ನ್ಯಾಯಸ್ಥಾಪಕರು 14:18 - ಕನ್ನಡ ಸಮಕಾಲಿಕ ಅನುವಾದ18 ಏಳನೆಯ ದಿವಸದಲ್ಲಿ ಸೂರ್ಯ ಮುಳುಗುವುದಕ್ಕಿಂತ ಮುಂಚೆ ಆ ಊರಿನವರು ಅವನಿಗೆ, “ಜೇನಿಗಿಂತ ಸಿಹಿಯಾದದ್ದೇನು? ಸಿಂಹಕ್ಕಿಂತ ಬಲಿಷ್ಠವಾದದ್ದೇನು?” ಎಂದು ಹೇಳಿದರು. ಅವನು ಉತ್ತರವಾಗಿ ಅವರಿಗೆ, “ನೀವು ನನ್ನ ಕಡಸಿನಿಂದ ಉಳದೆ ಇದ್ದರೆ, ನನ್ನ ಒಗಟನ್ನು ಗ್ರಹಿಸಲಾರಿರಿ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಅವರು ಏಳನೆಯ ದಿನ ಸೂರ್ಯ ಮುಳುಗುವುದಕ್ಕಿಂತ ಮೊದಲು ಅವನಿಗೆ, “ಜೇನಿಗಿಂತ ಸಿಹಿಯಾದದ್ದು ಯಾವುದು? ಸಿಂಹಕ್ಕಿಂತ ಬಲಿಷ್ಠವಾದದ್ದು ಯಾವುದು?” ಎಂದು ಹೇಳಲು ಅವನು, “ನೀವು ನನ್ನ ಕಡಸಿನಿಂದ ಉಳದೇ ಹೋಗಿದ್ದರೆ ಒಗಟನ್ನು ಬಿಚ್ಚುವುದು ನಿಮ್ಮಿಂದಾಗುತ್ತಿರಲಿಲ್ಲ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಅವರು ಏಳನೆಯ ದಿನ ಸೂರ್ಯಾಸ್ತಮಾನಕ್ಕೆ ಮೊದಲೇ ಅವನಿಗೆ, “ಜೇನಿಗಿಂತ ಸಿಹಿಯಾದದ್ದು ಯಾವುದು” ಸಿಂಹಕ್ಕಿಂತ ಕ್ರೂರವಾದದ್ದು ಯಾವುದು?” ಎಂದು ಹೇಳಿದರು. ಅವನು, “ನೀವು ನನ್ನ ಕಡಸಿನಿಂದ ಉಳದಿದ್ದರೆ ಒಗಟನ್ನು ಬಿಡಿಸಲು ನಿಮ್ಮಿಂದಾಗುತ್ತಿರಲಿಲ್ಲ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಅವರು ಏಳನೆಯ ದಿನ ಸೂರ್ಯಾಸ್ತಮಾನಕ್ಕೆ ಮೊದಲು ಅವನಿಗೆ - ಜೇನಿಗಿಂತ ಸಿಹಿಯಾದದ್ದು ಯಾವದು? ಸಿಂಹಕ್ಕಿಂತ ಕ್ರೂರವಾದದಾವದು ಎಂದು ಹೇಳಲು ಅವನು - ನೀವು ನನ್ನ ಕಡಸಿನಿಂದ ಉಳದಿದ್ದರೆ ಒಗಟನ್ನು ಬಿಚ್ಚುವದು ನಿಮ್ಮಿಂದಾಗುತ್ತಿರಲಿಲ್ಲ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಔತಣದ ಏಳನೆಯ ದಿನ ಸೂರ್ಯಾಸ್ತಮಾನಕ್ಕಿಂತ ಮುಂಚೆ ಫಿಲಿಷ್ಟಿಯರಿಗೆ ಅರ್ಥ ಗೊತ್ತಾಯಿತು. ಅವರು ಸಂಸೋನನಲ್ಲಿಗೆ ಬಂದು ಅವನಿಗೆ, “ಜೇನಿಗಿಂತ ಸಿಹಿಯಾದದ್ದು ಯಾವುದು; ಸಿಂಹಕ್ಕಿಂತ ಕ್ರೂರವಾದದ್ದು ಯಾವುದು” ಎಂದರು. ಅದಕ್ಕೆ ಸಂಸೋನನು ಅವರಿಗೆ, “ನೀವು ನನ್ನ ಹಸುವಿನಿಂದ ನೇಗಿಲು ಹೊಡೆಯದ್ದಿದ್ದರೆ ಒಗಟನ್ನು ಬಿಡಿಸುವುದು ನಿಮ್ಮಿಂದ ಆಗುತ್ತಿರಲಿಲ್ಲ” ಎಂದನು. ಅಧ್ಯಾಯವನ್ನು ನೋಡಿ |