇಗೆ ಕಾಣಿಸುವುದೋ ಹಾಗೆ ಅದರ ಸುತ್ತಲೂ ಆ ಪ್ರಕಾಶವು ಕಾಣಿಸಿತು. ಇದೇ ಯೆಹೋವ ದೇವರ ಮಹಿಮೆಯ ರೂಪದ ದರ್ಶನವಾಗಿತ್ತು. ಅದನ್ನು ನಾನು ಕಂಡಾಗ ನಾನು ನನ್ನ ಮುಖವನ್ನು ಕೆಳಗೆಮಾಡಿ ಬಿದ್ದೆನು ಮತ್ತು ಮಾತನಾಡುವ ಒಬ್ಬನ ಸ್ವರವನ್ನು ಕೇಳಿದೆನು.


ಶಿಷ್ಯರು ಇದನ್ನು ಕೇಳಿ ಬಹಳವಾಗಿ ಹೆದರಿ ಬೋರಲು ಬಿದ್ದರು.


ಈ ಕ್ರಿಸ್ತ ಯೇಸುವೇ ದೇವರ ಮಹಿಮೆಯ ಪ್ರಕಾಶವೂ ಅವರ ವ್ಯಕ್ತಿತ್ವದ ಪ್ರತಿರೂಪವಾಗಿರುವ ದೇವಪುತ್ರ ಆಗಿದ್ದಾರೆ. ಈ ಕ್ರಿಸ್ತ ಯೇಸುವೇ ತಮ್ಮ ಶಕ್ತಿಯುತ ವಾಕ್ಯದಿಂದ ಸಮಸ್ತಕ್ಕೂ ಆಧಾರವಾಗಿದ್ದಾರೆ. ಕ್ರಿಸ್ತ ಯೇಸು ತಾವಾಗಿಯೇ ನಮ್ಮ ಪಾಪಗಳನ್ನು ಶುದ್ಧಿಮಾಡಿ ಉನ್ನತದೊಳಗೆ ಮಹೋನ್ನತ ದೇವರ ಬಲಗಡೆಯಲ್ಲಿ ಕುಳಿತುಕೊಂಡಿದ್ದಾರೆ.


ದಾವೀದನು ಯೆಹೋವ ದೇವರಿಗೆ ಅಲ್ಲಿ ಬಲಿಪೀಠವನ್ನು ಕಟ್ಟಿಸಿ, ಅದರ ಮೇಲೆ ದಹನಬಲಿಗಳನ್ನೂ, ಸಮಾಧಾನದ ಬಲಿಗಳನ್ನೂ ಅರ್ಪಿಸಿ ಯೆಹೋವ ದೇವರನ್ನು ಪ್ರಾರ್ಥಿಸಿದನು. ಆಗ ಅವರು ಆಕಾಶದಿಂದ ದಹನಬಲಿಪೀಠದ ಮೇಲೆ ಅಗ್ನಿಯಿಂದ ಅವನಿಗೆ ಉತ್ತರಕೊಟ್ಟರು.


ಆಗ ಅಬ್ರಾಮನು ಸಾಷ್ಟಾಂಗ ನಮಸ್ಕಾರಮಾಡಿದನು. ದೇವರು ಅವನ ಸಂಗಡ ಮಾತನಾಡಿದ್ದೇನೆಂದರೆ:


ಆದರೂ ನಾನು ಆತನ ಮಾತುಗಳ ಧ್ವನಿಯನ್ನು ಕೇಳಿದೆನು. ಆತನ ಮಾತುಗಳ ಧ್ವನಿಯನ್ನು ಕೇಳಿದಾಗ, ಮುಖ ಕೆಳಗೆಮಾಡಿ ಗಾಢನಿದ್ರೆಯಲ್ಲಿದ್ದೆನು. ನನ್ನ ಮುಖ ನೆಲದ ಕಡೆ ಇತ್ತು.


ಅವುಗಳ ತಲೆಗಳ ಮೇಲಿರುವ ಗಗನ ಮಂಡಲದ ಮೇಲ್ಭಾಗದಲ್ಲಿ ನೀಲಮಣಿಯ ಹಾಗೆ ಇರುವ ಒಂದು ಸಿಂಹಾಸನವಿತ್ತು. ಅದರ ಮೇಲೆ ಮನುಷ್ಯನ ಹಾಗೆ ಕಾಣಿಸುವ ಒಂದು ರೂಪವೂ ಇತ್ತು.


ದೇವರು ಜಯಘೋಷದಿಂದ ಉನ್ನತರಾಗಿದ್ದಾರೆ. ಯೆಹೋವ ದೇವರು ತುತೂರಿಯ ಧ್ವನಿಯೊಡನೆ ಸಾಗಿದ್ದಾರೆ.


ಆಗ ಗಿದ್ಯೋನನು ಒಳಗೆ ಹೋಗಿ, ಒಂದು ಮೇಕೆಯ ಮರಿಯನ್ನೂ, ಹದಿನಾರು ಕಿಲೋಗ್ರಾಂ ಹಿಟ್ಟಿನಲ್ಲಿ ಹುಳಿಯಿಲ್ಲದ ರೊಟ್ಟಿಗಳನ್ನು ಸಿದ್ಧಮಾಡಿ, ಮಾಂಸವನ್ನು ಪುಟ್ಟಿಯಲ್ಲಿ ಇಟ್ಟು, ರಸವನ್ನು ಪಾತ್ರೆಯಲ್ಲಿ ಹೊಯ್ದು, ಅದನ್ನು ಹೊರಗೆ ಏಲಾ ಮರದ ಕೆಳಗೆ ಇದ್ದ ಅವರ ಬಳಿಯಲ್ಲಿ ತಂದಿಟ್ಟನು.


ಆಗ ಯೆಹೋವ ದೇವರ ದೂತನು ತನ್ನ ಕೈಯಲ್ಲಿದ್ದ ಕೋಲಿನ ಕೊನೆಯನ್ನು ಚಾಚಿ, ಮಾಂಸವನ್ನೂ, ಹುಳಿಯಿಲ್ಲದ ರೊಟ್ಟಿಗಳನ್ನೂ ಮುಟ್ಟಿದನು. ಆಗ ಬೆಂಕಿಯು ಬಂಡೆಯಿಂದ ಎದ್ದು, ಮಾಂಸವನ್ನೂ, ಹುಳಿಯಿಲ್ಲದ ರೊಟ್ಟಿಗಳನ್ನೂ ದಹಿಸಿಬಿಟ್ಟಿತು. ಆಗ ಯೆಹೋವ ದೇವರ ದೂತನು ಅವನ ಕಣ್ಣುಗಳಿಗೆ ಕಾಣಿಸದೆ ಹೋದನು.


ಆದರೆ ದಾವೀದನು ತನ್ನ ಬಳಿಗೆ ಬರುವುದನ್ನು ಒರ್ನಾನನು ಕಂಡನು, ಆಗ ಅವನು ಕಣದಿಂದ ಹೊರಟು, ದಾವೀದನ ಮುಂದೆ ಮುಖ ಕೆಳಗೆಮಾಡಿ ಅಡ್ಡಬಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು