Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 14:11 - ಕನ್ನಡ ಸಮಕಾಲಿಕ ಅನುವಾದ

11 ಅವರು ಅವನನ್ನು ಕಂಡಾಗ, ಅವನ ಸಂಗಡ ಇರುವುದಕ್ಕೆ ಮೂವತ್ತು ಮಂದಿ ಸಂಗಡಿಗರನ್ನು ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅವರು ಅವನನ್ನು ನೋಡಿದಾಗ ತಮ್ಮಲ್ಲಿಂದ ಮೂವತ್ತು ಮಂದಿಯನ್ನು ಆರಿಸಿ ಅವನ ಜೊತೆಯಲ್ಲಿರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಫಿಲಿಷ್ಟಿಯನು ಅವನನ್ನು ನೋಡಿದಾಗ ತಮ್ಮ ಮಧ್ಯದಿಂದ ಮೂವತ್ತು ಮಂದಿ ‘ಆಪ್ತರನ್ನು’ ಆರಿಸಿ ಅವನ ಜೊತೆಯಲ್ಲಿ ಇರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅವರು ಅವನನ್ನು ನೋಡಿದಾಗ ತಮ್ಮಲ್ಲಿಂದ ಮೂವತ್ತು ಮಂದಿಯನ್ನು ಆರಿಸಿ ಅವನ ಜೊತೆಯಲ್ಲಿರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಅವನು ಔತಣದ ಏರ್ಪಾಟು ಮಾಡಿದ್ದನ್ನು ಕಂಡು ಫಿಲಿಷ್ಟಿಯರು ಅವನ ಸಂಗಡ ಇರುವುದಕ್ಕೆ ಮೂವತ್ತು ಜನರನ್ನು ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 14:11
8 ತಿಳಿವುಗಳ ಹೋಲಿಕೆ  

ಮದುಮಗಳು ಮದುಮಗನಿಗೆ ಸೇರಿದವಳು. ಆದರೂ ಮದುಮಗನ ಸ್ನೇಹಿತನು ನಿಂತುಕೊಂಡು ಆತನ ಮಾತಿಗೆ ಕಿವಿಗೊಟ್ಟು, ಮದುಮಗನ ಸ್ವರ ಕೇಳಿ ಸಂತೋಷಪಡುತ್ತಾನೆ. ಆದಕಾರಣ ಈ ನನ್ನ ಸಂತೋಷವು ಪರಿಪೂರ್ಣವಾಯಿತು.


ಅದಕ್ಕೆ ಯೇಸು ಅವರಿಗೆ, “ಮದುಮಗನು ತಮ್ಮ ಜೊತೆಯಲ್ಲಿ ಇರುವ ತನಕ ಮದುಮಗನ ಆಪ್ತರು ದುಃಖಪಡುವುದುಂಟೇ? ಆದರೆ ಮದುಮಗನು ಅಗಲಬೇಕಾಗುವ ದಿವಸಗಳು ಬರುತ್ತವೆ; ಆಗ ಅವರು ಉಪವಾಸ ಮಾಡುವರು.


ಅವರು ಬಂದಾಗ, ಅವನು ಎಲೀಯಾಬನನ್ನು ಕಂಡು, “ನಿಶ್ಚಯವಾಗಿ ಯೆಹೋವ ದೇವರ ಅಭಿಷಿಕ್ತನು ಅವರ ಮುಂದೆ ಇದ್ದಾನೆ,” ಎಂದುಕೊಂಡನು.


ಆಗ ಅವರು ಓಡಿಹೋಗಿ ಅಲ್ಲಿಂದ ಅವನನ್ನು ಕರೆತಂದರು. ಅವನು ಜನರ ಮಧ್ಯದಲ್ಲಿ ನಿಲ್ಲುವಾಗ ಅವನು ತನ್ನ ಭುಜದಿಂದ ಎಲ್ಲಾ ಜನರಿಗಿಂತ ಎತ್ತರವಾಗಿದ್ದನು.


ಅವನ ತಂದೆಯು ಆ ಸ್ತ್ರೀ ಇರುವ ಸ್ಥಳಕ್ಕೆ ಬಂದಾಗ, ಸಂಸೋನನು ಪ್ರಾಯಸ್ಥರು ಮಾಡುವ ಪದ್ಧತಿಯ ಪ್ರಕಾರ ಅಲ್ಲಿ ಔತಣ ಮಾಡಿಸಿದನು.


ಅವರಿಗೆ ಸಂಸೋನನು, “ನಾನು ನಿಮಗೆ ಒಂದು ಒಗಟನ್ನು ಹೇಳುವೆನು; ನೀವು ಅದನ್ನು ಔತಣದ ಈ ಏಳು ದಿವಸಗಳಲ್ಲಿ ಗ್ರಹಿಸಿಕೊಂಡು ಹೇಳಿದರೆ, ನಾನು ನಿಮಗೆ ಮೂವತ್ತು ದುಪ್ಪಟಿಗಳನ್ನು, ಮೂವತ್ತು ಜೊತೆ ಬಟ್ಟೆಗಳನ್ನು ಕೊಡುವೆನು.


ನನ್ನ ಪ್ರಿಯಳೇ, ನನ್ನ ವಧುವೇ, ನಾನು ನನ್ನ ತೋಟಕ್ಕೆ ಬಂದಿರುವೆ. ನನ್ನ ರಕ್ತಬೋಳ ಸುಗಂಧಗಳನ್ನೂ ಕೂಡಿಸಿರುವೆ. ನನ್ನ ಜೇನುಗೂಡನ್ನೂ ಜೇನುತುಪ್ಪವನ್ನೂ ತಿಂದಿರುವೆ. ನನ್ನ ದ್ರಾಕ್ಷಾರಸವನ್ನೂ ಹಾಲನ್ನೂ ಕುಡಿದಿದ್ದೇನೆ. ಸ್ನೇಹಿತರೇ, ಊಟಮಾಡಿರಿ, ಕುಡಿಯಿರಿ. ಹೌದು ಪ್ರಿಯರೇ, ಸಮೃದ್ಧಿಯಾಗಿ ಪಾನಮಾಡಿರಿ.


ಬೆಸ್ತರು ಅದಕ್ಕಾಗಿ ವ್ಯಾಪಾರ ಒಪ್ಪಂದ ಮಾಡುತ್ತಾರೆಯೆ? ಅವರು ಅದನ್ನು ವರ್ತಕರಲ್ಲಿ ಹಂಚಿ ಮಾರುವರೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು