ನ್ಯಾಯಸ್ಥಾಪಕರು 14:15 - ಕನ್ನಡ ಸಮಕಾಲಿಕ ಅನುವಾದ15 ನಾಲ್ಕನೆಯ ದಿವಸದಲ್ಲಿ ಅವರು ಸಂಸೋನನ ಹೆಂಡತಿಗೆ, “ನಾವು ನಿನ್ನನ್ನೂ, ನಿನ್ನ ತಂದೆಯ ಮನೆಯನ್ನೂ ಬೆಂಕಿಯಿಂದ ಸುಟ್ಟು ಬಿಡದ ಹಾಗೆ ನೀನು ನಿನ್ನ ಗಂಡನ ಆ ಒಗಟನ್ನು ನಮಗೆ ತಿಳಿಸುವ ಹಾಗೆ ಅವನನ್ನು ಮರಳುಗೊಳಿಸು. ನೀನು ನಮಗಿರುವುದೆಲ್ಲವನ್ನು ಕಸಿದುಕೊಳ್ಳುವುದಕ್ಕೆ ಅಲ್ಲವೇ ನಮ್ಮನ್ನು ಇಲ್ಲಿಗೆ ಕರೆಸಿದೆ?” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಅವರು ಏಳನೆಯ ದಿನದಲ್ಲಿ ಸಂಸೋನನ ಹೆಂಡತಿಗೆ, “ನಿನ್ನ ಗಂಡನನ್ನು ಮರುಳುಗೊಳಿಸಿ ಅವನಿಂದ ಒಗಟಿನ ಅರ್ಥವನ್ನು ತಿಳಿದುಕೋ; ಇಲ್ಲವಾದರೆ ನಾವು ನಿನ್ನನ್ನೂ, ನಿನ್ನ ತಂದೆಯ ಮನೆಯವರನ್ನೂ ಬೆಂಕಿಯಿಂದ ಸುಟ್ಟುಬಿಡುವೆವು; ನಮಗಿರುವುದೆಲ್ಲವನ್ನೂ ಕಸಿದುಕೊಳ್ಳುವುದಕ್ಕೆ ನಮ್ಮನ್ನು ಇಲ್ಲಿಗೆ ಕರೆಸಿದಿರೋ” ಅಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಅವರು ಏಳನೆಯ ದಿನದಲ್ಲಿ ಸಂಸೋನನ ಹೆಂಡತಿಗೆ, “ನಿನ್ನ ಗಂಡನನ್ನು ಮರುಳುಗೊಳಿಸಿ ಅವನಿಂದ ಒಗಟಿನ ಅರ್ಥವನ್ನು ತಿಳಿದುಕೋ; ಇಲ್ಲವಾದರೆ ನಾವು ನಿನ್ನನ್ನೂ ನಿನ್ನ ತಂದೆಯ ಮನೆಯವರನ್ನೂ ಬೆಂಕಿಯಿಂದ ಸುಟ್ಟುಬಿಡುತ್ತೇವೆ; ನಮಗಿರುವುದೆಲ್ಲವನ್ನೂ ಕಸಿದುಕೊಳ್ಳುವುದಕ್ಕೆ ನಮ್ಮನ್ನು ಇಲ್ಲಿಗೆ ಕರಿಸಿದಿರೋ?” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಅವರು ಏಳನೆಯ ದಿನದಲ್ಲಿ ಸಂಸೋನನ ಹೆಂಡತಿಗೆ - ನಿನ್ನ ಗಂಡನನ್ನು ಮರುಳುಗೊಳಿಸಿ ಅವನಿಂದ ಒಗಟಿನ ಅರ್ಥವನ್ನು ತಿಳಿದುಕೋ; ಇಲ್ಲವಾದರೆ ನಾವು ನಿನ್ನನ್ನೂ ನಿನ್ನ ತಂದೆಯ ಮನೆಯವರನ್ನೂ ಬೆಂಕಿಯಿಂದ ಸುಟ್ಟುಬಿಡುವೆವು; ನಮಗಿರುವದೆಲ್ಲವನ್ನೂ ಕಸಕೊಳ್ಳುವದಕ್ಕೆ ನಮ್ಮನ್ನು ಇಲ್ಲಿಗೆ ಕರಿಸಿದಿರೋ ಅಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ನಾಲ್ಕನೆಯ ದಿನ ಅವರು ಸಂಸೋನನ ಹೆಂಡತಿಯಲ್ಲಿಗೆ ಬಂದು, “ನೀನು ನಮ್ಮನ್ನು ಬಡವರನ್ನಾಗಿ ಮಾಡಲು ಇಲ್ಲಿಗೆ ಕರೆದಿರುವಿಯಾ? ನೀನು ನಿನ್ನ ಗಂಡನನ್ನು ಮರುಳುಗೊಳಿಸಿ ನಮಗೆ ಒಗಟಿನ ಅರ್ಥವನ್ನು ಹೇಳುವಂತೆ ಮಾಡು. ನೀನು ನಮಗೆ ಒಗಟಿನ ಅರ್ಥವನ್ನು ಹೇಳದಿದ್ದರೆ ನಾವು ನಿನ್ನನ್ನು ಮತ್ತು ನಿನ್ನ ತಂದೆಯ ಮನೆಯಲ್ಲಿರುವ ಎಲ್ಲರನ್ನೂ ಸುಟ್ಟುಹಾಕುತ್ತೇವೆ” ಎಂದರು. ಅಧ್ಯಾಯವನ್ನು ನೋಡಿ |