ನ್ಯಾಯಸ್ಥಾಪಕರು 14:5 - ಕನ್ನಡ ಸಮಕಾಲಿಕ ಅನುವಾದ5 ಆಗ ಸಂಸೋನನೂ, ಅವನ ತಂದೆತಾಯಿಗಳೂ ತಿಮ್ನಾತಿಗೆ ಹೋಗುತ್ತಿದ್ದರು. ಅವರು ತಿಮ್ನತಿನ ದ್ರಾಕ್ಷಿತೋಟಗಳ ಬಳಿಗೆ ಬಂದಾಗ, ಪ್ರಾಯದ ಸಿಂಹವು ಗರ್ಜಿಸುತ್ತಾ ಅವನ ಎದುರಿಗೆ ಬಂದಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಸಂಸೋನನು ತನ್ನ ತಂದೆತಾಯಿಗಳ ಸಹಿತ ತಿಮ್ನಾ ಊರಿಗೆ ಹೊರಟು ಅಲ್ಲಿನ ದ್ರಾಕ್ಷಿ ತೋಟಗಳ ಬಳಿಗೆ ಬಂದಾಗ, ಒಂದು ಪ್ರಾಯದ ಸಿಂಹವು ಗರ್ಜಿಸುತ್ತಾ ಅವನೆದುರಿಗೆ ಬಂದಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಸಂಸೋನನು ತನ್ನ ತಂದೆತಾಯಿಗಳ ಸಮೇತ ತಿಮ್ನಾ ಊರಿಗೆ ಹೊರಟು ಅಲ್ಲಿನ ದ್ರಾಕ್ಷಿತೋಟಗಳ ಬಳಿಗೆ ಬಂದನು. ಅಲ್ಲಿ ಒಂದು ಪ್ರಾಯದ ಸಿಂಹ ಗರ್ಜಿಸುತ್ತಾ ಅವನೆದುರಿಗೆ ಬಂದಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಸಂಸೋನನು ತನ್ನ ತಂದೆತಾಯಿಗಳ ಸಹಿತವಾಗಿ ತಿಮ್ನಾ ಊರಿಗೆ ಹೊರಟು ಅಲ್ಲಿನ ದ್ರಾಕ್ಷೇತೋಟಗಳ ಬಳಿಗೆ ಬಂದಾಗ ಒಂದು ಪ್ರಾಯದ ಸಿಂಹವು ಗರ್ಜಿಸುತ್ತಾ ಅವನೆದುರಿಗೆ ಬಂದಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಸಂಸೋನನು ತನ್ನ ತಂದೆತಾಯಿಗಳೊಂದಿಗೆ ತಿಮ್ನಾ ನಗರಕ್ಕೆ ಹೋದನು. ಅವರು ನಗರದ ಸಮೀಪದ ದ್ರಾಕ್ಷಿತೋಟಗಳವರೆಗೆ ಹೋದರು. ಅಲ್ಲಿ ಹಠಾತ್ತಾಗಿ ಒಂದು ಪ್ರಾಯದ ಸಿಂಹವು ಘರ್ಜಿಸಿ ಸಂಸೋನನ ಮೇಲೆರಗಿತು. ಅಧ್ಯಾಯವನ್ನು ನೋಡಿ |