ನ್ಯಾಯಸ್ಥಾಪಕರು 14:19 - ಕನ್ನಡ ಸಮಕಾಲಿಕ ಅನುವಾದ19 ಯೆಹೋವ ದೇವರ ಆತ್ಮ ಅವನ ಮೇಲೆ ಬಂದದ್ದರಿಂದ, ಅವನು ಅಷ್ಕೆಲೋನಿಗೆ ಹೋಗಿ, ಆ ಊರಿನಲ್ಲಿ ಮೂವತ್ತು ಜನರನ್ನು ವಧಿಸಿ, ಸುಲಿದುಕೊಂಡು ಒಗಟನ್ನು ತಿಳಿಸಿದವರಿಗೆ ದುಸ್ತು ವಸ್ತ್ರಗಳನ್ನು ಕೊಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಯೆಹೋವನ ಆತ್ಮವು ಫಕ್ಕನೆ ಅವನ ಮೇಲೆ ಬಂದಿತು; ಅವನು ಅಷ್ಕೆಲೋನಿಗೆ ಹೋಗಿ ಅಲ್ಲಿನ ಮೂವತ್ತು ಮಂದಿಯನ್ನು ಹೊಡೆದು, ಅವರ ವಸ್ತ್ರಗಳನ್ನು ಸುಲುಕೊಂಡು ಒಗಟನ್ನು ಬಿಚ್ಚಿದವರಿಗೆ ತಂದುಕೊಟ್ಟನು. ಮತ್ತು ಕೋಪಗೊಂಡವನಾಗಿ ತನ್ನ ತಂದೆಯ ಮನೆಗೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಸರ್ವೇಶ್ವರನ ಆತ್ಮ ಫಕ್ಕನೆ ಅವನ ಮೇಲೆ ಬಂದಿತು. ಅವನು ಅಷ್ಕೆಲೋನಿಗೆ ಹೋಗಿ ಅಲ್ಲಿನ ಮೂವತ್ತು ಮಂದಿಯನ್ನು ಹೊಡೆದು ಅವರ ವಸ್ತ್ರಗಳನ್ನು ಸುಲಿದುಕೊಂಡು ಒಗಟನ್ನು ಬಿಡಿಸಿದವರಿಗೆ ತಂದುಕೊಟ್ಟನು. ಬಳಿಕ ಕೋಪಗೊಂಡು ತನ್ನ ತಂದೆಯ ಮನೆಗೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಯೆಹೋವನ ಆತ್ಮವು ಫಕ್ಕನೆ ಅವನ ಮೇಲೆ ಬಂದಿತು; ಅವನು ಅಷ್ಕೆಲೋನಿಗೆ ಹೋಗಿ ಅಲ್ಲಿನ ಮೂವತ್ತು ಮಂದಿಯನ್ನು ಹೊಡೆದು ಅವರ ವಸ್ತ್ರಗಳನ್ನು ಸುಲುಕೊಂಡು ಒಗಟನ್ನು ಬಿಚ್ಚಿದವರಿಗೆ ತಂದುಕೊಟ್ಟನು. ಮತ್ತು ರೇಗಿದವನಾಗಿ ತನ್ನ ತಂದೆಯ ಮನೆಗೆ ಹೋದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಸಂಸೋನನು ಬಹಳ ಕೋಪಗೊಂಡನು. ಯೆಹೋವನ ಆತ್ಮವು ಸಂಸೋನನ ಮೇಲೆ ಪ್ರಬಲವಾಗಿ ಬಂತು. ಅವನು ಅಷ್ಕೆಲೋನ್ ನಗರಕ್ಕೆ ಧಾವಿಸಿದನು. ಆ ನಗರದಲ್ಲಿ ಅವನು ಮೂವತ್ತು ಜನ ಫಿಲಿಷ್ಟಿಯರನ್ನು ಕೊಂದನು. ಆಮೇಲೆ ಅವನು ಹೆಣಗಳ ಮೇಲಿನ ಎಲ್ಲ ಬಟ್ಟೆಗಳನ್ನೂ ಸ್ವತ್ತನ್ನೂ ಸುಲಿದುಕೊಂಡನು. ಆ ಬಟ್ಟೆಗಳನ್ನು ತಂದು ಒಗಟಿನ ಅರ್ಥ ಹೇಳಿದ ಜನರಿಗೆ ಕೊಟ್ಟನು. ಬಳಿಕ ಅವನು ತನ್ನ ತಂದೆಯ ಮನೆಗೆ ಹೋದನು. ಅಧ್ಯಾಯವನ್ನು ನೋಡಿ |